ಕಡಿಮೆ ಬೆಲೆಗೆ ಸ್ಮಾರ್ಟ್‌ಫೋನ್‌ ಖರೀದಿಸಬೇಕೆ?..ಇಲ್ಲಿವೆ ನೋಡಿ ಬೆಸ್ಟ್ ಆಯ್ಕೆ!

|

ಪ್ರಸ್ತುತ ಸ್ಮಾರ್ಟ್‌ಫೋನ್ ಮಾರುಕಟ್ಟೆಯು ವೇಗದಲ್ಲಿ ಮುನ್ನುಗ್ಗುತ್ತಿದ್ದು, ಅದಕ್ಕೆ ಪ್ರತಿಯಾಗಿ ಹೊಸ ಹೊಸ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಗೆ ಪರಿಚಿತವಾಗುತ್ತಿವೆ. ಪ್ರಮುಖ ಕಂಪನಿಗಳು ಅಗ್ಗದ ಪ್ರೈಸ್‌ನಿಂದ ದುಬಾರಿ ಬೆಲೆಯ ವರೆಗೂ ಫೋನ್‌ಗಳನ್ನು ಲಾಂಚ್‌ ಮಾಡುತ್ತ ಸಾಗಿವೆ. ಆದ್ರೆ ಇತ್ತೀಚಿನ ಬಹುತೇಕ ಹೊಸ ಸ್ಮಾರ್ಟ್‌ಫೋನ್‌ಗಳು ಪ್ರೊಸೆಸರ್‌, ಕ್ಯಾಮೆರಾ, ಬ್ಯಾಟರಿ ಲೈಫ್‌ ಮತ್ತು ಡಿಸೈನ್‌ಗೆ ಹೆಚ್ಚಿನ ಮಹತ್ವವನ್ನು ನೀಡುತ್ತಿವೆ.

ಸ್ಮಾರ್ಟ್‌ಫೋನ್‌

ಹೌದು, ಸದ್ಯ ಸ್ಮಾರ್ಟ್‌ಫೋನ್‌ ಕಂಪನಿಗಳು ಬಜೆಟ್‌ ಬೆಲೆಯ ಫೋನಿನಲ್ಲಿಯೇ ಹೆಚ್ಚಿನ ಉನ್ನತ ಫೀಚರ್ಸ್‌ಗಳನ್ನು ಅಳವಡಿಸುತ್ತಿದ್ದು, ಈ ಮೂಲಕ ಗ್ರಾಹಕರನ್ನು ಆಕರ್ಷಿಸುತ್ತಿವೆ. ಸ್ಮಾರ್ಟ್‌ಫೋನ್ ಖರೀದಿಸಲು ಮುಂದಾಗುವ ಗ್ರಾಹಕರಿಗೆ ಮಾರುಕಟ್ಟೆಯಲ್ಲಿ ಹಲವು ಫೋನ್‌ಗಳ ಆಯ್ಕೆಗಳು ಕಾಣಿಸುತ್ತವೆ. ಆದರೆ ಅತ್ಯುತ್ತಮ ಫೀಚರ್ಸ್‌ಗಳನ್ನು ಹೊಂದಿರುವ ಬ್ರ್ಯಾಂಡೆಡ್‌ ಕಂಪನಿಯ ಸ್ಮಾರ್ಟ್‌ಫೋನ್‌ಗಳೆ ಗ್ರಾಹಕರ ಲಿಸ್ಟ್‌ನಲ್ಲಿ ಫಸ್ಟ್‌ ಇರುತ್ತವೆ. ಹಾಗಾದಾರೇ ಸದ್ಯ ಅಗ್ಗದ ಬೆಲೆಯಲ್ಲಿ ಲಭ್ಯವಿರುವ 5 ಉತ್ತಮ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಶಿಯೋಮಿ ರೆಡ್ಮಿ ನೋಟ್ 8

ಶಿಯೋಮಿ ರೆಡ್ಮಿ ನೋಟ್ 8

ಇತ್ತೀಚಿಗಷ್ಟೆ ಬಿಡುಗಡೆ ಆಗಿರುವ ಜನಪ್ರಿಯ 'ರೆಡ್ಮಿ ನೋಟ್ 8' (128GB ಸ್ಟೋರೇಜ್) ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 665 ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದಿದೆ. ಇದರೊಂದಿಗೆ 4,000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಹೊಂದಿದ್ದು, ಹಾಗೆಯೇ ಫೋನ್‌ ಹಿಂಬದಿಯಲ್ಲಿ 48ಎಂಪಿ ಕ್ಯಾಮೆರಾ ಸೆನ್ಸಾರ್‌ ಸೌಲಭ್ಯವನ್ನು ಮುಖ್ಯ ರಿಯರ್‌ ಕ್ಯಾಮೆರಾ ಒಳಗೊಂಡಿದೆ.

ರಿಯಲ್‌ ಮಿ 5

ರಿಯಲ್‌ ಮಿ 5

ದೇಶಿಯ ಮಾರುಕಟ್ಟೆಯಲ್ಲಿ ರಿಯಲ್‌ ಮಿ ಸಂಸ್ಥೆಯು ಹೊಸದಾಗಿ 'ರಿಯಲ್‌ ಮಿ 5' ಸ್ಮಾರ್ಟ್‌ಫೋನ್‌ ಲಾಂಚ್ ಮಾಡಿದ್ದು, ಈ ಸ್ಮಾರ್ಟ್‌ಫೋನ್‌ 4GB RAM ವೇಗದೊಂದಿಗೆ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 665 ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದಿದೆ. ಹಾಗೆಯೇ 5000mAh ಸಾಮರ್ಥ್ಯದ ಬ್ಯಾಟರಿ ಲೈಫ್‌ ಒಳಗೊಂಡಿದೆ. ಇನ್ನೊಂದು ವಿಶೇಷವೆಂದರೇ ಹಿಂಬದಿಯಲ್ಲಿ ಕ್ವಾಡ್‌ ಕ್ಯಾಮೆರಾ ಫೀಚರ್ ಹೊಂದಿದೆ.

ವಿವೋ ಯು10

ವಿವೋ ಯು10

ವಿವೋ ಯು10 ಸ್ಮಾರ್ಟ್‌ಫೋನ್ ಸಹ ಇತ್ತೀಚಿಗಷ್ಟೆ ಮಾರುಕಟ್ಟೆಗೆ ಎಂಟ್ರಿ ಆಗಿದೆ. ಈ ಸ್ಮಾರ್ಟ್‌ಫೋನ್ 4GB RAM ಸಾಮರ್ಥ್ಯವನ್ನು ಪಡೆದಿದ್ದು, ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 665 ಪ್ರೊಸೆಸರ್‌ ವೇಗವನ್ನು ಹೊಂದಿದೆ. ಹಾಗೆಯೇ ಹಿಂಬದಿಯಲ್ಲಿ ತ್ರಿವಳಿ ಕ್ಯಾಮೆರಾ ಸೆಟ್‌ಅಪ್‌ ಆಯ್ಕೆಯನ್ನು ಹೊಂದಿದ್ದು, ಇದರೊಂದಿಗೆ 5000mAh ಸಾಮರ್ಥ್ಯದ ಬ್ಯಾಟರಿ ಲೈಫ್‌ ಹೊಂದಿರುವುದು ಪ್ಲಸ್‌ ಪಾಯಿಂಟ್ ಆಗಿದೆ.

ಮೊಟೊರೊಲಾ ಒನ್‌ ಮ್ಯಾಕ್ರೋ

ಮೊಟೊರೊಲಾ ಒನ್‌ ಮ್ಯಾಕ್ರೋ

'ಮೊಟೊರೊಲಾ ಒನ್‌ ಮ್ಯಾಕ್ರೋ' ಸ್ಮಾರ್ಟ್‌ಫೋನ್‌ 'ಮೊಟೊ' ಸಂಸ್ಥೆಯ ನೂತನ ಫೋನಾಗಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್‌ ಹಿಲಿಯೋ P70 ಪ್ರೊಸೆಸರ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಜೊತೆಗೆ 4,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ ಫೋಟೊಗ್ರಫಿಗೆ ಅತ್ಯುತ್ತಮ ಪ್ಲಾಟ್‌ಫಾರ್ಮ್‌ ಎನಿಸಲಿದೆ.

ರೆಡ್ಮಿ ನೋಟ್‌ 7S

ರೆಡ್ಮಿ ನೋಟ್‌ 7S

ಶಿಯೋಮಿಯ ರೆಡ್ಮಿ ನೋಟ್ 7S ಸ್ಮಾರ್ಟ್‌ಫೋನ್ ಸಹ ಹಿಂಬದಿಯಲ್ಲಿ 48ಎಂಪಿ ಕ್ಯಾಮೆರಾ ಸೆನ್ಸಾರ್‌ ಹೊಂದಿದ್ದು, ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 660 ಪ್ರೊಸೆಸರ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದರೊಂದಿಗೆ 4,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದ್ದು, ಕ್ಯಾಮೆರಾದ ಗುಣಮಟ್ಟವು ಉತ್ತಮವಾಗಿದೆ.

Best Mobiles in India

English summary
Budget smartphones have been perhaps the best selling markets in the country for quite some time and for good reason. to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X