ಇವೆ ನೋಡಿ, ಸದ್ಯ ಭಾರೀ ಗಮನ ಸೆಳೆದ ವಿವೋ ಸ್ಮಾರ್ಟ್‌ಫೋನ್‌ಗಳು!
ದೇಶಿಯ ಮೊಬೈಲ್ ಮಾರುಕಟ್ಟೆಯಲ್ಲಿ ವಿವೋ (Vivo) ಕಂಪನಿಯು ತನ್ನ ಭಿನ್ನ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಗುರುತಿಸಿಕೊಂಡಿದೆ. ವಿವೋ ಸಂಸ್ಥೆಯು ಬಜೆಟ್ ದರದ, ಮೀಡ್‌ರೇಂಜ್ ಬೆಲೆಯ ಹಾಗೂ ಹೈ ಎಂಡ್ ಪ್ರೈಸ್‌ಟ್ಯಾಗ್‌ನ ಫೋನ್‌ಗಳ ಆಯ್ಕೆಯನ್ನು ಹೊಂದಿದೆ. ಅದಾಗ್ಯೂ, ವಿವೋ ಸಂಸ್ಥೆಯ ಕೆಲವು ಫೋನ್‌ಗಳು ವಿಶೇಷ ಆಕರ್ಷಣೆ ಪಡೆಯುವಲ್ಲಿ ಸಫಲ ಆಗಿವೆ. ಅವು ಯಾವ ಫೋನ್ ಅಂತೀರಾ?
ಹೌದು, ವಿವೋ ಮೊಬೈಲ್ ಕಂಪನಿಯು ಹಲವು ಫೋನ್‌ಗಳ ಆಯ್ಕೆ ಪಡೆದುಕೊಂಡಿದೆ. ಅವುಗಳಲ್ಲಿ ಇತ್ತೀಚಿನ ವಿವೋ T ಮತ್ತು ವಿವೋ Y ಸರಣಿಯ ಫೋನ್‌ಗಳು ಮಾರುಕಟ್ಟೆಯಲ್ಲಿ ಹೆಚ್ಚಿನ ಗಮನ ಸೆಳೆದಿವೆ. ಈ ಫೋನ್‌ಗಳು ಗ್ರಾಹಕ ಸ್ನೇಹಿ ಬೆಲೆಯನ್ನು ಪಡೆದಿದ್ದು, ಜೊತೆಗೆ ಡಿಸ್‌ಪ್ಲೇ, ಬ್ಯಾಟರಿ, ಪ್ರೊಸೆಸರ್ ಮತ್ತು ಇತರೆ ಆಕರ್ಷಕ ಫೀಚರ್ಸ್‌ಗಳನ್ನು ಒಳಗೊಂಡಿದೆ. ಹಾಗಾದರೆ ಸದ್ಯ ಗಮನ ಸೆಳೆದ ಕೆಲವು ವಿವೋ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ವಿವೋ T1x ಮೊಬೈಲ್ :
ವಿವೋ T1x ಫೋನ್ 1,080 x 2,408 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.58 ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದೆ. ಹಾಗೆಯೇ ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್ ನಲ್ಲಿ ಕೆಲಸ ಮಾಡಲಿದ್ದು, 6GB RAM ಮತ್ತು 128GB ಆಂತರೀಕ ಸ್ಟೋರೇಜ್ ಕೂಡಾ ಹೊಂದಿದೆ. ಜೊತೆಗೆ ಡ್ಯುಯೆಲ್ ರಿಯರ್ ಕ್ಯಾಮೆರಾ ರಚನೆ ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇನ್ನು ಈ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದೆ.
ವಿವೋ Y53s ಮೊಬೈಲ್ :
ವಿವೋ Y53s ಮೊಬೈಲ್ 1080 x 2400 ಪಿಕ್ಸೆಲ್‌ಗಳೊಂದಿಗೆ 6.58 ಇಂಚಿನ ಸ್ಕ್ರೀನ್ ಪಡೆದಿದ್ದು, ಹಾಗೆಯೇ 5000mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದೆ. ಈ ಫೋನ್ ಮೀಡಿಯಾ ಟೆಕ್ ಹಿಲಿಯೋ G80 ಪ್ರೊಸೆಸರ್ ಮೂಲಕ ಕಾರ್ಯನಿರ್ವಹಿಸಲಿದೆ. ಇನ್ನು ಇದು 64 ಮೆಗಾ ಪಿಕ್ಸೆಲ್‌ನ ಮುಖ್ಯ ಕ್ಯಾಮೆರಾ ಸೌಲಭ್ಯ ಪಡೆದಿದ್ದು, ಮುಂಭಾಗದಲ್ಲಿ 16 ಮೆಗಾ ಪಿಕ್ಸೆಲ್ ಕ್ಯಾಮೆರಾವನ್ನು ಒಳಗೊಂಡಿದೆ.
ವಿವೋ T1 ಮೊಬೈಲ್ :
ಈ ಮೊಬೈಲ್ 1,080 x 2,400 ಪಿಕ್ಸೆಲ್ ರೆಸಲ್ಯೂಶನ್ ಒಳಗೊಂಡ 6.67 ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದೆ. ಈ ಫೋನ್ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್ ಪಡೆದಿದ್ದು, 6GB RAM ಮತ್ತು 128GB ಸ್ಟೋರೇಜ್ ಅನ್ನು ಒಳಗೊಂಡಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಪ್ರಾಥಮಿಕ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯದಲ್ಲಿದೆ. ಹಾಗೆಯೇ 5,000mAh ಬ್ಯಾಟರಿ ಜೊತೆ 44W ಫಾಸ್ಟ್ ಚಾರ್ಜಿಂಗ್ ಪಡೆದಿದೆ.
ವಿವೋ Y22 ಮೊಬೈಲ್ :
ವಿವೋ Y22 ಫೋನ್ 6.55 ಇಂಚಿನ ಫುಲ್ ಹೆಚ್‌ಡಿ ಪ್ಲಸ್ LCD ಡಿಸ್‌ಪ್ಲೇ ಯನ್ನು ಪಡೆದಿದೆ. ಇನ್ನು ಈ ಡಿಸ್‌ಪ್ಲೇ 720 x 1612 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ವನ್ನು ಒಳಗೊಂಡಿದೆ. ಹಾಗೆಯೇ ಈ ಫೋನ್ ಮೀಡಿಯಾ ಟೆಕ್ ಹಿಲಿಯೋ G70 ಪ್ರೊಸೆಸರ್ ಬಲದಲ್ಲಿ ಕೆಲಸ ಮಾಡಲಿದೆ.
ವಿವೋ Y56 5G ಮೊಬೈಲ್ :
ವಿವೋ Y56 5G ಸ್ಮಾರ್ಟ್‌ಫೋನ್ 6.58 ಇಂಚಿನ FHD+ ಡಿಸ್‌ಪ್ಲೇ ಅನ್ನು ಪಡೆದಿದ್ದು, ಡಿಸ್‌ಪ್ಲೇಯು 2408 × 1080 ಪಿಕ್ಸೆಲ್ ರೆಸಲ್ಯೂಶನ್ ಹೊಂದಿದೆ. ಜೊತೆಗೆ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸಲಿದ್ದು, ಆಂಡ್ರಾಯ್ಡ್ 13 ಓಎಸ್ ಸಪೋರ್ಟ್ ಇದೆ. ಡ್ಯುಯಲ್ ಕ್ಯಾಮೆರಾ ರಚನೆ ಪಡೆದಿದ್ದು, 50ಎಂಪಿ ಪ್ರಾಥಮಿಕ ಕ್ಯಾಮೆರಾ ಇದೆ. ಅಲ್ಲದೇ ಇದು 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಹೊಂದಿದೆ.


Click it and Unblock the Notifications








