Samsung Galaxy S25: ಜ.22ಕ್ಕೆ ಮೂರು ದೈತ್ಯ ಫೋನ್ ಲಾಂಚ್; ಬೆಲೆ, ವಿಶೇಷತೆಗಳೇನು?
ಸ್ಯಾಮ್‌ಸಂಗ್ ತನ್ನ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದೆ. ಕಂಪನಿಯು ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಸರಣಿಯ ಬಿಡುಗಡೆ ದಿನಾಂಕವನ್ನು ಘೋಷಿಸಿದೆ. ಈ ಸರಣಿಯಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ S25 (Samsung Galaxy S25), ಸ್ಯಾಮ್‌ಸಂಗ್ ಗ್ಯಾಲಕ್ಸಿ S25+ (Samsung Galaxy S25+) ಮತ್ತು ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಅಲ್ಟ್ರಾ (Samsung Galaxy S25 Ultra) ಫೋನ್‌ಗಳನ್ನು ಬಿಡುಗಡೆ ಮಾಡಲಾಗುವುದು. ಬನ್ನಿ, ಈ ಫೋನ್‌ಗಳ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.
ಸ್ಯಾಮ್‌ಸಂಗ್ ಜನವರಿ 22 ರಂದು 'ಗ್ಯಾಲಕ್ಸಿ ಅನ್ಪ್ಯಾಕ್ಡ್ 2025' (Samsung Galaxy Unpacked 2025) ಅನ್ನು ಆಯೋಜಿಸಿದೆ. ಈ ಗ್ಯಾಲಕ್ಸಿ ಅನ್ಪ್ಯಾಕ್ಡ್ ಈವೆಂಟ್‌ನಲ್ಲಿ ಕಂಪನಿಯು ಹೊಸ ಗ್ಯಾಲಕ್ಸಿ S25 (Galaxy S25) ಸರಣಿಯನ್ನು ಪರಿಚಯಿಸುತ್ತದೆ. Galaxy Unpacked ಜನವರಿ 22 ರಂದು ಯುಎಸ್‌ಎ (USA), ಕ್ಯಾಲಿಫೋರ್ನಿಯಾದಲ್ಲಿ ನಡೆಯಲಿದೆ. ಇದು ಭಾರತೀಯ ಕಾಲಮಾನ ರಾತ್ರಿ 11.30ಕ್ಕೆ ನೇರ ಪ್ರಸಾರವಾಗಲಿದೆ. ಕಂಪನಿಯು ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಸ್ಲಿಮ್ ಅನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಸರಣಿಯ ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಮೊಬೂಲ್ 6.2 ಇಂಚಿನ ಡಿಸ್ಪ್ಲೇ ಹೊಂದಿರುತ್ತದೆ. ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಪ್ಲಸ್ ಫೋನ್ 6.7 ಇಂಚಿನ ಡಿಸ್ಪ್ಲೇ ಹೊಂದಿರಲಿದೆ. ಹಾಗೆಯೇ ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಅಲ್ಟ್ರಾ ಸ್ಮಾರ್ಟ್‌ಫೋನ್ 6.86 ಇಂಚಿನ ಡಿಸ್ಪ್ಲೇ ಹೊಂದಿರಬಹುದು. ಈ ಸ್ಮಾರ್ಟ್‌ಫೋನ್‌ಗಳು QHD+ ರೆಸಲ್ಯೂಶನ್, 120Hz ರಿಫ್ರೆಶ್ ದರ ಮತ್ತು ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸಂವೇದಕ ಹೊಂದಿರುವ ನಿರೀಕ್ಷೆಯಿದೆ.
ಪ್ರೊಸೆಸರ್ ಸಾಮರ್ಥ್ಯ
ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಅಲ್ಟ್ರಾ ಸ್ನಾಪ್‌ಡ್ರಾಗನ್ 8 ಎಲೈಟ್ ಪ್ರೊಸೆಸರ್ ಹೊಂದಿರುತ್ತದೆ. OnePlus 13, Xiaomi 15, iQOO 13 ಮತ್ತು Realme GT 7 Pro ಸ್ಮಾರ್ಟ್‌ಫೋನ್‌ಗಳಲ್ಲಿ ಈ ಪ್ರೊಸೆಸರ್ ಲಭ್ಯವಿದೆ. ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಮತ್ತು ಸ್ಯಾಮ್‌ಸಂಗ್ ಗ್ಯಾಲಕ್ಸಿ S25 + ಸ್ಮಾರ್ಟ್‌ಫೋನ್‌ಗ Exynos 2500 ಪ್ರೊಸೆಸರ್ ಹೊಂದಿರಲಿವೆ.
ಸ್ಟೋರೇಜ್ ಆಯ್ಕೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಸರಣಿಯ ಮೂರು ಮೊಬೈಲ್‌ಗಳು 12GB RAM ಮತ್ತು 16GB RAM ಹೊಂದಿರುತ್ತವೆ. ಮೂಲ ರೂಪಾಂತರವು 128GB ಸ್ಟೋರೇಜ್ ಮತ್ತು ಟಾಪ್ ವೇರಿಯಂಟ್ 1 TB ಸ್ಟೋರೇಜ್ ಆಯ್ಕೆ ಹೊಂದಿರಲಿದೆ.
ಕ್ಯಾಮೆರಾ ಸೆಟಪ್
ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಅಲ್ಟ್ರಾ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಹೊಂದಿರಲಿದೆ. ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಮತ್ತು ಸ್ಯಾಮ್‌ಸಂಗ್ ಗ್ಯಾಲಕ್ಸಿ S25+ ಮೊಬೈಲ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿರುತ್ತದೆ. ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಅಲ್ಟ್ರಾ ಫೋನ್ 200 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ, 50 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಆಂಗಲ್ ಲೆನ್ಸ್, 50 ಮೆಗಾಪಿಕ್ಸೆಲ್ ಪೆರಿಸ್ಕೋಪ್ ಲೆನ್ಸ್ ಮತ್ತು 10 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್ ಹೊಂದಿರಲಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಮತ್ತು ಸ್ಯಾಮ್‌ಸಂಗ್ ಗ್ಯಾಲಕ್ಸಿ S25+ ಮೊಬೈಲ್ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ, ಅಲ್ಟ್ರಾವೈಡ್ ಆಂಗಲ್ ಲೆನ್ಸ್ ಮತ್ತು ಟೆಲಿಫೋಟೋ ಕ್ಯಾಮೆರಾ ಹೊಂದಿರುತ್ತದೆ. ಹಾಗೆಯೇ 12 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಇರಲಿದೆ. ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಅಲ್ಟ್ರಾ ಮೊಬೈಲ್ 12 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿರಲಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಅಲ್ಟ್ರಾ ಫೋನ್ 5,500mAh ಬ್ಯಾಟರಿ ಹೊಂದಿರುತ್ತದೆ. ಇದು ಸಿಲಿಕಾನ್ ಕಾರ್ಬನ್ ಬ್ಯಾಟರಿ ಆಗಿರಲಿದೆ. ಇದು 45W ವೇಗದ ಚಾರ್ಜಿಂಗ್ ತಂತ್ರಜ್ಞಾನವನ್ನು ಹೊಂದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಸರಣಿಯ ಬೆಲೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಬೆಲೆ
8GB RAM + 256GB ಸ್ಟೋರೇಜ್ = 60,000 ರೂ.
12GB RAM + 256GB ಸ್ಟೋರೇಜ್ = 68,800 ರೂ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S25+ ಬೆಲೆ
12GB RAM + 256GB ಸ್ಟೋರೇಜ್ = 84,250 ರೂ.
12GB RAM + 512GB ಸ್ಟೋರೇಜ್ = 94,350 ರೂ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಅಲ್ಟ್ರಾ ಬೆಲೆ
12GB RAM + 256GB ಸ್ಟೋರೇಜ್ = 1,09,500 ರೂ.
12GB RAM + 512GB ಸ್ಟೋರೇಜ್ = 1,19,650 ರೂ.
16GB RAM + 1TB ಸ್ಟೋರೇಜ್ = 1,39,890 ರೂ.


Click it and Unblock the Notifications








