ವಿವೋ T ಸರಣಿಯ ಇತ್ತೀಚಿನ ಬೆಸ್ಟ್ ಸ್ಮಾರ್ಟ್‌ಫೋನ್‌ಗಳು ಇಲ್ಲಿವೆ ನೋಡಿ!
ಭಾರತೀಯ ಮೊಬೈಲ್ ಮಾರುಕಟ್ಟೆಯಲ್ಲಿ ವಿವೋ (Vivo) ಸಂಸ್ಥೆಯು ತನ್ನ ಭಿನ್ನ ಶ್ರೇಣಿಯ ಮೊಬೈಲ್‌ಗಳ ಮೂಲಕ ಭಾರೀ ಸದ್ದು ಮಾಡಿದೆ. ವಿವೋ ಕಂಪನಿಯು ಬಜೆಟ್ ದರದ, ಮೀಡ್‌ರೇಂಜ್ ಬೆಲೆಯ ಹಾಗೂ ಹೈ ಎಂಡ್ ಬೆಲೆಯ ಸ್ಮಾರ್ಟ್‌ಫೋನ್‌ಗಳ ಲಿಸ್ಟ್ ಅನ್ನು ಪಡೆದುಕೊಂಡಿದೆ. ಅದಾಗ್ಯೂ, ವಿವೋ ಕಂಪನಿಯ T ಸರಣಿಯ ಕೆಲವು ಫೋನ್‌ಗಳು ಡಿಸೈನ್ ಹಾಗೂ ಕೆಲವು ಆಕರ್ಷಕ ಫೀಚರ್ಸ್‌ಗಳ ಮೂಲಕ ಗ್ರಾಹಕರ ಗಮನ ಸೆಳೆಯುವಲ್ಲಿ ಯಶಸ್ವಿ ಆಗಿವೆ. ಹಾಗಾದರೇ T ಸರಣಿಯ ಬೆಸ್ಟ್ ಫೋನ್ ಯಾವು ಅಂತೀರಾ? ಮುಂದೆ ಓದಿರಿ.
ವಿವೋ T3x 5G ಮೊಬೈಲ್
ವಿವೋ T3x 5G ಸ್ಮಾರ್ಟ್‌ಫೋನ್ 6.72 ಇಂಚಿನ ಡಿಸ್‌ಪ್ಲೇ ಜೊತೆಗೆ 120 Hz ರಿಫ್ರೆಶ್ ರೇಟ್ ಆಯ್ಕೆ ಪಡೆದಿದೆ. ಇದು ಫುಲ್ ಹೆಚ್‌ಡಿ + ಜೊತೆಗೆ 2408 - 1080 ಪಿಕ್ಸೆಲ್ ರೆಸಲ್ಯೂಶನ್ ಸಾಮರ್ಥ್ಯದಲ್ಲಿ ಇದೆ. ಅಲ್ಲದೇ ಇದು ಸ್ನಾಪ್‌ಡ್ರಾಗನ್ 6 ಜನ್ 1 ಚಿಪ್ ಪ್ರೊಸೆಸರ್ ಪಡೆದಿದ್ದು, ಆಂಡ್ರಾಯ್ಡ್ 14 ಓಎಸ್ ಸಫೋರ್ಟ್ ಹೊಂದಿದೆ. ಇದರೊಂದಿಗೆ 4GB + 128 GB, 6GB + 128 GB ಹಾಗೂ 8GB + 128 GB ವೇರಿಯಂಟ್‌ನಲ್ಲಿ ಲಭ್ಯ ಇದೆ.

ಹಾಗೆಯೇ ಇದು ಡ್ಯುಯಲ್ ಕ್ಯಾಮೆರಾ ರಚನೆ ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸರ್ ಸೌಲಭ್ಯ ಪಡೆದುಕೊಂಡಿದೆ. ಅಲ್ಲದೇ 6000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪ್ರಯೋಜನ ಪಡೆದಿದ್ದು, ಇದಕ್ಕೆ ಪೂರಕವಾಗಿ 44W ಫ್ಲ್ಯಾಶ್ ಚಾರ್ಜ್ ಅನ್ನು ಸಪೋರ್ಟ್ ಇದೆ.
ವಿವೋ T3 ಲೈಟ್ 5G ಮೊಬೈಲ್
ವಿವೋ T3 ಲೈಟ್ 5G ಮೊಬೈಲ್ 6.56 ಇಂಚಿನ ಫುಲ್ ಹೆಚ್‌ಡಿ+ ಅಮೋಲೆಡ್ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, ಇದು 2400 × 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದೆ.ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದೆ.
ಹಾಗೆಯೇ ಇದು ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಸಹ ಹೊಂದಿದ್ದು, ಇದಕ್ಕೆ ಅನುಗುಣವಾಗಿ 15W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಸಹ ಇದೆ.
ವಿವೋ T2 ಪ್ರೊ 5G ಮೊಬೈಲ್
ವಿವೋ T2 ಪ್ರೊ 5G ಮೊಬೈಲ್ 6.78 ಇಂಚಿನ ಫುಲ್ ಹೆಚ್‌ಡಿ+ ಅಮೋಲೆಡ್ ಮಾದರಿಯ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, 2400 × 1080 ಪಿಕ್ಸಲ್ ರೆಸಲ್ಯೂಶನ್ ಆಯ್ಕೆ ಹೊಂದಿದೆ. ಇದರೊಂದಿಗೆ ಮೀಡಿಯಾ ಟೆಕ್ ಡೈಮೆನ್ಸಿಟಿ 7200 ಚಿಪ್‌ಸೆಟ್ ಪ್ರೊಸೆಸರ್ ಮೂಲಕ ಕೆಲಸ ನಿರ್ವಹಿಸಲಿದೆ. ಇದರ ಜೊತೆಗೆ ಈ ಫೋನ್ 8 GB + 128 GB ಮತ್ತು 8 GB + 256 GB ಸ್ಟೋರೇಜ್‌ನ ಎರಡು ಮಾಡೆಲ್‌ಗಳಲ್ಲಿ ಲಭ್ಯ ಇದೆ.
ಅಲ್ಲದೇ ಇದು ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 64 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಈ ಫೋನ್ 4,600 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಅನ್ನು ಪಡೆದಿದ್ದು, 66W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಪಡೆದುಕೊಂಡಿದೆ.


Click it and Unblock the Notifications








