Home
ಮೊಬೈಲ್

Samsung: ಯಾರೂ ನಿರೀಕ್ಷಿಸಿರಲಿಲ್ಲ! ಬರಲಿವೆ 2 ಹೊಸ 5G ಫೋನ್‌ಗಳು; ಬೆಲೆ, ವಿಶೇಷತೆಗಳೇನು?

ಸ್ಯಾಮ್‌ಸಂಗ್‌ ಪ್ರೀಮಿಯಂ ಫೋನ್‌ ಪ್ರಿಯರಿಗೆ ಸಿಹಿಸುದ್ದಿ ಇಲ್ಲಿದೆ. ನೀವು, ಸ್ಯಾಮ್‌ಸಂಗ್‌ನ ಉತ್ತಮ ಮೊಬೈಲ್‌ಗಳನ್ನು ಖರೀದಿಸಲು ಬಯಸಿದರೆ, ಸ್ವಲ್ಪ ಕಾಯುವುದು ಉತ್ತಮ. ಹೌದು, ಶೀಘ್ರದಲ್ಲೇ ಭಾರತದಲ್ಲಿ ಇನ್ನೂ ಎರಡು ಹೊಸ ಮೊಬೈಲ್‌ಗಳು ಬಿಡುಗಡೆಯಾಗಲಿವೆ. ಸ್ಯಾಮ್‌ಸಂಗ್ ಗ್ಯಾಲಕ್ಸಿ M56 (Samsung Galaxy M56 5G) ಮತ್ತು ಸ್ಯಾಮ್‌ಸಂಗ್ ಗ್ಯಾಲಕ್ಸಿ F56 (Samsung Galaxy F56 5G) ಫೋನ್‌ಗಳು ಭಾರತೀಯ ಪ್ರಮಾಣೀಕರಣ ಸೈಟ್ BIS ನಲ್ಲಿ ಕಾಣಿಸಿಕೊಂಡಿದ್ದವು. ಇದೀಗ, ಈ ಎರಡೂ ಸ್ಯಾಮ್‌ಸಂಗ್ 5G ಫೋನ್‌ಗಳನ್ನು ಕಂಪನಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪಟ್ಟಿ ಮಾಡಲಾಗಿದೆ.

ಹೌದು, ಈಗಾಗಲೇ ಸ್ಯಾಮ್‌ಸಂಗ್ ಗ್ಯಾಲಕ್ಸಿ M56 5G ಮತ್ತು ಸ್ಯಾಮ್‌ಸಂಗ್ ಗ್ಯಾಲಕ್ಸಿ F56 5G ಫೋನಿನ ಮೈಕ್ರೋ ಸೈಟ್ ಲೈವ್ ಆಗಿದೆ. ಮುಂಬರುವ ಈ ಫೋನ್, ಸ್ಯಾಮ್‌ಸಂಗ್ ಎಕ್ಸಿನೋಸ್ 1580 ಪ್ರೊಸೆಸರ್ ಹೊಂದಿರಲಿದೆ. ಈ ಫೋನಿನಲ್ಲಿ 50MP ಟ್ರಿಪಲ್ ಕ್ಯಾಮೆರಾ ಸೆಟಪ್ ಲಭ್ಯವಿರುತ್ತದೆ. ಈ ಮೊಬೈಲ್ 6.7 ಇಂಚಿನ ಡಿಸ್ಪ್ಲೇಯೊಂದಿಗೆ ಬರುತ್ತದೆ. ಇದರೊಂದಿಗೆ 12GB RAM + 256GB ಸ್ಟೋರೇಜ್, 12MP ಸೆಲ್ಫಿ ಕ್ಯಾಮೆರಾ ಮತ್ತು 5000mAh ಬ್ಯಾಟರಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿರುತ್ತದೆ.

Samsung: ಯಾರೂ ನಿರೀಕ್ಷಿಸಿರಲಿಲ್ಲ! ಬರಲಿವೆ 2 ಹೊಸ 5G ಫೋನ್‌; ವಿಶೇಷತೆಗಳೇನು?

ಗ್ಯಾಲಕ್ಸಿ M56 5G ಮತ್ತು ಗ್ಯಾಲಕ್ಸಿ F56 ಬಿಡುಗಡೆ ವಿವರ

ಸ್ಯಾಮ್‌ಸಂಗ್ ಇಂಡಿಯಾ ವೆಬ್‌ಸೈಟ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M56 5G ಮತ್ತು ಸ್ಯಾಮ್‌ಸಂಗ್ ಗ್ಯಾಲಕ್ಸಿ F56 5G ಫೋನ್‌ಗಳ ಬಗ್ಗೆ ಮಾಹಿತಿ ಲಭ್ಯವಿದೆ. ಸ್ಯಾಮ್‌ಸಂಗ್ ಗ್ಯಾಲಕ್ಸಿ M56 5G ಅನ್ನು ಮಾದರಿ ಸಂಖ್ಯೆ SM-M566B/DS ನೊಂದಿಗೆ ಪಟ್ಟಿ ಮಾಡಲಾಗಿದೆ. ಸ್ಯಾಮ್‌ಸಂಗ್ ಗ್ಯಾಲಕ್ಸಿ F56 ಅನ್ನು ಮಾದರಿ ಸಂಖ್ಯೆ SM-E566B/DS ನೊಂದಿಗೆ ಪಟ್ಟಿ ಮಾಡಲಾಗಿದೆ. ಈ ಎರಡೂ ಸಹ ಡ್ಯುಯಲ್ ಸಿಮ್ ಬೆಂಬಲ ಮತ್ತು 5G ಸಿಮ್‌ ಬೆಂಬಲಿಸುತ್ತವೆ. ಪ್ರಸ್ತುತ, ಈ ಮೊಬೈಲ್‌ಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಕಂಪನಿಯು ಬಹಿರಂಗಪಡಿಸಿಲ್ಲ. ಆದರೆ ಶೀಘ್ರದಲ್ಲೇ ಇವು ಭಾರತದಲ್ಲಿ ಬಿಡುಗಡೆಯಾಗಲಿವೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A56 5G ಬೆಲೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ A56 5G ಮೊಬೈಲ್‌ನ 8GB RAM + 128GB ಸ್ಟೋರೇಜ್ ಬೆಲೆ 41,999 ರೂ. ಆಗಿದೆ. 8GB RAM + 256GB ಸ್ಟೋರೇಜ್ ರೂಪಾಂತರವು 44,999 ರೂ. ಮತ್ತು 12GB RAM + 256GB ಸ್ಟೋರೇಜ್ ವೇರಿಯಂಟ್ 47,999 ರೂ. ಬೆಲೆಯನ್ನು ಹೊಂದಿದೆ. ಕಂಪನಿಯು 8GB ರೂಪಾಂತರದ ಮೇಲೆ 3,000 ರೂ.ಗಳ ರಿಯಾಯಿತಿ ನೀಡುತ್ತಿದೆ. ಸ್ಯಾಮ್‌ಸಂಗ್ ಶಾಪ್ ಆಪ್‌ನಿಂದ ಈ ಫೋನ್ ಖರೀದಿಸಿದರೆ, 2000 ರೂ.ಗಳ ಹೆಚ್ಚುವರಿ ರಿಯಾಯಿತಿ ಸಹ ಲಭ್ಯವಿದೆ.

Take a Poll

ಸ್ಯಾಮ್‌ಸಂಗ್ ಗ್ಯಾಲಕ್ಸಿ A56 5G ವೈಶಿಷ್ಟ್ಯಗಳು

ಸ್ಯಾಮ್‌ಸಂಗ್ ಗ್ಯಾಲಕ್ಸಿ A56 5G ಫೋನ್ 6.7 ಇಂಚಿನ ಅಮೋಲೆಡ್‌ ಡಿಸ್ಪ್ಲೇ ಹೊಂದಿದೆ. ಈ ಸ್ಕ್ರೀನ್ 1,080 x 2,340 ಪಿಕ್ಸೆಲ್‌ಗಳ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ ಬರುತ್ತದೆ. ಹಾಗೆಯೇ 120Hz ರಿಫ್ರೆಶ್ ದರ ಮತ್ತು 1900 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಈ ಫೋನ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್ ತಂತ್ರಜ್ಞಾನ ಹೊಂದಿದೆ. ಈ ಡಿಸ್ಪ್ಲೇಯು ಗೊರಿಲ್ಲಾ ಗ್ಲಾಸ್ ವಿಕ್ಟಸ್+ ರಕ್ಷಣೆ ಹೊಂದಿದೆ. ಈ ಸ್ಮಾರ್ಟ್‌ಫೋನ್ ಕಂಪನಿಯ ಸ್ವಂತ Exynos 1580 ಆಕ್ಟಾಕೋರ್ ಪ್ರೊಸೆಸರ್ ಹೊಂದಿದೆ. ಇದನ್ನು 4 ನ್ಯಾನೋಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ತಯಾರಿಸಲಾಗಿದೆ. ಈ ಫೋನ್ ಆಂಡ್ರಾಯ್ಡ್ 15 ಆಧಾರಿತ ಒನ್‌ ಯುಐ 7 ನೊಂದಿಗೆ ಕೆಲಸ ನಿರ್ವಹಿಸುತ್ತದೆ. ಗ್ರಾಫಿಕ್ಸ್‌ಗಾಗಿ, ಈ ಸ್ಮಾರ್ಟ್‌ಫೋನ್ AMD Xclipse 540 ಜಿಪಿಯು ಸಹ ಹೊಂದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A56 5G ಮೊಬೈಲ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ OIS ಬೆಂಬಲದೊಂದಿಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಹಾಗೆಯೇ 12 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 5 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಮೊಬೈಲ್ 12 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಸಹ ಒಳಗೊಂಡಿದೆ. ಈ ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 45W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.

Best Mobiles in India

English summary
Samsung Galaxy M56 5G and Samsung Galaxy F56 5G launch in india soon: Expected Price, specifications and more
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+