ಸ್ಯಾಮ್‌ಸಂಗ್ ಗ್ಯಾಲಕ್ಸಿ M51 ಫಸ್ಟ್ ಲುಕ್‌: ಜಬರ್ದಸ್ತ್ ಬ್ಯಾಟರಿ ಫೋನ್!

|

ಸ್ಯಾಮ್‌ಸಂಗ್ ಸಂಸ್ಥೆಯು ಇತ್ತೀಚಿಗೆ ಬಿಡುಗಡೆ ಮಾಡಿರುವ ಗ್ಯಾಲಕ್ಸಿ M51 ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದು, ಜೊತೆಗೆ 7,000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಹೊಂದಿರುವುದು ಪ್ರಮುಖ ಹೈಲೈಟ್‌ ಆಗಿದೆ. ಇದರೊಂದಿಗೆ ಸ್ಪೀಡ್‌ ಪ್ರೊಸೆಸರ್‌ ಮತ್ತು ಡಿಸೈನ್‌ನಂತಹ ಫೀಚರ್ಸ್‌ಗಳಿಂದಲೂ ಈ ಫೋನ್ ಮತ್ತಷ್ಟು ಟ್ರೆಂಡಿ ಅನಿಸಿಕೊಂಡಿದೆ.

M51

ಸ್ಯಾಮ್‌ಸಂಗ್ ಗ್ಯಾಲಕ್ಸಿ M51 ಫೋನ್ ಆಂತರಿಕ ಸ್ಟೋರೇಜ್‌ಗೂ ಪ್ರಾಮುಖ್ಯತೆ ನೀಡಿದ್ದು, 6GB ಮತ್ತು 8GB RAM ಸಾಮರ್ಥ್ಯದ ವೇರಿಯಂಟ್‌ ಆಯ್ಕೆ ಹೊಂದಿದೆ. ಕ್ಯಾಮೆರಾ ಪ್ರಿಯರನ್ನು ಸೆಳೆಯಲು 64ಎಂಪಿ ಸೆನ್ಸಾರ್‌ನ ಮುಖ್ಯ ಕ್ಯಾಮೆರಾ ನೀಡಲಾಗಿದೆ. ಹಾಗೆಯೇ ಸ್ಕ್ರೀನ್ ರೆಸಲ್ಯೂಶನ್ ಸಹ ಉತ್ತಮವಾಗಿದೆ. ಇನ್ನು 6GB + 128GB ವೇರಿಯಂಟ್ ಬೆಲೆಯು 24,999ರೂ. ಆಗಿದೆ. ಹಾಗೆಯೇ 8GB + 128GB ವೇರಿಯಂಟ್‌ ಬೆಲೆಯು 26,999ರೂ. ಗಳಾಗಿದೆ. ಈ ಫೋನಿನ ಇತರೆ ಫೀಚರ್ಸ್‌ಗಳ ಕಾರ್ಯವೈಖರಿಯ ಬಗ್ಗೆ ಹಾಗೂ ಲುಕ್ ಹೇಗಿದೆ ಎಂಬುದನ್ನು ಮುಂದಿನ ಸ್ಲೈಡರ್‌ಗಳನ್ನು ಓದಿರಿ.

ಡಿಸ್‌ಪ್ಲೇ ಡಿಸೈನ್ ಹೇಗಿದೆ

ಡಿಸ್‌ಪ್ಲೇ ಡಿಸೈನ್ ಹೇಗಿದೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ M51 ಸ್ಮಾರ್ಟ್‌ಫೋನ್‌ 1080x2340 ಪಿಕ್ಸಲ್‌ ರೆಸಲ್ಯೂಶನ್‌ ಹೊಂದಿದ್ದು, 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಪಡೆದಿದೆ. ಹಾಗೆಯೇ ಫುಲ್‌ ಹೆಚ್‌ಡಿ ಪ್ಲಸ್‌ ಜೊತೆಗೆ ಸೂಪರ್ sAMOLED ಇನ್‌ಫಿನಿಟಿ O ಡಿಸ್‌ಪ್ಲೇ ಹೊಂದಿದೆ. ಈ ಫೋನಿನ ಡಿಸ್‌ಪ್ಲೇ ಅನುಪಾತವು 19.5:9 ಆಗಿದ್ದು, ಸ್ಕ್ರೀನ್‌ನಿಂದ ಬಾಹ್ಯ ಬಾಡಿಯ ನಡುವಿನ ಅನುಪಾತವು 86.7% ಪರ್ಸೆಂಟ್ ಆಗಿದೆ. ಹಾಗೂ ಸ್ಕ್ರೀನ್‌ ರಕ್ಷಣೆಗಾಗಿ ಗೊರಿಲ್ಲಾ ಗ್ಲಾಸ್ ಸೌಲಭ್ಯವನ್ನು ಪಡೆದಿದೆ. ಹೈ ಎಂಡ್‌ ಗೇಮ್‌ಗಳು ಅತ್ಯುತ್ತಮವಾಗಿ ಮೂಡಿಬರುತ್ತವೆ.

ಪ್ರೊಸೆಸರ್‌ ಕಾರ್ಯ ಹೇಗೆ

ಪ್ರೊಸೆಸರ್‌ ಕಾರ್ಯ ಹೇಗೆ

ಗ್ಯಾಲಕ್ಸಿ M51 ಸ್ಮಾರ್ಟ್‌ಫೋನ್‌ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 730 ಪ್ರೊಸೆಸರ್ ಹೊಂದಿದ್ದು, ಒನ್‌UI ಜೊತೆ ಆಂಡ್ರಾಯ್ಡ್‌ 10 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಫೋನ್ 6GB RAM ಮತ್ತು 128GB ಆಂತರಿಕ ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ. ಹಾಗೆಯೇ ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸಲು ಅವಕಾಶ ಇದೆ. ವೇಗದ ಗೇಮಿಂಗ್‌ ಆಟಗಳಿಗೆ ಪೂರಕವಾಗಿದೆ.

ಕ್ವಾಡ್‌ ಕ್ಯಾಮೆರಾ ಸೆನ್ಸಾರ್

ಕ್ವಾಡ್‌ ಕ್ಯಾಮೆರಾ ಸೆನ್ಸಾರ್

ಗ್ಯಾಲಕ್ಸಿ M51 ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಆಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ 64ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಸೆಕೆಂಡರಿ ಕ್ಯಾಮೆರಾವು 12ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದ್ದು, ಇನ್ನು ತೃತೀಯ ಹಾಗೂ ನಾಲ್ಕನೇ ಕ್ಯಾಮೆರಾವು ಕ್ರಮವಾಗಿ 5ಎಂಪಿ ಸೆನ್ಸಾರ್ ಬಲವನ್ನು ಪಡೆದಿವೆ. ಇದರೊಂದಿಗೆ ಸೆಲ್ಫಿಗಾಗಿ 32ಎಂಪಿ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ. ಮುಖ್ಯ ಕ್ಯಾಮೆರಾ ಟ್ರೆಂಡಿ ಆಗಿ ಕಾಣಿಸಲಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ಗ್ಯಾಲಕ್ಸಿ M51 ಸ್ಮಾರ್ಟ್‌ಫೋನ್‌ 7000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ ಅಪ್ ಸಾಮರ್ಥ್ಯವನ್ನು ಪಡೆದಿದೆ. ಇದರೊಂದಿಗೆ 25W ಸಾಮರ್ಥ್ಯದ ಕ್ವಿಕ್ ಚಾರ್ಜಿಂಗ್ ಸೌಲಭ್ಯವನ್ನು ನೀಡಿದೆ. ಇದರೊಂದಿಗೆ ಸೈಡ್‌ ಮೌಂಟ್‌ ಫಿಂಗರ್‌ಪ್ರಿಂಟ್ ಸೆನ್ಸಾರ್‌, ಆಂಡ್ರಾಯ್ಡ್‌ 10 ಓಎಸ್‌, 4G VoLTE, ವೈಫೈ, ಬ್ಲೂಟೂತ್, ಜಿಪಿಎಸ್ ಆಡಿಯೊ ಜಾಕ್ ಸೇರಿದಂತೆ ಇತ್ತೀಚಿನ ಅಗತ್ಯ ಫೀಚರ್ಸ್‌ಗಳನ್ನು ಒಳಗೊಂಡಿದೆ.

ಕೊನೆಯ ಮಾತು

ಕೊನೆಯ ಮಾತು

ಸ್ಯಾಮ್‌ಸಂಗ್ ಗ್ಯಾಲಕ್ಸಿ M51 ಸ್ಮಾರ್ಟ್‌ಫೋನ್‌ ಇತ್ತೀಚಿನ ಹೈ ಎಂಡ್‌ ಫೀಚರ್ಸ್‌ಗಳಿಂದ ಭರ್ತಿಯಾಗಿದೆ. ಮುಖ್ಯವಾಗಿ 64ಎಂಪಿ ಕ್ಯಾಮೆರಾ ಸೆಟ್‌ಅಪ್‌ ಮತ್ತು 7000mAh ಬ್ಯಾಟರಿ ಫೀಚರ್ಸ್‌ಗಳು ಹೆಚ್ಚಿನ ಗ್ರಾಹಕರನ್ನು ಸೆಳೆಯುವಂತಿವೆ. ಒಟ್ಟಾರೇ ಮೀಡ್‌ರೇಂಜ್‌ ದರದಲ್ಲಿ ಒಂದು ಜಬರ್ದಸ್ತ್ ಫೋನ್ ಹೊಂದಬೇಕು ಎನ್ನುವವರು ಈ ಫೋನ್ ಖರೀದಿಸಬಹುದಾಗಿದೆ.

Best Mobiles in India

English summary
Samsung Galaxy M51 comes with 64MP quad rear cameras, a whopping 7,000mAh battery.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X