Samsung Galaxy M55s 5G ಬಿಡುಗಡೆ ದಿನಾಂಕ ಘೋಷಣೆ: 50MP ಸೆಲ್ಫಿ ಕ್ಯಾಮೆರಾ.. ಯಾವಾಗ ಬರುತ್ತೆ?
ಟೆಕ್ ದೈತ್ಯ ಸ್ಯಾಮ್‌ಸಂಗ್ (Samsung) ಶೀಘ್ರದಲ್ಲೇ ತನ್ನ 'M' ಸರಣಿಯಲ್ಲಿ ಹೊಸ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಲು ಸಿದ್ಧತೆ ನಡೆಸುತ್ತಿದೆ. ಇದನ್ನು ಸ್ಯಾಮ್‌ಸಂಗ್ ಗ್ಯಾಲಕ್ಸಿ M55s 5G (Samsung Galaxy M55s 5G) ಹೆಸರಿನಲ್ಲಿ ಪರಿಚಯಿಸಲಾಗುವುದು. ಕಂಪನಿಯು ಭಾರತದಲ್ಲಿ ತನ್ನ ಮುಂಬರುವ ಹೊಸ ಫೋನಿನ ಬಿಡುಗಡೆ ದಿನಾಂಕವನ್ನು ಘೋಷಿಸಿದೆ. ಬನ್ನಿ, ಹೊಸ ಮೊಬೈಲ್‌ನ ಬಿಡುಗಡೆ ದಿನಾಂಕ, ವೈಶಿಷ್ಟ್ಯಗಳು ಮತ್ತು ಇನ್ನಿತರ ವಿವರಗಳನ್ನು ತಿಳಿಯೋಣ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M55s 5G ಫೋನ್ ಬಿಡುಗಡೆಯ ಬಳಿಕ ಇ-ಕಾಮರ್ಸ್ ವೆಬ್‌ಸೈಟ್ ಅಮೇಜಾನ್‌ನಲ್ಲಿ ಖರೀದಿಗೆ ಲಭ್ಯವಿರುತ್ತದೆ. ಇದಕ್ಕಾಗಿ ಮೀಸಲಾದ ಮೈಕ್ರೋಸೈಟ್ ಅಮೆಜಾನ್‌ನಲ್ಲಿ ಲೈವ್ ಆಗಿದೆ. ಈ ಮೂಲಕ ಫೋನ್ ಬಿಡುಗಡೆಗೂ ಮುನ್ನವೇ ಹಲವು ಪ್ರಮುಖ ವೈಶಿಷ್ಟ್ಯಗಳು ಬಹಿರಂಗಗೊಂಡಿವೆ. ಸ್ಯಾಮ್‌ಸಂಗ್‌ನ ಈ ಮುಂಬರುವ ಫೋನ್ ಇತ್ತೀಚಿನ ಮಧ್ಯಮ ಶ್ರೇಣಿಯ ಸ್ಮಾರ್ಟ್‌ಫೋನ್ ಆಗಿದೆ.

ಮುಂಬರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ M55s 5G ಫೋನ್ 50 ಮೆಗಾಪಿಕ್ಸೆಲ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿರಲಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ 50 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಇರಲಿದೆ. ಇದಲ್ಲದೆ, ಬಣ್ಣ ಆಯ್ಕೆಗಳನ್ನು ಸಹ ಬಹಿರಂಗಪಡಿಸಲಾಗಿದೆ. ಈ ಫೋನ್ ಎರಡು ಬಣ್ಣ ಆಯ್ಕೆಗಳಲ್ಲಿ ಬರುತ್ತದೆ. ಥಂಡರ್ ಬ್ಲಾಕ್ ಮತ್ತು ಕೋರಲ್ ಗ್ರೀನ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿರುತ್ತದೆ.
ಸೆ.23ಕ್ಕೆ ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M55s 5G ಬಿಡುಗಡೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ M55s 5G ಫೋನನ್ನು ಭಾರತದಲ್ಲಿ ಸೆಪ್ಟೆಂಬರ್ 23 ರಂದು ಬಿಡುಗಡೆ ಮಾಡಲಾಗುವುದು ಎಂದು ಕಂಪನಿಯು ಘೋಷಿಸಿದೆ. ಇದು ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ 2024 ಮಾರಾಟಕ್ಕೂ ಮೊದಲು, ಅಮೆಜಾನ್ ಮಾರಾಟದಲ್ಲಿ ಈ ಸ್ಮಾರ್ಟ್‌ಫೋನ್ ಖರೀದಿಗೆ ಲಭ್ಯವಾಗಬಹುದು ಎಂದು ಹೇಳಲಾಗುತ್ತಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M55s 5G ಫೋನಿನ ವೈಶಿಷ್ಟ್ಯಗಳು
ಡಿಸ್ಪ್ಲೇ: ಸ್ಯಾಮ್‌ಸಂಗ್ ಗ್ಯಾಲಕ್ಸಿ M55s 5G ಫೋನ್ 6.7 ಇಂಚಿನ ಎಫ್‌ಹೆಚ್‌ಡಿ ಪ್ಲಸ್ AMOLED ಡಿಸ್ಪ್ಲೇ ಹೊಂದಿದೆ ಎಂದು ಖಚಿತಪಡಿಸಲಾಗಿದೆ. ಇದು, 120Hz ರಿಫ್ರೆಶ್ ದರವನ್ನು ಬೆಂಬಲಿಸುತ್ತದೆ.
ಕ್ಯಾಮೆರಾ: ಅಮೆಜಾನ್ ಪಟ್ಟಿಯ ಪ್ರಕಾರ, ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ವ್ಯವಸ್ಥೆಯನ್ನು ಹೊಂದಿರುತ್ತದೆ. ಇದು OIS ಜೊತೆಗೆ 50 ಮೆಗಾಪಿಕ್ಸೆಲ್ ಹಿಂಬದಿಯ ಕ್ಯಾಮೆರಾ ಮತ್ತು 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾವನ್ನು ಒಳಗೊಂಡಿರುತ್ತದೆ.
ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನ್ 50 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾವನ್ನು ಹೊಂದಿರುತ್ತದೆ. ಇದರ ಹೊರತಾಗಿ, ಸ್ಯಾಮ್‌ಸಂಗ್ ಗ್ಯಾಲಕ್ಸಿ M55s 5G ಮೊಬೈಲ್ ಡ್ಯುಯಲ್ ರೆಕಾರ್ಡಿಂಗ್ ವೈಶಿಷ್ಟ್ಯವನ್ನು ಒಳಗೊಂಡಿರುತ್ತದೆ. ಇದರ ಸಹಾಯದಿಂದ ನೀವು ಹಿಂಭಾಗ ಮತ್ತು ಮುಂಭಾಗದ ಕ್ಯಾಮೆರಾವನ್ನು ಬಳಸಿಕೊಂಡು ಏಕಕಾಲದಲ್ಲಿ ವಿಡಿಯೋವನ್ನು ಸೆರೆಹಿಡಿಯಲು ಸಾಧ್ಯವಾಗುತ್ತದೆ.
ಈ ಸುದ್ದಿ ಓದಿದ್ದೀರಾ?: Tecno: 2 ದೈತ್ಯ ಫೋಲ್ಡಬಲ್ ಫೋನ್ ಲಾಂಚ್: ಅಬ್ಬಾ ಎಂಥಾ ಫೀಚರ್ಸ್, ಬೆಲೆ ಇಷ್ಟೊಂದಾ?
ಪ್ರೊಸೆಸರ್: ಪ್ರಸ್ತುತ ಈ ಫೋನಿನ ಪ್ರೊಸೆಸರ್ ಬಗ್ಗೆ ಮಾಹಿತಿಯನ್ನು ಬಹಿರಂಗಪಡಿಸಿಲ್ಲ. ಸೋರಿಕೆಯ ಪ್ರಕಾರ, ಈ ಮೊಬೈಲ್ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 7 ಜೆನ್ 1 ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುವ ನಿರೀಕ್ಷೆಯಿದೆ. ಇದು 8GB RAM ಮತ್ತು 128GB ಸ್ಟೋರೇಜ್ ಅನ್ನು ಪಡೆಯುವ ಸಾಧ್ಯತೆಯಿದೆ.
ಬ್ಯಾಟರಿ: ಸ್ಯಾಮ್‌ಸಂಗ್ ಗ್ಯಾಲಕ್ಸಿ M55s 5G ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ. ಇದು 45W ವೈರ್ಡ್ ಚಾರ್ಜಿಂಗ್ ತಂತ್ರಜ್ಞಾನವನ್ನು ಒಳಗೊಂಡಿರುವ ನಿರೀಕ್ಷೆಯಿದೆ.
ಇತರೆ ವೈಶಿಷ್ಟ್ಯಗಳು: ಈ ಫೋನ್ ಕೇವಲ 7.8 ಎಂಎಂ ದಪ್ಪ ಇರುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಫೋನ್, ಯುಎಸ್‌ಬಿ ಟೈಪ್-ಸಿ 2.0, ಬ್ಲೂಟೂತ್ 5.2, ವೈ-ಫೈ 6, ಎನ್‌ಎಫ್‌ಸಿ, ಫಿಂಗರ್‌ಪ್ರಿಂಟ್ ಸೆನ್ಸಾರ್ ಮತ್ತು ಸ್ಟಿರಿಯೊ ಸ್ಪೀಕರ್‌ಗಳನ್ನು ಒಳಗೊಂಡಿರಲಿದೆ.


Click it and Unblock the Notifications








