Home
ಮೊಬೈಲ್

ಸದ್ಯದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿರುವ 5G ಸ್ಮಾರ್ಟ್‌ಫೋನ್‌ಗಳು!

ಪ್ರಸ್ತುತ ದಿನಗಳಲ್ಲಿ ಸ್ಮಾರ್ಟ್‌ಫೋನ್‌ಗಳ ಬಳಕೆ ಹೆಚ್ಚಾಗುತ್ತಿದೆ. ಇದೇ ಕಾರಣಕ್ಕೆ ಮಾರುಕಟ್ಟೆಯಲ್ಲಿ ಹಲವು ಕಂಪೆನಿಗಳು ತಮ್ಮ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿವೆ. ಸ್ಯ ಮಾರುಕಟ್ಟೆಯಲ್ಲಿ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳ ಭರಾಟೆ ನಡೆಯುತ್ತಲೇ ಇದೆ. ಕಳೆದ ತಿಂಗಳು ಕೂಡ ಹಲವು ಹೊಸ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಗೆ ಎಂಟ್ರಿ ನೀಡಿವೆ. ಇನ್ನು ಏಪ್ರಿಲ್‌ ತಿಂಗಳಲ್ಲಿಯೂ ಹಲವು ಜನಪ್ರಿಯ ಸ್ಮಾರ್ಟ್‌ಫೋನ್‌ಗಳು ಬಿಡುಗಡೆ ಆಗುವ ನಿರೀಕ್ಷೆ ಇದೆ.

ಹೌದು, ಕಳೆದ ಕೆಲವು ವರ್ಷಗಳಿಂದ ಬಜೆಟ್‌ ಬೆಲೆಯಿಂದ ಹಿಡಿದು ಹೈ ಎಂಡ್‌ ಮಾದರಿಯ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಗೆ ಎಂಟ್ರಿ ನೀಡುತ್ತಲೇ ಇವೆ. ಇವುಗಳಲ್ಲಿ 5G ನೆಟ್‌ವರ್ಕ್‌ ಬೆಂಬಲಿಸುವ ಸ್ಮಾರ್ಟ್‌ಫೊನ್‌ಗಳು ಕೂಡ ಸೇರಿವೆ. ಭಾರತದಲ್ಲಿ 5G ನೆಟ್‌ವರ್ಕ್‌ ಇನ್ನು ಲಭ್ಯವಿಲ್ಲವಾದರೂ 5G ಸ್ಮಾರ್ಟ್‌ಫೋನ್‌ಗಳ ಬಿಡುಗಡೆ ಮಾತ್ರ ಆಗುತ್ತಲೇ ಇವೆ. ಸದ್ಯ ಏಪ್ರಿಲ್‌ ತಿಂಗಳಲ್ಲಿಯೂ 5G ಬೆಂಬಲಿತ ಸ್ಮಾರ್ಟ್‌ಫೋನ್‌ಗಳು ಎಂಟ್ರಿ ನೀಡಲು ಸಿದ್ಧವಾಗಿವೆ. ಹಾಗಾದ್ರೆ ಏಪ್ರಿಲ್‌ ತಿಂಗಳಲ್ಲಿ ಭಾರತದಲ್ಲಿ ಬಿಡುಗಡೆ ಆಗಲಿರುವ 5G ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಮಿ 11 ಅಲ್ಟ್ರಾ

ಮಿ 11 ಅಲ್ಟ್ರಾ

ಏಪ್ಇಲ್‌ ತಿಂಗಳು ಭಾರತದಲ್ಲಿ ಬಿಡುಗೆ ಆಗಲಿರುವ ಪ್ರಮುಖ ಸ್ಮಾರ್ಟ್‌ಫೋನ್‌ಗಳಲ್ಲಿ ಶಿಯೋಮಿ ಮಿ 11 ಅಲ್ಟ್ರಾ ಕೂಡ ಒಂದಾಗಿದೆ. ಮಿ 11 ಅಲ್ಟ್ರಾ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಏಪ್ರಿಲ್ 23 ಕ್ಕೆ ಬಿಡುಗಡೆ ಆಗಲಿದೆ ಎಂದು ಹೇಳಲಾಗಿದೆ. ಇನ್ನು ಮಿ 11 ಅಲ್ಟ್ರಾ ಸ್ಮಾರ್ಟ್‌ಫೋನ್‌ 1,440 x 3,200 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.81 ಇಂಚಿನ 2K WQHD ಡಿಸ್‌ಪ್ಲೇಯನ್ನು ಹೊಂದಿದ್ದು, E4 ಅಮೋಲೆಡ್ ಕ್ವಾಡ್-ಕರ್ವ್ಡ್ ಅಮೋಲೆಡ್ ಡಿಸ್ಪ್ಲೇಯನ್ನು ಹೊಂದಿದೆ. ಇದು ಸ್ನಾಪ್‌ಡ್ರಾಗನ್ 888 ಪ್ರೊಸೆಸರ್ ಹೊಂದಿದ್ದು, 12GB ವರೆಗೆ RAM ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿರಲಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 67W ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M42 5G

ಸ್ಯಾಮ್‌ಸಂಗ್ ಗ್ಯಾಲಕ್ಸಿ M42 5G

ಭಾರತದಲ್ಲಿ ಸದ್ಯದಲ್ಲೇ ಬಿಡುಗಡೆ ಆಗಲಿರುವ ಸ್ಮಾರ್ಟ್‌ಫೋನ್‌ಗಳಲ್ಲಿ ಗ್ಯಾಲಕ್ಸಿ M42 5G ಕೂಡ ಒಂದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.6-ಇಂಚಿನ HD + AMOLED ಪ್ಯಾನಲ್ ಅನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 750G ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64MP ಸೆನ್ಸಾರ್‌ ಹೊಂದಿದೆ. ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಸಹ ಪಡೆದುಕೊಂಡಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M62 5G

ಸ್ಯಾಮ್‌ಸಂಗ್ ಗ್ಯಾಲಕ್ಸಿ M62 5G

ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಏಪ್ರಿಲ್‌ ತಿಂಗಳಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M62 5G ಸ್ಮಾರ್ಟ್‌ಫೋನ್‌ ಕೂಡ ಬಿಡುಗಡೆ ಆಗಲಿದೆ. ಇದು ಏಪ್ರಿಲ್ ಮೊದಲ ವಾರದಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.7 ಇಂಚಿನ ಸೂಪರ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಅಲ್ಲದೆ ಇದು ಎಕ್ಸಿನೋಸ್ 9825SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಅನ್ನು ಹೊಂದಿದೆ. ಇದು ಕ್ಯಾಮೆರಾ ಕ್ಯಾಮೆರಾ ಸೆಟಪ್‌ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಜೊತೆಗೆ 7000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದರ ಬೆಲೆ 32,000 ರೂ ಇರಲಿದೆ ಎಂದು ಅಂದಾಜಿಸಲಾಗಿದೆ.

ಮೊಟೊರೊಲಾ ಎಡ್ಜ್‌ S

ಮೊಟೊರೊಲಾ ಎಡ್ಜ್‌ S

ಮೊಟೊರೊಲಾ ಎಡ್ಜ್ S ಸ್ಮಾರ್ಟ್‌ಫೋನ್‌ ಸದ್ಯದಲ್ಲೇ ಭಾರತದಲ್ಲಿ ಬಿಡುಗಡೆ ಆಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.7-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇ 21: 9 ರಚನೆಯ ಅನುಪಾತ, 90Hz ರಿಫ್ರೆಶ್ ದರ ಹೊಂದಿರಲಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 870SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಪಡದುಕೊಂಡಿದ್ದು, 20W ವೇಗದ ಚಾರ್ಜ್ ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್‌ಗೆ ಭಾರತದಲ್ಲಿ ಸುಮಾರು 23,000 ರೂ. ಬೆಲೆ ಇರುವ ಸಾಧ್ಯತೆ ಇದೆ.

Best Mobiles in India

English summary
Top upcoming 5G smartphones launching in April 2021.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+