Home
ಮೊಬೈಲ್

ಭಾರತದಲ್ಲಿ Samsung Galaxy S25+ ಲಾಂಚ್; ಬಿಗ್ ಬ್ಯಾಟರಿ.. ಬೃಹತ್ ಸ್ಟೋರೇಜ್.. ಬೆಲೆ ಇಷ್ಟೆನಾ?

ಬಹುನಿರೀಕ್ಷಿತ ಸ್ಯಾಮ್‌ಸಂಗ್ ಗ್ಯಾಲಕ್ಸಿ S25+ (Samsung Galaxy S25+) ಮೊಬೈಲ್ ಭಾರತದಲ್ಲಿ ಬಿಡುಗಡೆಯಾಗಿದೆ. ಇದನ್ನುಸ್ಯಾಮ್‌ಸಂಗ್ ಗ್ಯಾಲಕ್ಸಿ S25 (Samsung Galaxy S25) ಸರಣಿಯಲ್ಲಿ ಪರಿಚಯಿಸಲಾಗಿದೆ. ಹೌದು, ಈ ಸರಣಿಯಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ S25 (Samsung Galaxy S25), ಸ್ಯಾಮ್‌ಸಂಗ್ ಗ್ಯಾಲಕ್ಸಿ S25+ (Samsung Galaxy S25+) ಮತ್ತು ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಅಲ್ಟ್ರಾ (Samsung Galaxy S25 Ultra) ಫೋನ್‌ಗಳು ದೇಶೀಯ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿವೆ. ಈ ಪೈಕಿ ಸ್ಯಾಮ್‌ಸಂಗ್ ಗ್ಯಾಲಕ್ಸಿ S25+ ಎಲ್ಲರ ಗಮನ ಸೆಳೆದಿದೆ. ಬನ್ನಿ, ಈ ಹೊಸ ಫೋನಿನ ಬೆಲೆ, ಲಭ್ಯತೆ ಮತ್ತು ವಿಶೇಷತೆಗಳನ್ನು ತಿಳಿಯೋಣ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S25+ ಮೊಬೈಲ್ 50 ಮೆಗಾಪಿಕ್ಸೆಲ್ ಕ್ಯಾಮೆರಾ ಹೊಂದಿದೆ. ಇದು ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 8 ಎಲೈಟ್ ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಈ ಫೋನಿನಲ್ಲಿ 6.7 ಇಂಚಿನ ದೊಡ್ಡ ಡಿಸ್ಪ್ಲೇ ಲಭ್ಯವಿದೆ. ಜೊತೆಗೆ 12GB RAM + 256GB ಸ್ಟೋರೇಜ್‌ ಮತ್ತು 12GB RAM + 512GB ಸ್ಟೋರೇಜ್‌, 4900mAh ಬ್ಯಾಟರಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಈ ಫೋನಿನ ಬೆಲೆ ತಿಳಿಯಲು ಮುಂದೆ ಓದಿ.

ಭಾರತದಲ್ಲಿ Samsung Galaxy S25+ ಲಾಂಚ್; ಮಸ್ತ್ ಫೀಚರ್ಸ್‌, ಬೆಲೆ ಇಷ್ಟೆನಾ?

ಸ್ಯಾಮ್‌ಸಂಗ್ ಗ್ಯಾಲಕ್ಸಿ S25+ ವೈಶಿಷ್ಟ್ಯಗಳು

ಡಿಸ್ಪ್ಲೇ ವಿವರ

ಸ್ಯಾಮ್‌ಸಂಗ್ ಗ್ಯಾಲಕ್ಸಿ S25+ ಸ್ಮಾರ್ಟ್‌ಫೋನ್ ಮೊಬೈಲ್ 6.7 ಇಂಚಿನ QHD+ ದೊಡ್ಡ ಡಿಸ್ಪ್ಲೇ ಹೊಂದಿದೆ. ಇದು ಡೈನಾಮಿಕ್ ಅಮೋಲೆಡ್ 2x ಡಿಸ್ಪ್ಲೇ ಆಗಿದೆ. ಈ ಡಿಸ್ಪ್ಲೇಯು 3200 x 1440 ಪಿಕ್ಸೆಲ್‌ಗಳ ರೆಸಲ್ಯೂಶನ್, 120Hz ರಿಫ್ರೆಶ್ ದರದ ಬೆಂಬಲ ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ

ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಪ್ಲಸ್ ಫೋನ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 8 ಎಲೈಟ್ ಪ್ರೊಸೆಸರ್‌ನೊಂದಿಗೆ ಬಿಡುಗಡೆಯಾಗಿದೆ. ಇದು ಆಂಡ್ರಾಯ್ಡ್‌ 15 ಆಧಾರಿತ ಒನ್‌ ಯುಐ 7 ಓಎಸ್‌ನೊಂದಿಗೆ ಕೆಲಸ ಮಾಡುತ್ತದೆ. ಈ ಮೊಬೈಲ್ 12GB RAM ಹೊಂದಿದೆ. ಜೊತೆಗೆ 512GB ಸ್ಟೋರೇಜ್ ಆಯ್ಕೆ ಒಳಗೊಂಡಿದೆ.

ಟ್ರಿಪಲ್ ಕ್ಯಾಮೆರಾ ಸೆಟಪ್

ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಪ್ಲಸ್ ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ OIS ಜೊತೆಗೆ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಲಭ್ಯವಿದೆ. ಜೊತೆಗೆ 10 ಮೆಗಾಪಿಕ್ಸೆಲ್ 3x ದ್ವಿತೀಯ ಕ್ಯಾಮೆರಾ ಮತ್ತು 12 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನಿನಲ್ಲಿ 12 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಲಭ್ಯವಿದೆ.

ಭಾರತದಲ್ಲಿ Samsung Galaxy S25+ ಲಾಂಚ್; ಮಸ್ತ್ ಫೀಚರ್ಸ್‌, ಬೆಲೆ ಇಷ್ಟೆನಾ?

ಬ್ಯಾಟರಿ ಮತ್ತು ಚಾರ್ಜಿಂಗ್

ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಪ್ಲಸ್ 4,900mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 25W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಪ್ಲಸ್ ಬೆಲೆ ಮತ್ತು ಲಭ್ಯತೆ

12GB RAM + 256GB ಸ್ಠೋರೇಜ್ ಬೆಲೆ = 86,455 ರೂ.
12GB RAM + 512GB ಸ್ಟೋರೇಜ್ ಬೆಲೆ = 96,830 ರೂ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಪ್ಲಸ್ ಸ್ಮಾರ್ಟ್‌ಫೋನ್ ಎರಡು ಸ್ಟೋರೇಜ್ ರೂಪಾಂತರಗಳಲ್ಲಿ ಬಿಡುಗಡೆಯಾಗಿದೆ. 12GB RAM + 256GB ಸ್ಠೋರೇಜ್ ಬೆಲೆ 86,455 ರೂ. ಮತ್ತು 12GB RAM + 512GB ಸ್ಟೋರೇಜ್ ಬೆಲೆ 96,830 ರೂ. ಆಗಿದೆ. ಈ ಮೊಬೈಲ್ ಟೈಟಾನಿಯಂ ಸಿಲ್ವರ್‌ಬ್ಲೂ, ಟೈಟಾನಿಯಂ ಬ್ಲಾಕ್, ಟೈಟಾನಿಯಂ ವೈಟ್‌ಸಿಲ್ವರ್ ಮತ್ತು ಟೈಟಾನಿಯಂ ಗ್ರೇ ಬಣ್ಣಗಳಲ್ಲಿ ಲಭ್ಯವಿದೆ. ಈ ಫೋನ್ ಜನವರಿ 22 ರಿಂದ (ಇಂದಿನಿಂದ) ಮುಂಗಡ ಬುಕಿಂಗ್‌ಗೆ ಲಭ್ಯವಿದೆ. ಇದು ಫೆಬ್ರವರಿ 7 ರಿಂದ ಹಲವು ದೇಶಗಳಲ್ಲಿ ಶಿಪ್ಪಿಂಗ್ ಪ್ರಾರಂಭವಾಗುತ್ತದೆ.

Best Mobiles in India

English summary
Samsung Galaxy S25+ Qualcomm Snapdragon 8 Elite launched in India: know price, specifications
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+