Subscribe to Gizbot

ಸ್ಯಾಮ್‌ಸಂಗ್ ಗ್ಯಾಲೆಕ್ಸಿ ನೋಟ್ 9 ಸ್ಮಾರ್ಟ್‌ಫೋನ್ ಫೋಟೋ ಲೀಕ್..! ಇಲ್ಲಿದೆ ಮಾಹಿತಿ.!

Written By:

ಮಾರುಕಟ್ಟೆಯಲ್ಲಿ ಸ್ಯಾಮ್‌ಸಂಗ್ ಗ್ಯಾಲೆಕ್ಸಿ S9 ಮತ್ತು S9+ ಸ್ಮಾರ್ಟ್‌ಫೋನ್‌ ಹೆಚ್ಚಿನ ಸದ್ದು ಮಾಡುತ್ತಿದ್ದು, ಆಂಡ್ರಾಯ್ಡ್ ಟಾಪ್ ಎಂಡ್ ಫೋನ್‌ಗಳಿಗೆ ಹೆಚ್ಚಿನ ಬೇಡಿಕೆಯೂ ಮಾರುಕಟ್ಟೆಯಲ್ಲಿ ನಿರ್ಮಾಣವಾಗಿದೆ. ಈ ಹಿನ್ನಲೆಯಲ್ಲಿ ಮತ್ತೊಂದು ಟಾಪ್ ಎಂಡ್ ಸ್ಮಾರ್ಟ್‌ಫೋನ್ ಅನ್ನು ಪರಿಚಯ ಮಾಡಲು ಸ್ಯಾಮ್‌ಸಂಗ್ ಮುಂದಾಗಿದ್ದು, ಗ್ಯಾಲೆಕ್ಸಿ ನೋಟ್ 9 ಸ್ಮಾರ್ಟ್‌ಫೋನ್ ಪರೀಕ್ಷೆ ಹಂತದಲ್ಲಿದೆ.

 ಸ್ಯಾಮ್‌ಸಂಗ್ ಗ್ಯಾಲೆಕ್ಸಿ ನೋಟ್ 9 ಸ್ಮಾರ್ಟ್‌ಫೋನ್ ಫೋಟೋ ಲೀಕ್..!

ಕಳೆದ ವರ್ಷ ಬಿಡುಗಡೆಯಾಗಿದ್ದ ಗ್ಯಾಲೆಕ್ಸಿ ನೋಟ್ 8 ಸ್ಮಾರ್ಟ್‌ಫೋನ್ ಯಶಸ್ವಿಯಾದ ಹಿನ್ನಲೆಯಲ್ಲಿ ಗ್ಯಾಲೆಕ್ಸಿ ನೋಟ್ 9 ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಲು ಸ್ಯಾಮ್‌ಸಂಗ್ ಮುಂದಾಗಿದ್ದು, ಮಾರುಕಟ್ಟೆಯಲ್ಲಿ ಹೊಸ ಅಲೆಯನ್ನು ಎಬ್ಬಿಸಲಿದೆ ಎನ್ನುವ ಮಾತು ಕೇಳಿಬಂದಿದೆ. ಗ್ಯಾಲೆಕ್ಸಿ ನೋಟ್ 9 ಸ್ಮಾರ್ಟ್‌ಫೋನ್ ಗ್ರೀಕ್ ಬೆಂಚ್ ಮಾರ್ಕ್ ಸೈಟಿನಲ್ಲಿ ಕಾಣಿಸಿಕೊಂಡಿದೆ.

ಗ್ಯಾಲೆಕ್ಸಿ ನೋಟ್ 9 ಸ್ಮಾರ್ಟ್‌ಫೋನ್ ಮುಂದಿನ ತಿಂಗಳ ಅಂತ್ಯದಲ್ಲಿ ಕಾಣಿಸಿಕೊಳ್ಳಲಿದ್ದು, ಇದರಲ್ಲಿ ಟಾಪ್ ಎಂಡ್ ಪ್ರೋಸೆಸರ್ ಸ್ನಾಪ್‌ಡ್ರಾಗನ್ 845 ಪ್ರೋಸೆಸರ್ ಅನ್ನು ನೀಡಲಾಗಿದ್ದು, ಮಾಡಲ್ ನಂಬರ್ SMN960U ಹೆಸರಿನಲ್ಲಿ ಕಾಣಿಸಿಕೊಂಡಿದೆ. ಅಲ್ಲದೇ ಈ ಸ್ಮಾರ್ಟ್‌ಫೋನಿನಲ್ಲಿ 6GB RAM ಅನ್ನು ಅಳವಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಫ್ಯಾಬ್ಲೆಟ್ ಮಾದರಿಯಲ್ಲಿ ಕಾಣಿಸಿಕೊಳ್ಳುವ ಗ್ಯಾಲೆಕ್ಸಿ ನೋಟ್ 9 ಸ್ಮಾರ್ಟ್‌ಫೋನ್ 64GB, 128GB ಮತ್ತು 256GB ಇಂಟರ್ನಲ್ ಮೆಮೊರಿಯೊಂದಿಗೆ ಕಾಣಿಸಿಕೊಳ್ಳಲಿದೆ. ಅಲ್ಲದೇ ಇದರಲ್ಲಿ ಎಕ್ಸನೋಸ್ ಪ್ರೊಸೆಸರ್ ಇರುವ ಸಾಧ್ಯತೆಯೂ ದಟ್ಟವಾಗಿದೆ. ಅಲ್ಲದೇ ಆಂಡ್ರಾಯ್ಡ್ 8.1ನಲ್ಲಿ ಕಾರ್ಯನಿರ್ವಹಿಸಲಿದೆ ಎನ್ನಲಾಗಿದೆ. ಈಗಾಗಲೇ ಸ್ಯಾಮ್‌ಸಂಗ್ ಗ್ಯಾಲೆಕ್ಸಿ ನೋಟ್ 9 ಸ್ಮಾರ್ಟ್‌ಫೋನ್ ಬಿಡುಗಡೆಗೆ ತಯಾರಿಯನ್ನು ನಡೆಸಿದೆ ಎನ್ನಲಾಗಿದೆ.

Facebook ನಲ್ಲಿ ಫೇಸ್‌ ರೆಕಗ್ನಿಷನ್ ಆಯ್ಕೆಯನ್ನು ಬಳಸುವುದು ಹೇಗೆ?

ಗ್ಯಾಲೆಕ್ಸಿ ನೋಟ್ 9 ಸ್ಮಾರ್ಟ್‌ಫೋನ್ 3D ಸ್ಕ್ಯಾನಿಗ್, ಫೇಸ್‌ ಅನ್‌ಲಾಕ್ ಸೇರಿದಂತೆ ಹಲವು ವಿಶೇಷತೆಗಳೊಂದಿಗೆ ಕಾಣಿಸಿಕೊಳ್ಳಲಿದ್ದು, ಉತ್ತಮವಾದ ಕ್ಯಾಮೆರಾಗಳನ್ನು ಹೊಂದಿರಲಿದ್ದು, ದೊಡ್ಡ ಬ್ಯಾಟರಿಯೊಂದಿಗೆ ಕಾಣಿಸಿಕೊಳ್ಳಲಿದೆ. ರೂ.60000ದ ಆಸುಪಾಸಿನಲ್ಲಿ ಮಾರಾಟವಾಗುವ ನಿರೀಕ್ಷೆ ಇದೆ.

English summary
Samsung Galaxy Note 9 spotted on Geekbench with Snapdragon 845, 6GB RAM, Android 8.1 Oreo. to know more visit kannada.gizbot.com
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot