9,500ಕ್ಕಿಂತ ಕಡಿಮೆ! 50MP ಕ್ಯಾಮೆರಾ.. 5000mAh ಬ್ಯಾಟರಿ.. ಈ Vivo ಫೋನಿಗೆ ಬಂಪರ್ ಆಫರ್
ವಿವೋ ತನ್ನ ಗ್ರಾಹಕರಿಗೆ ಡಬಲ್ ಸಿಹಿಸುದ್ದಿ ನೀಡಿದೆ. ಕಂಪನಿಯು ಇತ್ತೀಚೆಗೆ ತನ್ನ 'T' ಸರಣಿಯ Vivo T3 Pro ಮತ್ತು Vivo T3 Ultra ಫೋನಿನ ಬೆಲೆಯನ್ನು ಕಡಿತ ಮಾಡಿದೆ. ಇದೀಗ, ಈ ಸರಣಿಯ ವಿವೋ T3 Lite 5G (Vivo T3 Lite 5G) ಸ್ಮಾರ್ಟ್‌ಫೋನ್ ಖರೀದಿ ಮೇಲೆಯೂ ಆಫರ್ ಘೋಷಿಸಿದೆ. ನೀವು ಈ ಫೋನಿನ 6GB RAM ರೂಪಾಂತರವನ್ನು 11,000 ರೂ.ಗಿಂತ ಕಡಿಮೆ ಬೆಲೆಗೆ ಖರೀದಿಸಬಹುದು. ಬನ್ನಿ, ಈ ಫೋನಿನ ಹೊಸ ಬೆಲೆ, ಆಫರ್ ಮತ್ತು ವಿಶೇಷತೆಗಳನ್ನು ತಿಳಿಯೋಣ.
ವಿವೋ T3 Lite 5G ಮೊಬೈಲ್ ಕಳೆದ ವರ್ಷ ಜೂನ್‌ನಲ್ಲಿ ಬಿಡುಗಡೆಯಾಗಿತ್ತು. ಈ ಫೋನ್ ಎರಡು ಸ್ಟೋರೇಜ್ ಆಯ್ಕೆಗಳಲ್ಲಿ ಮಾರಾಟವಾಗುತ್ತಿದೆ. ನೀವು ವೈಬ್ರೆಂಟ್ ಗ್ರೀನ್ ಮತ್ತು ಮೆಜೆಸ್ಟಿಕ್ ಕಪ್ಪು ಬಣ್ಣಗಳಲ್ಲಿ ಖರೀದಿಸಬಹುದು. ಇದು ಮೀಡಿಯಾಟೆಕ್ ಡೈಮೆನ್ಶನ್ 6300 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದು 6.56 ಇಂಚಿನ ಡಿಸ್ಪ್ಲೇ ಹೊಂದಿದೆ. ಜೊತೆಗೆ 5,000mAh ಬ್ಯಾಟರಿ ಮತ್ತು 15W ವೇಗದ ಚಾರ್ಜಿಂಗ್ ಒಳಗೊಂಡಿದೆ. ಪ್ರಸ್ತುತ, ಈ ಮೊಬೈಲ್ ಬಿಡುಗಡೆ ಬೆಲೆಗಿಂತ ಕಡಿಮೆಗೆ ಮಾರಾಟವಾಗುತ್ತಿದೆ.

ವಿವೋ T3 Lite 5G ಬೆಲೆ ಮತ್ತು ಆಫರ್‌ಗಳು
ವಿವೋ T3 Lite 5G ಫೋನಿನ 4GB RAM + 128GB ಸ್ಟೋರೇಜ್ ರೂಪಾಂತರವನ್ನು 10,499 ರೂ.ಗೆ ಬಿಡುಗಡೆ ಮಾಡಲಾಗಿದೆ. ಮತ್ತು 6GB RAM + 128GB ಸ್ಟೋರೇಜ್ 11,499 ರೂ. ಆಗಿದೆ. ಪ್ರಸ್ತುತ, ಫ್ಲಿಪ್‌ಕಾರ್ಟ್‌ನಲ್ಲಿ 1,000 ರೂ.ಗಳ ರಿಯಾಯಿತಿಯೊಂದಿಗೆ ಮಾರಾಟ ಮಾಡಲಾಗುತ್ತಿದೆ. ಆಕ್ಸಿಸ್, ಎಸ್‌ಬಿಐ ಅಥವಾ ಎಚ್‌ಡಿಎಫ್‌ಸಿ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮೇಲೆ ಈ ಆಫರ್ ಲಭ್ಯವಿದೆ. ನೀವು ರಿಯಾಯಿತಿಯೊಂದಿಗೆ 4GB RAM ರೂಪಾಂತರವನ್ನು ಕೇವಲ 9,499 ರೂ. ಮತ್ತು 6GB RAM ರೂಪಾಂತರವನ್ನು 10,499 ರೂ.ಗೆ ಖರೀದಿಸಬಹುದು.
ವಿವೋ T3 Lite 5G ಫೋನಿನ ವೈಶಿಷ್ಟ್ಯಗಳು
ಡಿಸ್ಪ್ಲೇ ಮತ್ತು ಪ್ರೊಸೆಸರ್ ವಿವರ
ವಿವೋ T3 Lite 5G ಸ್ಮಾರ್ಟ್‌ಫೋನ್ 6.56 ಇಂಚಿನ ಡಿಸ್ಪ್ಲೇ ಹೊಂದಿದೆ. ಇದು 90Hz ರಿಫ್ರೆಶ್ ದರ, 1612 x 720 ಪಿಕ್ಸೆಲ್ ರೆಸಲ್ಯೂಶನ್ ಮತ್ತು 840 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಈ ವಿವೋ ಮೊಬೈಲ್ ಮೀಡಿಯಾಟೆಕ್ ಡೈಮೆನ್ಶನ್ 6300 ಪ್ರೊಸೆಸರ್ ಹೊಂದಿದೆ. ಗ್ರಾಫೀಕ್ಸ್‌ಗಾಗಿ ಇದು, ಆರ್ಮ್ ಮಾಲಿ G57 MC2 ಜಿಪಿಯು ಹೊಂದಿದೆ. ಈ ಮೊಬೈಲ್ ಆಂಡ್ರಾಯ್ಡ್ 14 ಆಧಾರಿತ Funtouch ಓಎಸ್ 14 ಜೊತೆಗೆ ಕೆಲಸ ನಿರ್ವಹಿಸುತ್ತದೆ.

ಕ್ಯಾಮೆರಾ ಮತ್ತು ಸ್ಟೋರೇಜ್
ವಿವೋ T3 Lite 5G ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಸೋನಿ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಇದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನ್ 8 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ. ಜೊತೆಗೆ ಈ ಮೊಬೈಲ್ 6GB RAM ಮತ್ತು 128GB ಸ್ಟೋರೇಜ್ ಆಯ್ಕೆ ಒಳಗೊಂಡಿದೆ.
ಬ್ಯಾಟರಿ ಮತ್ತು ಇತರೆ ವೈಶಿಷ್ಟ್ಯಗಳು
ವಿವೋ T3 Lite 5G ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 15W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಈ ವಿವೋ ಸ್ಮಾರ್ಟ್‌ಫೋನ್ ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP64 ರೇಟಿಂಗ್ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು ಡ್ಯುಯಲ್ ಸಿಮ್ 5G, 4G, ವೈ-ಫೈ, ಬ್ಲೂಟೂತ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.


Click it and Unblock the Notifications








