Samsung Galaxy S25 Ultra: ಬಂದೇ ಬಿಡ್ತು ಶಕ್ತಿಶಾಲಿ ಫೋನ್; ಭರಪೂರ ಫೀಚರ್ಸ್.. ಬೆಲೆ ಇಷ್ಟೊಂದಾ?
ಸ್ಯಾಮ್‌ಸಂಗ್ ತನ್ನ ಬಹುನಿರೀಕ್ಷಿತ ಗ್ಯಾಲಕ್ಸಿ S25 (Samsung Galaxy S25) ಸರಣಿಯನ್ನು ಲಾಂಚ್ ಮಾಡಿದೆ. ಇದರಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಅಲ್ಟ್ರಾ (Samsung Galaxy S25 Ultra) ಮೊಬೈಲ್ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ. ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಅಲ್ಟ್ರಾ ಫೋನಿನ ಜೊತೆಗೆ ಸ್ಯಾಮ್‌ಸಂಗ್ ಗ್ಯಾಲಕ್ಸಿ S25 (Samsung Galaxy S25) ಮತ್ತು ಸ್ಯಾಮ್‌ಸಂಗ್ ಗ್ಯಾಲಕ್ಸಿ S25+ (Samsung Galaxy S25+) ಸ್ಮಾರ್ಟ್‌ಫೋನ್‌ಗಳನ್ನು ಸಹ ಬಿಡುಗಡೆ ಮಾಡಲಾಗಿದೆ. ಈ ಪೈಕಿ ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಅಲ್ಟ್ರಾ ಶಕ್ತಿಶಾಲಿ ಫೋನ್ ಆಗಿದೆ. ಬನ್ನಿ, ಈ ಫೋನಿನ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಅಲ್ಟ್ರಾ 200 ಮೆಗಾಪಿಕ್ಸೆಲ್ ಕ್ಯಾಮೆರಾ ಹೊಂದಿದೆ. ಇದು ಸ್ನಾಪ್‌ಡ್ರಾಗನ್ 8 ಎಲೈಟ್ ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತದೆ. ಈ ಫೋನಿನಲ್ಲಿ 6.9 ಇಂಚಿನ ದೊಡ್ಡ ಡಿಸ್ಪ್ಲೇ ಲಭ್ಯವಿದೆ. ಜೊತೆಗೆ 12GB RAM + 256GB, 12GB RAM + 512GB ಮತ್ತು 12GB RAM + 1TB ಸ್ಟೋರೇಜ್, 5000mAh ಬ್ಯಾಟರಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಈ ಫೋನಿನ ಬೆಲೆ ತಿಳಿಯಲು ಮುಂದೆ ಓದಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಅಲ್ಟ್ರಾ ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಅಲ್ಟ್ರಾ ಸ್ಮಾರ್ಟ್‌ಫೋನ್ ಈ ಫೋನ್ 6.9 ಇಂಚಿನ QHD+ ಡಿಸ್ಪ್ಲೇ ಹೊಂದಿದೆ. ಇದು ಪಂಚ್ ಹೋಲ್ ಶೈಲಿಯ ಡೈನಾಮಿಕ್ ಅಮೋಲೆಡ್ ಡಿಸ್ಪ್ಲೇ ಆಗಿದೆ. 120Hz ರಿಫ್ರೆಶ್ ದರ ಮತ್ತು 2600 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದೆ. ಈ ಮೊಬೈಲ್ ಅಲ್ಟ್ರಾಸಾನಿಕ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ತಂತ್ರಜ್ಞಾನವನ್ನು ಹೊಂದಿದೆ. ಈ ಡಿಸ್ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಆರ್ಮರ್ 2 ಗ್ಲಾಸ್‌ನಿಂದ ರಕ್ಷಣೆ ಪಡೆದಿದೆ.
ಪ್ರೊಸೆಸರ್ ಸಾಮರ್ಥ್ಯ
ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಅಲ್ಟ್ರಾ ಫೋನ್ ಮೊಬೈಲ್ ಸ್ನಾಪ್‌ಡ್ರಾಗನ್ 8 ಎಲೈಟ್ ಆಕ್ಟಾಕೋರ್ ಪ್ರೊಸೆಸರ್ ಹೊಂದಿರುತ್ತದೆ. ಇದನ್ನು 3 ನ್ಯಾನೋಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ತಯಾರಿಸಲಾಗಿದೆ. ಇದು ಆಂಡ್ರಾಯ್ಡ್ 15 ಆಧಾರಿತ ಸ್ಯಾಮ್‌ಸಂಗ್‌ನ One UI 7 ಆಪರೇಟಿಂಗ್ ಸಿಸ್ಟಮ್‌ನಲ್ಲಿ ಕೆಲಸ ನಿರ್ವಹಿಸುತ್ತದೆ. ಈ ಫೋನಿನ ಮೂಲ ರೂಪಾಂತರವು 12GB RAM ಹೊಂದಿದೆ. ಇದು 256GB ಮತ್ತು 512GB ಜೊತೆಗೆ 1TB ಸ್ಟೋರೇಜ್‌ನೊಂದಿಗೆ ಬರುತ್ತದೆ.
ಕ್ಯಾಮೆರಾ ಸೆಟಪ್
ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಅಲ್ಟ್ರಾ ಫೋನ್ 5 ಕ್ಯಾಮೆರಾ ಲೆನ್ಸ್‌ಗಳನ್ನು ಹೊಂದಿದೆ. ಫೋಟೋಗ್ರಫಿ ಪ್ರಿಯರಿಗೆ ಉತ್ತಮ ಆಯ್ಕೆಯಾಗಿದೆ. ಇದು ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 200 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಇದೆ. ಜೊತೆಗೆ 50 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಆಂಗಲ್ ಲೆನ್ಸ್, 50 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್ ಮತ್ತು 10 ಮೆಗಾಪಿಕ್ಸೆಲ್ ಲೆನ್ಸ್ ಹೊಂದಿದೆ. ಈ ಫೋನ್ 12 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಸಹ ಒಳಗೊಂಡಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಅಲ್ಟ್ರಾ 5000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು ಸಿಲಿಕಾನ್ ಕಾರ್ಬನ್ ಬ್ಯಾಟರಿ ಆಗಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 45W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಈ ಮೊಬೈಲ್ ಅನ್ನು ಕೇವಲ 30 ನಿಮಿಷಗಳಲ್ಲಿ ಶೇ.65 ರಷ್ಟು ಚಾರ್ಜ್ ಮಾಡಬಹುದು.
ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಅಲ್ಟ್ರಾ ಬೆಲೆ ಮತ್ತು ಲಭ್ಯತೆ
12GB RAM + 256GB ಸ್ಠೋರೇಜ್ ಬೆಲೆ = 1,12,390 ರೂ.
12GB RAM + 512GB ಸ್ಠೋರೇಜ್ ಬೆಲೆ = 1,22,770 ರೂ.
12GB RAM + 1TB ಸ್ಠೋರೇಜ್ ಬೆಲೆ = 1,43,515 ರೂ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಅಲ್ಟ್ರಾ ಸ್ಮಾರ್ಟ್‌ಫೋನ್ ಮೂರು ಸ್ಟೋರೇಜ್ ರೂಪಾಂತರಗಳಲ್ಲಿ ಬಿಡುಗಡೆಯಾಗಿದೆ. 12GB RAM + 256GB ಸ್ಠೋರೇಜ್ ಬೆಲೆ ರೂ.ಗೆ ಬಿಡುಗಡೆಯಾಗಿದೆ. 12GB RAM + 512GB ಸ್ಟೋರೇಜ್ ಬೆಲೆ ರೂ. ಮತ್ತು 12GB RAM + 1TB ಸ್ಠೋರೇಜ್ ಬೆಲೆ ರೂ. ಆಗಿದೆ. ಈ ಮೊಬೈಲ್ ಜನವರಿ 22 ರಿಂದ ಮುಂಗಡ ಬುಕಿಂಗ್‌ಗೆ ಲಭ್ಯವಿದೆ. ಇದು ಫೆಬ್ರವರಿ 7 ರಿಂದ ತನ್ನ ಮೊದಲ ಮಾರಾಟ ಪ್ರಾರಂಭಿಸಲಿದೆ. ನೀವು, ಕಂಪನಿಯ ಅಧಿಕೃತ ವೆಬ್‌ಸೈಟ್ ಮೂಲಕ ಖರೀದಿಸಬಹುದು.


Click it and Unblock the Notifications








