ಸದ್ಯ ಟ್ರೆಂಡಿಂಗ್‌ನಲ್ಲಿ ಕೆಲವು ಬೆಸ್ಟ್ ವಿವೋ ಸ್ಮಾರ್ಟ್‌ಫೋನ್‌ಗಳ ಲಿಸ್ಟ್ ಇಲ್ಲಿದೆ
ವಿವೋ (Vivo) ಸಂಸ್ಥೆಯು ದೇಶಿಯ ಮೊಬೈಲ್ ಮಾರುಕಟ್ಟೆಯಲ್ಲಿ ಭಿನ್ನ ಶ್ರೇಣಿಯ ಮೊಬೈಲ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಅದರಲ್ಲಿಯೂ ವಿವೋ ಸಂಸ್ಥೆಯು ಬಜೆಟ್ ಬೆಲೆಯ ಹಾಗೂ ಮೀಡ್‌ರೇಂಜ್ ದರದ ಮೊಬೈಲ್‌ಗಳುಹೆಚ್ಚಿನ ಬೇಡಿಕೆಯಲ್ಲಿ ಇವೆ. ಮುಖ್ಯವಾಗಿ ಇತ್ತೀಚಿನ ಕೆಲವು ಮೊಬೈಲ್‌ಗಳಂತೂ ಗ್ರಾಹಕರು ವಾವ್ ಎನ್ನುವಂತಹ ಆಕರ್ಷಕ ಲುಕ್ ಪಡೆದಿದ್ದು ಜೊತೆಗೆ ಅತ್ಯುತ್ತಮ ಫೀಚರ್ಸ್ ಮೂಲಕ ಸಹ ಗಮನ ಸೆಳದಿವೆ.
ಹೌದು, ವಿವೋ (Vivo) ಮೊಬೈಲ್ ಕಂಪನಿಯು ಹಲವು ಫೋನ್‌ಗಳ ಆಯ್ಕೆ ಪಡೆದುಕೊಂಡಿದೆ. ಅವುಗಳಲ್ಲಿ ಇತ್ತೀಚಿನ ವಿವೋ T ಸರಣಿಯ ಇತ್ತೀಚಿನ ಮೊಬೈಲ್‌ಗಳು ಮಾರುಕಟ್ಟೆಯಲ್ಲಿ ಭಾರೀ ಡಿಮ್ಯಾಂಡಿನಲ್ಲಿ ಕಾಣಿಸಿಕೊಂಡಿವೆ. ಅಂದಹಾಗೆ ಈ T ಸರಣಿಯ ಫೋನ್‌ಗಳು ಗ್ರಾಹಕ ಸ್ನೇಹಿ ಬೆಲೆಯನ್ನು ಪಡೆದಿದ್ದು, ಅಲ್ಲದೇ ಡಿಸ್‌ಪ್ಲೇ, ಬ್ಯಾಟರಿ, ಪ್ರೊಸೆಸರ್ ಮತ್ತು ಇತರೆ ಆಕರ್ಷಕ ಫೀಚರ್ಸ್‌ಗಳನ್ನು ಪಡೆದಿರುವುದು ಪ್ಲಸ್ ಪಾಯಿಂಟ್ ಎನಿಸಿದೆ. ಹಾಗಾದರೆ ಟ್ರೆಂಡಿಂಗ್‌ನಲ್ಲಿ ಇರುವ ವಿವೋದ ಮೊಬೈಲ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ವಿವೋ T3 ಅಲ್ಟ್ರಾ ಸ್ಮಾರ್ಟ್‌ಫೋನ್
ವಿವೋ T3 ಅಲ್ಟ್ರಾ ಸ್ಮಾರ್ಟ್‌ಫೋನ್ 6.78 ಇಂಚಿನ 3D ಕರ್ವ್ ಹೆಚ್‌ಡಿ+ ಅಮೋಲೆಡ್ ಡಿಸ್‌ಪ್ಲೇ ಅನ್ನು ಪಡೆದಿದ್ದು, ಇದು 2800 x 1260 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಹೊಂದಿದೆ. ಅಲ್ಲದೇ ಈ ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 9200+ SoC ಚಿಪ್‌ಸೆಟ್ ಪ್ರೊಸೆಸರ್ ಬಲದಲ್ಲಿ ಕಾರ್ಯ ನಿರ್ವಹಿಸಲಿದೆ.
ಹಾಗೆಯೇ ಇದು ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಜೊತೆಗೆ ಈ ಮೊಬೈಲ್ 5500 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಸಹ ಪಡೆದಿದ್ದು, ಇದಕ್ಕೆ ಅನುಗುಣವಾಗಿ 80W ಫಾಸ್ಟ್ ಚಾರ್ಜಿಂಗ್ ಬೆಂಬಲ ಸಹ ಇದೆ.
ವಿವೋ T3 ಪ್ರೊ 5G - ಸ್ಮಾರ್ಟ್‌ಫೋನ್
ವಿವೋ T3 ಪ್ರೊ 5G ಸ್ಮಾರ್ಟ್‌ಫೋನ್ 6.67 ಇಂಚಿನ 3D ಕರ್ವ್ಡ್ ಅಮೋಲೆಡ್ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, ಇದು 2400 × 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್ ಸ್ನಾಪ್‌ಡ್ರಾಗನ್ 7 ಜೆನ್ 3 SoC ಪ್ರೊಸೆಸರ್ ಬಲದಲ್ಲಿ ಕೆಲಸ ನಿರ್ವಹಿಸಲಿದೆ.
ಅಲ್ಲದೇ ಇದು ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದ್ದು, ಇದರ ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಜೊತೆಗೆ 5500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಸಹ ಪಡೆದುಕೊಂಡಿದ್ದು, ಇದಕ್ಕೆ ಅನುಗುಣವಾಗಿ 80W ಫಾಸ್ಟ್ ಚಾರ್ಜಿಂಗ್ ಬೆಂಬಲ ಸಹ ಇದೆ.
ವಿವೋ T3 ಲೈಟ್ 5G - ಸ್ಮಾರ್ಟ್‌ಫೋನ್
ವಿವೋ T3 ಲೈಟ್ 5G ಮೊಬೈಲ್ 6.56 ಇಂಚಿನ ಫುಲ್ ಹೆಚ್‌ಡಿ+ ಅಮೋಲೆಡ್ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, ಇದು 2400 × 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಹೊಂದಿದೆ. ಅಲ್ಲದೇ ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್ ಪ್ರೊಸೆಸರ್ ಬಲದಲ್ಲಿ ಕೆಲಸ ನಿರ್ವಹಿಸಲಿದೆ.
ಹಾಗೆಯೇ ಈ ಫೋನ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದ್ದು, ಇದರ ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಜೊತೆಗೆ ಈ ಮೊಬೈಲ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಸಹ ಪಡೆದಿದ್ದು, ಇದಕ್ಕೆ ಅನುಗುಣವಾಗಿ 15W ಫಾಸ್ಟ್ ಚಾರ್ಜಿಂಗ್ ಬೆಂಬಲ ಸಹ ಇದೆ.


Click it and Unblock the Notifications








