ಬಜೆಟ್ ಬೆಲೆಯಲ್ಲಿ ಖರೀದಿಗೆ ಲಭ್ಯ ಇರುವ OPPO ಸ್ಮಾರ್ಟ್‌ಫೋನ್ ಲಿಸ್ಟ್!
ಲೀಡಿಂಗ್ ಮೊಬೈಲ್ ಬ್ರ್ಯಾಂಡ್‌ಗಳ ಪೈಕಿ ಒಂದಾಗಿರುವ ಒಪ್ಪೋ ಸಂಸ್ಥೆಯು ಭಿನ್ನ ಬೆಲೆಯಲ್ಲಿ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಒಪ್ಪೋ ಸಂಸ್ಥೆಯ ಬಹುತೇಕ ಫೋನ್‌ಗಳು ಈಗಾಗಲೇ ಮಾರುಕಟ್ಟೆಯಲ್ಲಿ ಸಕತ್ ಸೌಂಡ್ ಮಾಡುತ್ತಿವೆ. ಅವುಗಳ ಪೈಕಿ ಒಪ್ಪೋ ರೆನೋ ಸರಣಿ ಹಾಗೂ ಒಪ್ಪೋ A ಸರಣಿಯ ಮೊಬೈಲ್‌ಗಳು ಸೇರ್ಪಡೆ ಆಗಿವೆ. ಅದಾಗ್ಯೂ, ಬಜೆಟ್ ಬೆಲೆಯಲ್ಲಿ ಲಭ್ಯ ಇರುವ ಕೆಲವು ಫೋನ್‌ಗಳು ಗ್ರಾಹಕರನ್ನು ಆಕರ್ಷಿಸುವಲ್ಲಿ ಯಶಸ್ವಿ ಆಗಿವೆ.
ಹೌದು, ಒಪ್ಪೋ (Oppo) ಮೊಬೈಲ್ ಕಂಪನಿಯ ಒಪ್ಪೋ ಬಜೆಟ್ ಬೆಲೆಯಲ್ಲಿನ ಇತ್ತೀಚಿಗೆ ಕೆಲವು ನೂತನ ಫೋನ್‌ಗಳು ಹೆಚ್ಚಿನ ಸದ್ದು ಮಾಡಿವೆ. ಅವುಗಳ ಪೈಕಿ ಇತ್ತೀಚಿನ ಒಪ್ಪೋ A3, ಒಪ್ಪೋ A3x, ಒಪ್ಪೋ A3 ಪ್ರೊ ಮೊಬೈಲ್‌ಗಳು ಸಹ ಸೇರಿವೆ. ಹಾಗೆಯೇ ಸಂಸ್ಥೆಯ ಕೆಲವು A ಸರಣಿಯ ಮೊಬೈಲ್‌ಗಳು ಆಕರ್ಷಕ ಫೀಚರ್ಸ್‌ಗಳೊಂದಿಗೆ ಅಧಿಕ ಗ್ರಾಹಕರನ್ನು ಸೆಳೆದಿವೆ. ಹಾಗಾದರೇ ಸದ್ಯ ಬಜೆಟ್ ಬೆಲೆಯಲ್ಲಿ ಲಭ್ಯ ಇರುವ ಒಪ್ಪೋದ ಕೆಲವು ಬೆಸ್ಟ್ ಒಪ್ಪೋ ಫೋನ್‌ಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಒಪ್ಪೋ A3 ಮೊಬೈಲ್
ಒಪ್ಪೋ A3 ಫೋನ್ 6.67 ಇಂಚಿನ LCD HD ಪ್ಲಸ್ ಡಿಸ್ಪ್ಲೇಯನ್ನು ಹೊಂದಿದೆ.ಹಾಗೆಯೇ ಇದು ಸ್ನಾಪ್‌ಡ್ರಾಗನ್ 6S Gen 1 ಚಿಪ್‌ಸೆಟ್ ಪ್ರೊಸೆಸರ್ ಸೌಲಭ್ಯ ಪಡೆದಿದ್ದು, ಇದು 8GB RAM ವರೆಗೂ ಸೌಲಭ್ಯ ಪಡೆದಿದೆ. ಇನ್ನು ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಸೌಲಭ್ಯದಲ್ಲಿ ಇದೆ. ಈ ಫೋನ್ 5100mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಹೊಂದಿದ್ದು, 45W ವೇಗದ ಚಾರ್ಜಿಂಗ್ ಸೌಲಭ್ಯ ಸಹ ಪಡೆದಿದೆ.
ಒಪ್ಪೋ A3 ಪ್ರೊ ಮೊಬೈಲ್
ಒಪ್ಪೋ A3 ಪ್ರೊ ಮೊಬೈಲ್ 6.7 ಇಂಚಿನ ಫುಲ್‌ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಹೊಂದಿದ್ದು, ಈ ಡಿಸ್‌ಪ್ಲೇ 1080 x 2412 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಅಲ್ಲದೇ ಮೀಡಿಯಾಟೆಕ್ ಡೈಮೆನ್ಸಿಟಿ 7050 ಪ್ರೊಸೆಸರ್ ಪವರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 14 ಆಧಾರಿತ ಕಲರ್ ಓಎಸ್ 14 ಸಪೋರ್ಟ್ ಜೊತೆಗೆ ಕೆಲಸ ನಿರ್ವಹಿಸಲಿದೆ. ಅಲ್ಲದೇ ಈ ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಪಡೆದಿದೆ. ಇದರೊಂದಿಗೆ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದೆ.
ಒಪ್ಪೋ A3x ಮೊಬೈಲ್
ಒಪ್ಪೋ A3x ಫೋನ್ 6.67 ಇಂಚಿನ LCD HD ಪ್ಲಸ್ ಡಿಸ್ಪ್ಲೇಯನ್ನು ಹೊಂದಿದೆ.ಹಾಗೆಯೇ ಇದು ಸ್ನಾಪ್‌ಡ್ರಾಗನ್ 6S Gen 1 ಚಿಪ್‌ಸೆಟ್ ಪ್ರೊಸೆಸರ್ ಸೌಲಭ್ಯ ಪಡೆದಿದ್ದು, ಇದು 8GB RAM ವರೆಗೂ ಸೌಲಭ್ಯ ಪಡೆದಿದೆ. ಇನ್ನು ಇದರ ಪ್ರಾಥಮಿಕ ಕ್ಯಾಮೆರಾವು 8 ಮೆಗಾ ಪಿಕ್ಸಲ್ ಸೆನ್ಸಾರ್ ಸೌಲಭ್ಯದಲ್ಲಿ ಇದ್ದು, 5ಎಂಪಿ ಸೆಲ್ಫಿ ಕ್ಯಾಮೆರಾ ಪಡೆದಿದೆ. ಇದು ಸಹ 5100mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಹೊಂದಿದ್ದು, 45W ವೇಗದ ಚಾರ್ಜಿಂಗ್ ಸೌಲಭ್ಯ ಸಹ ಪಡೆದಿದೆ.
ಒಪ್ಪೋ A59 5G ಮೊಬೈಲ್
ಒಪ್ಪೋದ ಈ ಮೊಬೈಲ್ 6.56 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ ಡ್ಯೂಡ್ರಾಪ್ ನಾಚ್ ಅನ್ನು ಪಡೆದುಕೊಂಡಿದೆ. ಅಲ್ಲದೇ ಇದರ ಡಿಸ್‌ಪ್ಲೇ 1612 x 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಅಲ್ಲದೇ ಮೀಡಿಯಾ ಟೆಕ್ ಡೈಮೆನ್ಸಿಟಿ 6020SoC ಪ್ರೊಸೆಸರ್ ಪವರ್ ಅನ್ನು ಪಡೆದಿದ್ದು, ಆಂಡ್ರಾಯ್ಡ್ 13 ಓಎಸ್ ಸಪೋರ್ಟ್ ಒಳಗೊಂಡಿದೆ. ಇದರ ಜೊತೆಗೆ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು, ಇದು 33W SUPERVOOC ಫ್ಲ್ಯಾಶ್ ಚಾರ್ಜಿಂಗ್ ಸಪೋರ್ಟ್ ಅನ್ನು ಒಳಗೊಂಡಿದೆ.
ಒಪ್ಪೋ A79 5G ಮೊಬೈಲ್
ಒಪ್ಪೋ A79 5G ಮೊಬೈಲ್ 6.72 ಇಂಚಿನ ಫುಲ್‌ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಹೊಂದಿದ್ದು, ಈ ಡಿಸ್‌ಪ್ಲೇ 2400 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಅಲ್ಲದೇ ಮೀಡಿಯಾ ಟೆಕ್ ಡೈಮೆನ್ಸಿಟಿ 6020 SoC ಪ್ರೊಸೆಸರ್ ಪವರ್ ಅನ್ನು ಹೊಂದಿದ್ದು, ಇದಲ್ಲದೇ ಈ ಫೋನ್ 5,000mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು, ಪೂರಕವಾಗಿ 33W ಫಾಸ್ಟ್ ಚಾರ್ಜಿಂಗ್ ಅನ್ನು ಒಳಗೊಂಡಿದೆ. ಇದು ಗ್ಲೋಯಿಂಗ್ ಗ್ರೀನ್ ಮತ್ತು ಮಿಸ್ಟರಿ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.


Click it and Unblock the Notifications








