Home
ಮೊಬೈಲ್

ವರ್ಷದ ಕೊನೆಯಲ್ಲಿ ಭಾರೀ ಸದ್ದು ಮಾಡಿರುವ ಸ್ಮಾರ್ಟ್‌ಫೋನ್‌ಗಳ ಲಿಸ್ಟ್‌ ಇಲ್ಲಿದೆ

ಸ್ಮಾರ್ಟ್‌ಫೋನ್‌ ಪ್ರತಿಯೊಬ್ಬರ ಅಗತ್ಯ ಸಾಧನ ಎನಿಸಿದ್ದು, ಫೋನ್‌ ಮೂಲಕವೇ ಅನೇಕ ಆನ್‌ಲೈನ್‌ ಕೆಲಸಗಳು ನಡೆಯುತ್ತವೆ. ಹೀಗಾಗಿ ಮಾರುಕಟ್ಟೆಯಲ್ಲಿ ಸ್ಮಾರ್ಟ್‌ಫೋನಗಳು ಭಾರೀ ಡಿಮ್ಯಾಂಡ್‌ನಲ್ಲಿ ಕಾಣಿಸಿಕೊಂಡಿವೆ. ಅಲ್ಲದೇ ಮೊಬೈಲ್‌ ಸಂಸ್ಥೆಗಳು ಕೂಡಾ ಹೊಸ ಮಾದರಿಯ ಫೋನ್‌ಗಳನ್ನು ಪರಿಚಯಿಸುತ್ತಾ ಮುನ್ನಡೆದಿವೆ. ಅಂದಹಾಗೆ ಮಾರುಕಟ್ಟೆಗೆ ಎಂಟ್ರಿ ಕೊಡುವ ಎಲ್ಲ ಮೊಬೈಲ್‌ಗಳು ಜನಪ್ರಿಯತೆ ಪಡೆಯುವುದಿಲ್ಲ. ಅದಾಗ್ಯೂ, ಕೆಲವು ಮೊಬೈಲ್‌ಗಳು ಅಬ್ಬರಿಸುತ್ತವೆ.

ಹೌದು, ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಪೈಪೋಟಿ ಜೋರಾಗಿದೆ. ಹೀಗಾಗಿ ಮೊಬೈಲ್‌ ಸಂಸ್ಥೆಗಳು ತಮ್ಮ ನೂತನ ಫೋನ್‌ಗಳಲ್ಲಿ ಅಪ್‌ಡೇಟ್‌ ಫೀಚರ್ಸ್ ಮತ್ತು ಇತ್ತೀಚಿನ ಟ್ರೆಂಡಿಂಗ್ ಫೀಚರ್ಸ್‌ಗಳನ್ನು ನೀಡುತ್ತವೆ. ಅದಾಗ್ಯೂ, ಪ್ರೈಸ್‌ಟ್ಯಾಗ್‌ ಮತ್ತು ಆಕರ್ಷಕ ಫೀಚರ್ಸ್‌ ಒಳಗೊಂಡ ಮೊಬೈಲ್‌ಗಳು ಹೆಚ್ಚು ಗಮನ ಸೆಳೆಯುತ್ತವೆ. ಹಾಗಾದರೆ ಪ್ರಸ್ತುತ ಈ ಡಿಸೆಂಬರ್‌ ತಿಂಗಳಿನ ಕೊನೆಯಲ್ಲಿ ಮಾರುಕಟ್ಟೆಯಲ್ಲಿ ಸದ್ದು ಮಾಡುತ್ತಿರುವ (trending) ಫೋನ್‌ಗಳ ಪಟ್ಟಿ ಇಲ್ಲಿದೆ ಮುಂದೆ ಓದಿರಿ.

ವರ್ಷದ ಕೊನೆಯಲ್ಲಿ ಭಾರೀ ಸದ್ದು ಮಾಡಿರುವ ಸ್ಮಾರ್ಟ್‌ಫೋನ್‌ಗಳ ಲಿಸ್ಟ್‌ ಇಲ್ಲಿದೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A55 5G

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A55 5G ( Samsung Galaxy A55 ) ಮೊಬೈಲ್‌ 6.6 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಸೂಪರ್‌ ಅಮೊಲೆಡ್‌ ಡಿಸ್‌ಪ್ಲೇ ಅನ್ನು ಹೊಂದಿದೆ. ಅದೇ ರೀತಿ ಈ ಫೋನ್‌ ಎಕ್ಸಿನೋಸ್ 1480 SoC ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಇದಕ್ಕೆ ಸಪೋರ್ಟ್‌ ಆಗಿ AMD Xclipse 530 GPU ಸಪೋರ್ಟ್‌ ಹಾಗೂ ಆಂಡ್ರಾಯ್ಡ್ 14 ಓಎಸ್‌ ಸಪೋರ್ಟ್‌ ಕಾಣಬಹುದಾಗಿದೆ.

ಅಲ್ಲದೇ ಸ್ಯಾಮ್‌ಸಂಗ್‌ ಸಂಸ್ಥೆಯ ಈ ಫೋನ್‌ ಮೂರು ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದ್ದು, ಇದರ ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸೌಲಭ್ಯದಲ್ಲಿ ಇದೆ. ಈ ಫೋನ್‌ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ 25 W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಸಹ ಪಡೆದುಕೊಂಡಿದೆ.

ವಿವೋ X200 ಪ್ರೊ

ವಿವೋ X200 ಪ್ರೊ (vivo X200 Pro) ಮೊಬೈಲ್‌ 6.78 ಇಂಚಿನ AMOLED ಡಿಸ್‌ಪ್ಲೇ ಅನ್ನು ಹೊಂದಿದ್ದು, ಇದು ಡಿಸ್‌ಪ್ಲೇ 1260 x 2800 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಹೊಂದಿದೆ. ಅಲ್ಲದೇ ಈ ಮೊಬೈಲ್‌ ಮೀಡಿಯಾಟೆಕ್ ಡೈಮೆನ್ಸಿಟಿ 9400 ಪ್ರೊಸೆಸರ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ ಕೂಡಾ ಪಡೆದಿದೆ. ಹಾಗೆಯೇ ಇದು ಮೊದಲ ಕ್ಯಾಮೆರಾವು 200 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯ ಪಡೆದಿದ್ದು, ಹಾಗೆಯೇ 32 ಮೆಗಾ ಪಿಕ್ಸಲ್‌ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ವ್ಯವಸ್ಥೆ ಪಡೆದಿದೆ. ಅಲ್ಲದೇ ಇದು 6000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 ಅಲ್ಟ್ರಾ

ದೈತ್ಯ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 ಅಲ್ಟ್ರಾ (Samsung Galaxy S24 Ultra) ಫೋನ್‌ 6.8 ಇಂಚಿನ ಡೈನಾಮಿಕ್ AMOLED 2X ಡಿಸ್‌ಪ್ಲೇ ಅನ್ನು ಹೊಂದಿದ್ದು, ಇದು ಡಿಸ್‌ಪ್ಲೇ 3120 x 1440 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಹೊಂದಿದೆ. ಅಲ್ಲದೇ ಈ ಮೊಬೈಲ್‌ ಸ್ನಾಪ್‌ಡ್ರಾಗನ್ 8 ಜನ್‌ 3 SoC ಪ್ರೊಸೆಸರ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ ಕೂಡಾ ಪಡೆದಿದೆ. ಹಾಗೆಯೇ ಇದು ಮೊದಲ ಕ್ಯಾಮೆರಾವು 200 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಅಲ್ಲದೇ 45W ಫಾಸ್ಟ್‌ ಚಾರ್ಜಿಂಗ್‌ ಸಪೋರ್ಟ್‌ ಹಾಗೂ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದೆ.

Best Mobiles in India

English summary
Top Trending Mobiles of Year End week 2024. check mobiles list, Specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+