ಹೊಸ Samsung ಫೋನ್! 8000 ರಿಯಾಯಿತಿ.. 512GB ಸ್ಟೋರೇಜ್.. ಅಗ್ಗದ ಬೆಲೆಗೆ ಸೇಲ್!
ಇದೆಂಥಾ ಅವಕಾಶ ನೋಡಿ! ಹೊಚ್ಚ ಹೊಸ ಸ್ಯಾಮ್‌ಸಂಗ್ ಫೋನ್ ಭರ್ಜರಿ ರಿಯಾಯಿತಿಯೊಂದಿಗೆ ಸೇಲ್. ಹೌದು, ಕಳೆದ ತಿಂಗಳು ಬಿಡುಗಡೆಯಾದ ಸ್ಯಾಮ್‌ಸಂಗ್ ಗ್ಯಾಲಕ್ಸಿ S25 (Samsung Galaxy S25) ಮೊಬೈಲ್, ಮಾರುಕಟ್ಟೆಗೆ ಬಂದ ಕೂಡಲೇ ಲಕ್ಷಾಂತರ ಜನರನ್ನು ತನ್ನತ್ತ ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಮಾರಾಟ ಆರಂಭಿಸಿ ಒಂದು ತಿಂಗಳೂ ಆಗಿಲ್ಲ. ಇದನ್ನು ಮನಗಂಡ ಕಂಪನಿಯು ಈ ಫೋನಿನ ಬೇಡಿಕೆಯನ್ನು ನೋಡಿ, ಇದರ ಮೇಲೆ 8,000 ರೂ.ಗಳ ರಿಯಾಯಿತಿ ಘೋಷಿಸಿದೆ. ನೀವು, ಈ ತಿಂಗಳು (ಫೆಬ್ರವರಿ ತಿಂಗಳು ಪೂರ್ತಿ) ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಅನ್ನು ಅಗ್ಗದ ದರದಲ್ಲಿ ಖರೀದಿಸಬಹುದು.
ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಫೋನಿನ 12GB RAM ರೂಪಾಂತರವು ರಿಯಾಯಿತಿಯೊಂದಿಗೆ ಮಾರಾಟವಾಗುತ್ತಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಟ್ರಿಪಲ್ ಕ್ಯಾಮೆರಾ ಲಭ್ಯವಿದೆ. ಇದು ಸ್ಯಾಮ್‌ಸಂಗ್‌ನ Exynos 2500 ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸುತ್ತದೆ. ಈ ಮೊಬೈಲ್ 6.2 ಇಂಚಿನ ಡಿಸ್ಪ್ಲೇ ಹೊಂದಿದೆ. ಜೊತೆಗೆ 12GB RAM + 512GB ಸ್ಟೋರೇಜ್, 4000mAh ಸೇರಿದಂತೆ ಹಲವು ವೈಶಿಷ್ಟ್ಯಗಳನ್ನುಒಳಗೊಂಡಿದೆ. ಈ ಫೋನಿನ ಮೂಲ ಬೆಲೆ, ಆಫರ್ ಬೆಲೆ ಮತ್ತು ಮತ್ತಷ್ಟು ಫೀಚರ್ಸ್ ತಿಳಿಯಲು ಮುಂದೆ ಓದಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಹೊಸ ಬೆಲೆ
12GB RAM + 128GB ಸ್ಟೋರೇಜ್ ಬೆಲೆ = 74,999 ರೂ.
ಆಫರ್ ಬೆಲೆ = 66,999 ರೂ.
12GB RAM + 256GB ಸ್ಟೋರೇಜ್ ಬೆಲೆ = 80,999 ರೂ.
ಆಫರ್ ಬೆಲೆ = 72,999 ರೂ.
12GB RAM + 512GB ಸ್ಟೋರೇಜ್ ಬೆಲೆ = 92,999 ರೂ.
ಆಫರ್ ಬೆಲೆ = 84,999 ರೂ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಮೊಬೈಲ್ ಮೂರು ಸ್ಟೋರೇಜ್ ರೂಪಾಂತರಗಳಲ್ಲಿ ಮಾರಾಟವಾಗುತ್ತಿದೆ. ಕಂಪನಿಯು ಎಲ್ಲಾ ಮಾದರಿಗಳ ಮೇಲೆ 8,000 ರೂ. ವರೆಗೆ ರಿಯಾಯಿತಿ ನೀಡುತ್ತದೆ. ಇದು 7,000 ರೂ.ಗಳ ಯೋಜನೆಯ ಪಾವತಿ ಮತ್ತು 1,000 ರೂ. ಡೀಲರ್ ಆಫರ್ ಒಳಗೊಂಡಿದೆ. ಈ ರಿಯಾಯಿತಿಯೊಂದಿಗೆ 128GB ಸ್ಟೋರೇಜ್ ರೂಪಾಂತರವನ್ನು 66,999 ರೂ.ಗೆ ಕೊಳ್ಳಬಹುದು.
ಹಾಗೆಯೇ ಫೋನಿನ 256GB ಸ್ಟೋರೇಜ್ ವೇರಿಯಂಟ್ ಬೆಲೆ 72,999 ರೂ.ಗೆ ಇಳಿಕೆಯಾಗಲಿದೆ. ಮತ್ತು 512GB ಸ್ಟೋರೇಜ್ ಆಯ್ಕೆಯನ್ನು 84,999 ರೂ.ಗೆ ಖರೀದಿಸಬಹುದು. ಈ ವಿಶೇಷ ಆಫರ್ ಇಂದು (ಫೆಬ್ರವರಿ 17 ರಿಂದ) ಪ್ರಾರಂಭವಾಗಿದ್ದು, ಫೆಬ್ರವರಿ 28 ರವರೆಗೆ ಮಾತ್ರ ಲಭ್ಯವಿದೆ. ಈ ರಿಯಾಯಿತಿಯ ಲಾಭ ಪಡೆಯಲು ನೀವು ಯಾವುದೇ ಬ್ಯಾಂಕ್ ಅಥವಾ ಇಎಂಐ ಪ್ರಯೋಜನಗಳ ಅಗತ್ಯವಿಲ್ಲ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ವೈಶಿಷ್ಟ್ಯಗಳು
ಡಿಸ್ಪ್ಲೇ ಹೇಗಿದೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಸ್ಮಾರ್ಟ್‌ಫೋನ್ 6.2 ಇಂಚಿನ ಡಿಸ್ಪ್ಲೇ ಹೊಂದಿದೆ. ಇದು ಪಂಚ್ ಹೋಲ್ ಶೈಲಿಯ ಫುಲ್ ಎಚ್‌ಡಿ ಪ್ಲಸ್ ಡೈನಾಮಿಕ್ ಅಮೋಲೆಡ್ 2X ಡಿಸ್ಪ್ಲೇ ಆಗಿದೆ. ಈ ಡಿಸ್ಪ್ಲೇಯು 2400 x 1080 ಪಿಕ್ಸೆಲ್ ರೆಸಲ್ಯೂಶನ್, 1300 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಮತ್ತು 120Hz ರಿಫ್ರೆಶ್ ದರದ ಬೆಂಬಲ ಹೊಂದಿದೆ. ಈ ಫೋನ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ತಂತ್ರಜ್ಞಾನ ಹೊಂದಿದೆ. ಹಾಗೆಯೇ ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ರಕ್ಷಣೆ ಪಡೆದಿದೆ.
ಸ್ನಾಪ್‌ಡ್ರಾಗನ್ ಪ್ರೊಸೆಸರ್
ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 ಎಲೈಟ್ ಪ್ರೊಸೆಸರ್ ಹೊಂದಿದೆ. ಇದು 3 ನ್ಯಾನೋಮೀಟರ್ ಫ್ಯಾಬ್ರಿಕೇಶನ್‌ಗಳ ಮೇಲೆ ನಿರ್ಮಿಸಲಾದ 8 ಕೋರ್ ಓರಿಯನ್ ಸಿಪಿಯು ಆಗಿದೆ. ಈ ಮೊಬೈಲ್ ಆಂಡ್ರಾಯ್ಡ್ 15 ಆಧಾರಿತ ಒನ್ ಯುಐ 7 ಓಎಸ್‌ನೊಂದಿಗೆ ಕೆಲಸ ಮಾಡುತ್ತದೆ. ಇದು ಗ್ರಾಫಿಕ್ಸ್‌ಗಾಗಿ ಅಡ್ರಿನೊ 740 ಜಿಪಿಯು ಮತ್ತು ಸ್ಪೀಡ್ ಗೇಮಿಂಗ್‌ಗಾಗಿ ಜೆನ್ 2 ಎಐ ಎಂಜಿನ್ ಸಹ ಹೊಂದಿದೆ.
ಟ್ರಿಪಲ್ ಕ್ಯಾಮೆರಾ ಸೆಟಪ್
ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ OIS ಜೊತೆಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಜೊತೆಗೆ 12 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 3X ಆಪ್ಟಿಕಲ್ ಜೂಮ್‌ನೊಂದಿಗೆ 10 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಹೊಂದಿದೆ. ಈ ಫೋನಿನಲ್ಲಿ ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, 12 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಇದೆ.
ಹೇಗಿದೆ ಬ್ಯಾಟರಿ ಬ್ಯಾಕಪ್
ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಸ್ಮಾರ್ಟ್‌ಫೋನ್ 4000mAh ಬ್ಯಾಟರಿ ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದನ್ನು ಚಾರ್ಜ್ ಮಾಡಲು, 25W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಈ ಮೊಬೈಲ್ ವೇಗದ ವೈರ್‌ಲೆಸ್ ಚಾರ್ಜಿಂಗ್ ಮತ್ತು ವೈರ್‌ಲೆಸ್ ಪವರ್‌ಶೇರ್ ವೈಶಿಷ್ಟ್ಯವನ್ನು ಸಹ ಹೊಂದಿದೆ.


Click it and Unblock the Notifications








