ಹೊಸ ವರ್ಷಕ್ಕೆ ಧಮಾಕಾ ಆಫರ್! 5000 ಬೆಲೆ ಇಳಿಕೆ.. 37% ಡಿಸ್ಕೌಂಟ್.. ಕಮ್ಮಿ ಬೆಲೆಗೆ Samsung ಫೋನ್ ಸೇಲ್
ಹೊಸ ವರ್ಷದ ಪ್ರಯುಕ್ತ ಸ್ಯಾಮ್‌ಸಂಗ್ ತನ್ನ ಗ್ರಾಹಕರಿಗೆ ಬಂಪರ್ ಆಫರ್ ಘೋಷಿಸಿದೆ. ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆ ಇರುವ ತನ್ನ 5G ಫೋನಿನ ಬೆಲೆಯನ್ನು ಭಾರೀ ಇಳಿಕೆ ಮಾಡಿದೆ. ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ M35 5G (Samsung Galaxy M35 5G) ಫೋನಿನ ಖರೀದಿ ಮೇಲೆ ಶೇ.37 ರಷ್ಟು ಡಿಸ್ಕೌಂಟ್ ಘೋಷಿಸಲಾಗಿದೆ. ಜೊತೆಗೆ ಬ್ಯಾಂಕ್ ಡಿಸ್ಕೌಂಟ್ ಮತ್ತು ಎಕ್ಸ್‌ಚೇಂಜ್ ಆಫರ್ ಸಹ ನೀಡಲಾಗುತ್ತಿದೆ. ಬನ್ನಿ, ಈ ಫೋನಿನ ಹೊಸ ಬೆಲೆ, ಆಫರ್‌ಗಳು ಮತ್ತು ವಿಶೇಷತೆಗಳನ್ನು ತಿಳಿಯೋಣ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M35 5G ಫೋನ್ 6000mAh ಸಾಮರ್ಥ್ಯದ ದೊಡ್ಡ ಬ್ಯಾಟರಿ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಕ್ಯಾಮೆರಾ ಲಭ್ಯವಿದೆ. ಇದು Exynos 1380 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಜೊತೆಗೆ 6.6 ಇಂಚಿನ ಡಿಸ್ಪ್ಲೇ, 128GB ಸ್ಟೋರೇಜ್ ಮತ್ತು 25W ವೇಗದ ಚಾರ್ಜಿಂಗ್ ಒಳಗೊಂಡಿದೆ. ನೀವು, ಸ್ಯಾಮ್‌ಸಂಗ್‌ನ 5G ಫೋನ್ ಖರೀದಿಸಲು ಬಯಸಿದರೆ ಮತ್ತು ನಿಮ್ಮ ಬಜೆಟ್ ಕಡಿಮೆಯಿದ್ದರೆ, ಸ್ಯಾಮ್‌ಸಂಗ್ ಗ್ಯಾಲಕ್ಸಿ M35 5G ಉತ್ತಮ ಆಯ್ಕೆಯಾಗಿದೆ. ನೀವು 5,000 ರೂ. ಉಳಿತಾಯ ಮಾಡಬಹುದು.

ಸ್ಯಾಮ್‌ಸಂಗ್ ಗ್ಯಾಲಕ್ಸಿ M35 5G ವೈಶಿಷ್ಟ್ಯಗಳು
ಡಿಸ್ಪ್ಲೇ ಹೇಗಿದೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ M35 5G ಸ್ಮಾರ್ಟ್‌ಫೋನ್ 6.6 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಸೂಪರ್ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 1080×2340 ಪಿಕ್ಸೆಲ್‌ಗಳ ರೆಸಲ್ಯೂಶನ್, 120 Hz ರಿಫ್ರೆಶ್ ದರ ಮತ್ತು 1,000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಈ ಡಿಸ್ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್+ ರಕ್ಷಣೆಯನ್ನು ಹೊಂದಿದೆ.
ಪ್ರೊಸೆಸರ್ ಯಾವುದು?
ಸ್ಯಾಮ್‌ಸಂಗ್ ಗ್ಯಾಲಕ್ಸಿ M35 5G ಮೊಬೈಲ್ Exynos 1380 ಆಕ್ಟಾಕೋರ್ ಪ್ರೊಸೆಸರ್ ಹೊಂದಿದೆ. ಇದು ಗ್ರಾಫಿಕ್ಸ್‌ಗಾಗಿ ಮಾಲಿ G68 MP5 ಜಿಪಿಯು ಸಹ ಹೊಂದಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 14 ಆಧಾರಿತ ಒನ್ ಯುಐ 6 ಓಎಸ್‌ನಲ್ಲಿ ಕೆಲಸ ನಿರ್ವಹಿಸುತ್ತದೆ
ಸ್ಟೋರೇಜ್ ಸಾಮರ್ಥ್ಯ
ಸ್ಯಾಮ್‌ಸಂಗ್ ಗ್ಯಾಲಕ್ಸಿ M35 5G ಫೋನ್ 6GB, 8GB RAM ಮತ್ತು 128GB, 256GB ಸ್ಟೋರೇಜ್ ಆಯ್ಕೆ ಹೊಂದಿದೆ. ಮೈಕ್ರೊ ಎಸ್‌ಡಿ ಕಾರ್ಡ್‌ನ ಸಹಾಯದಿಂದ ಸ್ಟೋರೇಜ್ ಅನ್ನು 1TB ವರೆಗೆ ವಿಸ್ತರಿಸಬಹುದು.
ಟ್ರಿಪಲ್ ಕ್ಯಾಮೆರಾ ಸೆಟಪ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M35 5G ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಜೊತೆಗೆ, 8 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ, ಈ ಮೊಬೈಲ್ 13 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಚಾರ್ಜಿಂಗ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M35 5G ಮೊಬೈಲ್ 6,000mAh ಸಾಮರ್ಥ್ಯದ ದೊಡ್ಡ ಬ್ಯಾಟರಿಯನ್ನು ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 25W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.
ಇತರೆ ವೈಶಿಷ್ಟ್ಯಗಳು
ಸ್ಯಾಮ್‌ಸಂಗ್ ಗ್ಯಾಲಕ್ಸಿ M35 5G ಫೋನ್ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಹೊಂದಿದೆ. ಹಾಗೆಯೇ ಸ್ಟಿರಿಯೊ ಸ್ಪೀಕರ್‌ಗಳು, ಡಾಲ್ಬಿ ಅಟ್ಮಾಸ್ ಸಹ ಲಭ್ಯವಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಮೊಬೈಲ್ 5G SA /NSA, ಡ್ಯುಯಲ್ 4G VoLTE, ವೈ-ಫೈ 6, ಬ್ಲೂಟೂತ್ 5.3, ಜಿಪಿಎಸ್, ಯುಎಸ್‌ಬಿ ಟೈಪ್ ಸಿ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M35 5G ಬೆಲೆ ಮತ್ತು ಆಫರ್‌ಗಳು
6GB RAM + 128GB = 19,999 ರೂ.
ಆಫರ್ ಬೆಲೆ = 14,999 ರೂ.
8GB RAM + 128GB = 21,499 ರೂ.
ಆಫರ್ ಬೆಲೆ = 16,499 ರೂ.
8GB RAM + 128GB = 24,499 ರೂ.
ಆಫರ್ ಬೆಲೆ = 19,499 ರೂ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M35 5G ಸ್ಮಾರ್ಟ್‌ಫೋನ್ ಮೂರು ಸ್ಟೋರೇಜ್ ಆಯ್ಕೆಗಳಲ್ಲಿ ಮಾರಾಟವಾಗುತ್ತಿದೆ. ಪ್ರಸ್ತುತ, ಈ ಮೂರು ರೂಪಾಂತರಗಳ ಮೇಲೆ 5,000 ರೂ. ಡಿಸ್ಕೌಂಟ್ ಲಭ್ಯವಿದೆ. ಫೋನಿನ 6GB RAM + 128GB ಸ್ಟೋರೇಜ್ ವೇರಿಯಂಟ್ 14,999 ರೂ.ಗೆ ಲಭ್ಯವಿದೆ. 8GB + 128GB ಸ್ಟೋರೇಜ್ ಆಯ್ಕೆಯು 16,499 ರೂ. ಮತ್ತು 8GB + 256GB ಸ್ಟೋರೇಜ್ ರೂಪಾಂತರವನ್ನು 19,499 ರೂ.ಗೆ ಖರೀದಿಸಬಹುದು.
ನೀವು 6 ತಿಂಗಳ ನೋ ಕಾಸ್ಟ್ ಇಎಂಐ ಮೂಲಕ ಈ ಫೋನನ್ನು ಖರೀದಿಸಬಹುದು. ಹಾಗೆಯೇ 14,100 ರೂ. ವರೆಗೆ ಎಕ್ಸ್‌ಚೇಂಜ್ ಆಫರ್ ಲಭ್ಯವಿದೆ. ಈ ಮೊಬೈಲ್ ಮೂರು ಬಣ್ಣಗಳಲ್ಲಿ ಬರುತ್ತದೆ. ನೀವು ಡೇ ಬ್ರೇಕ್ ಬ್ಲೂ, ಮೂನ್ ಲೈಟ್ ಬ್ಲೂ ಮತ್ತು ಥಂಡರ್ ಗ್ರೇ ಬಣ್ಣಗಳಲ್ಲಿ ಕೊಳ್ಳಬಹುದು. ಅಮೆಜಾನ್ ಸೈಟ್‌ನಲ್ಲಿ ಈ ಎಲ್ಲಾ ಆಫರ್‌ಗಳ ಲಾಭ ಪಡೆಯಬಹುದು.


Click it and Unblock the Notifications








