Home
ಮೊಬೈಲ್

Samsung: ಹೊಸ ರಗಡ್ ಫೋನ್ ಲಾಂಚ್.. ಕಲ್ಲಿಗೆ ಬಡಿದರೂ, ನೆಲಕ್ಕೆ ಬಿದ್ದರೂ ಹಾಳಾಗಲ್ಲ.. ಬೆಲೆ, ವಿಶೇಷತೆಗಳೇನು?

ಕಲ್ಲಿಗೆ ಬಡಿದರೂ ಹಾಳಾಗಲ್ಲ.. ಕೈಯಿಂದ ಜಾರಿ ನೆಲಕ್ಕೆ ಬಿದ್ದರೂ ಹಾನಿಯಾಗಲ್ಲ.. ಟೆಕ್ ದೈತ್ಯ ಸ್ಯಾಮ್‌ಸಂಗ್ ತಂದಿದೆ ಶಕ್ತಿಶಾಲಿ ಸ್ಮಾರ್ಟ್‌ಫೋನ್! ಹೌದು, ಸ್ಯಾಮ್‌ಸಂಗ್ ಕಂಪನಿಯು ಹೊಸ ಸ್ಮಾರ್ಟ್‌ಫೋನ್ ಗ್ಯಾಲಕ್ಸಿ XCover 7 ಪ್ರೊ (Samsung Galaxy XCover 7 Pro) ಅನ್ನು ಬಿಡುಗಡೆ ಮಾಡಿದೆ. ಇದು ನೀರಿನ ಅಡಿಯಲ್ಲಿಯೂ ಕೆಲಸ ಮಾಡುವ ಮತ್ತು ಕೈಯಿಂದ ಜಾರಿ ನೆಲಕ್ಕೆ ಬಿದ್ದರೆ ಯಾವುದೇ ಹಾನಿಯಾಗದ ಫೋನ್ ಆಗಿದೆ. ಬಳಕೆದಾರರು ಯಾವುದೇ ಒತ್ತಡವಿಲ್ಲದೆ ಆರಾಮವಾಗಿ ಮೊಬೈಲ್ ಅನ್ನು ಬಳಸಬಹುದು. ಈ ಸ್ಯಾಮ್‌ಸಂಗ್ ಫೋನಿನ ಬೆಲೆ, ಲಭ್ಯತೆ ಮತ್ತು ವಿಶೇಷಣಗಳ ಬಗ್ಗೆ ಇಲ್ಲಿದೆ ಮಾಹಿತಿ.

ಸ್ಮಾರ್ಟ್‌ಫೋನ್ ಗ್ಯಾಲಕ್ಸಿ XCover 7 ಪ್ರೊ ಅನ್ನು ಒಂದೇ ರೂಪಾಂತರದಲ್ಲಿ ಬಿಡುಗಡೆ ಮಾಡಲಾಗಿದೆ. ಈ ಫೋನಿನ ವಿಶೇಷತೆಗಳೆಂದರೆ, ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7s ಜೆನ್ 3 ಪ್ರೊಸೆಸರ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು13 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಲಭ್ಯವಿದೆ. ಈ ಮೊಬೈಲ್ 120Hz ರಿಫ್ರೆಶ್ ದರದೊಂದಿಗೆ 6.6 ಇಂಚಿನ ಡಿಸ್ಪ್ಲೇ ಹೊಂದಿದೆ. ಹಾಗೆಯೇ 6GB RAM + 128GB, 4350mAh ಬ್ಯಾಟರಿ ಸೇರಿದಂತೆ ಹಲವು ಅತ್ಯುತ್ತಮ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Samsung: ಕಲ್ಲಿಗೆ ಬಡಿದರೂ, ನೆಲಕ್ಕೆ ಬಿದ್ದರೂ ಹಾಳಾಗಲ್ಲ! ಯಾವ ಫೋನ್? ಬೆಲೆ ನೋಡಿ

ಸ್ಮಾರ್ಟ್‌ಫೋನ್ ಗ್ಯಾಲಕ್ಸಿ XCover 7 ಪ್ರೊ ಮೊಬೈಲ್ ಗಟ್ಟಿಮುಟ್ಟಾದ ದೇಹ ಹೊಂದಿದೆ. ಇದು MIL-STD-810H ಮಿಲಿಟರಿ ಪ್ರಮಾಣೀಕರಣವನ್ನು ಪಡೆದುಕೊಂಡಿದೆ. ಅಂದರೆ ಈ ಸ್ಯಾಮ್‌ಸಂಗ್ ಫೋನ್ ಎತ್ತರದಿಂದ ಬಿದ್ದರೂ ಅಥವಾ ಕಲ್ಲಿಗೆ ಬಡಿದರೂ ಹಾಳಾಗಲ್ಲ. ಇದು IP68 ರೇಟಿಂಗ್‌ನೊಂದಿಗೆ ಬರುತ್ತದೆ. ಇದು ನೀರು, ಧೂಳು ಮತ್ತು ಮಣ್ಣಿನಿಂದ ನಿರೋಧಕವಾಗಿದೆ. ಮಳೆ ಮತ್ತು ಇಬ್ಬನಿಯಲ್ಲಿ ಸುಲಭವಾಗಿ ಫೋನ್ ಬಳಸಬಹುದು. ಈ ಫೋನಿನಲ್ಲಿ ವೆಟ್ ಟಚ್ ಮತ್ತು ಗ್ಲೋವ್ ಮೋಡ್ ಸಹ ಲಭ್ಯವಿದೆ.

ಸ್ಮಾರ್ಟ್‌ಫೋನ್ ಗ್ಯಾಲಕ್ಸಿ XCover 7 ಪ್ರೊ ವೈಶಿಷ್ಟ್ಯಗಳು

ಸ್ಮಾರ್ಟ್‌ಫೋನ್ ಗ್ಯಾಲಕ್ಸಿ XCover 7 ಪ್ರೊ ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್ ಎಚ್‌ಡಿ ಪ್ಲಸ್ ಡಿಸ್ಪ್ಲೇ ಹೊಂದಿದೆ. ಇದು ವಾಟರ್‌ಡ್ರಾಪ್ ನಾಚ್ ಶೈಲಿಯ TFT LCD ಸ್ಕ್ರೀನ್ ಆಗಿದೆ. ಈ ಡಿಸ್ಪ್ಲೇಯು 2400 x 1080 ಪಿಕ್ಸೆಲ್‌ಗಳ ಸ್ಕ್ರೀನ್ ರೆಸಲ್ಯೂಶನ್‌ ಬೆಂಬಲದೊಂದಿಗೆ ಬರುತ್ತದೆ. ಈ ಫೋನ್ ಡಿಸ್ಪ್ಲೇ 120Hz ರಿಫ್ರೆಶ್ ದರದ ಬೆಂಬಲ ಪಡೆದಿದೆ. ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್+ ರಕ್ಷಣೆ ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ

ಸ್ಮಾರ್ಟ್‌ಫೋನ್ ಗ್ಯಾಲಕ್ಸಿ XCover 7 ಪ್ರೊ ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7S ಜೆನ್ 3 ಆಕ್ಟಾ ಕೋರ್ ಪ್ರೊಸೆಸರ್ ಹೊಂದಿದೆ. ಇದನ್ನು 4 ನ್ಯಾನೊಮೀಟರ್ ಫ್ಯಾಬ್ರಿಕೇಶನ್‌ಗಳ ಆಧಾರದ ಮೇಲೆ ತಯಾರಿಸಲಾಗಿದೆ. ಈ ಮೊಬೈಲ್ ಆಂಡ್ರಾಯ್ಡ್‌ 15 ಆಧಾರಿತ One UI 7 ಜೊತೆಗೆ ಕೆಲಸ ನಿರ್ವಹಿಸುತ್ತದೆ. ಗ್ರಾಫಿಕ್ಸ್‌ಗಾಗಿ, ಈ ಫೋನ್ ಅಡ್ರಿನೊ 720 ಜಿಪಿಯು ಸಹ ಹೊಂದಿದೆ.

Samsung: ಕಲ್ಲಿಗೆ ಬಡಿದರೂ, ನೆಲಕ್ಕೆ ಬಿದ್ದರೂ ಹಾಳಾಗಲ್ಲ! ಯಾವ ಫೋನ್? ಬೆಲೆ ನೋಡಿ

ಕ್ಯಾಮೆರಾ ಸೆಟಪ್

ಸ್ಮಾರ್ಟ್‌ಫೋನ್ ಗ್ಯಾಲಕ್ಸಿ XCover 7 ಪ್ರೊ ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ.ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದರೊಂದಿಗೆ ದ್ವಿತೀಯ ಕ್ಯಾಮೆರಾವು 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಆಂಗಲ್ ಲೆನ್ಸ್‌ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನ್ 13 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಸಹ ಒಳಗೊಂಡಿದೆ.

ಬ್ಯಾಟರಿ ಮತ್ತು ಚಾರ್ಜಿಂಗ್‌

ಸ್ಮಾರ್ಟ್‌ಫೋನ್ ಗ್ಯಾಲಕ್ಸಿ XCover 7 ಪ್ರೊ ಫೋನ್ 4,350mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಬಹುತೇಕ ಎಲ್ಲಾ ಸ್ಮಾರ್ಟ್‌ಫೋನ್‌ಗಳು ಅಂತರ್ನಿರ್ಮಿತ ಬ್ಯಾಟರಿಯೊಂದಿಗೆ ಬರುತ್ತವೆ. ಆದರೆ, ಈ ಸ್ಯಾಮ್‌ಸಂಗ್ ಫೋನ್ ತೆಗೆಯಬಹುದಾದ ಬ್ಯಾಟರಿಯನ್ನು ಹೊಂದಿದೆ. ಅಂದರೆ, ನೀವು ಫೋನಿನ ಹಿಂಬದಿಯ ಕವರ್ ತೆಗೆಯುವ ಮೂಲಕ ಬ್ಯಾಟರಿಯನ್ನು ಸಹ ತೆಗೆಯಬಹುದು. ಇದು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ 6E, ಬ್ಲೂಟೂತ್ 5.4 ಮತ್ತು ಎನ್‌ಎಫ್‌ಸಿ ಹೊಂದಿದೆ. ಇದು 3.5mm ಹೆಡ್‌ಫೋನ್ ಜ್ಯಾಕ್ ಮತ್ತು ಡಾಲ್ಬಿ ಅಟ್ಮಾಸ್ ಸ್ಟೀರಿಯೊ ಸ್ಪೀಕರ್‌ಗಳನ್ನು ಸಹ ಹೊಂದಿದೆ.

ಸ್ಮಾರ್ಟ್‌ಫೋನ್ ಗ್ಯಾಲಕ್ಸಿ XCover 7 ಪ್ರೊ ಬೆಲೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಕ್ಸ್‌ಕವರ್ 7 ಪ್ರೊ ಫೋನನ್ನು ಒಂದೇ ರೂಪಾಂತರದಲ್ಲಿ ಬಿಡುಗಡೆ ಮಾಡಲಾಗಿದೆ. ಈ ಫೋನ್ 6GB RAM + 128GB ಸ್ಟೋರೇಜ್ ಆಯ್ಕೆ ಹೊಂದಿದೆ. ಈ ಹೊಸ ಸ್ಯಾಮ್‌ಸಂಗ್ ಫೋನಿನ ಬೆಲೆ 59,000 ರೂ. ಆಗಿದೆ. ಇದು ಏಪ್ರಿಲ್ 28 ರಿಂದ ಜಾಗತಿಕ ಮಾರುಕಟ್ಟೆಯಲ್ಲಿ (ಯುರೋಪ್‌) ಮತ್ತು ಮೇ 8 ರಿಂದ ಯುಎಸ್‌ನಲ್ಲಿ ಮಾರಾಟವಾಗಲಿದೆ. ಈ ಸ್ಯಾಮ್‌ಸಂಗ್ ಮೊಬೈಲ್ ಶೀಘ್ರದಲ್ಲೇ ಭಾರತೀಯ ಮಾರುಕಟ್ಟೆಗೆ ಬರಲಿದೆ. ಈ ಬಗ್ಗೆ ಕಂಪನಿ ಯಾವುದೇ ಮಾಹಿತಿ ನೀಡಿಲ್ಲ.

Best Mobiles in India

English summary
Samsung Galaxy XCover7 Pro rugged phone Launched with Snapdragon 7s Gen 3: know price specifications, features and more
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+