10,000ರೂ. ಒಳಗೆ ಫೋನ್‌ ಖರೀದಿಸುವ ಪ್ಲ್ಯಾನ್ ಇದ್ರೆ, ಇಲ್ಲಿ ಒಮ್ಮೆ ಗಮನಿಸಿ!

|

ಪ್ರಸ್ತುತ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಪೈಪೋಟಿ ತೀವ್ರವಾಗಿ ಇದ್ದು, ಪ್ರಮುಖ ಮೊಬೈಲ್‌ ಕಂಪನಿಗಳು ಗ್ರಾಹಕರನ್ನು ಸೆಳೆಯಲು ನೂತನ ಫೋನ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸುತ್ತ ಮುನ್ನಡೆದಿವೆ. ಅವುಗಳಲ್ಲಿ ಕೆಲವು ಫೋನ್‌ಗಳು ಸ್ಪೆಷಲ್‌ ಫೀಚರ್ಸ್ ಗಳಿಂದ ಆಕರ್ಷಿಸಿದರೇ, ಮತ್ತೆ ಕೆಲವು ಸ್ಮಾರ್ಟ್‌ಫೋನ್‌ಗಳು ಅಗ್ಗದ ಪ್ರೈಸ್‌ಟ್ಯಾಗ್‌ನಿಂದ ಭಾರೀ ಗಮನ ಸೆಳೆಯುತ್ತವೆ. ಇನ್ನು ನೂತನ ಸ್ಮಾರ್ಟ್‌ಫೋನ್‌ ಖರೀದಿರುವ ಬಹುತೇಕ ಬಳಕೆದಾರರು ಬಜೆಟ್‌ ದರದಲ್ಲಿ ಲಭ್ಯವಾಗುವ ಅತ್ಯುತ್ತಮ ಫೀಚರ್ಸ್‌ ಫೋನ್ ಹುಡುಕುತ್ತಾರೆ.

10,000ರೂ. ಒಳಗೆ ಲಭ್ಯವಾಗುವ

ಹೌದು, ಮಾರುಕಟ್ಟೆಯಲ್ಲಿ ಹಲವು ಕಂಪೆನಿಗಳ ಸ್ಮಾರ್ಟ್‌ಫೋನ್‌ಗಳು ಆಯ್ಕೆ ಇವೆ. ಆದರೆ ಸಾಮಾನ್ಯವಾಗಿ ಅನೇಕ ಗ್ರಾಹಕರು ಸುಮಾರು 10,000ರೂ. ಒಳಗೆ ಲಭ್ಯವಾಗುವ ಉತ್ತಮ ಫೋನ್‌ ಖರೀದಿಗೆ ಮುಂದಾಗುತ್ತಾರೆ. ಈ ನಿಟ್ಟಿನಲ್ಲಿ ಕಡಿಮೆ ಬೆಲೆ ಜೊತೆಗೆ ಅತ್ಯುತ್ತಮ ಕ್ಯಾಮೆರಾ, ವೇಗದ ಪ್ರೊಸೆಸರ್, ಬಿಗ್ ಬ್ಯಾಟರಿ, ಆಕರ್ಷಕ ಡಿಸೈನ್‌ ಇರುವ ಫೋನ್‌ಗಳು ಬಹುಬೇಗನೇ ಗ್ರಾಹಕರನ್ನು ಆಕರ್ಷಿಸುತ್ತವೆ. ಹೀಗೆ ಸುಮಾರು 8,000ರೂ. ಪ್ರೈಸ್‌ಟ್ಯಾಗ್‌ನಲ್ಲಿ ಲಭ್ಯವಿರುವ ಕೆಲವು ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳ ಪಟ್ಟಿ ಇಲ್ಲದೆ.

ರಿಯಲ್‌ಮಿ ನಾರ್ಜೋ 50i ಪ್ರೈಮ್

ರಿಯಲ್‌ಮಿ ನಾರ್ಜೋ 50i ಪ್ರೈಮ್

ರಿಯಲ್‌ಮಿ ನಾರ್ಜೋ 50i ಪ್ರೈಮ್ 6.5 ಇಂಚಿನ ಡಿಸ್ಪ್ಲೇಯನ್ನು ಹೊಂದಿದ್ದು, ಈ ಡಿಸ್‌ಪ್ಲೇ 1600 x 720 ಪಿಕ್ಸೆಲ್‌ಗಳ ರೆಸಲ್ಯೂಶನ್‌ ಒಳಗೊಂಡಿದೆ. ಜೊತೆಗೆ ಈ ಫೋನ್ ಆಕ್ಟಾ ಕೋರ್ Unisoc T612 SoC ನಿಂದ ಚಾಲಿತವಾಗಲಿದ್ದು, ಆಂಡ್ರಾಯ್ಡ್ 11 ಆಧಾರಿತ ರಿಯಲ್‌ಮಿ ಯುಐ ಗೋ ಆವೃತ್ತಿಯಲ್ಲಿ ಕಾರ್ಯನಿರ್ವಹಿಸುತ್ತದೆ. ಮೈಕ್ರೊ SD ಕಾರ್ಡ್ ಸ್ಲಾಟ್ ಅನ್ನು ಒಳಗೊಂಡಿದ್ದು, ಬರೋಬ್ಬರಿ 1TB ವರೆಗೆ ಸ್ಟೋರೇಜ್‌ ಸಾಮರ್ಥ್ಯದ ವರೆಗೂ ವಿಸ್ತರಣೆ ಮಾಡಿಕೊಳ್ಳಬಹುದಾಗಿದೆ. ಇನ್ನು ಈ ಫೋನ್‌ 5,000mAh ಬ್ಯಾಟರಿ ಶಕ್ತಿ ಹೊಂದಿದ್ದು, 4 ದಿನಗಳವರೆಗೆ ಆಡಿಯೊ ಪ್ಲೇಬ್ಯಾಕ್ ಬೆಂಬಲವನ್ನು ನೀಡಲಿದೆ.

ಮೊಟೊ e22s ಸ್ಮಾರ್ಟ್‌ಫೋನ್‌

ಮೊಟೊ e22s ಸ್ಮಾರ್ಟ್‌ಫೋನ್‌

ಮೊಟೊ e22s ಸ್ಮಾರ್ಟ್‌ಫೋನ್‌ 6.5 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಫೋನಿನ ಡಿಸ್‌ಪ್ಲೇ 1600 x 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್‌ ಹೆಲಿಯೋ G37 SoC ಪ್ರೊಸೆಸರ್‌ ಬಲ ಪಡೆದಿದೆ.ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಈ ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿ ಬಲವನ್ನು ಪಡೆದಿದೆ. ಇದು 10W ಚಾರ್ಜಿಂಗ್ ವೇಗವನ್ನು ಬೆಂಬಲಿಸುತ್ತದೆ.

ರೆಡ್ಮಿ A1+ ಸ್ಮಾರ್ಟ್‌ಫೋನ್‌

ರೆಡ್ಮಿ A1+ ಸ್ಮಾರ್ಟ್‌ಫೋನ್‌

ರೆಡ್ಮಿ A1+ ಸ್ಮಾರ್ಟ್‌ಫೋನ್‌ 1600 × 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.52 ಇಂಚಿನ ಫುಲ್‌ ಹೆಚ್‌ಡಿ + ಸ್ಕ್ರ್ಯಾಚ್‌ ರೆಸಿಸ್ಟೆನ್ಸ್‌ ಮಾದಿರಯ ಡಿಸ್‌ಪ್ಲೇಯನ್ನು ಹೊಂದಿದೆ. ಹಾಗೆಯೇ ಈ ರೆಡ್ಮಿ A1+ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹಿಲಿಯೋ A22 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸುತ್ತದೆ. ರೆಡ್ಮಿ A1+ ಸ್ಮಾರ್ಟ್‌ಫೋನ್‌ ಹಿಂಭಾಗದಲ್ಲಿ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆಯನ್ನು ಒಳಗೊಂಡಿದೆ. ರೆಡ್ಮಿ A1+ ಸ್ಮಾರ್ಟ್‌ಫೋನ್‌ 5000 mAh ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯವನ್ನು ಹೊಂದಿದೆ. ಇದಕ್ಕೆ ಪೂರಕವಾಗಿ 10W ಚಾರ್ಜಿಂಗ್ ಸಪೋರ್ಟ್‌ ಸಹ ಪಡೆದಿದೆ.

ವಿವೋ Y01 ಸ್ಮಾರ್ಟ್‌ಫೋನ್‌

ವಿವೋ Y01 ಸ್ಮಾರ್ಟ್‌ಫೋನ್‌

ವಿವೋ Y01 ಸ್ಮಾರ್ಟ್‌ಫೋನ್‌ 6.51 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದ್ದು, ಈ ಡಿಸ್‌ಪ್ಲೇ 720x1600 ಪಿಕ್ಸೆಲ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಹಾಗೆಯೇ ಮೀಡಿಯಾಟೆಕ್‌ ಹಿಲಿಯೋ P35 ಪ್ರೊಸೆಸರ್ ಬಲವನ್ನು ಹೊಂದಿದ್ದು, 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಇನ್ಫಿನಿಕ್ಸ್ ಸ್ಮಾರ್ಟ್ 6 HD ಸ್ಮಾರ್ಟ್‌ಫೋನ್‌

ಇನ್ಫಿನಿಕ್ಸ್ ಸ್ಮಾರ್ಟ್ 6 HD ಸ್ಮಾರ್ಟ್‌ಫೋನ್‌

ಇನ್ಫಿನಿಕ್ಸ್ ಸ್ಮಾರ್ಟ್ 6 HD ಸ್ಮಾರ್ಟ್‌ಫೋನ್‌ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹಿಲಿಯೊ A22 SoC ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಜೊತೆಗೆ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ 5W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಪಡೆದಿದೆ.

Best Mobiles in India

English summary
Top 5 Best Smartphone Under Rs 8000 in India.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X