ವಿವೋ ಸ್ಮಾರ್ಟ್‌ಫೋನ್‌ ಖರೀದಿ ಮಾಡುವ ಮುನ್ನ ಇಲ್ಲಿ ಒಮ್ಮೆ ಗಮನಿಸಿ!

|

ವಿವೋ ಕಂಪೆನಿಯು ಭಾರತದ ಮಾರುಕಟ್ಟೆಯಲ್ಲಿ ಭಿನ್ನ ಶ್ರೇಣಿಯಲ್ಲಿ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಬಜೆಟ್‌ ದರದಿಂದ ದುಬಾರಿ ಬೆಲೆಯ ಮಾದರಿಗಳನ್ನು ವಿವೋ ಒಳಗೊಂಡಿದ್ದು, ಕೆಲವೊಂದು ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ಸೆಳೆದಿದೆ. ಮುಖ್ಯವಾಗಿ ವಿವೋ ಫೋನ್‌ಗಳಲ್ಲಿ ಡಿಸೈನ್, ಕ್ಯಾಮೆರಾ, ಪ್ರೊಸೆಸರ್‌ ಹಾಗೂ ಬ್ಯಾಟರಿ ಪ್ರಮುಖ ಆಕರ್ಷಕ ಎನಿಸಿವೆ. ನೀವೇನಾದರೂ ನೂತನವಾಗಿ ವಿವೋ ಫೋನ್‌ ಖರೀದಿಸುತ್ತಿದ್ದರೆ, ಮುನ್ನ ಇಲ್ಲಿ ಒಮ್ಮೆ ಗಮನಿಸಿ!

ವಿವೋ X90 ಸ್ಮಾರ್ಟ್‌ಫೋನ್‌

ವಿವೋ ಸಂಸ್ಥೆಯ ವಿವೋ X90 ಸ್ಮಾರ್ಟ್‌ಫೋನ್‌ ಸರಣಿ ಇನ್ನೇನು ಬಿಡುಗಡೆ ಆಗಲಿದೆ. ಅದಾಗ್ಯೂ, ಕಂಪನಿಯ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ಸದ್ದು ಮಾಡಿದ್ದು, ಭಿನ್ನ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಇವೆ. ಆದರೆ ಬಜೆಟ್‌ ಬಜೆಟ ಬೆಲೆ ಪಡೆದಿರುವ ಕೆಲವು ಅತ್ಯುತ್ತಮ ಫೋನ್‌ಗಳಿಗೆ ಡಿಮ್ಯಾಂಡ್‌ ಜಾಸ್ತಿ ಎನ್ನಬಹುದು. ಹಾಗಾದರೆ ಬಜೆಟ್‌ ಬೆಲೆಯಲ್ಲಿ ಲಭ್ಯವಿರುವ ವಿವೋ ಸಂಸ್ಥೆಯ ಕೆಲವು ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ವಿವೋ T1x ಸ್ಮಾರ್ಟ್‌ಫೋನ್‌

ವಿವೋ T1x ಸ್ಮಾರ್ಟ್‌ಫೋನ್‌

ವಿವೋ T1x ಸ್ಮಾರ್ಟ್‌ಫೋನ್‌ 6.58 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ LCD ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 1,080 x 2,408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಹಾಗೆಯೇ ಈ ಫೋನ್ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದ್ದು, ಡ್ಯುಯಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದ್ದು, ಜೊತೆಗೆ ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ವಿವೋ Y21 ಸ್ಮಾರ್ಟ್‌ಫೋನ್‌

ವಿವೋ Y21 ಸ್ಮಾರ್ಟ್‌ಫೋನ್‌

ವಿವೋ Y21 ಸ್ಮಾರ್ಟ್‌ಫೋನ್‌ 6.51 ಇಂಚಿನ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ ಕೋರ್‌ ಮೀಡಿಯಾ ಟೆಕ್‌ ಹೆಲಿಯೋ P35 (MT 6765) ಪ್ರೊಸೆಸರ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಮತ್ತು 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ.

ವಿವೋ Y21G ಸ್ಮಾರ್ಟ್‌ಫೋನ್‌

ವಿವೋ Y21G ಸ್ಮಾರ್ಟ್‌ಫೋನ್‌

ವಿವೋ Y21G ಸ್ಮಾರ್ಟ್‌ಫೋನ್‌ 15,000ರೂ. ಒಳಗೆ ಲಭ್ಯವಾಗುವ ಬೆಸ್ಟ್‌ ಸ್ಮಾರ್ಟ್‌ಫೋನ್‌ಗಳಲ್ಲಿ ಉತ್ತಮ ಆಯ್ಕೆಯಾಗಿದೆ. ಈ ಸ್ಮಾರ್ಟ್‌ಫೋನ್‌ 6.51 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾಟೆಕ್‌ ಹಿಲಿಯೋ G70 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಇಂಟರ್‌ ಸ್ಟೋರೇಜ್ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನಿನ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18w ವೇಗದ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ.

ವಿವೋ Y15C ಸ್ಮಾರ್ಟ್‌ಫೋನ್‌

ವಿವೋ Y15C ಸ್ಮಾರ್ಟ್‌ಫೋನ್‌

ವಿವೋ Y15C ಸ್ಮಾರ್ಟ್‌ಫೋನ್‌ 6.51 ಇಂಚಿನ ಡಿಸ್‌ಪ್ಲೇ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್‌ ಹೆಲಿಯೊ P35 ಆಕ್ಟಾ ಕೋರ್ ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದೆ. ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್‌ ಸೆನ್ಸಾರ್‌ ಪಡೆದಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ವಿವೋ U20 ಸ್ಮಾರ್ಟ್‌ಫೋನ್‌

ವಿವೋ U20 ಸ್ಮಾರ್ಟ್‌ಫೋನ್‌

ವಿವೋ U20 ಸ್ಮಾರ್ಟ್‌ಫೋನ್‌ 6.53 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 675 AIE ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64 GB ಸ್ಟೋರೇಜ್ ಸಾಮರ್ಥ್ಯವನ್ನು ಪಡೆದಿದೆ. ಈ ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

Best Mobiles in India

English summary
These Vivo Mobiles Available at Budget Price: Check this Phone List.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X