ಸ್ಯಾಮ್‌ಸಂಗ್ ಗ್ಯಾಲಕ್ಸಿ M ಸರಣಿಯ ಅತ್ಯುತ್ತಮ ಫೋನ್‌ಗಳ ಲಿಸ್ಟ್‌ ಇಲ್ಲಿದೆ!

|

ಮೊಬೈಲ್‌ ಮಾರುಕಟ್ಟೆಯಲ್ಲಿ ಸ್ಯಾಮ್‌ಸಂಗ್‌ ತನ್ನದೇ ಖದರ್‌ ಹೊಂದಿದ್ದು, ಬಜೆಟ್‌ ರೇಂಜ್‌ನಿಂದ ಹೈ ಎಂಡ್‌ ವರೆಗೂ ಆಕರ್ಷಕ ಫೋನ್‌ಗಳ ಲಿಸ್ಟ್ ಹೊಂದಿದೆ. ಆ ಪೈಕಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A ಸರಣಿಯ ಫೋನ್‌ಗಳಂತೆ, ಗ್ಯಾಲಕ್ಸಿ M ಸರಣಿಯ ಸ್ಮಾರ್ಟ್‌ಫೋನ್‌ಗಳೂ ಗಮನ ಸೆಳೆದಿವೆ. ಗ್ಯಾಲಕ್ಸಿ M ಸರಣಿಯಲ್ಲಿ ಈಗಾಗಲೇ ಹಲವು ಮಾಡೆಲ್‌ಗಳನ್ನು ಸಂಸ್ಥೆಯು ಪರಿಚಯಿಸಿ ಗ್ರಾಹಕರ ಗಮನ ಸೆಳೆದಿದೆ. ಗ್ಯಾಲಕ್ಸಿ M ಸರಣಿಯ ಸ್ಮಾರ್ಟ್‌ಫೋನ್‌ಗಳು ಇತ್ತೀಚಿನ ಟ್ರೆಂಡಿಂಗ್‌ ಫೀಚರ್ಸ್‌ಗಳನ್ನು ಒಳಗೊಂಡಿರುವುದು ಪ್ಲಸ್ ಪಾಯಿಂಟ್‌ ಆಗಿದೆ.

ಗ್ಯಾಲಕ್ಸಿ M

ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ M ಸರಣಿಯಲ್ಲಿನ ಕೆಲವು ಸ್ಮಾರ್ಟ್‌ಫೋನ್‌ಗಳು ಆಕರ್ಷಕ ಎನಿಸಿವೆ. ಅವುಗಳಲ್ಲಿ ಬಹುತೇಕ ಫೋನ್‌ಗಳು ತ್ರಿವಳಿ ಹಾಗೂ ಕ್ವಾಡ್‌ ಕ್ಯಾಮೆರಾ ರಚನೆಯನ್ನು ಪಡೆದಿವೆ. ಅಲ್ಲದೇ ಬ್ಯಾಟರಿ ಬ್ಯಾಕ್‌ಅಪ್‌ ವಿಷಯದಲ್ಲಿಯೂ ಗ್ರಾಹಕರಿಗೆ ಆಕರ್ಷಕ ಎನಿಸುವಂತಿವೆ. ಇದರ ಜೊತೆಗೆ ವೇಗದ ಪ್ರೊಸೆಸರ್‌ ಆಯ್ಕೆಗಳನ್ನು ಒದಗಿಸಿದ್ದು, ಇತ್ತೀಚಿಗಿನ ಆಂಡ್ರಾಯ್ಡ್‌ ಓಎಸ್‌ ಸಪೋರ್ಟ್‌ ಪಡೆದಿವೆ. ಹಾಗಾದರೇ ಸದ್ಯ ಖರೀದಿಗೆ ಬೆಸ್ಟ್‌ ಎನಿಸಿರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ M ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್‌

ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7 ಇಂಚಿನ ಫುಲ್‌ ಹೆಚ್‌ಡಿ + ಸೂಪರ್ AMOLED ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಕ್ವಾಲ್ಕಾಮ್ ಸ್ನಾಪ್ ಡ್ರಾಗನ್ 778G ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ ಆಧಾರಿತ ಒನ್ ಯುಐ ಮೇಲೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಆಯ್ಕೆಯನ್ನು ಹೊಂದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಪ್ರೈಮರಿ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 5,000 mAh ಬ್ಯಾಟರಿಯನ್ನು ಹೊಂದಿದ್ದು, 25W ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M32 5G ಸ್ಮಾರ್ಟ್‌ಫೋನ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M32 5G ಸ್ಮಾರ್ಟ್‌ಫೋನ್‌

ಸ್ಯಾಮ್‌ಸಂಗ್ ಗ್ಯಾಲಕ್ಸಿ M32 5G ಸ್ಮಾರ್ಟ್‌ಫೋನ್‌ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ HD+ TFT ಇನ್ಫಿನಿಟಿ ವಿ ಡಿಸ್‌ಪ್ಲೇ ಹೊಂದಿದೆ. ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 720 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯ ಹೊಂದಿದೆ. ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 15W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್‌

ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್‌

ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ ಫೋನ್‌ 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಯನ್ನು ಹೊಂದಿದೆ. ಈ ಸ್ಮಾರ್ಟ್‌ ಫೋನ್‌ ಆಕ್ಟಾ ಕೋರ್‌ ಎಕ್ಸಿನೋಸ್‌ 850SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ನಲ್ಲಿ ಒನ್ ಯುಐ ಕೋರ್‌ ಬೆಂಬಲ ದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಇದು ಡ್ಯುಯಲ್ ಸಿಮ್ (ನ್ಯಾನೋ) ಸ್ಲಾಟ್‌ಗಳನ್ನು ಬೆಂಬಲಿಸುತ್ತದೆ. ಜೊತೆಗೆ 4GB RAM + 64 GB ಮತ್ತು 6GB RAM + 128 GB ವೇರಿಯೆಂಟ್‌ ಆಯ್ಕೆಯ ಇಂಟರ್‌ ಸ್ಟೋರೇಜ್‌ ಸಾಮರ್ಥ್ಯ ವನ್ನು ಹೊಂದಿದೆ. ಹಾಗೆಯೇ ಈ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾವು 48 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಈ ಸ್ಮಾರ್ಟ್‌ ಫೋನ್‌ 6,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M32 ಸ್ಮಾರ್ಟ್‌ಫೋನ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M32 ಸ್ಮಾರ್ಟ್‌ಫೋನ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M32 ಸ್ಮಾರ್ಟ್‌ ಫೋನ್ 2400 x 1080 ಪಿಕ್ಸೆಲ್‌ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.4-ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಇನ್ಫಿನಿಟಿ-ಯು ಅಮೋಲೆಡ್ ಡಿಸ್‌ಪ್ಲೇ ಆಗಿದೆ. ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G80 ಪ್ರೊಸೆಸರ್ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಇದು 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಡ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಇದಲ್ಲದೆ 20 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 6,000 mAh ಸಾಮರ್ಥ್ಯದ ಬ್ಯಾಟರಿ ಯನ್ನು ಹೊಂದಿದೆ. ಇದು 25W ವೇಗದ ಚಾರ್ಜಿಂಗ್ ತಂತ್ರಜ್ಞಾನ ವನ್ನು ಬೆಂಬಲಿಸುತ್ತದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M21 2021 ಫೋನ್

ಸ್ಯಾಮ್‌ಸಂಗ್ ಗ್ಯಾಲಕ್ಸಿ M21 2021 ಫೋನ್

ಸ್ಯಾಮ್‌ಸಂಗ್ ಗ್ಯಾಲಕ್ಸಿ M21 ಸ್ಮಾರ್ಟ್‌ಫೋನ್‌ 1080 x 2340 ಪಿಕ್ಸಲ್‌ ರೆಸಲ್ಯೂಶನ್‌ ಹೊಂದಿರುವ 6.4 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಜೊತೆಗೆ ಇನ್‌ಫಿನಿಟಿ ಸೂಪರ್ AMOLED ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ ಕೋರ್ exynos 9611 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 11 ಓಎಸ್ ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಜೊತೆಗೆ ಎರಡು ವೇರಿಯಂಟ್ ಆಯ್ಕೆಗಳಿದ್ದು, ಅವುಗಳು ಕ್ರಮವಾಗಿ 4GB RAM + 64GB ಸ್ಟೋರೇಜ್ ಮತ್ತು 6GB RAM + 128GB ಸಾಮರ್ಥ್ಯ ಸ್ಟೋರೇಜ್ ಆಯ್ಕೆಗಳನ್ನು ಪಡೆದಿದೆ. ಹಾಗೆಯೇ ತ್ರಿವಳಿ ರಿಯರ್‌ ಕ್ಯಾಮೆರಾ ಸೆಟ್‌ಆಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ 48 ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಈ ಸ್ಮಾರ್ಟ್‌ಫೋನ್‌ 6,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ ಅಪ್ ಸಾಮರ್ಥ್ಯವನ್ನು ಪಡೆದಿದೆ. ಇದರೊಂದಿಗೆ 15W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ನೀಡಿದೆ.

Best Mobiles in India

English summary
Top 5 Best Samsung Galaxy M Series Phones List is here.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X