Subscribe to Gizbot

ಲೀಕ್ ಆಯ್ತು ಒನ್‌ಪ್ಲಸ್ 6 ಸ್ಮಾರ್ಟ್‌ಫೋನ್ ಫೋಟೋ: ಐಫೋನ್ X ಮಾದರಿಯಲ್ಲಿಯೇ ಇದೇ ಡಿಸ್‌ಪ್ಲೇ..!

Written By:

ಒನ್‌ಪ್ಲಸ್ ಮಾರುಕಟ್ಟೆಯಲ್ಲಿ ಬಳಕೆದಾರರ ಮನಗೆಲ್ಲುವಲ್ಲಿ ಯಶಸ್ವಿಯಾಗಿದ್ದು, ಇತ್ತೀಚೆಗೆ ಬಿಡುಗಡೆ ಮಾಡಿದ್ದ ಒನ್‌ಪ್ಲಸ್ 5T ಸ್ಮಾರ್ಟ್‌ಫೋನ್ ಆಪಲ್-ಸ್ಯಾಮ್‌ಸಂಗ್ ಮಾರುಕಟ್ಟೆಯನ್ನು ಕಸಿದುಕೊಂಡಿತ್ತು. ಭಾರತ ಮಾತ್ರವಲ್ಲದೇ ಜಾಗತಿಕ ಮಾರುಕಟ್ಟೆಯಲ್ಲಿ ಹೆಚ್ಚಿನ ಪ್ರಮಾಣದ ಅಭಿಮಾನಿಗಳನ್ನು ಸೆಳೆಯುವಲ್ಲಿ ಯಶಸ್ವಿಯಾಗಿತ್ತು. ಅಲ್ಲದೇ ಟಾಪ್ ಆಂಡ್ರಾಯ್ಡ್ ಫೋನ್ ಎನ್ನುವ ಖ್ಯಾತಿಗೆ ಪಾತ್ರವಾಗಿತ್ತು.

ಲೀಕ್ ಆಯ್ತು ಒನ್‌ಪ್ಲಸ್ 6 ಸ್ಮಾರ್ಟ್‌ಫೋನ್ ಫೋಟೋ

ಇದೇ ಹಿನ್ನಲೆಯಲ್ಲಿ ಒನ್‌ಪ್ಲಸ್ ಕಂಪನಿಯೂ ನೂತನ ಸ್ಮಾರ್ಟ್‌ಫೋನ್‌ವೊಂದನ್ನು ಮಾರುಕಟ್ಟೆಗೆ ಪರಿಚಯ ಮಾಡಲು ಮುಂದಾಗಿದ್ದು, ಒನ್‌ಪ್ಲಸ್ 6 ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಧೂಳ್ ಎಬ್ಬಿಸುಲು ಬೇಕಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಐಫೋನ್ X ವಿನ್ಯಾಸವನ್ನು ನಕಲು ಮಾಡಿದಂತೆ ಕಾಣುತ್ತಿದೆ. ಹೊಸ ವಿನ್ಯಾಸವೂ ಬಳಕೆದಾರರಿಗೆ ಮೆಚ್ಚುಗೆಯಾಗಲಿದೆ.

ಒನ್‌ಪ್ಲಸ್ 5ನಲ್ಲಿ 16:9 ಅನುಪಾತದ ಡಿಸ್‌ಪ್ಲೇಯನ್ನು ನೀಡಿದ್ದ ಒನ್‌ಪ್ಲಸ್, ನಂತರ ಒನ್‌ಪ್ಲಸ್ 5T ಸ್ಮಾರ್ಟ್‌ಫೋನಿನಲ್ಲಿ 18:9 ಅನುಪಾತದ ಡಿಸ್‌ಪ್ಲೇಯನ್ನು ಅಳವಡಿಸಿತ್ತು. ಇದಾದ ನಂತರದಲ್ಲಿ ಒನ್‌ಪ್ಲಸ್ 6 ಸ್ಮಾರ್ಟ್‌ಫೋನಿನಲ್ಲಿ 19:9 ಅನುಪಾತದ ಡಿಸ್‌ಪ್ಲೇಯನ್ನು ನೀಡಲಿದ್ದು, ಮುಂಭಾಗದ ಡಿಸ್‌ಪ್ಲೇಯಲ್ಲಿ ನೋಚ್ ಸಹ ಅಡಗಿದೆ. ಇದು ಸ್ಮಾರ್ಟ್‌ಫೋನ್ ವಿನ್ಯಾಸವನ್ನು ಉತ್ತಮ ಪಡಿಸಲಿದೆ ಎನ್ನಲಾಗಿದೆ.

ಲೀಕ್ ಆಯ್ತು ಒನ್‌ಪ್ಲಸ್ 6 ಸ್ಮಾರ್ಟ್‌ಫೋನ್ ಫೋಟೋ

ಈಗಾಗಲೇ ಮಾರುಕಟ್ಟೆಯಲ್ಲಿ ಕಾಣಿಸಿಕೊಂಡಿರುವ ಒಪ್ಪೋ R1 ಸ್ಮಾರ್ಟ್‌ಫೋನ್ ಮಾದರಿಯಲ್ಲಿಯೇ ಒನ್‌ಪ್ಲಸ್ 6 ಸ್ಮಾರ್ಟ್‌ಫೋನ್ ರೀತಿಯಲ್ಲಿಯೇ ಇರುವ ಸಾಧ್ಯತೆ ಇದೆ ಎನ್ನಲಾಗಿದೆ. ಕಾರಣ ಈ ಎರಡು ಸ್ಮಾರ್ಟ್‌ಫೋನ್‌ಗಳು ಒಂದೇ ಕಂಪನಿಗೆ ಸೇರಿದ್ದಾಗಿದ್ದು, ವಿನ್ಯಾಸವೂ ಒಂದೇ ಮಾದರಿಯ ಇರುವ ಸಾಧ್ಯತೆ ಇದೆ ಎನ್ನಲಾಗಿದೆ.

How To Link Aadhaar With EPF Account Without Login (KANNADA)

ಒನ್‌ಪ್ಲಸ್ 6 ಸ್ಮಾರ್ಟ್‌ಫೋನಿನಲ್ಲಿ 6.2 ಇಂಚಿನ ಡಿಸ್‌ಪ್ಲೇಯನ್ನು ಕಾಣುವ ಸಾಧ್ಯತೆ ಇದ್ದು, ಹಿಂಬದಿಯಲ್ಲಿ ಡ್ಯುಯಲ್ ಕ್ಯಾಮೆರಾ ಮತ್ತು ಇನ್‌ ಡಿಸ್‌ಪ್ಲೇ ಫಿಂಗರ್ ಪ್ರಿಂಟ್ ಸ್ಕ್ಯಾನರ್ ಅನ್ನು ಅಳವಡಿಸಲು ಕಂಪನಿ ಮುಂದಾಗಿದೆ ಎನ್ನುವ ಮಾಹಿತಿಯೂ ಲಭ್ಯವಾಗಿದೆ. ಅಲ್ಲದೇ ಸ್ನಾಪ್‌ಡ್ರಾಗನ್ 845 ಪ್ರೋಸೆಸರ್ ಮತ್ತು 8GB RAM ಅನ್ನು ಈ ಸ್ಮಾರ್ಟ್‌ಫೋನಿನಲ್ಲಿ ಒನ್‌ಪ್ಲಸ್ ನೀಡುವ ಸಾಧ್ಯತೆ ಇದೆ.

English summary
The OnePlus 6 will probably look a lot like this. to know more visit kannada.gizbot.com
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot