Home
ಮೊಬೈಲ್

ಕಡಿಮೆ ಬೆಲೆಗೆ ಲಭ್ಯ ಈ ಅಧಿಕ RAM ಸೌಲಭ್ಯದ ಫೋನ್‌!..ವಾರೆವ್ಹಾ ಅಂತೀರಾ!

ನೂತನ ಫೋನ್‌ ಖರೀದಿಸುವಾಗ ಖರೀದಿದಾರರು ಆನ್‌ಲೈನ್‌ ಹಾಗೂ ಆಫ್‌ಲೈನ್‌ ತಾಣಗಳಲ್ಲಿ ಅತ್ಯುತ್ತಮ ಆಫರ್‌ಗಳ ಇದೆಯಾ ಎಂದು ತಿಳಿಯಲು ಬಯಸುತ್ತಾರೆ. ಮುಖ್ಯವಾಗಿ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಮೊಬೈಲ್‌ಗಳಿಗೆ ಅತ್ಯುತ್ತಮ ಆಫರ್‌ ನೀಡಿರುತ್ತವೆ. ಈ ನಿಟ್ಟಿನಲ್ಲಿ ಇದೀಗ ಅಮೆಜಾನ್ ಪ್ಲಾಟ್‌ಫಾರ್ಮ್ ಟೆಕ್ನೋ ಕಂಪನಿಯ ಟೆಕ್ನೋ ಸ್ಪಾರ್ಕ್‌ 9 ಫೋನ್ ಭರ್ಜರಿ ರಿಯಾಯಿತಿ ತಿಳಿಸಿದೆ.

ಹೌದು, ಇ ಕಾಮರ್ಸ್‌ ದೈತ್ಯ ಅಮೆಜಾನ್ ತಾಣದಲ್ಲಿ ಟೆಕ್ನೋ ಸ್ಪಾರ್ಕ್‌ 9 ಫೋನ್‌ ಶೇ. 39% ರಷ್ಟು ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದ್ದು, ಗ್ರಾಹಕರು ಈ ಫೋನ್‌ ಅನ್ನು 6,999ರೂ. ಬೆಲೆಯಲ್ಲಿ ಖರೀದಿ ಮಾಡಬಹುದಾಗಿದೆ. ಇದರೊಂದಿಗೆ ಇತರೆ ಬ್ಯಾಂಕ್ ಹಾಗೂ ಇಎಮ್‌ಐ ಕೊಡುಗೆಗಳು ಕೂಡಾ ದೊರೆಯುತ್ತವೆ. ಹೀಗಾಗಿ ಇನ್ನಷ್ಟು ರಿಯಾಯಿತಿ ದರದಲ್ಲಿ ಖರೀದಿಸಬಹುದಾಗಿದೆ.

ಕಡಿಮೆ ಬೆಲೆಗೆ ಲಭ್ಯ ಈ ಅಧಿಕ RAM ಸೌಲಭ್ಯದ ಫೋನ್‌!..ವಾರೆವ್ಹಾ ಅಂತೀರಾ!

ಇನ್ನು ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್‌ ಹಿಲಿಯೋ G37 SoC ಪ್ರೊಸೆಸರ್‌ ಪಡೆದಿದ್ದು, 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಪಡೆದುಕೊಂಡಿದೆ. ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಪಡೆದಿರುವ ಜೊತೆಗೆ 5GB RAM ವರೆಗೆ ವರ್ಚುವಲ್ RAM ಸೌಲಭ್ಯ ಸಹ ಸಿಗುತ್ತದೆ. ಹಾಗಾದರೇ ಟೆಕ್ನೋ ಸ್ಪಾರ್ಕ್‌ 9 ಮೊಬೈಲ್‌ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ಡಿಸೈನ್‌ ಹೀಗಿದೆ

ಟೆಕ್ನೋ ಸ್ಪಾರ್ಕ್‌ 9 ಮೊಬೈಲ್‌ 6.6 ಇಂಚಿನ ಡಿಸ್‌ಪ್ಲೇಯನ್ನು ಪಡೆದಿದ್ದು, ಇದು 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಅನ್ನು ಪಡೆದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಪಡೆದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದ್ದು, 266 ppi ಪಿಕ್ಸೆಲ್‌ ಸಾಂದ್ರತೆಯನ್ನು ಹೊಂದಿದೆ. ಈ ಡಿಸ್‌ಪ್ಲೇ ವಾಟರ್‌ ಡ್ರಾಪ್‌ ನಾಚ್‌ ಶೈಲಿಯನ್ನು ಪಡೆದಿದೆ.

ಪ್ರೊಸೆಸರ್‌ ಸಾಮರ್ಥ್ಯ ಯಾವುದು

ಟೆಕ್ನೋ ಸ್ಪಾರ್ಕ್‌ 9 ಫೋನ್‌ ಮೀಡಿಯಾ ಟೆಕ್‌ ಹಿಲಿಯೋ G37 SoC ಪ್ರೊಸೆಸರ್‌ ಬಲ ಪಡೆದಿದ್ದು, ಪೂರಕವಾಗಿ ಆಂಡ್ರಾಯ್ಡ್ 12 ಸಪೋರ್ಟ್‌ ನೊಂದಿಗೆ ಕೆಲಸ ನಿರ್ವಹಿಸಲಿದೆ. ಹಾಗೆಯೇ 4GB RAM + 64GB, 6GB RAM + 128 GB ಹಾಗೂ 3GB RAM + 64GB ಸ್ಟೋರೇಜ್‌ ಸಾಮರ್ಥ್ಯದ ಮೂರು ವೇರಿಯೆಂಟ್‌ ಆಯ್ಕೆಗಳಲ್ಲಿ ಲಭ್ಯ. ಇದರಲ್ಲಿ ವರ್ಚುವಲ್‌ RAM ಫೀಚರ್ಸ್‌ ಮೂಲಕ 5GB RAM ವರೆಗೆ RAM ವಿಸ್ತರಿಸಬಹುದು.

ಡ್ಯುಯಲ್‌ ಕ್ಯಾಮೆರಾ ಸೆನ್ಸಾರ್ ಸೌಲಭ್ಯ

ಟೆಕ್ನೋ ಸ್ಪಾರ್ಕ್‌ 9 ಮೊಬೈಲ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಇದರಲ್ಲಿ ಮೊದಲ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಮತ್ತು AI ಕ್ಯಾಮೆರಾವನ್ನು ಒಳಗೊಂಡಿದೆ. ಈ ಕ್ಯಾಮೆರಾ LED ಫ್ಲ್ಯಾಷ್ ಸಹ ಪಡೆದಿದೆ. ಇದರ ಜೊತೆಗೆ ಮುಂಭಾಗದಲ್ಲಿ ಸೆಲ್ಫಿ ಕ್ಯಾಮೆರಾ ಸಹ ಈ ಫೋನ್‌ ನೀಡಲಾಗಿದೆ.

ಕಡಿಮೆ ಬೆಲೆಗೆ ಲಭ್ಯ ಈ ಅಧಿಕ RAM ಸೌಲಭ್ಯದ ಫೋನ್‌!..ವಾರೆವ್ಹಾ ಅಂತೀರಾ!

ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯ

ಟೆಕ್ನೋ ಸ್ಪಾರ್ಕ್‌ 9 ಫೋನ್‌ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಕೂಡಾ ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಬ್ಯಾಂಡ್ ವೈ-ಫೈ, ಮತ್ತು ಬ್ಲೂಟೂತ್ 5.0. GPS, GNSS, ಗೆಲಿಲಿಯೋ, ಬೀಡೌ ಮತ್ತು 4G LTE ಅನ್ನು ಹೊಂದಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ DTS ಬೆಂಬಲಿಸುವ ಸ್ಪೀಕರ್‌ಗಳನ್ನು ಒಳಗೊಂಡಿದೆ. ಜೊತೆಗೆ ಲೈಟ್‌ ಸೆನ್ಸಾರ್‌, ಪ್ರಾಕ್ಸಿಮಿಟಿ ಸೆನ್ಸಾರ್‌, ಆಕ್ಸಿಲೆರೊಮೀಟರ್‌ ಅನ್ನು ಸಹ ಇದು ಪಡೆದುಕೊಂಡಿದೆ.

Best Mobiles in India

English summary
TECNO Spark 9 received Massive price drop on amazom. specifications and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+