Home
ಮೊಬೈಲ್

20000ಕ್ಕಿಂತ ಕಡಿಮೆ! ಜನ ಮೆಚ್ಚಿದ ಫೋನ್‌ಗಳಿವು.. ಟಾಪ್ ಫೀಚರ್‌ಗಳೊಂದಿಗೆ ಭಾರೀ ಸದ್ದು.. ಇಲ್ಲಿದೆ ಪಟ್ಟಿ

ಪ್ರಸ್ತುತ ಸ್ಮಾರ್ಟ್‌ಫೋನ್‌ಗಳ ಅಗತ್ಯ ಗಣನೀಯವಾಗಿ ಹೆಚ್ಚುತ್ತಿದೆ. ಕಾಲ್ ಮಾಡುವುದು ಸೇರಿದಂತೆ ಹಲವು ಕೆಲಸಗಳಿಗೆ ಮೊಬೈಲ್ ಅತ್ಯಗತ್ಯ. ಬಹುತೇಕರು ಹೊಸ ಫೋನ್ ಖರೀದಿಸುವ ಮೊದಲು, ಆ ಮೊಬೈಲ್‌ನ ಡಿಸ್ಪ್ಲೇ, ಬ್ಯಾಟರಿ, ಪ್ರೊಸೆಸರ್, ಕ್ಯಾಮೆರಾ ಇತ್ಯಾದಿಗಳನ್ನು ಪರಿಶೀಲಿಸುತ್ತಾರೆ. ಇದರ ಜೊತೆಗೆ, ಬೆಲೆ ಕೂಡ ಬಹಳ ಮುಖ್ಯವಾಗಿರುತ್ತದೆ. ಆನ್‌ಲೈನ್ ಶಾಪಿಂಗ್ ಸೈಟ್ ಅಮೆಜಾನ್‌ನಲ್ಲಿ (Amazon) ಪ್ರಸ್ತುತ ಕಡಿಮೆ ಬೆಲೆಯಲ್ಲಿ ಸೊಗಸಾದ ಸ್ಮಾರ್ಟ್‌ಫೋನ್‌ಗಳು (smartphones) ಲಭ್ಯವಿದೆ. ಇದರೊಂದಿಗೆ ಬ್ಯಾಂಕ್ ಆಫರ್, ನೋ ಕಾಸ್ಟ್ ಇಎಂಐ ಮತ್ತು ಎಕ್ಸ್‌ಚೇಂಜ್ ಆಫರ್ ಸಹ ಲಭ್ಯವಿದೆ. ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ.

ಹೌದು, 20,000 ರೂ.ಗಿಂತ ಕಡಿಮೆ ಬೆಲೆಯಲ್ಲಿ ಪ್ರಸಿದ್ಧ ಕಂಪನಿಗಳ ಮೊಬೈಲ್‌ಗಳು ಮಾರಾಟವಾಗುತ್ತಿವೆ. ಈ ಪೈಕಿ ಮೊಟೊರೊಲಾ ಎಡ್ಜ್ 50 ನಿಯೋ, ರಿಯಲ್‌ಮಿ ನಾರ್ಜೊ 70 ಟರ್ಬೊ, ಟೆಕ್ನೋ ಪೊವಾ 6 ಪ್ರೊ, ಲಾವಾ ಬ್ಲೇಜ್ ಡ್ಯುಯೊ ಮತ್ತು ಇನ್ಫಿನಿಕ್ಸ್ ಜಿಟಿ 20 ಪ್ರೊ ಸ್ಮಾರ್ಟ್‌ಫೋನ್‌ಗಳು ಇವೆ. ಇವು ಟಾಪ್ ಫೀಚರ್‌ಗಳೊಂದಿಗೆ ಮಾರುಕಟ್ಟೆಯಲ್ಲಿ ಸದ್ದು ಮಾಡುತ್ತಿವೆ. ನಾವು ಈ ಲೇಖನದಲ್ಲಿ ಈ ಟಾಪ್ 5 ಸ್ಮಾರ್ಟ್‌ಫೋನ್‌ಗಳ (Top 5 smartphones) ಬೆಲೆ, ವೈಶಿಷ್ಟ್ಯಗಳು ಮತ್ತು ಇತರೆ ವಿವರಗಳ ಬಗ್ಗೆ ತಿಳಿಸಿಕೊಟ್ಟಿದ್ದೇವೆ.

Smartphones: ಟಾಪ್ ಫೀಚರ್‌ಗಳೊಂದಿಗೆ ಸದ್ದು.. 20000ಕ್ಕಿಂತ ಕಡಿಮೆ ಬೆಲೆ

1. ಇನ್ಫಿನಿಕ್ಸ್ GT 20 ಪ್ರೊ ಸ್ಮಾರ್ಟ್‌ಫೋನ್

ಇನ್ಫಿನಿಕ್ಸ್ GT 20 ಪ್ರೊ (Infinix GT 20 Pro) ಮೊಬೈಲ್‌ ಗೇಮಿಂಗ್ ಪ್ರಿಯರಿಗೆ ಅದ್ಭುತವಾಗಿದೆ. ಈ ಫೋನ್ 6.78 ಇಂಚಿನ FHD+ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಇದು 1,300 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಮತ್ತು 144Hz ರಿಫ್ರೆಶ್ ದರದೊಂದಿಗೆ ಬರುತ್ತದೆ. ಈ ಫೋನ್ ಮೀಡಿಯಾಟೆಕ್‌ ಡೈಮೆನ್ಸಿಟಿ 8200 ಅಲ್ಟ್ರಾ ಪ್ರೊಸೆಸರ್‌ನೊಂದಿಗೆ ಕೆಲಸ ನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಸ್ಟೋರೇಜ್‌ ಆಯ್ಕೆ ಪಡೆದಿದೆ. ಇದು ಆಂಡ್ರಾಯ್ಡ್ 14 ಆಧಾರಿತ XOS 14ನ ಬ್ಲೋಟ್-ಫ್ರೀ ಆವೃತ್ತಿಯನ್ನು ಹೊಂದಿದೆ.

ಇನ್ಫಿನಿಕ್ಸ್ GT 20 ಪ್ರೊ ಸ್ಮಾರ್ಟ್‌ಫೋನ್‌ OIS ಬೆಂಬಲದೊಂದಿಗೆ 108 ಮೆಗಾಪಿಕ್ಸೆಲ್‌ ಕ್ಯಾಮೆರಾ ಹೊಂದಿದೆ. ಇದರೊಂದಿಗೆ 2 ಮೆಗಾಪಿಕ್ಸೆಲ್‌ ದ್ವಿತೀಯ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್‌ ಮೂರನೇ ಕ್ಯಾಮೆರಾ ಲಭ್ಯವಿದೆ. ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ 32 ಮೆಗಾಪಿಕ್ಸೆಲ್ ಕ್ಯಾಮೆರಾ ಅಳವಡಿಸಲಾಗಿದೆ. ಈ ಇನ್ಫಿನಿಕ್ಸ್ ಸ್ಮಾರ್ಟ್‌ಫೋನ್‌ 45W ಫಾಸ್ಟ್ ಚಾರ್ಜಿಂಗ್ ಬೆಂಬಲದೊಂದಿಗೆ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

2. ಲಾವಾ ಬ್ಲೇಜ್ ಡ್ಯುಯೊ ಸ್ಮಾರ್ಟ್‌ಫೋನ್‌

ಲಾವಾ ಬ್ಲೇಜ್ ಡ್ಯುಯೊ (Lava Blaze Duo) ಸ್ಮಾರ್ಟ್‌ಫೋನ್ 16,999 ರೂ. ಬೆಲೆಗೆ ಲಭ್ಯವಿದೆ. ಲಾವಾ ಬ್ಲೇಜ್ ಡ್ಯುವೋ 5G ಮೊಬೈಲ್ ಎರಡು ಸ್ಟೋರೇಜ್‌ ಆಯ್ಕೆಗಳಲ್ಲಿ ಬಿಡುಗಡೆಯಾಗಿದೆ. ಲಾವಾ ಬ್ಲೇಜ್ ಡ್ಯುವೋ 5G ಸ್ಮಾರ್ಟ್‌ಫೋನ್ 6.67 ಇಂಚಿನ 3D ಕರ್ವ್ ಅಮೋಲೆಡ್ ಮುಖ್ಯ ಡಿಸ್ಪ್ಲೇಯನ್ನು ಹೊಂದಿದೆ. ಇದು 1080 x 2400 ಪಿಕ್ಸೆಲ್‌ ರೆಸಲ್ಯೂಶನ್ ಮತ್ತು 120Hz ರಿಫ್ರೆಶ್ ದರದ ಬೆಂಬಲ ಪಡೆದಿದೆ. ಫೋನಿನಲ್ಲಿ 1.58 ಇಂಚಿನ ದ್ವಿತೀಯ ಡಿಸ್ಲೇ ಲಭ್ಯವಿದೆ. ಇದು 228x 460 ಪಿಕ್ಸೆಲ್‌ ರೆಸಲ್ಯೂಶನ್ ಹೊಂದಿದೆ. ಈ ಮೊಬೈಲ್ ಮೀಡಿಯಾಟೆಕ್ ಡೈಮೆನ್ಸಿಟಿ 7025 ಪ್ರೊಸೆಸರ್ ಹೊಂದಿದೆ. ಈ ಮೊಬೈಲ್ ಆಂಡ್ರಾಯ್ಡ್ 14 ಓಎಸ್‌ನಲ್ಲಿ ಕೆಲಸ ನಿರ್ವಹಿಸುತ್ತದೆ. ಈ ಲಾವಾ ಫೋನ್ 8GB RAM + 8GB ವರ್ಚುವಲ್ RAM ಮತ್ತು 128GB ಸ್ಟೋರೇಜ್‌ ಹೊಂದಿದೆ.

ಲಾವಾ ಬ್ಲೇಜ್ ಡ್ಯುವೋ 5G ಸ್ಮಾರ್ಟ್‌ಫೋನ್‌ 64 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಹೊಂದಿದೆ. ಹಾಗೆಯೇ 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಲಭ್ಯವಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನ್ 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ. ಈ ಲಾವಾ 5G ಮೊಬೈಲ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದನ್ನು ಚಾರ್ಜ್ ಮಾಡಲು, 33W ವೇಗದ ಚಾರ್ಜಿಂಗ್‌ ಸೌಲಭ್ಯ ಒದಗಿಸಲಾಗಿದೆ.

Take a Poll

3. ಮೊಟೊರೊಲಾ ಎಡ್ಜ್ 50 ನಿಯೋ ಸ್ಮಾರ್ಟ್‌ಫೋನ್‌

ಮೊಟೊರೊಲಾ ಎಡ್ಜ್ 50 ನಿಯೋ (Motorola Edge 50 Neo) ಮೊಬೈಲ್ ಎರಡು ಸ್ಟೋರೇಜ್ ಆಯ್ಕೆಗಳಲ್ಲಿ ಮಾರಾಟವಾಗುತ್ತಿದೆ. ಇದು ನಾಲ್ಕು ಬಣ್ಣಗಳಲ್ಲಿ ಬರುತ್ತದೆ. ನೀವು ನಾಟಿಕಲ್ ಬ್ಲೂ, ಲ್ಯಾಟೆ, ಗ್ರಿಸೈಲ್ ಮತ್ತು ಪೊಯಿನ್ಸಿಯಾನಾ ಬಣ್ಣಗಳಲ್ಲಿ ಖರೀದಿಸಬಹುದು. ಈ ಮೊಬೈಲ್ 6.4 ಇಂಚಿನ ಡಿಸ್ಪ್ಲೇಯನ್ನು ಹೊಂದಿದೆ. ಇದು 2670 x 1220 ಪಿಕ್ಸೆಲ್‌ಗಳ ರೆಸಲ್ಯೂಶನ್ ಮತ್ತು 120Hz ರಿಫ್ರೆಶ್ ದರ ಬೆಂಬಲ ಹೊಂದಿದೆ. ಈ ಮೊಟೊರೊಲಾ ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 7300 ಪ್ರೊಸೆಸರ್‌ ಹೊಂದಿದೆ. ಇದು ಆಂಡ್ರಾಯ್ಡ್ 14 ಆಧಾರಿತ ಹೆಲ್ಲೋ ಯುಐ ಓಎಸ್ ಜೊತೆಗೆ ಕೆಲಸ ನಿರ್ವಹಿಸುತ್ತದೆ.

ಮೊಟೊರೊಲಾ ಎಡ್ಜ್ 50 ನಿಯೋ ಸ್ಮಾರ್ಟ್‌ಫೋನ್ OIS ಜೊತೆಗೆ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಹೊಂದಿದೆ.‌ ಇದರೊಂದಿಗೆ 13 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 10 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಲಭ್ಯವಿದೆ. ಈ ಫೋನ್ ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, 32 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ. ಈ ಮೊಬೈಲ್ 4310mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 68W ವೈರ್ಡ್ ಫಾಸ್ಟ್ ಚಾರ್ಜಿಂಗ್ ಮತ್ತು 15W ವೈರ್‌ಲೆಸ್ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಹಾಗೆಯೇ 12GB RAM ಮತ್ತು 512GB ಸ್ಟೋರೇಜ್ ಆಯ್ಕೆ ಹೊಂದಿದೆ.

Smartphones: ಟಾಪ್ ಫೀಚರ್‌ಗಳೊಂದಿಗೆ ಸದ್ದು.. 20000ಕ್ಕಿಂತ ಕಡಿಮೆ ಬೆಲೆ

4. ರಿಯಲ್‌ಮಿ ನಾರ್ಜೊ 70 ಟರ್ಬೊ ಸ್ಮಾರ್ಟ್‌ಫೋನ್‌

ರಿಯಲ್‌ಮಿ ನಾರ್ಜೊ 70 ಟರ್ಬೊ 5G (Realme Narzo 70 Turbo 5G) ಅತ್ಯುತ್ತಮ ಗೇಮಿಂಗ್ ಫೋನ್‌ಗಳಲ್ಲಿ ಒಂದಾಗಿದೆ. ಈ ರಿಯಲ್‌ಮಿ 5G ಸ್ಮಾರ್ಟ್‌ಫೋನ್ 6.67 ಇಂಚಿನ ಓಎಲ್‌ಇಡಿ ಡಿಸ್ಪ್ಲೇ ಹೊಂದಿದೆ. ಇದು 120 Hz ರಿಫ್ರೆಶ್ ದರ ಮತ್ತು 1200 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಬೆಂಬಲ ಹೊಂದಿದೆ. ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಎನರ್ಜಿ 5G ಪ್ರೊಸೆಸರ್‌ ಅನ್ನು ಹೊಂದಿದೆ. ಹಾಗೆಯೇ ಇದು ಆಂಡ್ರಾಯ್ಡ್‌ 14 ಆಧಾರಿತ ರಿಯಲ್‌ಮಿ ಯುಐ 5.0 ನಲ್ಲಿ ಕೆಲಸ ಮಾಡುತ್ತದೆ.

ರಿಯಲ್‌ಮಿ ನಾರ್ಜೊ 70 ಟರ್ಬೊ 5G ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನ್ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಹೊಂದಿದೆ. ಇದರೊಂದಿಗೆ 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಇದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೊನಿನಲ್ಲಿ 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಲಭ್ಯವಿದೆ. ಈ ರಿಯಲ್‌ಮಿ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 45W ಅಲ್ಟ್ರಾ ಫಾಸ್ಟ್ ಚಾರ್ಜಿಂಗ್‌ ಬೆಂಬಲ ಪಡೆದಿದೆ.

5. ಟೆಕ್ನೋ ಪೋವಾ 6 ಪ್ರೊ ಸ್ಮಾರ್ಟ್‌ಫೋನ್

ಟೆಕ್ನೋ ಪೋವಾ 6 ಪ್ರೊ (Tecno Pova 6 Pro) ಮೊಬೈಲ್ ಅತ್ಯುತ್ತಮ ಕ್ಯಾಮೆರಾ ಮತ್ತು ಬ್ಯಾಟರಿ ಬಯಸುವವರಿಗೆ ಉತ್ತಮ ಆಯ್ಕೆಯಾಗಿದೆ. ಈ ಸ್ಮಾರ್ಟ್‌ಫೋನ್‌ 6.78 ಇಂಚಿನ FHD+ ಅಮೋಲೆಡ್‌ ಡಿಸ್ಪ್ಲೇ ಹೊಂದಿದೆ. ಇದು 1,300 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್ ಮತ್ತು 120Hz ರಿಫ್ರೆಶ್ ದರದ ಬೆಂಬಲ ಪಡೆದಿದೆ. ಈ ಟೆಕ್ನೋ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6080 ಪ್ರೊಸೆಸರ್‌ ಬಲದೊಂದಿಗೆ ಕೆಲಸ ನಿರ್ವಹಿಸಲಿದೆ. ಈ ಮೊಬೈಲ್ ಆಂಡ್ರಾಯ್ಡ್‌ 14 ಆಧಾರಿತ HiOS ಹೊಂದಿದೆ. ಇದು 12GB RAM ಮತ್ತು 256GB ಸ್ಟೋರೇಜ್‌ ಆಯ್ಕೆ ಒಳಗೊಂಡಿದೆ.

ಟೆಕ್ನೋ ಪೋವಾ 6 ಪ್ರೊ 5G ಸ್ಮಾರ್ಟ್‌ಫೋನ್ 108 ಮೆಗಾಪಿಕ್ಸೆಲ್‌ ಮುಖ್ಯ ಕ್ಯಾಮೆರಾ ಹೊಂದಿದೆ ಇದರೊಂದಿಗೆ 2 ಮೆಗಾಪಿಕ್ಸೆಲ್‌ ದ್ವಿತೀಯ ಕ್ಯಾಮೆರಾ ಮತ್ತು 0.08 ಮೆಗಾಪಿಕ್ಸೆಲ್‌ ತೃತೀಯ ಲೆನ್ಸ್ ಅಳವಡಿಸಲಾಗಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ, ಇದರಲ್ಲಿ 32 ಮೆಗಾಪಿಕ್ಸೆಲ್‌ ಸೆಲ್ಫಿ ಶೂಟರ್ ಇದೆ. ಈ ಟೆಕ್ನೋ 5G ಮೊಬೈಲ್ 6000mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದಿದೆ. ಇದರೊಂದಿಗೆ 70W ವೈರ್ಡ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.

Best Mobiles in India

English summary
Top 5 Smartphones: Best smartphones available at low prices: Here is the list
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+