ಬಜೆಟ್‌ ದರದಲ್ಲಿ ಲಭ್ಯವಿರುವ 12GB RAM ಸಾಮರ್ಥ್ಯದ ಫೋನ್‌ಗಳು ಇಲ್ಲಿವೆ ನೋಡಿ!

|

ಪ್ರಸ್ತುತ ಸ್ಮಾರ್ಟ್‌ಫೋನ್‌ಗಳು ಎಲ್ಲರಿಗೂ ಅಗತ್ಯ ಮತ್ತು ಅವಶ್ಯ ಡಿವೈಸ್‌ ಎನ್ನುವುದರಲ್ಲಿ ಎರಡು ಮಾತಿಲ್ಲ. ಇಂದಿನ ಬಹುತೇಕ ಕೆಲಸಗಳು ಸ್ಮಾರ್ಟ್‌ಫೋನ್ ಮೂಲಕವೇ ನಡೆಯುತ್ತವೆ. ಹೀಗಾಗಿ ಅನೇಕ ಗ್ರಾಹಕರು ಹೆಚ್ಚಿನ RAM ಫೀಚರ್ ಇರುವ ಸ್ಮಾರ್ಟ್‌ ಫೋನ್‌ಗಳನ್ನು ಖರೀದಿಸಲು ಮುಂದಾಗುತ್ತಾರೆ. ಈ ನಿಟ್ಟಿನಲ್ಲಿ ಪ್ರತಿಷ್ಠಿತ ಮೊಬೈಲ್ ಕಂಪನಿಗಳು ಸಹ ಅಧಿಕ RAM ಸಾಮರ್ಥ್ಯದ ವೇರಿಯಂಟ್ ಆಯ್ಕೆಗಳನ್ನು ಪರಿಚಯಿಸುತ್ತವೆ. ಅಧಿಕ RAM ಇರುವ ಫೋನ್‌ ಗಳು ಮಲ್ಟಿ ಟಾಸ್ಕ್ ಕೆಲಸ ಮಾಡುವಾಗ ಮತ್ತು ಅಪ್ಲಿಕೇಶನ್ ಇನ್‌ ಸ್ಟಾಲ್‌ ಮಾಡುವಾಗ ಕಾರ್ಯ ವೈಖರಿ ಯಾವುದೇ ಅಡೆ ತಡೆ ಆಗುವುದು ಕಡಿಮೆ.

ಹೆಚ್ಚಿರುತ್ತದೆ

ಹೌದು, ಸದ್ಯ ನೂತನವಾಗಿ ಸ್ಮಾರ್ಟ್‌ಫೋನ್ ಖರೀದಿಸುವ ಗ್ರಾಹಕರು ಅಧಿಕ RAM ಸಾಮರ್ಥ್ಯ ಇರುವ ವೇರಿಯಂಟ್ ಆಯ್ಕೆ ಮಾಡುತ್ತಾರೆ. ಅಧಿಕ RAM ಆಯ್ಕೆಯಲ್ಲಿ ಸ್ಟೋರೇಜ್ ಸಹ ಹೆಚ್ಚಿರುತ್ತದೆ. ಗ್ರಾಹಕರು 6GB RAM ಗಿಂತ ಕಡಿಮೆ ಆಯ್ಕೆ ಮಾಡಲು ಮುಂದಾಗುವುದಿಲ್ಲ. ಇನ್ನು ವೇಗದ ಜೊತೆಗೆ ಗೇಮಿಂಗ್ ಅಭಿರುಚಿ ಇರುವ ಗ್ರಾಹಕರು 12GB RAM ಹೊಂದಿರುವ ಸ್ಮಾರ್ಟ್‌ಫೋನ್‌ಗಳತ್ತ ಮುಖ ಮಾಡುತ್ತಾರೆ. ಹಾಗಾದರೇ ಬಜೆಟ್‌ ದರದಲ್ಲಿ 12GB RAM ಸಾಮರ್ಥ್ಯದ ಕೆಲವು ಅತ್ಯುತ್ತಮ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S21 ಅಲ್ಟ್ರಾ

ಸ್ಯಾಮ್‌ಸಂಗ್ ಗ್ಯಾಲಕ್ಸಿ S21 ಅಲ್ಟ್ರಾ

ಸ್ಯಾಮ್‌ಸಂಗ್ ಗ್ಯಾಲಕ್ಸಿ S21 ಅಲ್ಟ್ರಾ ಸ್ಮಾರ್ಟ್‌ಫೋನ್ ಅಧಿಕ ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.8 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇದು ಸ್ಯಾಮ್‌ಸಂಗ್ Exynos 2100 ಪ್ರೊಸೆಸರ್‌ ಅನ್ನು ಒಳಗೊಂಡಿದೆ. 12GB RAM ಸಾಮರ್ಥ್ಯ ಆಯ್ಕೆಯನ್ನು ಹೊಂದಿದೆ. ಹಾಗೆಯೇ ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಮುಖ್ಯ ಕ್ಯಾಮೆರಾವು 108 ಎಂಪಿ ಸೆನ್ಸಾರ್ ಇದೆ. ಸೆಲ್ಫಿ ಕ್ಯಾಮೆರಾವು 40 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ. ಇದರೊಂದಿಗೆ 5,000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದ್ದು, ಅದಕ್ಕೆ ಪೂರಕವಾಗಿ ಫಾಸ್ಟ್‌ ಚಾರ್ಜಿಂಗ್ ಸಪೋರ್ಟ್‌ ಇದೆ.

ವಿವೋ X60 ಫೋನ್

ವಿವೋ X60 ಫೋನ್

ವಿವೋ X60 ಸ್ಮಾರ್ಟ್‌ಫೋನ್ ಅಧಿಕ ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.56 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇದು ಸ್ನ್ಯಾಪ್‌ಡ್ರಾಗನ್ 870 ಪ್ರೊಸೆಸರ್‌ ಅನ್ನು ಒಳಗೊಂಡಿದೆ. 12GB RAM ಸಾಮರ್ಥ್ಯ ಆಯ್ಕೆಯನ್ನು ಹೊಂದಿದೆ. ಹಾಗೆಯೇ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಮುಖ್ಯ ಕ್ಯಾಮೆರಾವು 48 ಎಂಪಿ ಸೆನ್ಸಾರ್ ಇದೆ. ಸೆಲ್ಫಿ ಕ್ಯಾಮೆರಾವು 32 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ. ಇದರೊಂದಿಗೆ 4,200mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದ್ದು, ಅದಕ್ಕೆ ಪೂರಕವಾಗಿ ಫಾಸ್ಟ್‌ ಚಾರ್ಜಿಂಗ್ ಸಪೋರ್ಟ್‌ ಇದೆ.

ಒನ್‌ಪ್ಲಸ್‌ ನಾರ್ಡ್‌ CE 5G

ಒನ್‌ಪ್ಲಸ್‌ ನಾರ್ಡ್‌ CE 5G

ಒನ್‌ಪ್ಲಸ್‌ ನಾರ್ಡ್‌ CE 5G ಸ್ಮಾರ್ಟ್‌ಫೋನ್ ಅಧಿಕ ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.43 ಇಂಚಿನ ಹೆಚ್‌ಡಿ ಪ್ಲಸ್‌ AMOLED ಡಿಸ್‌ಪ್ಲೇ ಹೊಂದಿದೆ. ಇದು ಸ್ನ್ಯಾಪ್‌ಡ್ರಾಗನ್ 750 ಪ್ರೊಸೆಸರ್‌ ಅನ್ನು ಒಳಗೊಂಡಿದೆ. 12 GB RAM ಸಾಮರ್ಥ್ಯ ಆಯ್ಕೆಯನ್ನು ಹೊಂದಿದೆ. ಹಾಗೆಯೇ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಮುಖ್ಯ ಕ್ಯಾಮೆರಾವು 64 ಎಂಪಿ ಸೆನ್ಸಾರ್ ಇದೆ. ಸೆಲ್ಫಿ ಕ್ಯಾಮೆರಾವು 32 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ. ಇದರೊಂದಿಗೆ 4,500mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದ್ದು, ಅದಕ್ಕೆ ಪೂರಕವಾಗಿ ವಾರ್ಪ್ ಚಾರ್ಜಿಂಗ್ ಬೆಂಬಲ ಇದೆ.

ರಿಯಲ್‌ಮಿ X2 ಪ್ರೊ

ರಿಯಲ್‌ಮಿ X2 ಪ್ರೊ

ರಿಯಲ್‌ಮಿ X2 ಪ್ರೊ ಸ್ಮಾರ್ಟ್‌ಫೋನ್ ಅಧಿಕ ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.5 ಇಂಚಿನ ಹೆಚ್‌ಡಿ ಪ್ಲಸ್‌ ಸೂಪರ್ AMOLED ಡಿಸ್‌ಪ್ಲೇ ಹೊಂದಿದೆ. ಇದು ಸ್ನ್ಯಾಪ್‌ಡ್ರಾಗನ್ 855 ಪ್ರೊಸೆಸರ್‌ ಅನ್ನು ಒಳಗೊಂಡಿದೆ. 12 GB RAM ಸಾಮರ್ಥ್ಯ ಆಯ್ಕೆಯನ್ನು ಹೊಂದಿದೆ. ಹಾಗೆಯೇ ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಮುಖ್ಯ ಕ್ಯಾಮೆರಾವು 64 ಎಂಪಿ ಸೆನ್ಸಾರ್ ಇದೆ. ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ. ಇದರೊಂದಿಗೆ 4,000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದ್ದು, ಅದಕ್ಕೆ ಪೂರಕವಾಗಿ VOOC ಚಾರ್ಜಿಂಗ್ ಬೆಂಬಲ ಇದೆ.

Best Mobiles in India

English summary
These 12GB RAM Smartphones Available at Mid-Range Price In India 2021.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X