ಭಾರತದಲ್ಲಿ Samsung Galaxy S25 ಲಾಂಚ್; ರಾಶಿ ರಾಶಿ ಫೀಚರ್ಸ್.. ಅಬ್ಬಾ.. ಬೆಲೆ ಎಷ್ಟು ಗೊತ್ತಾ?
ಸ್ಯಾಮ್‌ಸಂಗ್ ಪ್ರಿಯರ ಕಾಯುವಿಕೆ ಮುಗಿಯಿತು! ಬಹುನಿರೀಕ್ಷಿತ ಸ್ಯಾಮ್‌ಸಂಗ್ ಗ್ಯಾಲಕ್ಸಿ S25 (Samsung Galaxy S25) ಸರಣಿಯು ಭಾರತದಲ್ಲಿ ಬಿಡುಗಡೆಯಾಗಿದೆ. ಈ ಸರಣಿಯಲ್ಲಿ ಮೂರು ಹೊಸ ಮೊಬೈಲ್‌ಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ S25 (Samsung Galaxy S25), ಸ್ಯಾಮ್‌ಸಂಗ್ ಗ್ಯಾಲಕ್ಸಿ S25+ (Samsung Galaxy S25+) ಮತ್ತು ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಅಲ್ಟ್ರಾ (Samsung Galaxy S25 Ultra) ಫೋನ್‌ಗಳು ಅಧಿಕೃತವಾಗಿ ರಿಲೀಸ್ ಆಗಿವೆ. ಈ ಪೈಕಿ ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಮೊಬೈಲ್ ಟೆಕ್ ಪ್ರಿಯರ ಗಮನ ಸೆಳೆಯುವಲ್ಲಿ ಸೈ ಎನಿಸಿಕೊಂಡಿದೆ. ಬನ್ನಿ, ಈ ಫೋನಿನ ಬೆಲೆ, ಲಭ್ಯತೆ ಮತ್ತು ವಿಶೇಷತೆಗಳನ್ನು ತಿಳಿಯೋಣ ಬನ್ನಿ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಮೊಬೈಲ್ 50 ಮೆಗಾಪಿಕ್ಸೆಲ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದು ಸ್ನಾಪ್‌ಡ್ರಾಗನ್ 8 ಎಲೈಟ್ ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಈ ಫೋನಿನಲ್ಲಿ 120Hz ರಿಫ್ರೆಶ್ ದರದೊಂದಿಗೆ 6.2 ಇಂಚಿನ ಡಿಸ್ಪ್ಲೇ ಲಭ್ಯವಿದೆ. ಜೊತೆಗೆ 12GB RAM + 128GB, 12GB RAM + 256GB ಮತ್ತು 12GB RAM + 512GB ಸ್ಟೋರೇಜ್, 4000mAh ಸೇರಿದಂತೆ ಹಲವು ವೈಶಿಷ್ಟ್ಯಗಳನ್ನುಒಳಗೊಂಡಿದೆ. ಈ ಹೊಸ ಫೋನಿನ ಬೆಲೆ ತಿಳಿಯಲು ಮುಂದೆ ಓದಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಮೊಬೈಲ್ 6.2 ಇಂಚಿನ ಪೂರ್ಣ HD+ ಡಿಸ್ಪ್ಲೇ ಹೊಂದಿದೆ. ಇದು ಪಂಚ್ ಹೋಲ್ ಶೈಲಿಯ ಡೈನಾಮಿಕ್ ಅಮೋಲೆಡ್ 2X ಡಿಸ್ಪ್ಲೇ ಆಗಿದೆ. ಈ ಡಿಸ್ಪ್ಲೇಯು 2340 x 1080 ಪಿಕ್ಸೆಲ್ ರೆಸಲ್ಯೂಶನ್, 120Hz ರಿಫ್ರೆಶ್ ದರದೊಂದಿಗೆ ಬರುತ್ತದೆ.
ಪ್ರೊಸೆಸರ್ ಸಾಮರ್ಥ್ಯ
ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಫೋನ್ ಸ್ನಾಪ್‌ಡ್ರಾಗನ್ 8 ಎಲೈಟ್ ಪ್ರೊಸೆಸರ್‌ನೊಂದಿಗೆ ಬಿಡುಗಡೆ ಮಾಡಲಾಗಿದೆ. ಇದು ಆಂಡ್ರಾಯ್ಡ್ 15 ಆಧಾರಿತ ಒನ್ ಯುಐ 7 ಓಎಸ್‌ನೊಂದಿಗೆ ಕೆಲಸ ಮಾಡುತ್ತದೆ. ಈ ಮೊಬೈಲ್ 12GB RAM ನೊಂದಿಗೆ ಬರುತ್ತದೆ. ಇದು ಮೂರು ಸ್ಟೋರೇಜ್ (128GB, 256GB, 512GB) ಆಯ್ಕೆಗಳಲ್ಲಿ ಲಭ್ಯವಿದೆ.
ಕ್ಯಾಮೆರಾ ಸೆಟಪ್
ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಜೊತೆಗೆ 12 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 12 ಮೆಗಾಪಿಕ್ಸೆಲ್ ಸೋನಿ ತೃತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನಿನಲ್ಲಿ 12 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಇದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಮೊಬೈಲ್ 4000mAh ಬ್ಯಾಟರಿ ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದನ್ನು ಚಾರ್ಜ್ ಮಾಡಲು, 25W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಬೆಲೆ
12GB RAM + 128GB ಸ್ಟೋರೇಜ್ ಬೆಲೆ = 69,074 ರೂ.
12GB RAM + 256GB ಸ್ಟೋರೇಜ್ ಬೆಲೆ = 86,364 ರೂ.
12GB RAM + 512GB ಸ್ಟೋರೇಜ್ ಬೆಲೆ = 1,02,170 ರೂ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಫೋನನ್ನು ಮೂರು ಸ್ಟೋರೇಜ್ ಆಯ್ಕೆಗಳಲ್ಲಿ ಬಿಡುಗಡೆ ಮಾಡಲಾಗಿದೆ. ಈ ಫೋನಿನ 12GB RAM + 128GB ಸ್ಟೋರೇಜ್ ರೂಪಾಂತರದ ಆರಂಭಿಕ ಬೆಲೆ 69,074 ರೂ. ಆಗಿದೆ. ನೀವು ನೇವಿ, ಸಿಲ್ವರ್ ಶ್ಯಾಡೋ, ಐಸಿಬ್ಲೂ ಮತ್ತು ಮಿಂಟ್ ಬಣ್ಣ ಆಯ್ಕೆಗಳಲ್ಲಿ ಖರೀದಿಸಬಹುದು. ಈ ಮೊಬೈಲ್ ಜನವರಿ 22 ರಿಂದ (ಇಂದಿನಿಂದ) ಮುಂಗಡ ಬುಕಿಂಗ್‌ಗೆ ಲಭ್ಯವಿದೆ. ಇದು ಫೆಬ್ರವರಿ 7 ರಿಂದ ಹಲವು ದೇಶಗಳಲ್ಲಿ ಶಿಪ್ಪಿಂಗ್ ಪ್ರಾರಂಭವಾಗುತ್ತದೆ.


Click it and Unblock the Notifications








