ಆಪಲ್ ಐಫೋನ್ Xಗೆ ಸೆಡ್ಡು, ಮಡಚುವ ಸ್ಕ್ರಿನ್ ನೊಂದಿಗೆ ಸ್ಯಾಮ್‌ಸಂಗ್ ಗ್ಯಾಲೆಕ್ಸಿ X ಸ್ಮಾರ್ಟ್‌ಪೋನ್..!
ಮುಂದಿನ ವರ್ಷ ಹಲವಾರು ನೂತನ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ಕಾಣಿಸಿಕೊಳ್ಳಲಿದ್ದು, ಇದರಲ್ಲಿ ಪ್ರಮುಖವಾದದ್ದು ಎಂದರೆ ಸ್ಯಾಮ್‌ಸಂಗ್ ಗ್ಯಾಲೆಕ್ಸಿ X ಸ್ಮಾರ್ಟ್‌ಫೋನ್ ಎನ್ನಬಹುದಾಗಿದೆ. ಆಪಲ್ ಐಫೋನ್ Xಗೆ ಸೆಡ್ಡು ಹೊಡೆಯಲು ಸ್ಯಾಮ್‌ಸಂಗ್ ಬಿಡುಗಡೆ ಮಾಡಲಿರುವ ಸ್ಮಾರ್ಟ್‌ಫೋನ್ ಇದಾಗಿದೆ ಎನ್ನಲಾಗಿದೆ.

ಓದಿರಿ: ಐಡಿಯಾ ಬಳಕೆದಾರರು ಆಧಾರ್ ಲಿಂಕ್ ಮಾಡಿದರೆ ಬಂಪರ್ ಆಫರ್: ರೂ.20000 ಮೌಲ್ಯದ ಮೂವಿ ವೋಚರ್
ಈಗಾಗಲೇ ಸ್ಯಾಮ್‌ಸಂಗ್ ಮಡಚುವ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡುವುದಾಗಿ ತಿಳಿಸಿತ್ತು. ಇದೇ ಮಾದರಿಯಲ್ಲಿ ಗ್ಯಾಲೆಕ್ಸಿ X ಸ್ಮಾರ್ಟ್‌ಫೋನ್ ಲಾಂಚ್ ಮಾಡಲಿದೆ ಎನ್ನಲಾಗಿದೆ. 2018 ಆರಂಭದಲ್ಲಿಯೇ ಈ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಕಾಣಿಸಿಕೊಂಡರೆ ಆಚ್ಚರಿ ಪಡಬೇಕಾಗಿಲ್ಲ. ಈಗಾಗಲೇ ಈ ಸ್ಮಾರ್ಟ್‌ಫೋನ್ ವಿನ್ಯಾಸವು ಅಂತಿಮವಾಗಿದೆ ಎನ್ನಲಾಗಿದೆ.

ಇತಿಹಾಸ ಬರೆಯಲಿದೆ:
ಸ್ಯಾಮ್‌ಸಂಗ್ ಮಡಚುವ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡುವ ಮೂಲಕ ಸ್ಮಾರ್ಟ್‌ಫೋನ್ ಇತಿಹಾಸದಲ್ಲಿ ಹೊಸ ದಾಖಲೆಯನ್ನು ಬರೆಯಲಿದೆ ಎನ್ನಲಾಗಿದೆ. ಇದು ಮೊಬೈಲ್ ಲೋಕದ ಆಚ್ಚರಿಗಳಲ್ಲಿ ಒಂದಾಗಲಿದೆ ಎನ್ನುವ ಮಾತು ಕೇಳಿಬಂದಿದೆ.

ಗ್ಯಾಲೆಕ್ಸಿ S9 ಮತ್ತು S9 ಪ್ಲಸ್ ಜೊತೆಗೆ ಲಾಂಚ್:
ಸ್ಯಾಮ್‌ಸಂಗ್ ಗ್ಯಾಲೆಕ್ಸಿ S9 ಮತ್ತು ಗ್ಯಾಲೆಕ್ಸಿ S9 ಪ್ಲಸ್ ಸ್ಮಾರ್ಟ್‌ಫೋನ್ ನೊಂದಿಗೆ ಗ್ಯಾಲೆಕ್ಸಿ X ಸ್ಮಾರ್ಟ್‌ಫೋನ್ ಆಗಲಿದೆ ಎನ್ನುವ ಮಾತು ಕೇಳಿಬಂದಿದೆ. ಮೂಲಗಳ ಪ್ರಕಾರ ಮುಂದಿನ ಫೆಬ್ರವರಿಯಲ್ಲಿ ಈ ಫೋನ್ ಮಾರುಕಟ್ಟೆಯಲ್ಲಿ ಕಾಣಿಸಿಕೊಳ್ಳಲಿದೆ.

ಮೊದಲಿಗೆ ಸೌಥ್ ಕೋರಿಯಾದಲ್ಲಿ:
ಸ್ಯಾಮ್‌ಸಂಗ್ ಗ್ಯಾಲೆಕ್ಸಿ X ಸ್ಮಾರ್ಟ್‌ಫೋನ್ ಮೊದಲಿಗೆ ಸೌಥ್ ಕೋರಿಯಾದಲ್ಲಿ ಕಾಣಿಸಿಕೊಳ್ಳಲಿದ್ದು, ನಂತರದಲ್ಲಿ ವಿಶ್ವದ ವಿವಿಧ ಮಾರುಕಟ್ಟೆಯಲ್ಲಿ ಮಾರಾಟವಾಗಲಿದೆ ಎನ್ನಲಾಗಿದೆ. ಆದರೆ ಈ ಸ್ಮಾರ್ಟ್‌ಫೋನ್ ವಿಶೇಷತೆಗಳ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.


Click it and Unblock the Notifications








