4000 ಬೆಲೆ ಇಳಿಕೆ! 5500mAh ಬ್ಯಾಟರಿ.. 256GB ಸ್ಟೋರೇಜ್.. ಸಸ್ತಾ ಬೆಲೆಗೆ Vivo ಫೋನ್ ಸೇಲ್!
ವಿವೋ ಕಂಪನಿಯು ಬಜೆಟ್ ವಿಭಾಗದಲ್ಲಿ ಈಗಾಗಲೇ ಹಲವು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಈ ಫೋನ್‌ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾರೆ. ಆ ಪೈಕಿ ಕಂಪನಿಯ ವಿವೋ T3 ಪ್ರೊ 5G (vivo T3 Pro 5G) ಮೊಬೈಲ್ ಈಗ ಮಾರುಕಟ್ಟೆಯಲ್ಲಿ ಸದ್ದು ಮಾಡುತ್ತಿದೆ. ಅಂದಹಾಗೆ, ಈ ಫೋನ್ ಮೀಡ್‌ರೇಂಜ್ ವಿಭಾಗದಲ್ಲಿ ಕಾಣಿಸಿಕೊಂಡಿದೆ. ಪ್ರಸ್ತುತ, ಫ್ಲಿಪ್‌ಕಾರ್ಟ್‌ನಲ್ಲಿ ವಿವೋ T3 ಪ್ರೊ 5G (vivo T3 Pro 5G) ಮೊಬೈಲ್ ಬೊಂಬಾಟ್ ಆಫರ್‌ನೊಂದಿಗೆ ಮಾರಾಟವಾಗುತ್ತಿದೆ. ಬನ್ನಿ, ಈ ಫೋನಿನ ಹೊಸ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.
ವಿವೋ T3 ಪ್ರೊ 5G ಮೊಬೈಲ್ ಸ್ನಾಪ್‌ಡ್ರಾಗನ್ 7 ಜೆನ್ 3 SoC ಪ್ರೊಸೆಸರ್‌ನೊಂದಿಗೆ ಕೆಲಸ ನಿರ್ವಹಿಸುತ್ತದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಡ್ಯುಯಲ್ ಕ್ಯಾಮೆರಾ ಲಭ್ಯವಿದೆ. ಇದು 6.77 ಇಂಚಿನ ದೊಡ್ಡ ಡಿಸ್ಲ್ಪೇಯನ್ನು ಹೊಂದಿದೆ. ಜೊತೆಗೆ 256GB ಸ್ಟೋರೇಜ್, 5500mAh ಬ್ಯಾಟರಿ ಮತ್ತು 80W ಫಾಸ್ಟ್ ಚಾರ್ಜಿಂಗ್ ಒಳಗೊಂಡಿದೆ. ಈ ಫೋನ್ ಎರಡು ಸ್ಟೋರೇಜ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿದೆ. ಈ ಮೊಬೈಲ್ ಸ್ಯಾಂಡ್‌ಸ್ಟೋನ್ ಆರೇಂಜ್ ಲೆದರ್ ಹಾಗೂ ಎಮರಾಲ್ಡ್ ಗ್ರೀನ್ ಬಣ್ಣದಲ್ಲಿ ಮಾರಾಟವಾಗುತ್ತಿದೆ. ಖರೀದಿಸಬಹುದು.

ವಿವೋ T3 ಪ್ರೊ 5G ಬೆಲೆ ಮತ್ತು ಆಫರ್‌ಗಳು
ವಿವೋ T3 ಪ್ರೊ 5G ಫೋನಿನ 8GB + 128GB ಸ್ಟೋರೇಜ್ ರೂಪಾಂತರವು 24,999 ರೂ. ಮತ್ತು 8GB + 128GB ಸ್ಟೋರೇಜ್ ಆಯ್ಕೆಯು 26,999 ರೂ.ಗೆ ಭಾರತದಲ್ಲಿ ಬಿಡುಗಡೆಯಾಗಿತ್ತು. ಪ್ರಸ್ತುತ, ನೀವು ಫ್ಲಿಪ್‌ಕಾರ್ಟ್ ಸೈಟ್‌ನಲ್ಲಿ ಈ ಫೋನನ್ನು 22,999 ರೂ.ಗೆ ಖರೀದಿಸಬಹುದು. ಜೊತೆಗೆ 2000 ರೂ.ಗಳ ಬ್ಯಾಂಕ್ ರಿಯಾಯಿತಿಯೂ ಸಿಗುತ್ತದೆ. ನೀವು ಕೇವಲ 20,999 ರೂ.ಗೆ ಈ ಮೊಬೈಲ್ ಕೊಳ್ಳಬಹುದು. ಇದರೊಂದಿಗೆ 4,000 ರೂ.ಗಳ ಬೆಲೆ ಇಳಿಕೆಯೊಂದಿಗೆ ಈ ಸ್ಮಾರ್ಟ್‌ಫೋನ್ ಮಾರಾಟವಾಗುತ್ತಿದೆ.
ವಿವೋ T3 ಪ್ರೊ 5G ವೈಶಿಷ್ಟ್ಯಗಳು
ಡಿಸ್ಲ್ಪೇ ಹೇಗಿದೆ
ವಿವೋ T3 ಪ್ರೊ 5G ಮೊಬೈಲ್ 120Hz ರಿಫ್ರೆಶ್ ದರದೊಂದಿಗೆ 6.67 ಇಂಚಿನ 3D ಕರ್ವ್ಡ್ ಅಮೋಲೆಡ್ ಡಿಸ್ಲ್ಪೇ ಹೊಂದಿದೆ. ಇದು 2400 × 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಮತ್ತು 4,500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಸೌಲಭ್ಯ ಪಡೆದಿದೆ. ಇದು ಇನ್ ಡಿಸ್ಪ್ಲೇ ಫಿಂಗರ್‌ಫ್ರಿಂಟ್ ಸೆನ್ಸರ್ ಸಹ ಹೊಂದಿದೆ.
ಪ್ರೊಸೆಸರ್ ಮತ್ತು ಸ್ಟೋರೇಜ್
ವಿವೋ T3 ಪ್ರೊ 5G ಫೋನ್ ಸ್ನಾಪ್‌ಡ್ರಾಗನ್ 7 ಜೆನ್ 3 SoC ಪ್ರೊಸೆಸರ್ ಹೊಂದಿದೆ. ಈ ಮೊಬೈಲ್ ಆಂಡ್ರಾಯ್ಡ್ 14 ಆಧಾರಿತ FuntouchOS 14 ಓಎಸ್ ಜೊತೆಗೆ ಕೆಲಸ ಮಾಡುತ್ತದೆ. ಗ್ರಾಫಿಕ್ಸ್‌ಗಾಗಿ ಈ ಫೋನ್, ಅಡ್ರಿನೊ 720 ಚಿಪ್‌ಸೆಟ್ ಹೊಂದಿದೆ. ಈ ಸ್ಮಾರ್ಟ್‌ಫೋನ್ 8GB RAM + 128GB, 8GB + 256GB ಸ್ಟೋರೇಜ್ ಆಯ್ಕೆ ಒಳಗೊಂಡಿದೆ.

ಡ್ಯುಯಲ್ ಕ್ಯಾಮೆರಾ ಸೆಟಪ್
ವಿವೋ T3 ಪ್ರೊ 5G ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಲಭ್ಯವಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಮೊಬೈಲ್, 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.
ಬ್ಯಾಟರಿ ಮತ್ತು ಇತರೆ ವೈಶಿಷ್ಟ್ಯಗಳು
ವಿವೋ T3 ಪ್ರೊ 5G ಮೊಬೈಲ್ 5500mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬಿಡುಗಡೆಯಾಗಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 80W ಫಾಸ್ಟ್ ಚಾರ್ಜಿಂಗ್ ಮತ್ತು 7.5W ರಿವರ್ಸ್ ವೈರ್ಡ್ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಈ ಫೋನ್ ಡ್ಯುಯಲ್ 4G VoLTE, ವೈ-ಫೈ 6, ಬ್ಲೂಟೂತ್ ಆವೃತ್ತಿ 5.3, ಜಿಪಿಎಸ್, ಯುಎಸ್‌ಬಿ ಟೈಪ್ ಸಿ ಸೇರಿದಂತೆ ಮುಂತಾದ ವೈಶಿಷ್ಟ್ಯಗಳನ್ನು ಹೊಂದಿದೆ.


Click it and Unblock the Notifications








