Home
ಮೊಬೈಲ್

4000 ಡಿಸ್ಕೌಂಟ್! Vivo T2 Pro 5G ಬೆಲೆ ಕುಸಿತ; ಹೊಸ ಬೆಲೆ, ವಿಶೇಷತೆಗಳೇನು?

ವಿವೋ ತನ್ನ ಅಭಿಮಾನಿಗಳಿಗೆ ಸಂತಸದ ಸುದ್ದಿ ನೀಡಿದೆ. ಶೀಘ್ರದಲ್ಲೇ ವಿವೋ X200 (Vivo X200) ಸರಣಿಯನ್ನು ಬಿಡುಗಡೆ ಮಾಡಲಿದೆ. ಇದಕ್ಕೂ ಮೊದಲು ವಿವೋ T2 ಪ್ರೊ 5G (Vivo T2 Pro 5G) ಫೋನಿನ ಬೆಲೆ ಇಳಿಕೆ ಮಾಡಿದೆ. ಹೌದು, ಕಂಪನಿಯು ವಿವೋ T2 ಪ್ರೊ 5G ಖರೀದಿ ಮೇಲೆ ಶೇ.14 ರಷ್ಟು ಡಿಸ್ಕೌಂಟ್ ಘೋಷಿಸಿದೆ. ನೀವು, 3000 ರಿಯಾಯಿತಿ ಪಡೆಯಬಹುದು. ಜೊತೆಗೆ, ಬ್ಯಾಂಕ್ ಆಫರ್, ಇಎಂಐ, ಎಕ್ಸ್‌ಚೇಂಜ್ ಆಫರ್‌ ಸಹ ಸಿಗುತ್ತದೆ. ಬನ್ನಿ, ಈ ಫೋನಿ ಹೊಸ ಬೆಲೆ ಮತ್ತು ವೈಶಿಷ್ಟ್ಯಗಳನ್ನು ತಿಳಿಯೋಣ.

ಕಂಪನಿಯು ಕಳೆದ ವರ್ಷ ವಿವೋ T2 ಪ್ರೊ 5G ಫೋನನ್ನು ಬಿಡುಗಡೆ ಮಾಡಿತ್ತು. ಈ ಮೊಬೈಲ್ ಎರಡು ಸ್ಟೋರೇಜ್ ಆಯ್ಕೆಗಳಲ್ಲಿ ಲಭ್ಯವಿದೆ. ಫೋನ್ 64 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಶನ್ 7200 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಫೋನಿನಲ್ಲಿ 6.78 ಇಂಚಿನ ಡಿಸ್ಪ್ಲೇ ಲಭ್ಯವಿದೆ. ಇದರೊಂದಿಗೆ 4600mAh ಬ್ಯಾಟರಿ, 66W ಸ್ಪೀಡ್ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಂಳಗೊಂಡಿದೆ.

ಸಸ್ತಾ ಬೆಲೆಗೆ Vivo T2 Pro 5G ಫೋನ್; 4000 ಡಿಸ್ಕೌಂಟ್.. ವಿಶೇಷತೆಗಳೇನು?

ವಿವೋ T2 ಪ್ರೊ 5G ಹೊಸ ಬೆಲೆ ಮತ್ತು ಆಫರ್‌ಗಳು

ಕಂಪನಿಯು ಫೋನಿನ 8GB RAM + 128GB ಸ್ಟೋರೇಜ್‌ ರೂಪಾಂತರವನ್ನು 23,999 ರೂ.ಗೆ ಬಿಡುಗಡೆ ಮಾಡಿತ್ತು. ಪ್ರಸ್ತುತ 1,000 ರೂ. ಫ್ಲಾಟ್ ರಿಯಾಯಿತಿ ಮತ್ತು 2,000 ರೂ. ಬ್ಯಾಂಕ್ ಆಫರ್‌ ಘೋಷಿಸಿದೆ. ಒಟ್ಟು 3,000 ರೂ. ಡಿಸ್ಕೌಂಟ್ ಬಳಿಕ ಕೇವಲ 20,999 ರೂ.ಗೆ ಖರೀದಿಸಬಹುದು. ಜೊತೆಗೆ, ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ ಮೇಲೆ ಶೇ.5 ರಷ್ಟು ಕ್ಯಾಶ್‌ಬ್ಯಾಕ್ ಸಿಗುತ್ತದೆ.

ಕಂಪನಿಯು ನೋ ಕಾಸ್ಟ್ ಇಎಂಐ ಆಯ್ಕೆಯನ್ನು ಸಹ ನೀಡುತ್ತದೆ. ನೀವು, 3 ರಿಂದ 6 ತಿಂಗಳ ಸುಲಭ ಕಂತುಗಳಲ್ಲಿ ಈ ಮೊಬೈಲ್ ಕೊಳ್ಳಬಹುದು. ಜೊತೆಗೆ 13,250 ರೂ. ವರೆಗೆ ಎಕ್ಸ್‌ಚೇಂಜ್ ಆಫರ್‌ ಲಭ್ಯವಿದೆ. ಈ ಫೋನಿನ 8GB RAM + 256GB ಸ್ಟೋರೇಜ್ ರೂಪಾಂತರದ ಮೇಲೆಯೂ ರಿಯಾಯಿತಿ ಲಭ್ಯವಿದೆ. ನೀವು, ಆನ್‌ಲೈನ್ ಶಾಪಿಂಗ್ ಸೈಟ್ ಫ್ಲಿಪ್‌ಕಾರ್ಟ್ ಮತ್ತು ಕಂಪನಿಯ ವೆಬ್‌ಸೈಟ್‌ನಲ್ಲಿ ಈ ಎಲ್ಲಾ ಆಫರ್‌ಗಳ ಲಾಭ ಪಡೆಯಬಹುದು.

ವಿವೋ T2 ಪ್ರೊ 5G ಫೋನಿನ ವೈಶಿಷ್ಟ್ಯಗಳು

ಡಿಸ್ಪ್ಲೇ ವಿವರ

ವಿವೋ T2 ಪ್ರೊ 5G ಮೊಬೈಲ್ 6.78 ಇಂಚಿನ ಎಚ್‌ಡಿ ಪ್ಲಸ್ 3D ಕರ್ವ್ ಅಮೋಲೆಡ್ ಡಿಸ್ಪ್ಲೇಯನ್ನು ಹೊಂದಿದೆ. ಡಿಸ್ಪ್ಲೇಯು 120Hz ರಿಫ್ರೆಶ್ ರೇಟ್, 2400 × 1080 ಪಿಕ್ಸೆಲ್‌ಗಳ ರೆಸಲ್ಯೂಶನ್ ಮತ್ತು 1300 ನಿಟ್ಸ್‌ ಬ್ರೈಟ್‌ನೆಸ್ ಬೆಂಬಲ ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ

ವಿವೋ T2 ಪ್ರೊ 5G ಫೋನನ್ನು ಮೀಡಿಯಾ ಟೆಕ್ ಡೈಮೆನ್ಶನ್ 7200 ಪ್ರೊಸೆಸರ್‌ನೊಂದಿಗೆ ಬಿಡುಗಡೆ ಮಾಡಲಾಗಿದೆ. ಈ ಮೊಬೈಲ್ ಆಂಡ್ರಾಯ್ಡ್ 13 ಆಧಾರಿತ ಫನ್ ಟಚ್ ಓಎಸ್ 13 ನಲ್ಲಿ ಕೆಲಸ ಮಾಡುತ್ತದೆ. ಈ ಫೋನ್ 8GB RAM + 256GB ಇಂಟರ್ನಲ್ ಸ್ಟೋರೇಜ್ ಹೊಂದಿದೆ. ಜೊತೆಗೆ 8GB ವಿಸ್ತರಿಸಬಹುದಾದ RAM ಸೌಲಭ್ಯವಿದೆ.

ಕ್ಯಾಮೆರಾ ಸೆಟಪ್

ವಿವೋ T2 ಪ್ರೊ 5G ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಫೋನಿನಲ್ಲಿ OIS ಬೆಂಬಲದೊಂದಿಗೆ 64 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಇದೆ. ಜೊತೆಗೆ 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಲಭ್ಯವಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನ್ 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಚಾರ್ಜಿಂಗ್

ಕಂಪನಿಯು ವಿವೋ T2 ಪ್ರೊ 5G ಫೋನಿನಲ್ಲಿ 4600mAh ಸಾಮರ್ಥ್ಯದ ಬ್ಯಾಟರಿಯನ್ನು ಅಳವಡಿಸಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, ಫೋನಿನಲ್ಲಿ 66W ವೇಗದ ಚಾರ್ಜಿಂಗ್ ಸೌಲಭ್ಯ ನೀಡಲಾಗಿದೆ.

ಇತರೆ ವೈಶಿಷ್ಟ್ಯಗಳು

ವಿವೋ T2 ಪ್ರೊ 5G ಮೊಬೈಲ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಮತ್ತು ನೀರು ಮತ್ತು ಧೂಳಿನ ರಕ್ಷಣೆಗಾಗಿ IP52 ರೇಟಿಂಗ್ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್ 5.3, ವೈ-ಫೈ, ಡ್ಯುಯಲ್ ಸಿಮ್ 5G ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

Best Mobiles in India

English summary
Vivo T2 Pro 5G available with Rs. 4000 discount on Flipkart sale: know offers. ವಿವೋ T2 ಪ್ರೊ 5G ಮೊಬೈಲ್ ಬೆಲೆ ಇಳಿಕೆಯಾಗಿದೆ.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+