Home
ಮೊಬೈಲ್

20,000ರೂ.ಒಳಗೆ ಲಭ್ಯವಿರುವ 6GB RAM ಸಾಮರ್ಥ್ಯದ ಸ್ಮಾರ್ಟ್‌ಫೋನ್‌ಗಳು!

ಪ್ರಸ್ತುತ ಸ್ಮಾರ್ಟ್‌ಫೋನ್‌ ಹೆಚ್ಚು ಉಪಯುಕ್ತ ಡಿವೈಸ್ ಆಗಿದ್ದು, ಬಹುತೇಕ ಕೆಲವುಗಳು ಫೋನ್ ಮೂಲಕವೇ ಮಾಡಲಾಗುತ್ತದೆ. ಆನ್‌ಲೈನ್‌ ಕೆಲಸಗಳು, ಇತರೆ ಆಪ್‌ಗಳ ಬಳಕೆ ಮಾಡಬೇಕಿರುವುದರಿಂದ ಫೋನ್ ವೇಗ ಹೆಚ್ಚಾಗಿದ್ದರೇ ಯಾವುದೇ ಅಡೆ ತಡೆ ಇಲ್ಲದೆ ಕೆಲಸ ಸಾಗುತ್ತವೆ. ಈ ನಿಟ್ಟಿನಲ್ಲಿ ಬಹುತೇಕ ಗ್ರಾಹಕರು ಅಧಿಕ RAM ಫೀಚರ್ ಇರುವ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸಲು ಬಯಸುತ್ತಾರೆ. ಮುಖ್ಯವಾಗಿ ಬಜೆಟ್‌ ಬೆಲೆಯಲ್ಲಿ ಲಭ್ಯವಾಗುವ 6GB RAM ಫೋನ್‌ಗಳ ಮೇಲೆ ಮನಸ್ಸು ಜಾಸ್ತಿ.

20,000ರೂ.ಒಳಗೆ ಲಭ್ಯವಿರುವ 6GB RAM ಸಾಮರ್ಥ್ಯದ ಸ್ಮಾರ್ಟ್‌ಫೋನ್‌ಗಳು!

ಹೌದು, ಸದ್ಯ ನೂತನ ಮೊಬೈಲ್ ಖರೀದಿಸುವ ಗ್ರಾಹಕರು ಹೆಚ್ಚಿನ RAM ಸಾಮರ್ಥ್ಯದ ಫೋನ್ ಆಯ್ಕೆ ಮಾಡುತ್ತಾರೆ. ಅಧಿಕ RAM ಆಯ್ಕೆಯಲ್ಲಿ ಸ್ಟೋರೇಜ್ ಸಹ ಹೆಚ್ಚಿರುತ್ತದೆ. ಸದ್ಯ ಗ್ರಾಹಕರು ಕಡಿಮೆ ಎಂದರೂ 6GB RAM ಫೋನ್ ಖರೀದಿಗೆ ಮುಂದಾಗುತ್ತಾರೆ. ಇನ್ನು ಕೆಲವು ಗ್ರಾಹಕರು 8GB ಮತ್ತು 12GB RAM ಹೊಂದಿರುವ ಸ್ಮಾರ್ಟ್‌ಫೋನ್‌ಗಳತ್ತ ಗಮನ ಹರಿಸುತ್ತಾರೆ. ಆದ್ರೆ ಬಜೆಟ್‌ ದರದಲ್ಲಿ 6GB RAM ಸಾಮರ್ಥ್ಯದ ಅತ್ಯುತ್ತಮ ಫೋನ್‌ಗಳು ಲಭ್ಯ. ಈ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್
ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಸೂಪರ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದರೊಂದಿಗೆ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC ಪ್ರೊಸೆಸರ್‌ ಅನ್ನು ಹೊಂದಿದೆ. ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB + 128GB ವೇರಿಯಂಟ್ ಆಯ್ಕೆ ಪಡೆದಿದೆ. ಇದು ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ಐಸೊಸೆಲ್ GW3 ಸೆನ್ಸಾರ್‌ ಹೊಂದಿದೆ. ಹಾಗೆಯೇ ಈ ಫೋನ್ 5,020mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

20,000ರೂ.ಒಳಗೆ ಲಭ್ಯವಿರುವ 6GB RAM ಸಾಮರ್ಥ್ಯದ ಸ್ಮಾರ್ಟ್‌ಫೋನ್‌ಗಳು!

ಸ್ಯಾಮ್‌ಸಂಗ್ ಗ್ಯಾಲಕ್ಸಿ M31 ಸ್ಮಾರ್ಟ್‌ಫೋನ್
ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಂ31 ಸ್ಮಾರ್ಟ್‌ಫೋನ್‌ 1080x2340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಹೊಂದಿರುವ 6.4 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಇನ್‌ಫಿನಿಟಿ ಯು ಡಿಸ್‌ಪ್ಲೇ ಹೊಂದಿದೆ. ಇದು ಸ್ಯಾಮ್‌ಸಂಗ್‌ exynos 9611 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದಲ್ಲದೆ 6GB RAM ಮತ್ತು 64GB ಶೇಖರಣಾ ಸಾಮರ್ಥ್ಯ ಹಾಗೂ 8 GB RAM ಮತ್ತು 128GB ಸಾಮರ್ಥ್ಯ ವೆರಿಯೆಂಟ್‌ ಆಯ್ಕೆಯಲ್ಲಿ ಈ ಸ್ಮಾರ್ಟ್‌ಫೋನ್‌ ಲಭ್ಯವಾಗಲಿದೆ. ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಆಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ. 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದೆ.

ಪೊಕೊ X3 ಸ್ಮಾರ್ಟ್‌ಫೋನ್
ಪೊಕೊ X3 ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC, ಪ್ರೊಸೆಸರ್‌ ವೇಗವನ್ನು ಹೊಂದಿದ್ದು,ಆಂಡ್ರಾಯ್ಡ್ 10 ಆಧಾರಿತ ಎಂಐಯುಐ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 6GB RAM +64GB ಮತ್ತು 8GB RAM +128GB ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಹಾಗೆಯೇ ಈ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 20 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಇದು 5,160mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

20,000ರೂ.ಒಳಗೆ ಲಭ್ಯವಿರುವ 6GB RAM ಸಾಮರ್ಥ್ಯದ ಸ್ಮಾರ್ಟ್‌ಫೋನ್‌ಗಳು!

ಇನ್‌ಫಿನಿಕ್ಸ್‌ 10 ಸ್ಮಾರ್ಟ್‌ಫೋನ್
ಇನ್‌ಫಿನಿಕ್ಸ್‌ ನೋಟ್‌ 10 ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಮೀಡಿಯಾ ಟೆಕ್ ಹಿಲಿಯೊ G85 ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ಆಪರೇಟಿಂಗ್ ಸಿಸ್ಟಮ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB/6GB RAM ಜೊತೆಗೆ 64GB / 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ರಿಯಲ್‌ಮಿ 8 ಪ್ರೊ
ರಿಯಲ್‌ಮಿ 8 5G ಸ್ಮಾರ್ಟ್‌ಫೋನ್‌ 1,080 × 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಫುಲ್‌-ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6 GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ.

Best Mobiles in India

English summary
Top 5 6GB RAM Smartphones At Budget Price Tag.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+