ಸ್ಯಾಮ್‌ಸಂಗ್ ಗ್ಯಾಲಕ್ಸಿ M51 ಮತ್ತು ಗ್ಯಾಲಕ್ಸಿ M31s: ಖರೀದಿಗೆ ಯಾವುದು ಬೆಸ್ಟ್?

|

ದಕ್ಷಿಣ ಕೊರೊಯಾ ಟೆಕ್ ದೈತ್ಯ ಸ್ಯಾಮ್‌ಸಂಗ್ ಸಂಸ್ಥೆಯು ಇತ್ತೀಚಿಗೆ ಬಿಡುಗಡೆ ಮಾಡಿರುವ ಗ್ಯಾಲಕ್ಸಿ M51 ಸ್ಮಾರ್ಟ್‌ಫೋನ್ ದೈತ್ಯ ಫೀಚರ್ಸ್‌ಗಳಿಂದ ಆಂಡ್ರಾಯ್ಡ್‌ ಫೋನ್ ಪ್ರಿಯರನ್ನು ಸೆಳೆದಿದೆ. ಈ ಫೋನ್ ಕ್ವಾಡ್‌ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿರುವ ಜೊತೆಗೆ ಅಧಿಕ ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯವನ್ನು ಹೊಂದಿದೆ. ಹಾಗೆಯೇ ಸಂಸ್ಥೆಯು ಇತ್ತೀಚಿಗಷ್ಟೆ ಲಾಂಚ್ ಮಾಡಿರುವ ಗ್ಯಾಲಕ್ಸಿ M31s ಸ್ಮಾರ್ಟ್‌ಫೋನ್‌ ಸಹ ಕೆಲವು ಆಕರ್ಷಕ ಫೀಚರ್ಸ್‌ಗಳಿಂದ ಉತ್ತಮ ಅನಿಸಿದೆ. ಆದರೆ ಇವೆರಡರಲ್ಲಿ ಖರೀದಿಗೆ ಯಾವುದು ಬೆಸ್ಟ್?

ಗ್ಯಾಲಕ್ಸಿ

ಸ್ಯಾಮ್‌ಸಂಗ್ ಸಂಸ್ಥೆಯ ಹೊಸ ಗ್ಯಾಲಕ್ಸಿ M51 ಸ್ಮಾರ್ಟ್‌ಫೋನ್‌ ಬಹುತೇಕ ಗ್ಯಾಲಕ್ಸಿ M31s ಸ್ಮಾರ್ಟ್‌ಫೋನ್‌ನ ಫೀಚರ್ಸ್‌ಗಳನ್ನು ಹೋಲುವಂತೆ ಇದೆ. ಈ ಎರಡು ಫೋನ್‌ಗಳು ಕ್ವಾಡ್‌ ಕ್ಯಾಮೆರಾ ರಚನೆಯನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 64ಎಂಪಿ ಸೆನ್ಸಾರ್‌ ನಲ್ಲಿವೆ. ಡಿಸ್‌ಪ್ಲೇ ರಚನೆ ಹಾಗೂ ರೆಸಲ್ಯೂಶನ್‌ನಲ್ಲಿಯೂ ಸಾಮ್ಯತೆಗಳಿವೆ. ಆದರೆ ಬ್ಯಾಟರಿ ಬಾಳಿಕೆಯಲ್ಲಿ ಗ್ಯಾಲಕ್ಸಿ M51 ಮುಂದಿದೆ. ಅದಾಗ್ಯೂ ಈ ಎರಡು ಫೋನ್‌ಗಳಲ್ಲಿ ಬೇರೆ ಅನಿಸುವುದು. ಆದರೆ ಖರೀದಿಗೆ ಯೋಗ್ಯ ಯಾವುದು? ಇವುಗಳ ಫೀಚರ್ಸ್‌ಗಳೆನು? ಬೆಲೆ ಎಷ್ಟು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಬೆಲೆ ಎಷ್ಟು?

ಬೆಲೆ ಎಷ್ಟು?

ಗ್ಯಾಲಕ್ಸಿ M31s ಸ್ಮಾರ್ಟ್‌ಫೋನ್‌ ಎರಡು ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ. 6GB RAM ಮತ್ತು 128GB ಸ್ಟೋರೇಜ್‌ನ ಬೇಸ್ ವೇರಿಯಂಟ್ ಬೆಲೆಯು 19,499 ರೂ. ಆಗಿದೆ. ಹಾಗೆಯೇ 8GB RAM ಮತ್ತು 128GB ವೇರಿಯಂಟ್ ಬೆಲೆಯು 21,499ರೂ.ಗಳು ಆಗಿದೆ. ಅದೇ ಗ್ಯಾಲಕ್ಸಿ M51 ಫೋನ್‌ 6GB RAM ರೂಪಾಂತರಕ್ಕೆ 24,999ರೂ, ಮತ್ತು 8GB RAM ಆಯ್ಕೆಗೆ 26,999 ರೂ. ಬೆಲೆಯನ್ನು ಹೊಂದಿದೆ.

ಡಿಸ್‌ಪ್ಲೇ ಡಿಸೈನ್

ಡಿಸ್‌ಪ್ಲೇ ಡಿಸೈನ್

ಗ್ಯಾಲಕ್ಸಿ M31s ಸ್ಮಾರ್ಟ್‌ಫೋನ್‌ 1080x2340 ಪಿಕ್ಸಲ್‌ ರೆಸಲ್ಯೂಶನ್‌ ಹೊಂದಿರುವ 6.5 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಜೊತೆಗೆ sAMOLED ಡಿಸ್‌ಪ್ಲೇ ಹೊಂದಿದೆ. ಇನ್ನು ಗ್ಯಾಲಕ್ಸಿ M51 ಸ್ಮಾರ್ಟ್‌ಫೋನ್‌ 1080x2340 ಪಿಕ್ಸಲ್‌ ರೆಸಲ್ಯೂಶನ್‌ ಹೊಂದಿರುವ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಜೊತೆಗೆ ಸೂಪರ್ sAMOLED ಇನ್‌ಫಿನಿಟಿ O ಡಿಸ್‌ಪ್ಲೇ ಹೊಂದಿದೆ.

ಪ್ರೊಸೆಸರ್‌ ಕಾರ್ಯಕ್ಷಮತೆ

ಪ್ರೊಸೆಸರ್‌ ಕಾರ್ಯಕ್ಷಮತೆ

ಗ್ಯಾಲಕ್ಸಿ M31s ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ exynos 9611 SoC ಪ್ರೊಸೆಸರ್‌ ಹೊಂದಿದ್ದು, 6GB RAM ಮತ್ತು 128GB ಸ್ಟೋರೇಜ್ ಮತ್ತು 8GB RAM ಮತ್ತು 128GB ಸಾಮರ್ಥ್ಯ ಸ್ಟೋರೇಜ್ ಆಯ್ಕೆಗಳನ್ನು ಪಡೆದಿದೆ. ಇನ್ನು ಗ್ಯಾಲಕ್ಸಿ M51 ಸ್ಮಾರ್ಟ್‌ಫೋನ್‌ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 730 ಪ್ರೊಸೆಸರ್ ಹೊಂದಿದ್ದು, ಒನ್‌UI ಜೊತೆ ಆಂಡ್ರಾಯ್ಡ್‌ 10 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಫೋನ್ 6GB RAM ಮತ್ತು 8GB RAM ಆಯ್ಕೆಗಳಿವೆ.

ಕ್ಯಾಮೆರಾ ಸೆನ್ಸಾರ್

ಕ್ಯಾಮೆರಾ ಸೆನ್ಸಾರ್

ಗ್ಯಾಲಕ್ಸಿ M31s ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಆಪ್‌ ಹೊಂದಿದೆ. ಮುಖ್ಯ ಕ್ಯಾಮೆರಾ 64ಎಂಪಿ ಸೆನ್ಸಾರ್, ಸೆಕೆಂಡರಿ ಕ್ಯಾಮೆರಾವು 12ಎಂಪಿ ಸೆನ್ಸಾರ್, ಇನ್ನು ತೃತೀಯ ಹಾಗೂ ನಾಲ್ಕನೇ ಕ್ಯಾಮೆರಾವು ಕ್ರಮವಾಗಿ 5ಎಂಪಿ ಸೆನ್ಸಾರ್ ಬಲವನ್ನು ಪಡೆದಿವೆ. ಇನ್ನು ಗ್ಯಾಲಕ್ಸಿ M51 ಸಹ ಕ್ವಾಡ್‌ ಕ್ಯಾಮೆರಾ ರಚನೆ ಹೊಂದಿದ್ದು, ಕ್ರಮವಾಗಿ 64ಎಂಪಿ+12ಎಂಪಿ+5ಎಂಪಿ+5ಎಂಪಿ ಸೆನ್ಸಾರ್‌ನಲ್ಲಿವೆ. ಎರಡು ಫೋನ್‌ಗಳಲ್ಲಿ ಸೆಲ್ಫಿ ಕ್ಯಾಮೆರಾವು 32ಎಂಪಿ ಸೆನ್ಸಾರ್ ನಲ್ಲಿದೆ.

ಬ್ಯಾಟರಿ ಪವರ್

ಬ್ಯಾಟರಿ ಪವರ್

ಗ್ಯಾಲಕ್ಸಿ M31s ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ ಅಪ್ ಸಾಮರ್ಥ್ಯವನ್ನು ಪಡೆದಿದೆ. ಇದರೊಂದಿಗೆ 25W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ನೀಡಿದೆ. ಇನ್ನು ಗ್ಯಾಲಕ್ಸಿ M51 ಸ್ಮಾರ್ಟ್‌ಫೋನ 7000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ ಅಪ್ ಸಾಮರ್ಥ್ಯವನ್ನು ಪಡೆದಿದೆ. ಇದರೊಂದಿಗೆ 25W ಸಾಮರ್ಥ್ಯದ ಕ್ವಿಕ್ ಚಾರ್ಜಿಂಗ್ ಸೌಲಭ್ಯವನ್ನು ನೀಡಿದೆ.

ಕೊನೆಯ ಮಾತು

ಕೊನೆಯ ಮಾತು

ಸ್ಯಾಮ್‌ಸಂಗ್ ಸಂಸ್ಥೆಯ ನೂತನ ಗ್ಯಾಲಕ್ಸಿ M51 ಸ್ಮಾರ್ಟ್‌ಫೋನ್ ಹಾಗೂ ಗ್ಯಾಲಕ್ಸಿ M31s ಸ್ಮಾರ್ಟ್‌ಫೋನ್‌ ಈ ಎರಡು ಫೋನ್‌ಗಳು ದೈತ್ಯ ಫೀಚರ್ಸ್‌ಗಳನ್ನು ಹೊಂದಿವೆ. 64ಎಂಪಿ ಸೆನ್ಸಾರ್ ಕ್ಯಾಮೆರಾ, ದೈತ್ಯ ಬ್ಯಾಟರಿ ನಿರೀಕ್ಷಿಸುವ ಗ್ರಾಹಕರಿಗೆ ಹೇಳಿ ಮಾಡಿಸಿದಂತಿವೆ ಈ ಎರಡು ಫೋನ್‌ಗಳು. ಆದರೆ ಬೆಲೆಯ ದೃಷ್ಠಿಯಿಂದ ಗ್ಯಾಲಕ್ಸಿ M31s ಸ್ಮಾರ್ಟ್‌ಫೋನ್ ಖರೀದಿಗೆ ಉತ್ತಮ ಅನಿಸುತ್ತದೆ. ಆದರೆ 7,000mAh ಬ್ಯಾಟರಿ ಇರಲಿ ಎನ್ನುವುದುದಾರೇ ಗ್ಯಾಲಕ್ಸಿ M51 ಸ್ಮಾರ್ಟ್‌ಫೋನ್ ಆಯ್ಕೆ ಮಾಡಬಹುದು.

Best Mobiles in India

English summary
When compared with Galaxy M31s, the M51 appears to be superior as it packs improved specifications in terms of cameras, hardware, display, and more.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X