ಕಡಿಮೆ ಬೆಲೆಗೆ ಲಭ್ಯವಿರುವ ಅತ್ಯುತ್ತಮ 5000mAh ಬ್ಯಾಟರಿ ಸ್ಮಾರ್ಟ್‌ಫೋನ್‌ಗಳು!
ಪ್ರಸ್ತುತ ದಿನಗಳಲ್ಲಿ ಎಲ್ಲಾ ಕೆಲಸಗಳಿಗೆ ಮೊಬೈಲ್ ಬೇಕೇಬೇಕು! ಹೀಗಾಗಿ ಅಗತ್ಯ ಡಿವೈಸ್‌ಗಳ ಲಿಸ್ಟ್‌ನಲ್ಲಿ ಮೊಬೈಲ್ ಕೂಡ ಸ್ಥಾನ ಪಡೆದಿದೆ. ಮೊಬೈಲ್ ಖರೀದಿಸುವ ಗ್ರಾಹಕರು ಅವರ ಬಳಕೆಗೆ ಅನುಸಾರವಾಗಿ, ಅತ್ಯುತ್ತಮ ಮೊಬೈಲ್ ಅನ್ನು ಖರೀದಿ ಮಾಡಲು ಮುಂದಾಗುತ್ತಾರೆ. ಆದರೆ, ಬಹುತೇಕ ಗ್ರಾಹಕರು ಕಡಿಮೆ ಬೆಲೆಯಲ್ಲಿ ಲಭ್ಯ ಇರುವ ಉತ್ತಮ ಫೋನ್‌ಗಳನ್ನು ಹುಡುಕುತ್ತಾರೆ. ಅದರಲ್ಲಿಯೂ ಮುಖ್ಯವಾಗಿ 10,000 ರೂ.ಗಳ ಒಳಗಿನ ಫೋನ್‌ಗಳಿಗೆ ಭಾರೀ ಬೇಡಿಕೆ ಇದೆ.
ಹೌದು, ಗ್ರಾಹಕರು ನೂತನ ಮೊಬೈಲ್ ಖರೀದಿಸುವಾಗ ಅದರ ಬೆಲೆ ಬಗ್ಗೆ ಹೆಚ್ಚು ಗಮನಹರಿಸುತ್ತಾರೆ. ಜೊತೆಗೆ ಫೋನಿನಲ್ಲಿ ಲಭ್ಯವಿರುವ ಸೌಲಭ್ಯಗಳು ಹಾಗೂ ಫೀಚರ್ಸ್ ನೋಡುತ್ತಾರೆ. ಪ್ರಸ್ತುತ ಸುಮಾರು 10,000 ರೂ.ಗಳ ಒಳಗೂ ಅತ್ಯುತ್ತಮ ಫೋನ್‌ಗಳು ಮಾರುಕಟ್ಟೆಯಲ್ಲಿ ಖರೀದಿಗೆ ಲಭ್ಯವಿದೆ. ಈ ವಿಭಾಗದಲ್ಲಿಯೂ ಕೆಲವು ಮೊಬೈಲ್‌ಗಳು ಅಗತ್ಯ ಲೀಡಿಂಗ್ ವೈಶಿಷ್ಟ್ಯಗಳನ್ನು ಒಳಗೊಂಡಿವೆ. ಹಾಗಾದ್ರೆ, 10,000 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯವಿರುವ ಕೆಲವು ಅತ್ಯುತ್ತಮ ಫೀಚರ್ಸ್ ಹೊಂದಿರುವ ಫೋನ್‌ಗಳ ಬಗ್ಗೆ ತಿಳಿಯೋಣ ಬನ್ನಿ.

ಲಾವಾ ಬ್ಲೇಜ್ 5G ಸ್ಮಾರ್ಟ್‌ಫೋನ್
ಲಾವಾ ಕಂಪನಿಯ ಲಾವಾ ಬ್ಲೇಜ್ 5G ಮೊಬೈಲ್ 6.65 ಇಂಚಿನ ಡಿಸ್‌ಪ್ಲೇ ರಚನೆ ಅನ್ನು ಪಡೆದುಕೊಂಡಿದೆ. ಹಾಗೆಯೇ ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 700 ಆಕ್ಟಾ ಕೋರ್ ಪ್ರೊಸೆಸರ್ ಪವರ್ ಅನ್ನು ಸಹ ಪಡೆದುಕೊಂಡಿದೆ. ಅಲ್ಲದೇ ಇದು 6 GB RAM + 128GB ಸ್ಟೋರೇಜ್ ಆಯ್ಕೆಯನ್ನು ಸಹ ಪಡೆದುಕೊಂಡಿದೆ. ಇದರ ಮುಖ್ಯವಾಗಿ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಆಗಿದೆ. ಇದರ ಜೊತೆಗೆ 5000mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಇದು ಪಡೆದುಕೊಂಡಿದೆ.
ಟೆಕ್ನೋ ಪಾಪ್ 9 5G ಸ್ಮಾರ್ಟ್‌ಫೋನ್
ಟೆಕ್ನೋ ಮೊಬೈಲ್ ಸಂಸ್ಥೆಯ ಟೆಕ್ನೋ ಪಾಪ್ 9 5G ಮೊಬೈಲ್ ಕೆಲವು ಆಕರ್ಷಕ ಫೀಚರ್ಸ್ ಮೂಲಕ ಗಮನ ಸೆಳದಿದೆ. ಈ ಮೊಬೈಲ್ 6.67 ಇಂಚಿನ ಎಲ್‌ಸಿಡಿ ಡಿಸ್‌ಪ್ಲೇ ರಚನೆ ಅನ್ನು ಪಡೆದುಕೊಂಡಿದೆ. ಹಾಗೆಯೇ ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಪ್ರೊಸೆಸರ್ ಪವರ್ ಅನ್ನು ಸಹ ಪಡೆದುಕೊಂಡಿದೆ. ಅಲ್ಲದೇ ಇದು 4GB RAM + 128GB ಸ್ಟೋರೇಜ್ ಆಯ್ಕೆಯನ್ನು ಸಹ ಪಡೆದುಕೊಂಡಿದೆ. ಹಾಗೆಯೇ ಈ ಫೋನ್ 5000mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಇದು ಪಡೆದುಕೊಂಡಿದೆ. ಹಾಗೆಯೇ ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಪಡೆದುಕೊಂಡಿದೆ.

ಪೊಕೊ M6 5G ಸ್ಮಾರ್ಟ್‌ಫೋನ್
ಪೊಕೊ M6 5G ಮೊಬೈಲ್ 6.74 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಸೌಲಭ್ಯ ಅನ್ನು ಒಳಗೊಂಡಿದೆ. ಅಲ್ಲದೇ ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಸಪೋರ್ಟ್ ಮಾಡಲಿದ್ದು, 600nits ಗರಿಷ್ಠ ಬ್ರೈಟ್‌ನೆಸ್ ಪಡೆದಿದೆ. ಇನ್ನು ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6100+ ಪ್ರೊಸೆಸರ್ ಪವರ್ ಅನ್ನು ಹೊಂದಿದ್ದು, ಇದು ಆಂಡ್ರಾಯ್ಡ್ 13 ಆಧಾರಿತ MIUI 14 ನಲ್ಲಿ ಕೆಲಸ ಮಾಡುತ್ತದೆ.
ಇದರ ಜೊತೆಗೆ ಈ ಮೊಬೈಲ್ 4GB RAM ಮತ್ತು 128GB, 6GB RAM ಮತ್ತು 128GB ಹಾಗೂ 8GB RAM ಮತ್ತು 256GB ಸ್ಟೋರೇಜ್ ವೇರಿಯೆಂಟ್ ಆಯ್ಕೆಯಲ್ಲಿ ಖರೀದಿಗೆ ಸಿಗಲಿದೆ. ಅಲ್ಲದೇ ಈ ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಅನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ 18W ಫಾಸ್ಟ್ ಚಾರ್ಜಿಂಗ್ ಅನ್ನು ಪಡೆದಿದೆ. ಇದು ಡ್ಯುಯಲ್ ಕ್ಯಾಮೆರಾ ರಚನೆ ಸಹ ಇದೆ.


Click it and Unblock the Notifications








