5 ಬೆಸ್ಟ್‌ ಕ್ಯಾಮೆರಾ ಮೊಬೈಲ್‌ಗಳ ಲಿಸ್ಟ್‌ ಇಲ್ಲಿದೆ; ಫೋನ್‌ ಬೆಲೆಯೂ ಹೆಚ್ಚಿಲ್ಲ!

Top 5, top 10, 5 best, best phones, best mobiles, Best Camera phones, Budget Price, Phone list, top mobiles, 64mp camera, 48mp camera, 32mp camera, ಕ್ಯಾಮೆರಾ, ಮೊಬೈಲ್, ಬೆಸ್ಟ್, ಲಿಸ್ಟ್, ಟಾಪ್, ಬೆಲೆ

|

ಗ್ರಾಹಕರು ಹೊಸ ಮೊಬೈಲ್‌ ಖರೀದಿಸುವಾಗ ಗಮನಿಸುವ ಪ್ರಮುಖ ಆಯ್ಕೆಗಳಲ್ಲಿ ಕ್ಯಾಮೆರಾ ಸಹ ಒಂದಾಗಿದೆ. ಮೊಬೈಲ್‌ ತಯಾರಿಕಾ ಕಂಪನಿಗಳು ಸಹ ಕ್ಯಾಮೆರಾ ಆಯ್ಕೆಯಲ್ಲಿ ಭಿನ್ನ ಮೆಗಾ ಪಿಕ್ಸಲ್‌ ಸೆನ್ಸಾರ್‌ ಆಯ್ಕೆಯನ್ನು ಲಭ್ಯ ಮಾಡುತ್ತಿವೆ. ಡ್ಯುಯಲ್‌ ಕ್ಯಾಮೆರಾ ಆಯ್ಕೆ ಈಗ ಹೆಚ್ಚು ಆಕರ್ಷಕ ಆಗಿ ಉಳಿದಿಲ್ಲ. ಬದಲಾಗಿ ಮೂರು ಮತ್ತು ಕ್ವಾಡ್‌ ಕ್ಯಾಮೆರಾ ರಚನೆಯ ಫೋನ್‌ಗಳು ಹೆಚ್ಚು ಸದ್ದು ಮಾಡುತ್ತಿವೆ. ಗ್ರಾಹಕರು ಸಹ ಇಂತಹ ಫೋನ್‌ಗಳತ್ತ ಒಲವು ನೀಡುತ್ತಿದ್ದಾರೆ.

ಸ್ಮಾರ್ಟ್‌ಫೋನ್‌ಗಳು

ಇಂದಿನ ಬಹುತೇಕ ಮೊಬೈಲ್ ಸಂಸ್ಥೆಗಳ ಸ್ಮಾರ್ಟ್‌ಫೋನ್‌ಗಳು ಹೆಚ್ಚಿನ ಸೆನ್ಸಾರ್ ಆಯ್ಕೆ ಪಡೆದಿರುತ್ತವೆ. ಅವುಗಳನ್ನು ಗಮನಿಸುವುದಾದರೆ ಮುಖ್ಯವಾಗಿ 64 ಮೆಗಾ ಪಿಕ್ಸಲ್‌ ಸೆನ್ಸಾರ್ ಕ್ಯಾಮೆರಾಗಳು ಮಾರುಕಟ್ಟೆಯಲ್ಲಿ ಹೊಸ ಅಲೆಯನ್ನು ಸೃಷ್ಠಿಸಿವೆ ಎನ್ನಬಹುದು. ಹೈ ಎಂಡ್‌ ಮಾದರಿಗಳಲ್ಲಿ ಲಭ್ಯ ಆಗುತ್ತಿದ್ದ ಕ್ವಾಡ್‌/ ಟ್ರಿಪಲ್‌ ಕ್ಯಾಮೆರಾ ಆಯ್ಕೆ, ಈಗೀಗ ಬಜೆಟ್‌ ಬೆಲೆಯಲ್ಲಿನ ಫೋನ್‌ಗಳಲ್ಲಿ ಸಹ ಲಭ್ಯ ಆಗುತ್ತಿದೆ.

ಲಭ್ಯವಿರುವ

ಇನ್ನು ಬಜೆಟ್‌ ಪ್ರೈಸ್‌ಟ್ಯಾಗ್‌ನಲ್ಲಿಯೇ ಅತ್ಯುತ್ತಮ ಕ್ಯಾಮೆರಾ ಆಯ್ಕೆ ಲಭ್ಯವಾಗುತ್ತಿರುವ ಕಾರಣದಿಂದಾಗಿ ಸ್ಮಾರ್ಟ್‌ಫೋನ್ ಖರೀದಿಸುವ ಗ್ರಾಹಕರು ಹೆಚ್ಚಾಗಿ 64 ಮೆಗಾ ಪಿಕ್ಸಲ್‌ ಕ್ಯಾಮೆರಾ ಸ್ಮಾರ್ಟ್‌ಫೋನ್‌ಗಳತ್ತ ಗಮನ ಹರಿಸುವಂತಾಗಿದೆ. ಹಾಗಾದರೇ ಪ್ರಸ್ತುತ ಬಜೆಟ್‌ ಪ್ರೈಸ್‌ ಟ್ಯಾಗ್‌ನಲ್ಲಿ ಲಭ್ಯವಿರುವ 5 ಅತ್ಯುತ್ತಮ ಅಧಿಕ ಮೆಗಾ ಪಿಕ್ಸಲ್‌ ಸೆನ್ಸಾರ್ ಕ್ಯಾಮೆರಾ ಸ್ಮಾರ್ಟ್‌ಫೋನ್‌ಗಳ ಬಗ್ಗೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F62 ಸ್ಮಾರ್ಟ್‌ಫೋನ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F62 ಸ್ಮಾರ್ಟ್‌ಫೋನ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F62 ಸ್ಮಾರ್ಟ್‌ಫೋನ್‌ 1,080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7 ಇಂಚಿನ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಹಾಗೆಯೇ ಈ ಆಕ್ಟಾ ಕೋರ್ exynos 9825 SoC ಪ್ರೊಸೆಸರ್‌ ಹೊಂದಿದ್ದು, ಅದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 11 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಫೋನ್ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಆಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ 64ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಇದರೊಂದಿಗೆ ಸೆಲ್ಫಿಗಾಗಿ 32ಎಂಪಿ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 7,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ ಅಪ್ ಸಾಮರ್ಥ್ಯವನ್ನು ಪಡೆದಿದೆ. ಇದರೊಂದಿಗೆ 25W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ನೀಡಿದೆ.

ಮೊಟೊ G30 ಸ್ಮಾರ್ಟ್‌ಫೋನ್‌

ಮೊಟೊ G30 ಸ್ಮಾರ್ಟ್‌ಫೋನ್‌

ಮೊಟೊ G30 ಸ್ಮಾರ್ಟ್‌ಫೋನ್‌ 720 x 1,600 ಪಿಕ್ಸಲ್ ರೆಸಲ್ಯೂಶನ್ ಸಫೋರ್ಟ್‌ ಪಡೆದಿದ್ದು, 6.5 ಇಂಚಿನ ಪೂರ್ಣ ಹೆಚ್‌ಡಿ ಡಿಸ್‌ಪ್ಲೇ ಪಡೆದಿದೆ. ಡಿಸ್‌ಪ್ಲೇಯು 90Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ ಅನುಪಾತವು 20:9 ಆಗಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 662 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಅಲ್ಲದೆ ಆಂಡ್ರಾಯ್ಡ್‌ 11 ಓಎಸ್‌ ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64ಎಂಪಿ ಸೆನ್ಸಾರ್‌ನಲ್ಲಿದೆ. ಇದರೊಂದಿಗೆ ಸೆಲ್ಫಿ ಕ್ಯಾಮೆರಾ 13ಎಂಪಿ ಸೆನ್ಸಾರ್‌ನಲ್ಲಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಹಾಗೆಯೇ 20W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ.

ವಿವೋ V20 ಸ್ಮಾರ್ಟ್‌ಫೋನ್‌

ವಿವೋ V20 ಸ್ಮಾರ್ಟ್‌ಫೋನ್‌

ವಿವೋ V20 ಸ್ಮಾರ್ಟ್‌ಫೋನ್‌ 2,400 x 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ 6.44 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 730G ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 8 GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ಟ್ರಿಪಲ್‌ ರಿಯರ್‌ ಕ್ಯಾಮೆರಾ ಹೊಂದಿದೆ. ಇದರಲ್ಲಿ ಪ್ರೈಮರಿ ಕ್ಯಾಮೆರಾ 64 ಮೆಗಾ ಪಿಕ್ಸೆಲ್‌ ಸೆನ್ಸಾರ್‌, ಹೊಂದಿದೆ. ಇದಲ್ಲದೆ 4000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದೆ.

ರಿಯಲ್‌ಮಿ 8 ಸ್ಮಾರ್ಟ್‌ಫೋನ್

ರಿಯಲ್‌ಮಿ 8 ಸ್ಮಾರ್ಟ್‌ಫೋನ್

ರಿಯಲ್‌ಮಿ 8 ಸ್ಮಾರ್ಟ್‌ಫೋನ್ 6.4 AMOLED ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇಯ ಅನುಪಾತವು 20:9 ಆಗಿದೆ. ಹಾಗೆಯೇ ಡಿಸ್‌ಪ್ಲೇಯು HDR 10+ ಸಫೋರ್ಟ್‌ ಸಹ ಪಡೆದುಕೊಂಡಿದೆ. ಇದು ಮೀಡಿಯಾ ಟೆಕ್ ಹಿಲಿಯೋ G95 ಪ್ರೊಸೆಸರ್ ಅನ್ನು ಹೊಂದಿದೆ. ಅದರೊಂದಿಗೆ ಅಡ್ರೆನೊ 618 GPU ಗ್ರಾಫಿಕ್ ಸಪೋರ್ಟ್‌ನ ಸೌಲಭ್ಯವನ್ನು ಪಡೆದಿದೆ. ಹಾಗೆಯೇ ಪ್ರೊಸೆಸರ್‌ ಇತ್ತೀಚಿನ ಆಂಡ್ರಾಯ್ಡ್‌ 11 ಓಎಸ್‌ ಬೆಂಬಲವನ್ನು ಪಡೆದುಕೊಂಡಿರಲಿದೆ. ಇನ್ನು ಈ ಫೋನ್‌ 4GB + 128 GB ಮತ್ತು 8 GB + 128 GB ವೇರಿಯಂಟ್ ಮಾದರಿಗಳ ಆಯ್ಕೆ ಪಡೆದಿದೆ. ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಮುಖ್ಯ ಕ್ಯಾಮೆರಾವು 64 ಮೆಗಾ ಪಿಕ್ಸಲ್ ಸೆನ್ಸಾರ್ ಹೊಂದಿದೆ. ಈ ಫೋನ್ 5,000 mAh ಬ್ಯಾಟರಿ ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದ್ದು, ಇದರೊಂದಿಗೆ 30W ಡಾರ್ಟ್‌ ಸಾಮರ್ಥ್ಯದ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿರಲಿದೆ.

ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್‌

ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್‌

ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಸೂಪರ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC ಪ್ರೊಸೆಸರ್‌ ಅನ್ನು ಹೊಂದಿದೆ. ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM + 64 GB ಮತ್ತು 6GB + 128 GB ಆಗಿವೆ.‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಹಾಗೆಯೇ 5,020 mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

Best Mobiles in India

English summary
Top 5 Best Camera Mobiles at Budget Price You Can Buy in India.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X