Home
ಮೊಬೈಲ್

ಜಸ್ಟ್‌ 6499 ರೂ.! ಹೊಸ Tecno ಫೋನ್ ಲಾಂಚ್; ರಾಶಿ ಫೀಚರ್ಸ್‌.. ಡಿಸ್ಕೌಂಟ್ ಕೂಡ ಸಿಗುತ್ತೆ!

ಕೇವಲ 6,499 ರೂ.ಗೆ ಹೊಸ ಫೋನ್ ಬಿಡುಗಡೆ. 5000mAh ಬ್ಯಾಟರಿ.. 6.67 ಇಂಚಿನ ದೊಡ್ಡ ಡಿಸ್ಪ್ಲೇ.. ಮೊಬೈಲ್‌ ಪ್ರಿಯರಿಗೆ ಇಷ್ಟು ಸಾಕು! ಹೌದು, ಟೆಕ್ನೋ (Tecno) ಭಾರತದಲ್ಲಿ ಹೊಸ ಟೆಕ್ನೋ ಪಾಪ್ 9 4G (Tecno POP 9 4G) ಫೋನನ್ನು ಬಿಡುಗಡೆ ಮಾಡಿದೆ. ಕಂಪನಿಯು ಇದನ್ನು ಅಗ್ಗದ ಬೆಲೆಗೆ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್ ಸೊಗಸಾದ ಡಿಸೈನ್ ಜೊತೆಗೆ ಅತ್ಯಾಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. ಬನ್ನಿ, ಈ ಫೋನಿನ ಬೆಲೆ, ಆಫರ್‌ಗಳು ಮತ್ತು ವಿಶೇಷತೆಗಳನ್ನು ತಿಳಿಯೋಣ.

ಕಂಪನಿಯು ಟೆಕ್ನೋ ಪಾಪ್ 9 4G ಫೋನನ್ನು ಕೇವಲ 6GB RAM + 64GB ಸ್ಟೋರೇಜ್‌ ಆಯ್ಕೆಯಲ್ಲಿ ಬಿಡುಗಡೆ ಮಾಡಿದೆ. ಈ ಮೊಬೈಲ್ ಮೀಡಿಯಾ ಟೆಕ್ ಹೆಲಿಯೊ G50 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಫೋನಿನಲ್ಲಿ 6.67 ಇಂಚಿನ ಡಿಸ್ಪ್ಲೇ ಲಭ್ಯವಿದೆ. ಇದು 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಇದರೊಂದಿಗೆ 5000mAh ಸಾಮರ್ಥ್ಯದ ಬ್ಯಾಟರಿ ಮತ್ತು 15W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಕೇವಲ 6,499 ರೂ.! ಹೊಸ Tecno ಫೋನ್ ಲಾಂಚ್; ಡಿಸ್ಕೌಂಟ್ ಎಷ್ಟು?

ಟೆಕ್ನೋ ಪಾಪ್ 9 4G ಫೋನಿನ ಬೆಲೆ ಮತ್ತು ಆಫರ್‌ಗಳು

ಟೆಕ್ನೋ ಪಾಪ್ 9 4G ಫೋನನ್ನು ಕೇವಲ 6,699 ರೂ.ಗೆ ಬಿಡುಗಡೆ ಮಾಡಲಾಗಿದೆ. ಕಂಪನಿಯು ತನ್ನ ಮೊದಲ ಮಾರಟದ ಭಾಗವಾಗಿ 200 ರೂ. ರಿಯಾಯಿತಿ ನೀಡುತ್ತದೆ. ನೀವು, ಕೇವಲ 6,499 ರೂ.ಗೆ ಈ ಹೊಸ ಫೋನ್‌ ಖರೀದಿಸಬಹುದು. ಟೆಕ್ನೋ ಪಾಪ್ 9 4G ಮೊಬೈಲ್ ನವೆಂಬರ್ 26 ರಿಂದ ಅಮೆಜಾನ್‌ನಲ್ಲಿ ಮಾರಾಟ ಪ್ರಾರಂಭಿಸಲಿದೆ. ಇದು ಗ್ಲಿಟರಿ ವೈಟ್, ಲೈಮ್ ಗ್ರೀನ್ ಮತ್ತು ಸ್ಟಾರ್ಟ್ರೈಲ್ ಕಪ್ಪು ಬಣ್ಣಗಳಲ್ಲಿ ಖರೀದಿಗೆ ಲಭ್ಯವಿರುತ್ತದೆ.

ಟೆಕ್ನೋ ಪಾಪ್ 9 4G ಫೋನಿನ ವೈಶಿಷ್ಟ್ಯಗಳು

ಡಿಸ್ಪ್ಲೇ ವಿವರ

ಟೆಕ್ನೋ ಪಾಪ್ 9 4G ಮೊಬೈಲ್ 6.67 ಇಂಚಿನ ಹೆಚ್‌ಡಿ ಪ್ಲಸ್‌ ಪಂಚ್ ಹೋಲ್ ಡಿಸ್ಪ್ಲೇಯನ್ನು ಹೊಂದಿದೆ. ಇದು 720 x 1600 ಪಿಕ್ಸೆಲ್‌ಗಳ ರೆಸಲ್ಯೂಶನ್‌ನೊಂದಿಗೆ ಬರುತ್ತದೆ. ಡಿಸ್ಪ್ಲೇಯು 90Hz ರಿಫ್ರೆಶ್ ದರ ಮತ್ತು 480 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ.

ಪ್ರೊಸೆಸರ್ ಸಾಮರ್ಥ್ಯ

ಕಂಪನಿಯು ಟೆಕ್ನೋ ಪಾಪ್ 9 4G ಸ್ಮಾರ್ಟ್‌ಫೋನ್ ಅನ್ನು ಮೀಡಿಯಾ ಟೆಕ್ ಹೆಲಿಯೊ G50 ಆಕ್ಟಾ ಕೋರ್ ಪ್ರೊಸೆಸರ್‌ನೊಂದಿಗೆ ಬಿಡುಗಡೆ ಮಾಡಿದೆ. ಈ ಪ್ರೊಸೆಸರ್ 2.2GHz ಗಡಿಯಾರದ ವೇಗದಲ್ಲಿ ಕೆಲಸ ನಿರ್ವಹಿಸುತ್ತದೆ.
ಈ ಮೊಬೈಲ್ HiOS 14 ಜೊತೆಗೆ ಆಂಡ್ರಾಯ್ಡ್‌ 14 ಗೋ ಆವೃತ್ತಿಯಲ್ಲಿ ಕೆಲಸ ಮಾಡುತ್ತದೆ.

ಸ್ಟೋರೇಜ್‌ ಆಯ್ಕೆ

ಟೆಕ್ನೋ ಪಾಪ್ 9 4G ಫೋನ್ 6GB RAM ಹೊಂದಿದೆ. ಇದು 3GB ವರ್ಚುವಲ್ RAM ಸಹ ಒಳಗೊಂಡಿದೆ. ನೀವು 3GB ಭೌತಿಕ RAM ಜೊತೆಗೆ 6GBಯನ್ನು ಬಳಸಬಹುದು. ಈ ಮೊಬೈಲ್ 64GB ಇಂಟರ್ನಲ್ ಸ್ಟೋರೇಜ್ ಹೊಂದಿದೆ. ನೀವು, ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೆ ಸ್ಟೋರೇಜ್‌ ವಿಸ್ತರಿಸಬಹುದು.

ಕೇವಲ 6,499 ರೂ.! ಹೊಸ Tecno ಫೋನ್ ಲಾಂಚ್; ಡಿಸ್ಕೌಂಟ್ ಎಷ್ಟು?

ಕ್ಯಾಮೆರಾ ಸೆಟಪ್

ನೂತನ ಟೆಕ್ನೋ ಪಾಪ್ 9 4G ಸ್ಮಾರ್ಟ್‌ಫೋನ್ ಎಲ್‌ಇಡಿ ಫ್ಲ್ಯಾಶ್‌ನೊಂದಿಗೆ 13 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಹೊಂದಿದೆ. ಇದು PDAF ತಂತ್ರಜ್ಞಾನವನ್ನು ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನ್‌ 8 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಚಾರ್ಜಿಂಗ್

ಟೆಕ್ನೋ ಪಾಪ್ 9 4G ಮೊಬೈಲ್ 5000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 15W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.

ಇತರೆ ವೈಶಿಷ್ಟ್ಯಗಳು

ಹೊಸ ಟೆಕ್ನೋ ಫೋನ್ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸರ್ ಮತ್ತು ಐಆರ್ ಸೆನ್ಸಾರ್ ತಂತ್ರಜ್ಞಾನವನ್ನು ಹೊಂದಿದೆ. ಜೊತೆಗೆ 3.5 ಎಂಎಂ ಆಡಿಯೋ ಜಾಕ್, ಸ್ಟೀರಿಯೋ ಸ್ಪೀಕರ್‌ಗಳು, ಡಿಟಿಎಸ್ ಲಭ್ಯವಿದೆ. ಇದು ಧೂಳು ಮತ್ತು ಸ್ಪ್ಲಾಶ್ ನಿರೋಧಕ IP54 ರೇಟಿಂಗ್ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ಡ್ಯುಯಲ್ 4G VoLTE, ವೈ-ಫೈ, ಬ್ಲೂಟೂತ್ 5.1, ಜಿಪಿಎಸ್‌, ಯುಎಸ್‌ಬಿ ಟೈಪ್ ಸಿ, ಎನ್‌ಎಫ್‌ಸಿ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.

Best Mobiles in India

English summary
Tecno Pop 9 5G with 5000mAh battery Launched in India: Check Price, Specifications, Features and More.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+