Home
ಮೊಬೈಲ್

ಹೊಸ ಪೊಕೊ F6 5G ಫೋನ್‌ ಖರೀದಿಸಲು ಇಷ್ಟವಿಲ್ಲವೇ?..ಇಲ್ಲಿವೆ ನೋಡಿ ಪರ್ಯಾಯ ಆಯ್ಕೆ!

ಜನಪ್ರಿಯ ಮೊಬೈಲ್‌ ಸಂಸ್ಥೆಗಳಲ್ಲಿ ಒಂದಾದ ಪೊಕೊ ಹೊಸದಾಗಿ ಬಿಡುಗಡೆ ಮಾಡಿರುವ ಪೊಕೊ F6 5G ಮೊಬೈಲ್‌ ಈಗಾಗಲೇ ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದು, ಮೊಬೈಲ್‌ ಪ್ರಿಯರ ಗಮನ ಸೆಳೆದಿದೆ. ಕೆಲವರಿಗೆ ಇದರ ಡಿಸೈನ್‌ ಹಾಗೂ ಫೀಚರ್ಸ್‌ ನೋಡಿದಾಗ ಈ ಫೋನ್‌ ಖರೀದಿಸಬೇಕೆ ಎನಿಸಬಹುದು. ಅದಾಗ್ಯೂ, ಹೊಸ ಪೊಕೊ F6 5G ಖರೀದಿಸಲು ಇಷ್ಟ ಇರದ ಗ್ರಾಹಕರು ಇರುತ್ತಾರೆ. ಪೊಕೊ F6 5G ಖರೀದಿಸಲು ಇಷ್ಟವಿಲ್ಲದಿದ್ದರೆ, ಈ ಸರಿಸಮನಾದ ಫೋನ್‌ಗಳ ಆಯ್ಕೆ ಇದೆ.

ಹೌದು, ಪೊಕೊ F6 5G ಫೋನ್‌ ಮಾರುಕಟ್ಟೆಯಲ್ಲಿ ಗಮನ ಸೆಳೆಯುತ್ತಿದೆ. ಈ ಫೋನ್‌ ಸ್ನಾಪ್‌ಡ್ರಾಗನ್ 8s ಜೆನ್‌ 3 SoC ಪ್ರೊಸೆಸರ್‌ ಸಪೋರ್ಟ್‌ ಪಡೆದಿದ್ದು, ಜೊತೆಗೆ 5,000 mAh ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿದೆ. ಜೊತೆಗೆ ಇನ್ನಷ್ಟು ಆಕರ್ಷಕ ಫೀಚರ್ಸ್‌ ಇವೆ. ಅದಾಗ್ಯೂ, ಈ ಪೊಕೊ F6 ನಿಮಗೆ ಸೂಕ್ತವಲ್ಲ ಎನಿಸಿದರೆ, ಅದೇ ಪ್ರೈಸ್‌ಟ್ಯಾಗ್‌ ರೇಂಜ್‌ನಲ್ಲಿ ಕೆಲವು ಪರ್ಯಾಯ ಫೋನ್‌ಗಳ ಆಯ್ಕೆ ಸಹ ಇದೆ. ಈ ಲೇಖನದಲ್ಲಿ ತಿಳಿಸಲಾದ ಕೆಲವು ಅತ್ಯುತ್ತಮ ಪರ್ಯಾಯ ಫೋನ್‌ಗಳ ಬಗ್ಗೆ ನೋಡಿ.

ಹೊಸ ಪೊಕೊ F6 5G ಫೋನ್‌ ಖರೀದಿಸಲು ಇಷ್ಟವಿಲ್ಲವೇ?..ಇಲ್ಲಿವೆ ನೋಡಿ ಪರ್ಯಾಯ ಆಯ್ಕೆ!

ರಿಯಲ್‌ಮಿ GT 6T ಫೋನ್‌

ರಿಯಲ್‌ಮಿ GT 6T ಮೊಬೈಲ್‌ 6.78 ಇಂಚಿನ 3D LTPO AMOLED ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, ಇದರ ಡಿಸ್‌ಪ್ಲೇಯು 2,789 x 1,264 ಪಿಕ್ಸಲ್‌ ರೆಸಲ್ಯೂಶನ್‌ ಸೌಲಭ್ಯ ಪಡೆದಿದೆ. ಹಾಗೆಯೇ ಸ್ನ್ಯಾಪ್‌ಡ್ರಾಗನ್ 7+ ಜೆನ್‌ 3 ಚಿಪ್‌ಸೆಟ್‌ ಪ್ರೊಸೆಸರ್‌ ಬಲದಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ ಸಹ ಇದೆ.

ಇದರೊಂದಿಗೆ ಈ ಫೋನ್‌ ಡ್ಯುಯಲ್‌ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಇದರ ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯ ಪಡೆದಿದೆ. ಇದರೊಂದಿಗೆ 5,500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಹೊಂದಿದ್ದು, ಇದರ ಜೊತೆಗೆ 120W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಹೊಂದಿದೆ.

ಮೊಟೊರೊಲಾ ಎಡ್ಜ್‌ 50 ಪ್ರೊ ಫೋನ್‌

ಮೊಟೊರೊಲಾ ಎಡ್ಜ್‌ 50 ಪ್ರೊ ಮೊಬೈಲ್‌ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, ಈ ಡಿಸ್‌ಪ್ಲೇಯು 2712 × 1220 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಪೋರ್ಟ್‌ ಪಡೆದಿದೆ. ಇದರೊಂದಿಗೆ ಕ್ವಾಲ್ಕಮ್‌ ಸ್ನಾಪ್‌ಡ್ರಾಗನ್‌ 7 ಜೆನ್‌ 3 SoC ಪ್ರೊಸೆಸರ್‌ ಸಾಮರ್ಥ್ಯದ ಬಲವನ್ನು ಪಡೆದಿದ್ದು, ಇದಕ್ಕೆ ಬೆಂಬಲವಾಗಿ ಆಂಡ್ರಾಯ್ಡ್‌ 14 ಓಎಸ್‌ ಸೌಲಭ್ಯ ಸಹ ಇದೆ.

ಅಲ್ಲದೇ ಈ ಫೋನ್‌ ಮೂರು ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದ್ದು, ಇದರ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸೌಲಭ್ಯ ಹೊಂದಿದೆ. ಇದರ ಜೊತೆಗೆ 4500 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯ ಪಡೆದಿದ್ದು, ಇದಕ್ಕೆ ಸಪೋರ್ಟ್‌ ಆಗಿ 125W ಫಾಸ್ಟ್‌ ಟರ್ಬೋ ಚಾರ್ಜಿಂಗ್‌ ಆಯ್ಕೆ ಇದೆ.

ವಿವೋ V30e 5G ಫೋನ್‌

ವಿವೋ V30e 5G ಫೋನ್ 6.78 ಇಂಚಿನ ಫುಲ್‌ ಹೆಚ್‌ಡಿ + ಕರ್ವ್ ಅಮೋಲೆಡ್‌ ಡಿಸ್‌ಪ್ಲೇ ಆಯ್ಕೆ ಹೊಂದಿದ್ದು, 2400 × 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದೆ. ಇದರ ಜೊತೆಗೆ ಕ್ವಾಲ್ಕಮ್‌ ಸ್ನಾಪ್‌ಡ್ರಾಗನ್ 6 ಜನ್ 1 ಪ್ರೊಸೆಸರ್‌ ಬಲದಲ್ಲಿ ಕೆಲಸ ನಿರ್ವಹಿಸಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ ಸಹ ಪಡೆದಿದೆ.

ಹಾಗೆಯೇ ಡ್ಯುಯಲ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸಲ್‌ ಸೆನ್ಸಾರ್‌ ನಲ್ಲಿ ಇದೆ. ಅಲ್ಲದೇ 5500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ 44W ಫಾಸ್ಟ್ ಚಾರ್ಜಿಂಗ್ ಸಪೋರ್ಟ್‌ ನೀಡಲಾಗಿದೆ.

Best Mobiles in India

English summary
Top 3 best Alternative Phones to POCO F6 5G. check Alternative phones list here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+