ಟೆಕ್ನೋ ಸ್ಪಾರ್ಕ್‌ 8P ಫಸ್ಟ್‌ ಲುಕ್‌: ಅಗ್ಗದ ಬೆಲೆಗೆ ಜಬರ್ದಸ್ತ್ ಕ್ಯಾಮೆರಾ ಫೋನ್‌!

|

ಜನಪ್ರಿಯ ಮೊಬೈಲ್ ತಯಾರಿಕಾ ಸಂಸ್ಥೆಗಳಲ್ಲಿ ಒಂದಾಗಿರುವ ಟೆಕ್ನೋ ಸಂಸ್ಥೆಯು ಈಗಾಗಲೇ ಸ್ಪಾರ್ಕ್‌ ಸರಣಿಯಲ್ಲಿ ಹಲವು ಫೋನ್‌ಗಳನ್ನು ಲಾಂಚ್ ಮಾಡಿ ಸೈ ಎನಿಸಿಕೊಂಡಿದೆ. ಆ ಪೈಕಿ ಇದೀಗ ಹೊಸದಾಗಿ ಬಿಡುಗಡೆ ಮಾಡಿರುವ ಟೆಕ್ನೋ ಸ್ಪಾರ್ಕ್‌ 8P ಫೋನ್‌ ಹಲವು ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ತನ್ನತ್ತ ತಿರುಗಿ ನೋಡುವಂತೆ ಮಾಡಿದೆ. ಮುಖ್ಯವಾಗಿ ಈ ಫೋನ್‌ ಬಜೆಟ್‌ ಪ್ರೈಸ್‌ ಟ್ಯಾಗ್‌ನಲ್ಲಿ ಕಾಣಿಸಿಕೊಂಡಿರುವುದು ಪ್ಲಸ್‌ ಪಾಯಿಂಟ್‌ ಎನಿಸಿದೆ.

ಫೋನ್

ಹೌದು, ಟೆಕ್ನೋ ಸಂಸ್ಥೆಯು ಭಾರತೀಯ ಮಾರುಕಟ್ಟೆಯಲ್ಲಿ (ಜುಲೈ 7 ರಂದು) ನೂತನವಾಗಿ ಪರಿಚಯಿಸಿರುವ ಟೆಕ್ನೋ ಸ್ಪಾರ್ಕ್‌ 8P ಸ್ಮಾರ್ಟ್‌ಫೋನ್‌ ಗ್ರಾಹಕರ ಗಮನ ಸೆಳೆದಿದೆ. ಈ ಫೋನ್ ತ್ರಿವಳಿ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್‌ ಸೆನ್ಸಾರ್‌ನಲ್ಲಿದೆ. ಇನ್ನು ಈ ಫೋನ್ ಮೀಡಿಯಾ ಟೆಕ್‌ ಹಿಲಿಯೋ G85 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುತ್ತದೆ.

ಟೆಕ್ನೋ

ಹಾಗೆಯೇ ಟೆಕ್ನೋ ಸ್ಪಾರ್ಕ್‌ 8P ಸ್ಮಾರ್ಟ್‌ಫೋನ್‌ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿರುವುದು ಈ ಫೋನಿನ ಇನ್ನೊಂದು ಪ್ರಮುಖ ಹೈಲೈಟ್‌ ಆಗಿದೆ. ಮುಖ್ಯವಾಗಿ ಬಜೆಟ್‌ ದರದ ರೆಡ್ಮಿ ಹಾಗೂ ರಿಯಲ್‌ಮಿ ಫೋನ್‌ಗಳಿಗೆ ನೇರ ಪೈಪೋಟಿ ನೀಡಲಿದೆ. ಹಾಗಾದರೇ ಟೆಕ್ನೋ ಸ್ಪಾರ್ಕ್‌ 8P ಸ್ಮಾರ್ಟ್‌ಫೋನಿನ ಫಸ್ಟ್‌ ಲುಕ್ ಹೇಗಿದೆ?.. ಫೀಚರ್ಸ್‌ಗಳ ಕಾರ್ಯ ಹೇಗೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ ಹೇಗಿದೆ?

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ ಹೇಗಿದೆ?

ಟೆಕ್ನೋ ಸ್ಪಾರ್ಕ್‌ 8P ಸ್ಮಾರ್ಟ್‌ಫೋನ್‌ 1,080 x2,408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ ತನ್ನ ವರ್ಗದಲ್ಲೇ ಉತ್ತಮ ರಿಫ್ರೆಶ್ ರೇಟ್‌ ಹೊಂದಿದ್ದು, ಪ್ರತಿ ಇಂಚಿನ ಪಿಕ್ಸಲ್ ಸಾಂದ್ರೆತೆಯು 401ppi ಆಗಿದೆ. ಇನ್ನು ಬಜೆಟ್‌ ದರದಲ್ಲಿ ಅತ್ಯುತ್ತಮ ಡಿಸ್‌ಪ್ಲೇ ಫೋನ್‌ ಖರೀದಿಸಬೇಕೆ ಎನ್ನುವವರಿಗೆ ಇದು ಆಕರ್ಷಕ ಎನಿಸಲಿದೆ. ಹಾಗೆಯೇ ಇದು ಗೇಮಿಂಗ್ ಮತ್ತು ವಿಡಿಯೊ ವೀಕ್ಷಣೆಗೆ ಪೂರಕವಾಗಿದೆ.

ಪ್ರೊಸೆಸರ್‌ ಪವರ್ ಯಾವುದು?

ಪ್ರೊಸೆಸರ್‌ ಪವರ್ ಯಾವುದು?

ಟೆಕ್ನೋ ಸ್ಪಾರ್ಕ್‌ 8P ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹೆಲಿಯೊ G85 SoC ಪ್ರೊಸೆಸರ್‌ ಹೊಂದಿದೆ. ಇದು ಆಂಡ್ರಾಯ್ಡ್‌ 11 ಓಎಸ್‌ ಪಡೆದಿದ್ದು, ಜೊತೆಗೆ HiOS 7.6 ರನ್ ಆಗುತ್ತದೆ. ಹಾಗೆಯೇ ಇದು 4GB RAM + 64GB ಇಂಟರ್‌ ಸಾಮರ್ಥ್ಯದ ಸಿಂಗಲ್ ಸ್ಟೋರೇಜ್ ವೇರಿಯಂಟ್‌ ಆಯ್ಕೆಯನ್ನು ಹೊಂದಿದೆ. ಇದಲ್ಲದೆ ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿ ಹೆಚ್ಚಿಸಿಕೊಳ್ಳಲು ಅವಕಾಶ ನೀಡಲಾಗಿದೆ.

ಕ್ಯಾಮೆರಾ ಸೆನ್ಸಾರ್ ಸ್ಪೆಷಲ್‌ ಏನು?

ಕ್ಯಾಮೆರಾ ಸೆನ್ಸಾರ್ ಸ್ಪೆಷಲ್‌ ಏನು?

ಟೆಕ್ನೋ ಸ್ಪಾರ್ಕ್‌ 8P ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಲೆನ್ಸ್ ಜೊತೆಗೆ ಮೂರನೇ ಕ್ಯಾಮೆರಾ ಬೇಸಿಕ್‌ ಸೆನ್ಸಾರ್ ಸಾಮರ್ಥ್ಯ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸ್ಯಾಮ್‌ಸಂಗ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಈ ವರ್ಗದಲ್ಲಿ ಸೆಲ್ಫಿ ಕ್ಯಾಮೆರಾ ಸೆನ್ಸಾರ್ ಇನ್ನಷ್ಟು ಉತ್ತಮ ಗೊಳಿಸಬಹುದಿತ್ತು.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳೆನು?

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳೆನು?

ಟೆಕ್ನೋ ಸ್ಪಾರ್ಕ್‌ 8P ಸ್ಮಾರ್ಟ್‌ಫೋನ್‌ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿದೆ. ಹಾಗೆಯೇ ಅದಕ್ಕೆ ಪೂರಕವಾಗಿ 18W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಅನ್ನು ಇದು ಪಡೆದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್, GPS, NFC ಮತ್ತು USB ಟೈಪ್-C ಪೋರ್ಟ್ ಸೇರಿವೆ. DTS ಸರೌಂಡ್‌ ಸೌಂಡ್‌ ಸ್ಪೀಕರ್ಸ್‌ ಸೌಲಭ್ಯ ಇದೆ.

ಬೆಲೆ ಎಷ್ಟಿದೆ?

ಬೆಲೆ ಎಷ್ಟಿದೆ?

ಭಾರತದಲ್ಲಿ ಟೆಕ್ನೋ ಸ್ಪಾರ್ಕ್‌ 8P ಸ್ಮಾರ್ಟ್‌ಫೋನ್‌ 4GB RAM + 64GB ಸ್ಟೋರೇಜ್ ಮಾದರಿಗೆ 10,999 ರೂ.ಬೆಲೆ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಅಟ್ಲಾಂಟಿಕ್ ಬ್ಲೂ, ಐರಿಸ್ ಪರ್ಪಲ್, ಟಹೀಟಿ ಗೋಲ್ಡ್ ಮತ್ತು ಟರ್ಕೋಯಿಸ್ ಸಯಾನ್ ಬಣ್ಣದ ಆಯ್ಕೆಗಳಲ್ಲಿ ಲಭ್ಯ.

ಕೊನೆಯ ಮಾತು

ಕೊನೆಯ ಮಾತು

ಟೆಕ್ನೋ ಸ್ಪಾರ್ಕ್‌ 8P ಸ್ಮಾರ್ಟ್‌ಫೋನ್‌ ಬಜೆಟ್‌ ಪ್ರೈಸ್‌ಟ್ಯಾಗ್‌ ಹೊಂದಿದ್ದು, ಹಾಗೆಯೇ ಬಿಗ್ ಡಿಸ್‌ಪ್ಲೇ, ಬಿಗ್ ಬ್ಯಾಟರಿ ಬ್ಯಾಕ್‌ಅಪ್‌, ಟ್ರಿಪಲ್‌ ಕ್ಯಾಮೆರಾ ರಚನೆಯಿಂದ ಗಮನ ಸೆಳೆಯುತ್ತದೆ. ಇದರೊಂದಿಗೆ ಮುಖ್ಯ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸಲ್‌ನಲ್ಲಿರುವುದು ಪ್ಲಸ್‌ ಪಾಯಿಂಟ್ ಎನಿಸಿದೆ. ಮುಖ್ಯವಾಗಿ ಮೀಡಿಯಾ ಟೆಕ್ ಹೆಲಿಯೊ G85 SoC ಪ್ರೊಸೆಸರ್‌ ಇರುವುದು ಆಕರ್ಷಕ ಎನಿಸಿದೆ. ಸುಮಾರು 11,000ರೂ. ಬೆಲೆಯ ವರ್ಗದಲ್ಲಿ ಖಂಡಿತಾ ಇದೊಂದು ಪೈಪೋಟಿ ನೀಡುವ ಫೋನ್‌ ಆಗಿದೆ. ಫೋನಿನ ಡಿಸೈನ್‌ ಸಹ ತನ್ನ ವರ್ಗದಲ್ಲಿ ಉತ್ತಮ ಎನಿಸುವಂತಿದೆ. ಇನ್ನು ಸೆಲ್ಫಿ ಕ್ಯಾಮೆರಾ ಸೆನ್ಸಾರ್ ಇನ್ನಷ್ಟು ಹೆಚ್ಚಿಸಬಹುದಿತ್ತು ಎನಿಸುತ್ತದೆ. ಉಳಿದಂತೆ ಟೆಕ್ನೋ ಸ್ಪಾರ್ಕ್‌ 8P ಸ್ಮಾರ್ಟ್‌ಫೋನ್‌ ಬಜೆಟ್‌ ಬೆಲೆಯಲ್ಲಿ ಜಬರ್ದಸ್ತ್‌ ಕ್ಯಾಮೆರಾ ಸ್ಮಾರ್ಟ್‌ಫೋನ್‌ ಎನ್ನಬಹುದು.

ಟೆಕ್ನೋ ಸ್ಪಾರ್ಕ್‌ 8C ಸ್ಮಾರ್ಟ್‌ಫೋನ್‌ ಫೀಚರ್ಸ್‌

ಟೆಕ್ನೋ ಸ್ಪಾರ್ಕ್‌ 8C ಸ್ಮಾರ್ಟ್‌ಫೋನ್‌ ಫೀಚರ್ಸ್‌

ಟೆಕ್ನೋ ಸಂಸ್ಥೆಯು ಇತ್ತೀಚಿಗೆ ಬಿಡುಗಡೆ ಮಾಡಿರುವ ಟೆಕ್ನೋ ಸ್ಪಾರ್ಕ್‌ 8C ಸ್ಮಾರ್ಟ್‌ಫೋನ್‌ 720 × 1,612 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 ಇಂಚಿನ HD+ ಡಾಟ್ ನಾಚ್ ಡಿಸ್‌ಪ್ಲೇ ಹೊಂದಿದೆ. ಇನ್ನು ಸ್ಮಾರ್ಟ್‌ಫೋನ್ ಆಕ್ಟಾ ಕೋರ್‌ ಯೂನಿಸೋಕ್‌ T606 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್‌ 11 ನಲ್ಲಿ HiOS v7.6 ಜೊತೆಗೆ ರನ್ ಆಗುತ್ತದೆ. ಹಾಗೆಯೇ 3GB RAM + 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ.

ಫಿಲ್ಟರ್‌ಗಳಂತಹ

ಹಾಗೆಯೇ ಇದು AI-ಚಾಲಿತ ಡ್ಯುಯಲ್ ರಿಯರ್‌ ಕ್ಯಾಮೆರಾ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ f/1.8 ಲೆನ್ಸ್ ಹೊಂದಿದೆ. ಇನ್ನು ರಿಯರ್‌ ಕ್ಯಾಮೆರಾ AI ಬ್ಯೂಟಿ 3.0, ವೈಡ್ ಸೆಲ್ಫಿ, ಪೋರ್ಟ್ರೇಟ್ ಮೋಡ್, HDR ಮತ್ತು ಫಿಲ್ಟರ್‌ಗಳಂತಹ ಫೀಚರ್ಸ್‌ಗಳನ್ನು ಬೆಂಬಲಿಸುತ್ತದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಇನ್ನು ಕ್ಯಾಮೆರಾ 1080p ಟೈಮ್-ಲ್ಯಾಪ್ಸ್ ಫೋಟೋಗ್ರಫಿ ಮತ್ತು 120fps ಸ್ಲೋ ಮೋಷನ್ ವಿಡಿಯೋ ರೆಕಾರ್ಡಿಂಗ್ ಬೆಂಬಲಿಸಲಿವೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

Best Mobiles in India

English summary
Tecno Spark 8P First Look: Best Camera Phone at Low Price Tag.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X