ಫ್ಲ್ಯಾಗಶಿಪ್ ಫೋನ್ ಖರೀದಿಸಬೇಕೆ? ಹಾಗಿದ್ರೆ, ಇಲ್ಲಿವೆ ನೋಡಿ ಬೆಸ್ಟ್ ಮೊಬೈಲ್ಸ್!
ದೇಶಿಯ ಮೊಬೈಲ್ ಮಾರುಕಟ್ಟೆಯಲ್ಲಿ ಫ್ಲ್ಯಾಗ್‌ಶಿಪ್ ಸ್ಮಾರ್ಟ್‌ಫೋನ್‌ಗಳಿಗೆ ಭಾರೀ ಡಿಮ್ಯಾಂಡ್ ಇದೆ. ಸ್ಟೈಲಿಶ್ ಡಿಸೈನ್, ವೃತ್ತಿಪರ ದರ್ಜೆಯ ಬೆಸ್ಟ್ ಕ್ಯಾಮೆರಾಗಳು, ವೇಗದ ಪ್ರೊಸೆಸರ್ ನಂತಹ ಅತ್ಯಾಕರ್ಷಕ ಫೀಚರ್ಸ್ ಗಳಿಂದ ಗಮನ ಸೆಳೆದಿವೆ. ಸದ್ಯ ಭಾರತದ ಮೊಬೈಲ್ ಮಾರುಕಟ್ಟೆಯಲ್ಲಿ ಹಲವು ಬ್ರ್ಯಾಂಡ್‌ಗಳ ಫ್ಲ್ಯಾಗಶಿಪ್ ಫೋನ್‌ಗಳು ಖರೀದಿಗೆ ಲಭ್ಯ ಇವೆ. ಅವುಗಳಲ್ಲಿ ಸ್ಯಾಮ್‌ಸಂಗ್, ಆಪಲ್, ಒನ್‌ಪ್ಲಸ್, ಶಿಯೋಮಿ, ವಿವೋ ಹಾಗೂ ಐಕ್ಯೂ ಸಂಸ್ಥೆಯ ಕೆಲವು ಫ್ಲ್ಯಾಗ್‌ಶಿಪ್ ಸ್ಮಾರ್ಟ್‌ಫೋನ್‌ಗಳು ಸದ್ದು ಮಾಡುತ್ತಿವೆ. ಇವುಗಳ ಬೆಲೆ ದುಬಾರಿ ಎನಿಸಿದರೂ, ಫೀಚರ್ಸ್‌ಗಳಿಂದ ಹೆಚ್ಚಿನ ಆಕರ್ಷಣೆ ಪಡೆದಿವೆ.
ಹೌದು, ದೇಶದ ಮೊಬೈಲ್ ಮಾರುಕಟ್ಟೆಯಲ್ಲಿ ಹಲವು ಫ್ಲ್ಯಾಗ್‌ಶಿಪ್ ಸ್ಮಾರ್ಟ್‌ಫೋನ್‌ಗಳು ಭರ್ಜರಿ ಸೌಂಡ್ ಮಾಡುತ್ತಿವೆ. ಆ ಪೈಕಿ ಸ್ಯಾಮ್‌ಸಂಗ್, ಆಪಲ್, ಒನ್‌ಪ್ಲಸ್, ಶಿಯೋಮಿ, ವಿವೋ ಸಂಸ್ಥೆಯ ಸ್ಮಾರ್ಟ್‌ಫೋನ್‌ಗಳು ಸಂಚಲನ ಸೃಷ್ಠಿ ಮಾಡಿವೆ. ಹಾಗದರೇ ಮಾರುಕಟ್ಟೆಯಲ್ಲಿ ಸಖತ್ ಸದ್ದು ಮಾಡಿರುವ ಕೆಲವು ಅತ್ಯುತ್ತಮ ಫ್ಲ್ಯಾಗ್‌ಶಿಪ್ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಯೋಣ ಬನ್ನಿರಿ.

ಒನ್‌ಪ್ಲಸ್ 12 ಫೋನ್
ಒನ್‌ಪ್ಲಸ್ 12 ಸ್ಮಾರ್ಟ್‌ಫೋನ್ 6.82 ಇಂಚಿನ QHD+ ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇಯು 1440 x 3168 ಪಿಕ್ಸೆಲ್ ಸ್ಕ್ರೀನ್ ಸೂಪರ್ ಕ್ರಿಸ್ಪ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಹಾಗೆಯೇ ಕ್ವಾಲ್ಕಾಮ್ ಸ್ನ್ಯಾಪ್‌ಡ್ರಾಗನ್ 8 ಜೆನ್ 3 SoC ಪ್ರೊಸೆಸರ್ ಪವರ್ ಪಡೆದಿದ್ದು, ಇದು ಆಂಡ್ರಾಯ್ಡ್ 14 ಓಎಸ್ ನಲ್ಲಿ ಕೆಲಸ ನಿರ್ವಹಿಸಲಿದೆ. ಇನ್ನು ಇದು 12GB RAM + 256GB ಹಾಗೂ 16GB RAM + 512GB ವೇರಿಯಂಟ್ ಆಯ್ಕೆ ಪಡೆದಿದೆ.
ಇದಲ್ಲದೇ ಈ ಮೊಬೈಲ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, 50 ಮೆಗಾಪಿಕ್ಸಲ್‌ನ ಮುಖ್ಯ ಕ್ಯಾಮೆರಾ ಹೊಂದಿದೆ. ಇದರೊಂದಿಗೆ 5400mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸಹ ಒಳಗೊಂಡಿದ್ದು, ಇದು 100W ಸೂಪರ್‌ವೂಕ್ ಚಾರ್ಜಿಂಗ್ ಅನ್ನು ಸಪೋರ್ಟ್ ಸಹ ಪಡೆದಿದೆ.
ಶಿಯೋಮಿ 14 ಮೊಬೈಲ್
ಶಿಯೋಮಿ 14 ಸ್ಮಾರ್ಟ್‌ಫೋನ್ 6.3 ಇಂಚಿನ ಕೇಂದ್ರಿತ ಪಂಚ್-ಹೋಲ್ ಫ್ಲಾಟ್ OLED ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇಯು 2670 x 1200 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಲ್ಲಿ ಇದೆ. ಅಲ್ಲದೇ ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 3 SoC ಪ್ರೊಸೆಸರ್ ವೇಗವನ್ನು ಪಡೆದಿದ್ದು, ಇದು ಆಂಡ್ರಾಯ್ಡ್ 14 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ.
ಇನ್ನು ಈ ಫೋನ್ ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇದರೊಂದಿಗೆ ಈ ಫೋನ್ 4,610mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಆಯ್ಕೆಯನ್ನು ಹೊಂದಿದೆ.
ವಿವೋ X100 ಮೊಬೈಲ್
ವಿವೋ X100 ಸ್ಮಾರ್ಟ್‌ಫೋನ್ 6.78 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಹೊಂದಿದ್ದು, ಈ ಡಿಸ್‌ಪ್ಲೇ 2800 x 1260 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 9300SoC ಪ್ರೊಸೆಸರ್ ಪವರ್ ಅನ್ನು ಪಡೆದಿದ್ದು, ಇದಕ್ಕೆ ಅನುಗುಣವಾಗಿ ಆಂಡ್ರಾಯ್ಡ್ 14 ಓಎಸ್ ಸಪೋರ್ಟ್‌ನಲ್ಲಿ ಕೆಲಸ ಮಾಡಲಿದೆ.
ಹಾಗೆಯೇ ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಆಗಿದೆ. ಇದರೊಂದಿಗೆ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಕೂಡಾ ಪಡೆದಿದ್ದು, ಇದಕ್ಕೆ ಪೂರಕವಾಗಿ 120W ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ.


Click it and Unblock the Notifications








