Home
ಮೊಬೈಲ್

Galaxy S25 Ultra vs Galaxy S24 Ultra: ಜನ ಮೆಚ್ಚಿದ ಫೋನ್‌ಗಳು.. ಯಾವುದು ಬೆಸ್ಟ್‌? ಬೆಲೆ, ಫೀಚರ್ಸ್‌ ಹೀಗಿವೆ

Samsung Galaxy S25 Ultra vs Samsung Galaxy s24 Ultra: ಟೆಕ್ ದೈತ್ಯ ಸ್ಯಾಮ್‌ಸಂಗ್ ತನ್ನ ಬಹುನಿರೀಕ್ಷಿತ ಫೋನನ್ನು ಬಿಡುಗಡೆ ಮಾಡಿದೆ. ಅದುವೇ ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಅಲ್ಟ್ರಾ (Samsung Galaxy S25 Ultra) ಸ್ಮಾರ್ಟ್‌ಫೋನ್. ಈ ಮೊಬೈಲ್ ಸ್ಯಾಮ್‌ಸಂಗ್ ಗ್ಯಾಲಕ್ಸಿ S24 ಅಲ್ಟ್ರಾ ಫೋನಿಗಿಂತ ಸ್ವಲ್ಪ ವಿಭಿನ್ನವಾಗಿದೆ. ಕಂಪನಿಯು ಫೋನಿನ ಡಿಸ್ಪ್ಲೇ ಮತ್ತು ಕ್ಯಾಮೆರಾ ಸೆಟಪ್ ಸೇರಿದಂತೆ ಕೆಲವು ಇತರೆ ವೈಶಿಷ್ಟ್ಯಗಳಲ್ಲಿ ಬದಲಾವಣೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಸ್ಯಾಮ್‌ಸಂಗ್ ಗ್ಯಾಲಕ್ಸಿ S24 ಅಲ್ಟ್ರಾ ಫೋನಿಗೆ ನೇರ ಸ್ಫರ್ಧೆ ನೀಡುತ್ತಿದೆ. ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S24 ಅಲ್ಟ್ರಾ ಫೋನ್‌ ಈಗಾಗಲೇ ಮೊಬೈಲ್‌ ಪ್ರಿಯರಿಂದ ಭಾರೀ ಮೆಚ್ಚುಗೆ ಪಡೆದಿದೆ. ಕಂಪನಿಯು ಇದೀಗ ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಅಲ್ಟ್ರಾ ಫೋನನ್ನು ಭಾರತದಲ್ಲಿ ಲಾಂಚ್ ಮಾಡಿದೆ. ನಾವು ಈ ಲೇಖನದಲ್ಲಿ ಎರಡೂ ಫೋನ್‌ಗಳ ಬೆಲೆ, ವೈಶಿಷ್ಟ್ಯಗಳು ಸೇರಿದಂತೆ ಯಾವೆಲ್ಲಾ ವ್ಯತ್ಯಾಸಗಳಿವೆ ಎಂದು ತಿಳಿಸಿದ್ದೇವೆ. ನೀವು, ಈ ಮೂಲಕ ಎರಡು ಸ್ಮಾರ್ಟ್‌ಫೋನ್‌ಗಳಲ್ಲಿ ಯಾವುದನ್ನು ಖರೀದಿಗೆ ಉತ್ತಮ ಎಂದು ತಿಳಿಯಬಹುದು.

Samsung: ಜನ ಮೆಚ್ಚಿದ ಫೋನ್‌ಗಳು.. ಯಾವುದು ಬೆಸ್ಟ್‌? ಬೆಲೆ, ಫೀಚರ್ಸ್‌ ಹೇಗಿವೆ?

ಗ್ಯಾಲಕ್ಸಿ S25 ಅಲ್ಟ್ರಾ vs ಗ್ಯಾಲಕ್ಸಿ S24 ಅಲ್ಟ್ರಾ ವ್ಯತ್ಯಾಸ

ಬೆಲೆ ವಿವರ

ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಅಲ್ಟ್ರಾ ಇತ್ತೀಚೆಗೆ ಬಿಡುಗಡೆಯಾಗಿದೆ. ಈ ಫೋನಿನ 12GB RAM + 256GB ಸ್ಟೋರೇಜ್ ಬೆಲೆ 1,12,390 ರೂ. ಇದೆ. 12GB RAM + 512GB ಸ್ಠೋರೇಜ್ ರೂಪಾಂತರವು 1,22,770 ರೂ. ಮತ್ತು 12GB RAM + 1TB ಸ್ಟೋರೇಜ್ ಮಾದರಿಯು 1,43,515 ರೂ.ಗೆ ಬಿಡುಗಡೆಯಾಗಿದೆ. ಆದರೆ, ಗ್ಯಾಲಕ್ಸಿ S24 ಅಲ್ಟ್ರಾ ಫೋನಿನ 12GB + 256GB ರೂಪಾಂತರವು 129,999 ರೂ.ಗೆ ಮಾರಾಟವಾಗುತ್ತಿದೆ. 12GB + 512GB ಸ್ಟೋರೇಜ್ ರೂಪಾಂತರವನ್ನು 139,999 ರೂ.ಗೆ ಖರೀದಿಸಬಹುದು. ಮತ್ತು 12GB + 1TB ಸ್ಟೋರೇಜ್ ರೂಪಾಂತರವು 159,999 ರೂ.ಗೆ ಬಿಡುಗಡೆಯಾಗಿದೆ.

ಡಿಸ್ಪ್ಲೇ ಮಾಹಿತಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಅಲ್ಟ್ರಾ ಸ್ಮಾರ್ಟ್‌ಫೋನ್ 6.9 ಇಂಚಿನ QHD+ ಡಿಸ್ಪ್ಲೇ ಹೊಂದಿದೆ. ಇದು 120Hz ರಿಫ್ರೆಶ್ ದರ ಮತ್ತು 2600 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದೆ. ಈ ಮೊಬೈಲ್ ಅಲ್ಟ್ರಾಸಾನಿಕ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ತಂತ್ರಜ್ಞಾನ ಮತ್ತು ಕಾರ್ನಿಂಗ್ ಗೊರಿಲ್ಲಾ ಆರ್ಮರ್ 2 ಗ್ಲಾಸ್‌ ರಕ್ಷಣೆ ಪಡೆದಿದೆ. ಸ್ಯಾಮ್‌ಸಂಗ್ ಗ್ಯಾಲಕ್ಸಿ S24 ಅಲ್ಟ್ರಾ ಮೊಬೈಕ್ 6.8 ಇಂಚಿನ QHD+ ಡೈನಾಮಿಕ್ ಅಮೋಲೆಡ್ 2X ಡಿಸ್ಪ್ಲೇಯನ್ನು ಹೊಂದಿದೆ. ಇದು 120Hz ರಿಫ್ರೆಶ್ ದರದ ಬೆಂಬಲ ಪಡೆದಿದೆ. ಈ ಡಿಸ್ಪ್ಲೇಯು ಗೊರಿಲ್ಲಾ ಆರ್ಮರ್ ಗ್ಲಾಸ್ ರಕ್ಷಣೆ ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ

ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಅಲ್ಟ್ರಾ ಮೊಬೈಲ್ ಕ್ವಾಲ್ಕಾಮ್‌ನ ಸ್ನಾಪ್ಡ್ರಾಗನ್ 8 ಎಲೈಟ್ ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್‌ 15 ಆಧಾರಿತ One UI 7 ಓಎಸ್‌ನಲ್ಲಿ ಕೆಲಸ ಮಾಡುತ್ತದೆ. ಆದರೆ, ಗ್ಯಾಲಕ್ಸಿ s24 ಅಲ್ಟ್ರಾ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 8 ಜೆನ್ 3 ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್‌ 14 ಆಧಾರಿತ One UI 6 ಓಎಸ್‌ನೊಂದಿಗೆ ಕೆಲಸ ನಿರ್ವಹಿಸುತ್ತದೆ.

ಸ್ಟೋರೇಜ್ ಆಯ್ಕೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಅಲ್ಟ್ರಾ ಫೋನ್ 12GB RAM ಮತ್ತು 1TB ಸ್ಟೋರೇಜ್‌ ಒಳಗೊಂಡಿದೆ. ಆದರೆ, ಗ್ಯಾಲಕ್ಸಿ s24 ಅಲ್ಟ್ರಾ ಫೋನಿನಲ್ಲಿ 12GB RAM ಮತ್ತು 1TB ಸ್ಟೋರೇಜ್ ಆಯ್ಕೆ ಲಭ್ಯವಿದೆ.

Samsung: ಜನ ಮೆಚ್ಚಿದ ಫೋನ್‌ಗಳು.. ಯಾವುದು ಬೆಸ್ಟ್‌? ಬೆಲೆ, ಫೀಚರ್ಸ್‌ ಹೇಗಿವೆ?

ಕ್ಯಾಮರಾ ಸೆಟಪ್

ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಅಲ್ಟ್ರಾ ಫೋನ್ 5 ಕ್ಯಾಮೆರಾ ಲೆನ್ಸ್‌ ಹೊಂದಿದೆ. ಇದು ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 200 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಇದೆ. ಜೊತೆಗೆ 50 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಆಂಗಲ್ ಲೆನ್ಸ್, 50 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್ ಮತ್ತು 10 ಮೆಗಾಪಿಕ್ಸೆಲ್ ಲೆನ್ಸ್ ಹೊಂದಿದೆ. ಈ ಫೋನಿನಲ್ಲಿ 12 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಲಭ್ಯವಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S24 ಅಲ್ಟ್ರಾ ಫೋನ್ ಕ್ವಾಡ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದು 200 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಹೊಂದಿದೆ. ಇದರಲ್ಲಿ 50 ಮೆಗಾಪಿಕ್ಸೆಲ್ ಪೆರಿಸ್ಕೋಪ್ ಕ್ಯಾಮೆರಾ, 10 ಮೆಗಾಪಿಕ್ಸೆಲ್ ಟೆಲಿಫೋಟೋ ಕ್ಯಾಮೆರಾ ಮತ್ತು 10 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಆಂಗಲ್ ಲೆನ್ಸ್ ಇದೆ. ಇದು ಸೆಲ್ಫಿಗಾಗಿ 12 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಚಾರ್ಜಿಂಗ್

ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಅಲ್ಟ್ರಾ ಮೊಬೈಲ್ 5000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು ಸಿಲಿಕಾನ್ ಕಾರ್ಬನ್ ಬ್ಯಾಟರಿ ಆಗಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 45W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಸ್ಯಾಮ್‌ಸಂಗ್ ಗ್ಯಾಲಕ್ಸಿ S24 ಅಲ್ಟ್ರಾ ಮೊಬೈಲ್ 5,000mAh ಸಾಮರ್ಥ್ಯ ಬ್ಯಾಟರಿ ಹೊಂದಿದೆ. ಇದು 45W ವೇಗದ ಚಾರ್ಜಿಂಗ್ ಬೆಂಬಲಿಸುತ್ತದೆ. ಇದು ವೈರ್‌ಲೆಸ್ ಚಾರ್ಜಿಂ

Best Mobiles in India

English summary
Samsung Galaxy S25 Ultra vs Samsung Galaxy S24 Ultra comparison: Know the differences between the two phones
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+