50 ಮೆಗಾಪಿಕ್ಸಲ್‌ ಕ್ಯಾಮೆರಾ ಫೋನ್‌ ಖರೀದಿಸುವಾಗ ಈ ಲಿಸ್ಟ್‌ ಚೆಕ್ ಮಾಡಿರಿ!

|

ಗ್ರಾಹಕರು ಹೊಸದಾಗಿ ಸ್ಮಾರ್ಟ್‌ಫೋನ್‌ ಖರೀದಿಸುವಾಗ ಗಮನಿಸುವ ಪ್ರಮುಖ ಫೀಚರ್ಸ್‌ಗಳಲ್ಲಿ ಕ್ಯಾಮೆರಾ ಬಹು ಮುಖ್ಯ ಭಾಗವಾಗಿದೆ. ಈ ನಿಟ್ಟಿನಲ್ಲಿ ಮೊಬೈಲ್‌ ಸಂಸ್ಥೆಗಳು ಸಹ ಅಧಿಕ ಮೆಗಾ ಪಿಕ್ಸಲ್‌ ಸೆನ್ಸಾರ್‌ ಪ್ರಾಥಮಿಕ ಕ್ಯಾಮೆರಾ ಆಯ್ಕೆಯನ್ನು ನೀಡುತ್ತಿವೆ. ಸದ್ಯ ಮೊಬೈಲ್‌ಗಳಲ್ಲಿ ಡ್ಯುಯಲ್‌ ಕ್ಯಾಮೆರಾ ಮತ್ತು ತ್ರಿವಳಿ ಕ್ಯಾಮೆರಾ ಸೆಟ್‌ಅಪ್‌ ಸಾಮಾನ್ಯ ಆಗಿವೆ. ಅದಾಗ್ಯೂ ಕ್ವಾಡ್‌ ಕ್ಯಾಮೆರಾ ರಚನೆಯ ಫೋನ್‌ಗಳು ಗಮನ ಸೆಳೆದಿವೆ.

50 ಮೆಗಾ ಪಿಕ್ಸಲ್‌ ಸೆನ್ಸಾರ್

ಹೌದು, ಇತ್ತೀಚಿನ ಬಹುತೇಕ ಮೊಬೈಲ್‌ ಸಂಸ್ಥೆಗಳ ಸ್ಮಾರ್ಟ್‌ಫೋನ್‌ಗಳು ಅಧಿಕ ಸೆನ್ಸಾರ್ ಪಡೆದಿದ್ದು, ಆ ಪೈಕಿ ರಿಯಲ್‌ಮಿ ಸಂಸ್ಥೆಯ 50 ಮೆಗಾ ಪಿಕ್ಸಲ್‌ ಸೆನ್ಸಾರ್ ಕ್ಯಾಮೆರಾಗಳು ಕ್ಯಾಮೆರಾ ಪ್ರಿಯರನ್ನು ಸೆಳೆದಿವೆ. ರಿಯಲ್‌ಮಿ ಕಂಪನಿಯು ತನ್ನ ಕೆಲವು ಬಜೆಟ್‌ ಬೆಲೆಯ ಫೋನ್‌ಗಳಲ್ಲಿ ಅತ್ಯುತ್ತಮ ಫೀಚರ್ಸ್‌ಗಳೊಂದಿಗೆ 50 ಮೆಗಾ ಪಿಕ್ಸಲ್‌ ಕ್ಯಾಮೆರಾ ಆಯ್ಕೆ ನೀಡಿದೆ.

ರಿಯಲ್‌ಮಿ ಫೋನ್‌ಗಳ

ಹೀಗಾಗಿ ಫೋನ್ ಖರೀದಿಸುವ ಗ್ರಾಹಕರು ಹೆಚ್ಚಾಗಿ ಕ್ಯಾಮೆರಾ ಸ್ಮಾರ್ಟ್‌ಫೋನ್‌ಗಳತ್ತ ಗಮನ ಹರಿಸುವಂತಾಗಿದೆ. ಹಾಗಾದರೇ ಬಜೆಟ್‌ ಲಭ್ಯವಿರುವ 50 ಮೆಗಾ ಪಿಕ್ಸಲ್‌ ಸೆನ್ಸಾರ್ ಕ್ಯಾಮೆರಾ ಆಯ್ಕೆ ಪಡೆದ ರಿಯಲ್‌ಮಿ ಫೋನ್‌ಗಳ ಫೀಚರ್ಸ್ ಬಗ್ಗೆ ತಿಳಿಯಲು ಮುಂದೆ ಓದಿರಿ.

ರಿಯಲ್‌ಮಿ 9i 5G ಸ್ಮಾರ್ಟ್‌ಫೋನ್‌

ರಿಯಲ್‌ಮಿ 9i 5G ಸ್ಮಾರ್ಟ್‌ಫೋನ್‌

ರಿಯಲ್‌ಮಿ 9i 5G ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 810 5G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಬೆಂಬಲವನ್ನು ಪಡೆದಿದೆ. ಅಲ್ಲದೇ ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ನಲ್ಲಿದೆ. ಇನ್ನು ರಿಯಲ್‌ಮಿ 9i 5G ಸ್ಮಾರ್ಟ್‌ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ಕ್ವಿಕ್ ಚಾರ್ಜ್ ಟೆಕ್ನಾಲಜಿಯನ್ನು ಬೆಂಬಲಿಸಲಿದೆ.

ರಿಯಲ್‌ಮಿ 10 5G ಸ್ಮಾರ್ಟ್‌ಫೋನ್‌

ರಿಯಲ್‌ಮಿ 10 5G ಸ್ಮಾರ್ಟ್‌ಫೋನ್‌

ರಿಯಲ್‌ಮಿ 10 5G ಸ್ಮಾರ್ಟ್‌ಫೋನ್‌ 6.4 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಸೂಪರ್ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಇದು ಸ್ಮಾರ್ಟ್‌ಫೋನ್‌ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಸಾಮರ್ಥ್ಯ ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಅಲ್ಲದೇ ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ನಲ್ಲಿದೆ. ಹಾಗೆಯೇ ರಿಯಲ್‌ಮಿ 10 5G ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 33W ವರೆಗೆ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ರಿಯಲ್‌ಮಿ 9 5G ಸ್ಮಾರ್ಟ್‌ಫೋನ್‌

ರಿಯಲ್‌ಮಿ 9 5G ಸ್ಮಾರ್ಟ್‌ಫೋನ್‌

ರಿಯಲ್‌ಮಿ 9 5G ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್‌ ಡೈಮೆನ್ಸಿಟಿ 810 5G ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 11 ರಿಯಲ್‌ಮಿ UI 2.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಮುಖ್ಯ ಪ್ರಾರಥಮಿಕ ಕ್ಯಾಮೆರಾ ಆಯ್ಕೆ ಪಡೆದಿದೆ. ಇದರೊಂದಿಗೆ ರಿಯಲ್‌ಮಿ 9 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ರಿಯಲ್‌ಮಿ Q3i 5G ಸ್ಮಾರ್ಟ್‌ಫೋನ್‌

ರಿಯಲ್‌ಮಿ Q3i 5G ಸ್ಮಾರ್ಟ್‌ಫೋನ್‌

ರಿಯಲ್‌ಮಿ Q3i 5G ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್‌ ಡೈಮೆನ್ಸಿಟಿ 700 5G ಪ್ರೊಸೆಸರ್ ಹೊಂದಿದೆ. ಜೊತೆಗೆ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಮುಖ್ಯ ಪ್ರಾರಥಮಿಕ ಕ್ಯಾಮೆರಾ ಆಯ್ಕೆ ಪಡೆದಿದೆ. ಇದರೊಂದಿಗೆ ರಿಯಲ್‌ಮಿ Q3i 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

Best Mobiles in India

English summary
Top 5G phones with 50 MP camera from Realme: Check details here.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X