Home
ಮೊಬೈಲ್

ಅಗ್ಗದ ಬೆಲೆಗೆ ಲಭ್ಯ ಇರುವ ಅತ್ಯುತ್ತಮ 5G ಫೋನ್‌ಗಳ ಲಿಸ್ಟ್‌ ಇಲ್ಲಿದೆ!

ಸದ್ಯ ಯಾರಾದರು ಹೊಸ ಸ್ಮಾರ್ಟ್‌ಫೋನ್‌ ಖರೀದಿಸಬೇಕು ಎಂದು ಪ್ಲ್ಯಾನ್ ಮಾಡಿದ್ದರೆ, ಅವರು 5G ಸೌಲಭ್ಯ ಪಡೆದಿರುವ ಮೊಬೈಲ್‌ಗಳತ್ತ ಆಸಕ್ತಿ ನಿಡುತ್ತಾರೆ. ಇತ್ತೀಚಿಗೆ ಬಿಡುಗಡೆ ಆಗುವ ಅನೇಕ ಫೋನ್‌ಗಳು 5G ಸೌಲಭ್ಯ ಪಡೆದಿರುತ್ತವೆ. ಅದಾಗ್ಯೂ, ಕಡಿಮೆ ದರದ ಪ್ರೈಸ್‌ ಟ್ಯಾಗ್‌ ಒಳಗೊಂಡಿರುವ ಜನಪ್ರಿಯ ಬ್ರ್ಯಾಂಡ್‌ಗಳ 5G ಸ್ಮಾರ್ಟ್‌ಫೋನ್‌ಗಳು ಹೆಚ್ಚು ಡಿಮ್ಯಾಂಡ್‌ ಪಡೆದುಕೊಂಡಿವೆ. ಅಲ್ಲದೇ ಇವು 5G ಸೌಲಭ್ಯದ ಜೊತೆಗೆ ಅತ್ಯುತ್ತಕ ಕ್ಯಾಮೆರಾ, ಬಿಗ್ ಬ್ಯಾಟರಿ ಸೌಲಭ್ಯ, ಉತ್ತಮ ಪ್ರೊಸೆಸರ್‌ ಸೇರಿದಂತೆ ಕೆಲವು ಸ್ಪರ್ಧಾತ್ಮಕ ಫೀಚರ್ಸ್‌ಗಳನ್ನು ಒಳಗೊಂಡಿವೆ.

ಹೌದು, ದೇಶಿಯ ಮೊಬೈಲ್‌ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಯ 5G ಮೊಬೈಲ್‌ಗಳತ್ತ ಬಹುತೇಕ ಗ್ರಾಹಕರು ಆಕರ್ಷಿತರಾಗುತ್ತಾರೆ. ಈ ನಿಟ್ಟಿನಲ್ಲಿ ಮೊಬೈಲ್‌ ತಯಾರಿಕಾ ಸಂಸ್ಥೆಗಳು ಸಹ ಕಡಿಮೆ ಪ್ರೈಸ್‌ಟ್ಯಾಗ್‌ನಲ್ಲಿ ಆಕರ್ಷಕ 5G ಫೋನ್‌ಗಳನ್ನು ಪರಿಚಯಿಸುತ್ತಾ ಮುನ್ನಡೆದಿವೆ. ಹಾಗಾದರೇ ಸದ್ಯ 5G ಸೌಲಭ್ಯದ ಜೊತೆಗೆ ಕಡಿಮೆ ಬೆಲೆಯಲ್ಲಿ ಖರೀದಿಗೆ ಲಭ್ಯ ಇರುವ ಕೆಲವು ಅತ್ಯುತ್ತಮ ಫೋನ್‌ಗಳ ಬಗ್ಗೆ ಇಲ್ಲಿವೆ ಮಾಹಿತಿ ಮುಂದೆ ಓದಿರಿ.

ಅಗ್ಗದ ಬೆಲೆಗೆ ಲಭ್ಯ ಇರುವ ಅತ್ಯುತ್ತಮ 5G ಫೋನ್‌ಗಳ ಲಿಸ್ಟ್‌ ಇಲ್ಲಿದೆ!

ನೋಕಿಯಾ G42 5G ಸ್ಮಾರ್ಟ್‌ಫೋನ್‌

ನೋಕಿಯಾ G42 5G ಫೋನ್ 6.56 ಇಂಚಿನ ಹೆಚ್‌ಡಿ+ ಡಿಸ್‌ಪ್ಲೇ ಆಯ್ಕೆ ಅನ್ನು ಒಳಗೊಂಡಿದ್ದು, ಈ ಫೋನಿನ ಡಿಸ್‌ಪ್ಲೇಯು 720 x 1612 ಪಿಕ್ಸೆಲ್‌ ರೆಸಲ್ಯೂಶನ್‌ ಸಾಮರ್ಥ್ಯ ಹೊಂದಿದೆ. ಅಲ್ಲದೇ ಇದು ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 480+ ಚಿಪ್‌ಸೆಟ್‌ ಪ್ರೊಸೆಸರ್, 8nm ಮೊಬೈಲ್ ಪ್ಲಾಟ್‌ಫಾರ್ಮ್ ಜೊತೆಗೆ ಅಡ್ರಿನೋ 619 GPU ಬಲದಲ್ಲಿ ಕೆಲಸ ಮಾಡಲಿದೆ.

ಹಾಗೆಯೇ ಈ ಫೋನ್ ಟ್ರಿಪಲ್‌ ರಿಯರ್‌ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸೆಲ್‌ ಸಾಮರ್ಥ್ಯದಲ್ಲಿ ಇದೆ. ಅಲ್ಲದೇ ಈ ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದೆ. ಈ ಫೋನ್‌ 5G ಸೌಲಭ್ಯ ಸಹ ಪಡೆದಿದೆ.


ಪೊಕೊ M6 ಪ್ರೊ 5G ಸ್ಮಾರ್ಟ್‌ಫೋನ್‌

ಪೊಕೊ M6 ಪ್ರೊ 5G ಮೊಬೈಲ್‌ 6.79 ಇಂಚಿನ ಫುಲ್‌ ಹೆಚ್‌ಡಿ + ಎಲ್‌ಸಿಡಿ ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, ಈ ಫೋನಿನ ಡಿಸ್‌ಪ್ಲೇಯು 2460 x 1080 ಪಿಕ್ಸೆಲ್ ಸ್ಕ್ರೀನ್‌ ರೆಸಲ್ಯೂಶನ್‌ ಸೌಲಭ್ಯ ಹೊಂದಿದೆ. ಇದರೊಂದಿಗೆ ಸ್ನಾಪ್‌ಡ್ರಾಗನ್ 4 ಜನ್ 2 ಪ್ರೊಸೆಸರ್‌ ಸೌಲಭ್ಯದಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 13 ಓಎಸ್‌ ಸಪೋರ್ಟ್‌ ಇದೆ.

ಹಾಗೆಯೇ ಈ ಮೊಬೈಲ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸೆಲ್‌ ಸಾಮರ್ಥ್ಯದಲ್ಲಿ ಇದೆ. ಅಲ್ಲದೇ ಈ ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದೆ. ಇದು 5G ಸೌಲಭ್ಯ ಸಹ ಪಡೆದಿದೆ. ಈ ಫೋನ್‌ 5G ಸೌಲಭ್ಯ ಸಹ ಪಡೆದಿದೆ.


ವಿವೋ T3x 5G ಸ್ಮಾರ್ಟ್‌ಫೋನ್‌

ವಿವೋದ ಈ ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ+ ಅಮೋಲೆಡ್‌ ಡಿಸ್‌ಪ್ಲೇ ಅನ್ನು ಪಡೆದಿದ್ದು, ಇದು 2400 × 1080 ಪಿಕ್ಸೆಲ್‌ ಸ್ಕ್ರೀನ್ ರೆಸಲ್ಯೂಶನ್‌ ಸಾಮರ್ಥ್ಯ ಹೊಂದಿದೆ. ಅಲ್ಲದೇ ಮೀಡಿಯಾ ಟೆಕ್ ಡೈಮೆನ್ಸಿಟಿ 7200 4nm ಪ್ರೊಸೆಸರ್‌ ಬಲ ಪಡೆದಿದ್ದು. ಇತ್ತೀಚಿನ ಆಂಡ್ರಾಯ್ಡ್‌ 14 ಓಎಸ್‌ ಬೆಂಬಲ ಸಹ ಇದ್ದು, ಇದು 5G ಸೌಲಭ್ಯ ಸಹ ಪಡೆದಿದೆ.

ಹಾಗೆಯೇ ಈ ಮೊಬೈಲ್‌ ಡ್ಯುಯಲ್‌ ಕ್ಯಾಮೆರಾ ರಚನೆ ಹೊಂದಿದ್ದು, 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಮುಖ್ಯ ಕ್ಯಾಮೆರಾ ಪಡೆದಿದ್ದು, 16 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ. ಅಲ್ಲದೇ ಈ ಮೊಬೈಲ್‌ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಸಹ ಪಡೆದುಕೊಂಡಿದ್ದು, ಇದಕ್ಕೆ ಪೂರಕವಾಗಿ 44W ಫಾಸ್ಟ್ ಚಾರ್ಜಿಂಗ್ ಬೆಂಬಲ ಸಹ ಇದೆ.

Best Mobiles in India

English summary
Top 3 Cheapest 5G Phones in India June 2024. Check Phone list here with Specification details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+