Home
ಮೊಬೈಲ್

Tecno: 5000mAh ಬ್ಯಾಟರಿ.. 48MP ಕ್ಯಾಮೆರಾ.. ಅಗ್ಗದ 5G ಫೋನ್ ಬಿಡುಗಡೆ

ಟೆಕ್ನೋ ತನ್ನ ಗ್ರಾಹಕರಿಗೆ ಒಳ್ಳೆಯ ಸುದ್ದಿ ನೀಡಿದೆ. ಕಂಪನಿಯು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಅಗ್ಗದ ಫೋನ್ ಟೆಕ್ನೋ ಪಾಪ್ 9 5G (Tecno Pop 9 5G) ಅನ್ನು ಬಿಡುಗಡೆ ಮಾಡಿತ್ತು. ಇದೀಗ, ಈ ಫೋನನ್ನು 8GB RAM ನೊಂದಿಗೆ ಪರಿಚಯಿಸಿದೆ. ಈ ಫೋನಿನ ಬೆಲೆ ಕೂಡ ಕಡಿಮೆ ಇದೆ. ನೀವು, ಈ ಮೊಬೈಲ್‌ನಲ್ಲಿ ಹೆಚ್ಚಿನ ವೇಗ ಮತ್ತು ಕಾರ್ಯಕ್ಷಮತೆಯನ್ನು ಪಡೆಯಬಹುದು. ಬನ್ನಿ, ಈ ಫೋನಿನ ಬೆಲೆ, ಲಭ್ಯತೆ ಮತ್ತು ವಿಶೇಷತೆಗಳನ್ನು ತಿಳಿಯೋಣ.

ಟೆಕ್ನೋ ಪಾಪ್ 9 5G ಫೋನ್ ಡ್ಯುಯಲ್ ರಿಯಲ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ 48 ಮೆಗಾಪಿಕ್ಸೆಲ್‌ ಕ್ಯಾಮೆರಾ ಲಭ್ಯವಿದೆ. ಇದು 6.67 ಇಂಚಿನ ಡಿಸ್ಪ್ಲೇ ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತದೆ. ಜೊತೆಗೆ 128GB ಸ್ಟೋರೇಜ್‌, 5000mAh ಬ್ಯಾಟರಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಸ್ತುತ, ಈ ಫೋನನ್ನು ಮೂರು ಸ್ಟೋರೇಜ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿಪದೆ. ಇದರ ಬೆಲೆ ತಿಳಿಯಲು ಮುಂದೆ ಓದಿ.

Tecno: 5000mAh ಬ್ಯಾಟರಿ.. 48MP ಕ್ಯಾಮೆರಾ.. ಅಗ್ಗದ ಫೋನ್ ಲಾಂಚ್

ಟೆಕ್ನೋ ಪಾಪ್ 9 5G ಫೋನಿನ ಫೀಚರ್ಸ್‌

ಡಿಸ್ಪ್ಲೇ ವಿವರ

ಟೆಕ್ನೋ ಪಾಪ್ 9 5G ಸ್ಮಾರ್ಟ್‌ಫೋನ್ 6.67 ಇಂಚಿನ ಡಿಸ್ಪ್ಲೇಯನ್ನು ಹೊಂದಿದೆ. ಈ ಐಪಿಎಸ್‌ ಎಲ್‌ಸಿಡಿ ಡಿಸ್ಪ್ಲೇಯು ಹೆಚ್ಚಿನ ಸ್ಕ್ರೀನ್ ರೆಸಲ್ಯೂಶನ್ ಮತ್ತು 120Hz ರಿಫ್ರೆಶ್ ದರದ ಬೆಂಬಲ ಪಡೆದಿದೆ. ಲ್ಲಿ ಕಾರ್ಯನಿರ್ವಹಿಸುತ್ತದೆ.

ಪ್ರೊಸೆಸರ್ ಸಾಮರ್ಥ್ಯ

ಟೆಕ್ನೋ ಪಾಪ್ 9 5G ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 6300 ಆಕ್ಟಾಕೋರ್ ಪ್ರೊಸೆಸರ್‌ ಹೊಂದಿದೆ. ಇದನ್ನು 6 ನ್ಯಾನೋಮೀಟರ್ ಫ್ಯಾಬ್ರಿಕೇಶನ್‌ನಲ್ಲಿ ನಿರ್ಮಿಸಲಾಗಿದೆ. ಈ ಫೋನ್ ಆಂಡ್ರಾಯ್ಡ್ 14 ಓಎಸ್‌ನಲ್ಲಿ ಕೆಲಸ ನಿರ್ವಹಿಸುತ್ತದೆ.

ಸ್ಟೋರೇಜ್‌ ಆಯ್ಕೆ

ಟೆಕ್ನೋ ಪಾಪ್ 9 5G ಮೊಬೈಲ್ 8GB RAM ಹೊಂದಿದೆ. ನೀವು 16GB ವರೆಗೆ ಬಳಸಬಹುದು. ಈ ಫೋನ್ 64GB ಮತ್ತು 128GB ಸ್ಟೋರೇಜ್‌ ಆಯ್ಕೆಯಲ್ಲಿ ಮಾರಾಟವಾಗುತ್ತಿದೆ.

ಕ್ಯಾಮೆರಾ ಸೆಟಪ್

ಟೆಕ್ನೋ ಪಾಪ್ 9 5G ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಈ ಫೋನಿನಲ್ಲಿ 48 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದು ಎಲ್ಇಡಿ ಫ್ಲ್ಯಾಷ್ ಮತ್ತು ರಿಂಗ್ ಎಲ್ಇಡಿ ಲೈಟ್‌ ಒಳಗೊಂಡಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಮೊಬೈಲ್ 8 ಮೆಗಾಪಿಕ್ಸೆಲ್ ಫ್ರಂಟ್‌ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಬ್ಯಾಕಪ್‌

ಟೆಕ್ನೋ 5G ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್‌ ಮಾಡಲು, 15W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.

ಇತರೆ ವೈಶಿಷ್ಟ್ಯಗಳು

ಟೆಕ್ನೋ ಪಾಪ್ 9 5G ಮೊಬೈಲ್ ನೀರು ಮತ್ತು ಧೂಳಿನಿಂದ ರಕ್ಷಣೆಗೆ IP54 ರೇಟಿಂಗ್ ಪಡೆದಿದೆ. ಈ ಮೊಬೈಲ್ ಇನ್‌ಫ್ರಾರೆಡ್ ಸೆನ್ಸಾರ್ ಹೊಂದಿದ್ದು, ಟಿವಿ ರಿಮೋಟ್ ಆಗಿಯೂ ಕೆಲಸ ಮಾಡುತ್ತದೆ. ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಇದು ಡ್ಯುಯಲ್ ಸ್ಪೀಕರ್‌ಗಳು, ಡಾಲ್ಬಿ ಅಟ್ಮಾಸ್, ಡ್ಯುಯಲ್ ಸಿಮ್ 5G, ವೈ-ಫೈ ಸೇರಿದಂತೆ ಮುಂತಾದ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಟೆಕ್ನೋ ಪಾಪ್ 9 5G ಬೆಲೆ ಮತ್ತು ಲಭ್ಯತೆ

ಕಂಪನಿಯು ಟೆಕ್ನೋ ಪಾಪ್ 9 5G ಫೋನಿನ ಹೊಸ 8GB RAM + 128GB ಸ್ಟೋರೇಜ್ ರೂಪಾಂತರವನ್ನು 10,999 ರೂ.ಗೆ ಬಿಡುಗಡೆ ಮಾಡಿದೆ. ಇದು ಜನವರಿ 8 ರಿಂದ ಅಮೆಜಾನ್‌ನಲ್ಲಿ ತನ್ನ ಮಾರಾಟ ಪ್ರಾರಂಭಿಸಲಿದೆ. ಈ ಮೊಬೈಲ್‌ನ ಇತರೆ ಎರಡು ರೂಪಾಂತರಗಳು ಸಹ ಲಭ್ಯವಿದೆ. 4GB RAM + 64GB ಸ್ಟೋರೇಜ್ ಬೆಲೆ 9,499 ರೂ. ಮತ್ತು 4GB RAM + 128GB ಸ್ಟೋರೇಜ್ ಆಯ್ಕೆಯ ಬೆಲೆ 9,999 ರೂ. ಆಗಿದೆ. ನೀವು ಮಿಡ್‌ನೈಟ್ ಶಾಡೋ, ಅಜುರೆ ಸ್ಕೈ ಮತ್ತು ಅರೋರಾ ಕ್ಲೌಡ್‌ ಬಣ್ಣಗಳಲ್ಲಿ ಫೋನನ್ನು ಖರೀದಿಸಬಹುದು.

Best Mobiles in India

English summary
Tecno Pop 9 5G 8GB RAM Variant Launched in India: Price, Specs and More Details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+