Samsung: ಇಂದು ಹೊಸ 5G ಫೋನ್ ಬಿಡುಗಡೆ: ಬೆಲೆ, ವಿಶೇಷತೆಗಳೇನು?
ಸ್ಯಾಮ್‌ಸಂಗ್ ಪ್ರಿಯರೇ, ಇಲ್ಲಿ ಕೇಳಿ..! ಇಂದು ಹೊಸ 5G ಫೋನ್ ಭಾರತಕ್ಕೆ ಎಂಟ್ರಿ ಕೊಡಲಿದೆ. ಹೌದು, ದಕ್ಷಿಣ ಕೊರಿಯಾದ ಖ್ಯಾತ ಸ್ಮಾರ್ಟ್‌ಫೋನ್ ತಯಾರಕ ಕಂಪನಿ ಸ್ಯಾಮ್‌ಸಂಗ್ (Samsung) ತನ್ನ 'M' ಸರಣಿಯಲ್ಲಿ ಹೊಸ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಇದನ್ನು ಸ್ಯಾಮ್‌ಸಂಗ್ ಗ್ಯಾಲಕ್ಸಿ M55s 5G (Samsung Galaxy M55s 5G) ಹೆಸರಿನಲ್ಲಿ ಅನಾವರಣಗೊಳಿಸಲಾಗುತ್ತದೆ. ಬಿಡುಗಡೆ ಬಳಿಕ ಅಮೆಜಾನ್ ಮೂಲಕ ಮಾರಾಟವಾಗಲಿದೆ. ಹೊಸ ಫೋನಿನ ವೈಶಿಷ್ಟ್ಯಗಳು ಮತ್ತು ಇನ್ನಿತರ ಮಾಹಿತಿ ಇಲ್ಲಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M55s 5G ಬಿಡುಗಡೆಗೂ ಮುನ್ನವೇ ಹಲವು ಪ್ರಮುಖ ವೈಶಿಷ್ಟ್ಯಗಳು ಬಹಿರಂಗಗೊಂಡಿವೆ. ಇದಕ್ಕಾಗಿ ಮೀಸಲಾದ ಮೈಕ್ರೋಸೈಟ್ ಅಮೆಜಾನ್‌ನಲ್ಲಿ ಲೈವ್ ಆಗಿದೆ. ಬಿಡುಗಡೆಯ ಬಳಿಕ ಇ-ಕಾಮರ್ಸ್ ವೆಬ್‌ಸೈಟ್ ಅಮೇಜಾನ್, ಸ್ಯಾಮ್‌ಸಂಗ್ ಅಧಿಕೃತ ಸೈಟ್ ಮತ್ತು ಆಯ್ದ ಚಿಲ್ಲರೆ ಅಂಗಡಿಗಳ ಮೂಲಕ ಸ್ಯಾಮ್‌ಸಂಗ್ ಗ್ಯಾಲಕ್ಸಿ M55s 5G ಫೋನ್ ಖರೀದಿಗೆ ಲಭ್ಯವಿರುತ್ತದೆ. ಸ್ಯಾಮ್‌ಸಂಗ್‌ನ ಈ ನೂತನ ಫೋನ್ ಇತ್ತೀಚಿನ ಮಧ್ಯಮ ಶ್ರೇಣಿಯ ಸ್ಮಾರ್ಟ್‌ಫೋನ್ ಆಗಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M55s 5G ಫೋನಿನ ಬಣ್ಣಗಳ ಆಯ್ಕೆಗಳನ್ನು ಬಹಿರಂಗಪಡಿಸಲಾಗಿದೆ. ಈ ಫೋನ್ ಎರಡು ಬಣ್ಣ ಆಯ್ಕೆಗಳಲ್ಲಿ ಬರುತ್ತದೆ. ಥಂಡರ್ ಬ್ಲಾಕ್ ಮತ್ತು ಕೋರಲ್ ಗ್ರೀನ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿರುತ್ತದೆ. ಇದು 50 ಮೆಗಾಪಿಕ್ಸೆಲ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿರಲಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ 50 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಇರಲಿದೆ.
ಇಂದು ಸ್ಯಾಮ್‌ಸಂಗ್ ಗ್ಯಾಲಕ್ಸಿ M55s 5G ಗ್ರ್ಯಾಂಡ್ ಎಂಟ್ರಿ
ಸ್ಯಾಮ್‌ಸಂಗ್ ಗ್ಯಾಲಕ್ಸಿ M55s 5G ಫೋನನ್ನು ಭಾರತದಲ್ಲಿ ಇಂದು (ಸೆಪ್ಟೆಂಬರ್ 23 ರಂದು) ಬಿಡುಗಡೆ ಮಾಡಲಾಗುವುದು. ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ 2024 ಮಾರಾಟಕ್ಕೂ ಮೊದಲು, ಅಮೆಜಾನ್ ಮಾರಾಟದಲ್ಲಿ ಈ ಸ್ಮಾರ್ಟ್‌ಫೋನ್ ಖರೀದಿಗೆ ಲಭ್ಯವಾಗಬಹುದು ಎಂದು ಹೇಳಲಾಗಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M55s 5G ಫೋನಿನ ವೈಶಿಷ್ಟ್ಯಗಳು
ಡಿಸ್ಪ್ಲೇ: ಸ್ಯಾಮ್‌ಸಂಗ್ ಗ್ಯಾಲಕ್ಸಿ M55s 5G ಮೊಬೈಲ್ 6.7 ಇಂಚಿನ ಎಫ್‌ಹೆಚ್‌ಡಿ ಪ್ಲಸ್ AMOLED ಡಿಸ್ಪ್ಲೇ ಹೊಂದಿರಲಿದೆ ಎಂದು ಕಂಪಮಿ ದೃಢಪಡಿಸಿದೆ. ಈ ಡಿಸ್ಪ್ಲೇಯು 120Hz ರಿಫ್ರೆಶ್ ದರವನ್ನು ಪಡೆದಿರಲಿದೆ.
ಪ್ರೊಸೆಸರ್: ಪ್ರಸ್ತುತ ಕಂಪನಿಯು ಸ್ಯಾಮ್‌ಸಂಗ್ ಗ್ಯಾಲಕ್ಸಿ M55s 5G ಫೋನಿನ ಪ್ರೊಸೆಸರ್ ಬಗ್ಗೆ ಮಾಹಿತಿಯನ್ನು ಬಹಿರಂಗಪಡಿಸಿಲ್ಲ. ಸೋರಿಕೆಯ ಪ್ರಕಾರ, ಈ ಮೊಬೈಲ್ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 7 ಜೆನ್ 1 ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುವ ನಿರೀಕ್ಷೆಯಿದೆ. ಇದು 8GB RAM ಮತ್ತು 128GB ಸ್ಟೋರೇಜ್ ಅನ್ನು ಪಡೆಯುವ ಸಾಧ್ಯತೆಯಿದೆ.
ಕ್ಯಾಮೆರಾ: ಅಮೆಜಾನ್ ಮೈಕ್ರೋಸೈಟ್ ಪ್ರಕಾರ, ಸ್ಯಾಮ್‌ಸಂಗ್ ಗ್ಯಾಲಕ್ಸಿ M55s 5G ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿರಲಿದೆ. ಇದರಲ್ಲಿ OIS ಜೊತೆಗೆ 50 ಮೆಗಾಪಿಕ್ಸೆಲ್ ಹಿಂಬದಿಯ ಕ್ಯಾಮೆರಾ ಮತ್ತು 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾ ಇರಲಿದೆ.
ಈ ಸುದ್ದಿ ಓದಿದ್ದೀರಾ?: Tecno: 2 ದೈತ್ಯ ಫೋಲ್ಡಬಲ್ ಫೋನ್ ಲಾಂಚ್: ಅಬ್ಬಾ ಎಂಥಾ ಫೀಚರ್ಸ್, ಬೆಲೆ ಇಷ್ಟೊಂದಾ?
ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನ್ 50 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾವನ್ನು ಹೊಂದಿರುತ್ತದೆ. ಇದರ ಹೊರತಾಗಿ, ಸ್ಯಾಮ್‌ಸಂಗ್ ಗ್ಯಾಲಕ್ಸಿ M55s 5G ಮೊಬೈಲ್ ಡ್ಯುಯಲ್ ರೆಕಾರ್ಡಿಂಗ್ ಫೀಚರ್ ಅನ್ನು ಒಳಗೊಂಡಿರುತ್ತದೆ. ಇದರ ಸಹಾಯದಿಂದ ನೀವು, ಹಿಂಭಾಗ ಮತ್ತು ಮುಂಭಾಗದ ಕ್ಯಾಮೆರಾವನ್ನು ಬಳಸಿಕೊಂಡು ಏಕಕಾಲದಲ್ಲಿ ವಿಡಿಯೋವನ್ನು ಸೆರೆಹಿಡಿಯಲು ಸಾಧ್ಯವಾಗುತ್ತದೆ.
ಬ್ಯಾಟರಿ: ಸ್ಯಾಮ್‌ಸಂಗ್ ಗ್ಯಾಲಕ್ಸಿ M55s 5G ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ. ಇದನ್ನು ವೇಗವಾಗಿ ಚಾರ್ಜ್ ಮಾಡಲು, 45W ವೈರ್ಡ್ ಚಾರ್ಜಿಂಗ್ ತಂತ್ರಜ್ಞಾನ ಲಭ್ಯವಿರುತ್ತದೆ.
ಇತರೆ ಫೀಚರ್ಸ್: ಸ್ಯಾಮ್‌ಸಂಗ್ ಗ್ಯಾಲಕ್ಸಿ M55s 5G ಫೋನ್ ಕೇವಲ 7.8 ಎಂಎಂ ದಪ್ಪ ಇರುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಫೋನ್, ಯುಎಸ್‌ಬಿ ಟೈಪ್ ಸಿ 2.0, ಬ್ಲೂಟೂತ್ 5.2, ವೈ-ಫೈ 6, ಎನ್‌ಎಫ್‌ಸಿ, ಫಿಂಗರ್‌ಪ್ರಿಂಟ್ ಸೆನ್ಸಾರ್ ಮತ್ತು ಸ್ಟಿರಿಯೊ ಸ್ಪೀಕರ್ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಹೊಂದಿರಲಿದೆ.


Click it and Unblock the Notifications








