Subscribe to Gizbot

ಸ್ಯಾಮ್‌ಸಂಗ್ ಗ್ಯಾಲೆಕ್ಸಿ S9 ಸ್ಮಾರ್ಟ್‌ಫೋನ್ ಹೇಗಿದೆ..? ಲೀಕ್ ಮಾಹಿತಿ ಇಲ್ಲಿದೆ...!

Written By:

ಸ್ಮಾರ್ಟ್‌ಫೋನ್ ತಯಾರಿಕೆಯಲ್ಲಿ ಜಾಗತಿಕವಾಗಿ ಹೆಸರು ಮಾಡಿರುವ ಸ್ಯಾಮ್‌ಸಂಗ್ ತನ್ನ ಗ್ಯಾಲೆಕ್ಸಿ ಸರಣಿಯ ಟಾಪ್ ಎಂಡ್ ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಲು ಮುಂದಾಗಿದೆ. ಇದೇ ಫೆಬ್ರವರಿ 25 ರಂದು ಸ್ಯಾಮ್‌ಸಂಗ್ ಗ್ಯಾಲೆಕ್ಸಿ S9 ಸ್ಮಾರ್ಟ್‌ಫೋನ್ ಅನ್ನು ಅನಾವರಣಗೊಳಿಸಲಿದೆ. ಈಗಾಗಲೇ ಮಾರುಕಟ್ಟೆಯಲ್ಲಿ ಸದ್ದು ಮಾಡುತ್ತಿರುವ ಸ್ಯಾಮ್‌ಸಂಗ್ ಗ್ಯಾಲೆಕ್ಸಿ S8 ಸ್ಮಾರ್ಟ್‌ಫೋನಿನ ಮುಂದಿನ ತಲೆ ಮಾರಿನ ಫೋನ್ ಇದಾಗಲಿದೆ.

ಫೆ.25 ರಂದು ಲಾಂಚ್ ಆಗುವ ಸ್ಯಾಮ್‌ಸಂಗ್ ಗ್ಯಾಲೆಕ್ಸಿ S9 ಸ್ಮಾರ್ಟ್‌ಫೋನ್ ಹೇಗಿದೆ

2018ರಲ್ಲಿ ನಡೆಯಲಿರುವ ವರ್ಡ್ ಮೊಬೈಲ್ ಕಾಂಗ್ರೆಸ್ ಸಮಾವೇಶದಲ್ಲಿ ಸ್ಯಾಮ್‌ಸಂಗ್ ಗ್ಯಾಲೆಕ್ಸಿ S9 ಮತ್ತು ಸ್ಯಾಮ್‌ಸಂಗ್ ಗ್ಯಾಲೆಕ್ಸಿ S9 ಪ್ಲಸ್ ಸ್ಮಾರ್ಟ್‌ಫೋನ್‌ ಲಾಂಚ್ ಆಗಲಿದೆ. ಈ ಹಿನ್ನಲೆಯಲ್ಲಿ ಫೋನಿನ ವಿನ್ಯಾಸ, ಕ್ಯಾಮೆರಾ, ಸಾಫ್ಟ್‌ವೇರ್ ಮತ್ತು ಹಾರ್ಡ್ ವೇರ್ ಕುರಿತ ಮಾಹಿತಿಯೂ ಇಲ್ಲಿದೆ.

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
ಡಿಸೈನ್ ಮತ್ತು ಡಿಸ್‌ಪ್ಲೇ:

ಡಿಸೈನ್ ಮತ್ತು ಡಿಸ್‌ಪ್ಲೇ:

ಸ್ಯಾಮ್‌ಸಂಗ್ ಗ್ಯಾಲೆಕ್ಸಿ S9 ಸ್ಮಾರ್ಟ್‌ಫೋನಿನಲ್ಲಿ 5.8 ಇಂಚಿನ AMOLED ಡಿಸ್‌ಪ್ಲೇಯನ್ನು ಕಾಣಬಹುದಾಗಿದೆ. ಸ್ಯಾಮ್‌ಸಂಗ್ ಗ್ಯಾಲೆಕ್ಸಿ S9 ಪ್ಲಸ್ ಸ್ಮಾರ್ಟ್‌ಫೋನಿನಲ್ಲಿ 6.2 ಇಂಚಿನ AMOLED ಡಿಸ್‌ಪ್ಲೇಯನ್ನು ನೀಡಲಾಗಿದೆ. ಇದಲ್ಲದೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೋಟೆಕ್ಷನ್ ಅನ್ನು ಒದಗಿಸಲಿದೆ. ಅಲ್ಲದೇ ಮೆಟಲ್ ಪ್ರೈಮ್ ಅನ್ನು ಒಳಗೊಂಡಿದೆ. ಇದಲ್ಲದೇ ಫೋನಿನ ಹಿಂಭಾಗದಲ್ಲಿ ಫಿಂಗರ್ ಪ್ರಿಂಟ್ ಸ್ಕ್ಯಾನರ್ ಅನ್ನು ಒಳಗೊಂಡಿದೆ ಅದು ವಿಭಿನ್ನ ವಿನ್ಯಾಸದಾಗಿದೆ.

ಕ್ಯಾಮೆರಾ:

ಕ್ಯಾಮೆರಾ:

ಸ್ಯಾಮ್‌ಸಂಗ್ ಗ್ಯಾಲೆಕ್ಸಿ S9 ಮತ್ತು ಸ್ಯಾಮ್‌ಸಂಗ್ ಗ್ಯಾಲೆಕ್ಸಿ S9 ಪ್ಲಸ್ ಸ್ಮಾರ್ಟ್‌ಫೋನ್‌ ನ ಹಿಂಭಾಗದಲ್ಲಿ 12MP + 12MPಯ ಡ್ಯುಯಲ್ ಕ್ಯಾಮೆರಾ ಸೆಟಪ್ ಅನ್ನು ಕಾಣಬಹುದಾಗಿದೆ. ಇದಲ್ಲದೇ ಮುಂಭಾಗದಲ್ಲಿ 8MP ಕ್ಯಾಮೆರಾವನ್ನು ನೀಡಲಾಗಿದೆ. ಇದಲ್ಲದೇ ಹಿಂಭಾಗದಲ್ಲಿ ಡ್ಯುಯಲ್ LED ಫ್ಲಾಷ್ ಲೈಟ್ ಅನ್ನು ಕಾಣಬಹುದಾಗಿದೆ.

ಇತರೆ ವಿಶೇಷತೆಗಳು

ಇತರೆ ವಿಶೇಷತೆಗಳು

ಸ್ಯಾಮ್‌ಸಂಗ್ ಗ್ಯಾಲೆಕ್ಸಿ S9 ಮತ್ತು ಸ್ಯಾಮ್‌ಸಂಗ್ ಗ್ಯಾಲೆಕ್ಸಿ S9 ಪ್ಲಸ್ ಸ್ಮಾರ್ಟ್‌ಫೋನ್‌ ಆಂಡ್ರಾಯ್ಡ್ ಒರಿಯೋದಲ್ಲಿ ಕಾರ್ಯನಿರ್ವಹಿಸಲಿದ್ದು, 4GB/6GB RAM ಅನ್ನು ಕಾಣಬಹುದಾಗಿದೆ. ಇದರೊಂದಿಗೆ ವೇಗವಾಗಿ ಕಾರ್ಯನಿರ್ವಹಿಸಲು ಸ್ನಾಪ್‌ಡ್ರಾಗನ್ 845 ಪ್ರೋಸೆಸರ್ ಅನ್ನು ಇದರಲ್ಲಿ ಅಳವಡಿಸಲಾಗಿದೆ.

ಬೆಲೆ:

ಬೆಲೆ:

ಸ್ಯಾಮ್‌ಸಂಗ್ ಗ್ಯಾಲೆಕ್ಸಿ S9 ಮತ್ತು ಸ್ಯಾಮ್‌ಸಂಗ್ ಗ್ಯಾಲೆಕ್ಸಿ S9 ಪ್ಲಸ್ ಸ್ಮಾರ್ಟ್‌ಫೋನ್‌ ಬೆಲೆಯೂ ಕ್ರಮವಾಗಿ ರೂ.45,790 ಮತ್ತು ರೂ.53,400ಕ್ಕೆ ದೊರೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಗ್ಯಾಲೆಕ್ಸಿ S8 ಗಿಂತಲೂ ಕಡಿಮೆ ಬೆಲೆದೊರೆಯುವ ಸಾಧ್ಯತೆ ಇದೆ.

ಬಿಡುಗಡೆ..?

ಬಿಡುಗಡೆ..?

ಸ್ಯಾಮ್‌ಸಂಗ್ ಗ್ಯಾಲೆಕ್ಸಿ S9 ಮತ್ತು ಸ್ಯಾಮ್‌ಸಂಗ್ ಗ್ಯಾಲೆಕ್ಸಿ S9 ಪ್ಲಸ್ ಭಾರತದಲ್ಲಿ ಮಾರ್ಚ್ 16 ರಿಂದ ಮಾರಾಟವಾಗಲಿದೆ ಎನ್ನಲಾಗಿದ್ದು, ಈ ಕುರಿತ ಅಧಿಕೃತ ಮಾಹಿತಿಯೂ ಲಭ್ಯವಾಗಿಲ್ಲ.

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ

ಓದಿರಿ: ಗೂಗಲ್‌ನಲ್ಲಿ ಫೋಟೋಗನ್ನು ಡೌನ್‌ಲೋಡ್ ಮಾಡುವ ಮುನ್ನ ಎಚ್ಚರ..! ಯಾಕೆ ಅಂದ್ರಾ..?

English summary
Samsung Galaxy S9, Galaxy S9+ to launch on Feb 25. to konw more visit kannada.gizbot.com
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot