Home
ಮೊಬೈಲ್

ಸದ್ಯ ಮಾರುಕಟ್ಟೆಯಲ್ಲಿ ಟ್ರೆಂಡಿಂಗ್‌ನಲ್ಲಿ ಕಾಣಿಸಿಕೊಂಡ ಮೊಬೈಲ್‌ಗಳು!

ಪ್ರತಿಷ್ಠಿತ ಮೊಬೈಲ್‌ ಸಂಸ್ಥೆಗಳು ಮಾರುಕಟ್ಟೆಯಲ್ಲಿ ತನ್ನ ಹೊಸ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತ ಮುನ್ನಡೆದಿವೆ. ಅವುಗಳಲ್ಲಿ ಕೆಲವು ಸಂಸ್ಥೆಗಳು ಬಜೆಟ್‌ ದರದಲ್ಲಿ ಲಾಂಚ್ ಮಾಡಿದರೆ, ಮತ್ತೆ ಕೆಲವು ಸಂಸ್ಥದೆಗಳು ಹೈ ಎಂಡ್ ಮಾದರಿಯ ಫೋನ್‌ಗಳನ್ನು ಪರಿಚಯಿಸುತ್ತವೆ. ಆದರೆ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಕೆಲವು ಫೋನ್‌ಗಳು ಮಾತ್ರ ಲೀಡಿಂಗ್‌ನಲ್ಲಿ ಕಾಣಿಸಿಕೊಳ್ಳುತ್ತವೆ.

ಹೌದು, ಮಾರುಕಟ್ಟೆಯಲ್ಲಿ ಬಿಡುಗಡೆಯಾಗುವ ಫೋನ್‌ಗಳಲ್ಲಿ ಕೆಲವು ಅವುಗಳ ಆಕರ್ಷಕ ಫೀಚರ್ಸ್‌ಗಳಿಂದ, ಮತ್ತೆ ಕೆಲವು ಬೆಲೆಯಿಂದ ಹಾಗೂ ಕೆಲವು ಕ್ಯಾಮೆರಾ ಆಯ್ಕೆಯಿಂದ ಹೆಚ್ಚಿನ ಗಮನ ಸೆಳೆಯುತ್ತವೆ. ಸದ್ಯ (ಜೂನ್ ಆರಂಭದಲ್ಲಿ) ಈ ರೀತಿ ಸದ್ಯ ಮೊಬೈಲ್‌ ಮಾರುಕಟ್ಟೆಯಲ್ಲಿ ಲೀಡಿಂಗ್‌ನಲ್ಲಿ ಕಾಣಿಸಿಕೊಂಡಿರುವ ಕೆಲವು ಸ್ಮಾರ್ಟ್‌ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸದ್ಯ ಮಾರುಕಟ್ಟೆಯಲ್ಲಿ ಟ್ರೆಂಡಿಂಗ್‌ನಲ್ಲಿ ಕಾಣಿಸಿಕೊಂಡ ಮೊಬೈಲ್‌ಗಳು!

ಸ್ಯಾಮ್‌ಸಂಗ್ ಗ್ಯಾಲಕ್ಸಿ A54 5G : ಈ ಸ್ಮಾರ್ಟ್‌ಫೋನ್ 6.4 ಇಂಚಿನ ಅಮೋಲೆಡ್‌ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಈ ಫೋನ್ ಎಕ್ಸಿನೋಸ್ 1380SoC ಪ್ರೊಸೆಸರ್‌ ಮೂಲಕ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್ 13 ಆಧಾರಿತ ಒನ್‌ UI 5.1 ರನ್‌ ಮಾಡಲಿದೆ. ಈ ಫೋನ್ ಟ್ರಿಪಲ್‌ ರಿಯರ್‌ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದ್ದು, ಇದರಲ್ಲಿ 50ಎಂಪಿ ಪ್ರಾಥಮಿಕ ಕ್ಯಾಮೆರಾ, 12ಎಂಪಿ ಅಲ್ಟ್ರಾ ವೈಡ್ ಲೆನ್ಸ್ ಆಯ್ಕೆ ಇದೆ. ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ.

ರಿಯಲ್‌ಮಿ 11 ಪ್ರೊ+ 5G ಫೀಚರ್ಸ್‌ : ಈ ಸ್ಮಾರ್ಟ್‌ಫೋನ್‌ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಕರ್ವ್ಡ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,080 x 2,412 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಪಡೆದುಕೊಂಡಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 7050 SoC ಪ್ರೊಸೆಸರ್‌ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರ ಮುಖ್ಯ ಕ್ಯಾಮೆರಾ 200 ಮೆಗಾ ಪಿಕ್ಸೆಲ್ ಸ್ಯಾಮ್‌ಸಂಗ್‌ HP3 ಸೆನ್ಸಾರ್‌ ಹೊಂದಿದೆ. ಜೊತೆಗೆ 100W SuperVOOC ವೇಗದ ಚಾರ್ಜಿಂಗ್ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಅಲ್ಟ್ರಾ : ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಅಲ್ಟ್ರಾ ಫೋನ್‌ QHD+ ಡೈಮಂಡ್‌ ಅಮೋಲೆಡ್‌ ಜೊತೆಗೆ 6.8 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್‌ 8 ಜೆನ್‌ 2 ಪ್ರೊಸೆಸರ್‌ ಅನ್ನು ಪಡೆದಿದೆ. ಈ ಫೋನ್ ಕ್ವಾಡ್‌ ಕ್ಯಾಮೆರಾ ರಚನೆ ಹೊಂದಿದ್ದು, ಪ್ರಾಥಮಿಕ ಕ್ಯಾಮೆರಾ 200 ಮೆಗಾ ಪಿಕ್ಸಲ್‌ ಸೆನ್ಸಾರ್‌ನಲ್ಲಿದೆ. ಇನ್ನು ಈ ಫೋನಿನ ಬ್ಯಾಟರಿ 5,000mAh ಸಾಮರ್ಥ್ಯದಲ್ಲಿದೆ.

ರೆಡ್ಮಿ ನೋಟ್‌ 12 ಪ್ರೊ 5G : ಈ ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾಟೆಕ್‌ ಡೈಮೆನ್ಸಿಟಿ 1080SoC ಪ್ರೊಸೆಸರ್‌ ಪಡೆದಿದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಪಡೆದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೋನಿ IMX766 ಸೆನ್ಸಾರ್‌ ಹೊಂದಿದ್ದು, 5,000mAh ಬ್ಯಾಟರಿ ಬ್ಯಾಕ್‌ಅಪ್‌ ಹೊಂದಿದ್ದು, ಇದು 67W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A34 5G ಫೋನ್ : ಈ ಸ್ಮಾರ್ಟ್‌ಫೋನ್‌ 6.6 ಇಂಚಿನ ಹೆಚ್‌ಡಿ ಪ್ಲಸ್‌ ಸೂಪರ್‌ ಅಮೊಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 1080 6nm ಪ್ರೊಸೆಸರ್ ಅನ್ನು ಒಳಗೊಂಡಿದ್ದು, 8GB + 128GB ಮತ್ತು 8GB + 256GB ಸ್ಟೋರೇಜ್‌ ಆಯ್ಕೆ ಪಡೆದಿದೆ. ತ್ರಿವಳಿ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಮುಖ್ಯ ಕ್ಯಾಮೆರಾವು 48 ಮೆಗಾ ಪಿಕ್ಸೆಲ್ ಸೆನ್ಸಾರ್‌ ಪಡೆದಿದೆ.

ಟೆಕ್ನೋ ಸ್ಪಾರ್ಕ್‌ 10 5G : ಈ ಮೊಬೈಲ್‌ 6.6 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇ 720 x 1612 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ 7nm ಮೀಡಿಯಾ ಟೆಕ್ ಡೈಮೆನ್ಸಿಟಿ 6020 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಆಗಿದೆ. ಅಲ್ಲದೇ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

Best Mobiles in India

English summary
Top Trending Smartphones of June 2023: check mobile list.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+