'ವಿವೋ ವಿ15 ಪ್ರೋ' ಸ್ಮಾರ್ಟ್‌ಫೋನ್ ಭರ್ಜರಿ ಸೇಲ್!.ಮತ್ತಷ್ಟು ಸ್ಟ್ರಾಂಗ್ ಆದ ವಿವೋ ಬ್ರ್ಯಾಂಡ್!
ವಿವೋ ಕಂಪನಿ ಇತ್ತೀಚಿಗೆ ವಿವೋ ವಿ15 ಪ್ರೋ ಸ್ಮಾರ್ಟ್‌ಫೋನ್ ಅನ್ನು ಪರಿಚಯಿಸಿದ್ದು, ಪಾಪ್‌ಅಪ್ ಸೆಲ್ಫಿ ಕ್ಯಾಮೆರಾ ಫೀಚರ್ ಈ ಫೋನಿನ ಪ್ರಮುಖ ಆಕರ್ಷಣೆ ಎನಿಸಿಕೊಂಡಿದೆ. ವಿವೋ ವಿ15 ಪ್ರೋ ಸ್ಮಾರ್ಟ್‌ಫೋನ್ ಕಂಪನಿಯ ವಿ ಸರಣಿಯ ಸ್ಮಾರ್ಟ್‌ಫೋನ್‌ಗಳಲ್ಲಿಯೇ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತಿದ್ದು, ಈ ಮೂಲಕ ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಬ್ರ್ಯಾಂಡ್ ಅನ್ನು ಮತ್ತಷ್ಟು ಗಟ್ಟಿಗೊಳಿಸಿಕೊಳ್ಳುತ್ತಿದೆ.

ಫೆಬ್ರುವರಿಯಲ್ಲಿ ಮಾರುಕಟ್ಟೆ ಪ್ರವೇಶಿಸಿರುವ 'ವಿವೋ ವಿ15 ಪ್ರೋ' ಸ್ಮಾರ್ಟ್‌ಫೋನ್ ಅತ್ಯುತ್ತಮ ಸೇಲ್ ಆಗುತ್ತಿದ್ದು, ಕಂಪನಿಯ ಇತರೆ ವಿ ಸರಣಿಯ ಸ್ಮಾರ್ಟ್‌ಫೋನ್‌ಗಳಿಗಿಂತ ಮುಂದಿದೆ. ಕಳೆದ ಜನೆವರಿಯಿಂದ ಈ ವರ್ಷದ ಜನೆವರಿ ತಿಂಗಳಲ್ಲಿ ಕಂಪನಿ ಶೇ. 60.9% ಮೊಬೈಲ್ ಉತ್ಪನ್ನಗಳನ್ನು ಮಾರಾಟ ಮಾಡಿದ್ದು, ಶೇ. 63.2% ರಷ್ಟು ಆದಾಯ ತಂದುಕೊಟ್ಟಿದೆ ಎಂಬುದನ್ನು GfK ದತ್ತಾಂಶದಿಂದ ತಿಳಿದು ಬಂದಿದೆ. ಹಾಗಾದರೇ ವಿವೋ ವಿ 15 ಸ್ಮಾರ್ಟ್‌ಫೋನ್ ಏನೆಲ್ಲಾ ಫೀಚರ್ಸ್‌ಗಳನ್ನು ಹೊಂದಿರಲಿದೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ ಮತ್ತು ರಚನೆ
ವಿವೋ ವಿ 15 ಪ್ರೋಸ್ಮಾರ್ಟ್‌ಫೋನ್ 2340×1080 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ ಸೂಪರ್ AMOLEDನ 6.4 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಕ್ವಾಲಿಟಿಯ ಡಿಸ್‌ಪ್ಲೇಯನ್ನು ಹೊಂದಿದ್ದು, ಇದರೊಂದಿಗೆ ಡಿಸ್‌ಪ್ಲೇಯಲ್ಲಿಯೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಸೌಲಭ್ಯವನ್ನು ಹೊಂದಿದೆ. ವಿ 15 ಪ್ರೋ ಸ್ಮಾರ್ಟ್‌ಫೋನ್‌ನಿನ ಬಾಹ್ಯರಚನೆ ಸುಂದರವಾಗಿದ್ದು, ಗ್ಲಾಸಿ ಲುಕ್ ನಲ್ಲಿ ಕಂಗೊಳಿಸುತ್ತದೆ.

48 ಮೆಗಾಪಿಕ್ಸಲ್ ಕ್ಯಾಮೆರಾ
ವಿವೋ ತನ್ನ ಹೊಸ ವಿ 15 ಪ್ರೋ ಸ್ಮಾರ್ಟ್‌ಫೋನ್ ಮೂಲಕ ಮೊದಲ ಬಾರಿಗೆ 48 ಮೆಗಾಪಿಕ್ಸಲ್ ಸಾಮರ್ಥ್ಯ ಇರುವ ಕ್ಯಾಮೆರಾವನ್ನು ಪರಿಚಯಿಸಿದೆ. ಹಿಂಭಾಗದಲ್ಲಿ ಒಟ್ಟು ಮೂರು ಕ್ಯಾಮೆರಾಗಳಿದ್ದು, ಮುಖ್ಯ ಕ್ಯಾಮೆರಾ f/1.8 ಅಪರ್ಚರ್ ನೊಂದಿಗೆ ಕ್ವಾಡ್ ಪಿಕ್ಸಲ್ ಸೆನ್ಸಾರ್‌ನ 48ಮೆಗಾಪಿಕ್ಸಲ್, ಸೆಂಕೆಂಡರಿ ಕ್ಯಾಮೆರಾ 8ಮೆಗಾಪಿಕ್ಸಲ್ ಮತ್ತು ಮೂರನೆ ಕ್ಯಾಮೆರಾ 5 ಮೆಗಾಪಿಕ್ಸಲ್ ಸಾಮರ್ಥ್ಯವನ್ನು ಹೊಂದಿದೆ.

32 ಮೆಗಾಪಿಕ್ಸಲ್ ಸೆಲ್ಫೀ ಕ್ಯಾಮೆರಾ
ಸ್ಮಾರ್ಟ್‌ಫೋನ್ ಇತಿಹಾಸದಲ್ಲಿಯೇ ಮೊದಲ ಬಾರಿಗೆ 32 ಮೆಗಾಪಿಕ್ಸಲ್ ಸಾಮರ್ಥ್ಯದ ಸೆಲ್ಫೀ ಕ್ಯಾಮೆರಾವನ್ನು ವಿವೋ ಪರಿಚಯಿಸಿದ್ದು, f/2.0 ಅಪರ್ಚರ್ ಹೊಂದಿದೆ. ಈ POP UP ಸೆಲ್ಫೀ ಕ್ಯಾಮೆರಾ ಆಂತರಿಕ ರಚನೆಯನ್ನು ಹೊಂದಿದ್ದು, ಸ್ಮಾರ್ಟ್‌ಫೋನಿನ ಹೊರಗೆ ಸೆಲ್ಫಿ ಕ್ಯಾಮೆರಾ ಕಾಣಿಸುವುದಿಲ್ಲ. ಆದರೆ ಸೆಲ್ಫೀ ಸೆರೆಹಿಡಿಯುವಾಗ ಮಾತ್ರ ಕ್ಯಾಮೆರಾ ತೆರೆದುಕೊಳ್ಳುತ್ತದೆ.

ಪ್ರೊಸೆಸರ್
ಕ್ವಾಲ್ಕಂ ಸ್ನಾಪ್‌ಡ್ರಾಗನ್ 675 ಉತ್ತಮ ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಇದರೊಂದಿಗೆ 6GB RAM ಸಾಮರ್ಥ್ಯ ಮತ್ತು 128 GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಸಹ ಹೊಂದಿದೆ. ಹೆಚ್ಚು RAM ಬೇಡುವ ಕೆಲಸಗಳು ಮತ್ತು ಹೈ ಎಂಡ್ ಗೇಮ್ಸ್‌ಗಳನ್ನು ಸುಲಭವಾಗಿ ಯಾವುದೇ ಅಡೆ ತಡೆ ಇಲ್ಲದೇ ಆಡಲು ಸಹಕರಿಸುತ್ತದೆ.

ಬ್ಯಾಟರಿ
ವಿವೋ ವಿ15 ಪ್ರೋ ಸ್ಮಾರ್ಟ್‌ಫೋನ್ 3700mAh ಸಾಮರ್ಥ್ಯದ ಪವರ್‌ಫುಲ್ ಬ್ಯಾಟರಿಯನ್ನು ಹೊಂದಿದ್ದು, ಒಂದು ಭಾರಿ ಫುಲ್ ಚಾರ್ಜ್ ಮಾಡಿದರೇ ನಿರಂತರ ಹತ್ತು ಗಂಟೆ ಬಾಳಿಕೆ ಬರುವ ಶಕ್ತಿಯನ್ನು ಹೊಂದಿದೆ. ಇದರೊಂದಿಗೆ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಒದಗಿಸಲಾಗಿದೆ.


Click it and Unblock the Notifications








