Home
ಮೊಬೈಲ್

ಕೇವಲ 10,999 ರೂ.! 6000mAh ಬ್ಯಾಟರಿ.. 50MP ಕ್ಯಾಮೆರಾ.. ಈ Vivo ಫೋನಿನ ಬೆಲೆ ಭಾರೀ ಕುಸಿತ

ವಿವೋ ಸ್ಮಾರ್ಟ್‌ಫೋನ್‌ಗಳಿಗೆ ಭಾರತದಲ್ಲಿ ಭಾರೀ ಡಿಮ್ಯಾಂಡ್ ಇದೆ. ಕಂಪನಿಯು ತನ್ನ ಅಭಿಮಾನಿಗಳ ಬಜೆಟ್‌ ಗಮನದಲ್ಲಿಟ್ಟುಕೊಂಡು ವಿಭಿನ್ನ ಫೋನ್‌ಗಳನ್ನು ಬಿಡುಗಡೆ ಮಾಡುತ್ತಿದೆ. ಇವು ಈಗಾಗಲೇ ಮೊಬೈಲ್ ಪ್ರಿಯರನ್ನು ಸೆಳೆಯುವಲ್ಲಿ ಸೈ ಎನಿಸಿಕೊಂಡಿವೆ. ಶೀಘ್ರದಲ್ಲೆ Vivo T4X 5G ಮೊಬೈಲ್ ಭಾರತದಲ್ಲಿ ಬಿಡುಗಡೆಯಾಗಲಿದೆ. ಈ ಮಧ್ಯೆಯೇ, ವಿವೋ T3x 5G (vivo T3x 5G) ಬೆಲೆ ಇಳಿಕೆಯಾಗಿದೆ. ಪ್ರಸ್ತುತ, ಫ್ಲಿಪ್‌ಕಾರ್ಟ್‌ನಲ್ಲಿ ಈ ಫೋನಿನ ಖರೀದಿ ಮೇಲೆ ಭರ್ಜರಿ ಡಿಸ್ಕೌಂಟ್ ನೀಡಲಾಗುತ್ತಿದೆ. ಬನ್ನಿ, ಈ ವಿವೋ ಫೋನಿನ ಹೊಸ ಬೆಲೆ ಮತ್ತು ಕಂಪನಿ ಯಾವೆಲ್ಲಾ ಆಫರ್‌ಗಳನ್ನು ನೀಡುತ್ತಿದೆ ತಿಳಿಯೋಣ.

ವಿವೋ T3x 5G ಫೋನ್‌ ಮೂರು ಸ್ಟೋರೇಜ್ ಆಯ್ಕೆಗಳಲ್ಲಿ ಮಾರಾಟವಾಗುತ್ತಿದೆ. ಪ್ರಸ್ತುತ ಶೇ.28 ರಷ್ಟು ಡಿಸ್ಕೌಂಟ್‌ ಲಭ್ಯವಿದೆ. ಈ ಫೋನ್ 50 ಮೆಗಾಪಿಕ್ಸೆಲ್ ಕ್ಯಾಮೆರಾ ಹೊಂದಿದೆ. ಇದು ಸ್ನಾಪ್‌ಡ್ರಾಗನ್‌ 6 ಜೆನ್ 1 ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸುತ್ತದೆ. ಫೋನಿನಲ್ಲಿ 6.72 ಇಂಚಿನ ಡಿಸ್ಪ್ಲೇ ಲಭ್ಯವಿದೆ. ಹಾಗೆಯೇ, 128GB ಸ್ಟೋರೇಜ್‌, 6000mAh ಬ್ಯಾಟರಿ ಮತ್ತು 44W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಕೇವಲ 10999 ರೂ.! 6000mAh ಬ್ಯಾಟರಿ, 50MP ಕ್ಯಾಮೆರಾ; ಸಸ್ತಾ ಬೆಲೆಗೆ Vivo ಫೋನ್

ವಿವೋ T3x 5G ಹೊಸ ಬೆಲೆ

ವಿವೋ T3x 5G ಫೋನಿನ 4GB RAM + 128GB ಸ್ಟೋರೇಜ್ ರೂಪಾಂತರವು 17,499 ರೂ.ಗೆ ಬಿಡುಗಡೆಯಾಗಿದೆ. ನೀವು ಫ್ಲಿಪ್‌ಕಾರ್ಟ್‌ನಲ್ಲಿ ರಿಯಾಯಿತಿ ದರದಲ್ಲಿ ಖರೀದಿಸಬಹುದು. ಶೇ.28 ರಷ್ಟು ನೇರ ರಿಯಾಯಿತಿಯೊಂದಿಗೆ 12,499 ರೂ.ಗೆ ಲಭ್ಯವಿದೆ. ಎಲ್ಲಾ ಬ್ಯಾಂಕ್‌ಗಳ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್‌ಗಳ ಪಾವತಿ ಮೇಲೆ 1,500 ರೂ.ಗಳ ಡಿಸ್ಕೌಂಟ್ ಸಿಗುತ್ತದೆ. ಈ ರಿಯಾಯಿತಿಯೊಂದಿಗೆ ವಿವೋ T3x 5G ಮೊಬೈಲ್ ಅನ್ನು ಕೇವಲ 10,999 ರೂ.ಗಳಿಗೆ ಕೊಳ್ಳಬಹುದು.

ವಿವೋ T3x 5G ವೈಶಿಷ್ಟ್ಯಗಳು

ಡಿಸ್ಪ್ಲೇ ಹೇಗಿದೆ

ವಿವೋ T3x 5G ಸ್ಮಾರ್ಟ್‌ಫೋನ್ 6.72 ಇಂಚಿನ ಪೂರ್ಣ ಎಚ್‌ಡಿ ಪ್ಲಸ್ ಡಿಸ್ಪ್ಲೇ ಹೊಂದಿದೆ. ಇದು 120Hz ರಿಫ್ರೆಶ್ ದರ ಮತ್ತು 1000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ.

ಪ್ರೊಸೆಸರ್ ಯಾವುದು?

ವಿವೋ T3x 5G ಫೋನ್ ಸ್ನಾಪ್‌ಡ್ರಾಗನ್‌ 6 ಜೆನ್ 1 ಪ್ರೊಸೆಸರ್‌ ಹೊಂದಿದೆ. ಈ ಫೋನ್ ಆಂಡ್ರಾಯ್ಡ್‌ 14 ಆಧಾರಿತ FuntouchOS 14 ನಲ್ಲಿ ಕೆಲಸ ಮಾಡುತ್ತದೆ. ಈ ವಿವೋ ಮೊಬೈಲ್ 4GB RAM + 128GB ಸ್ಟೋರೇಜ್‌ ಹೊಂದಿದೆ. ನೀವು, ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೆ ಸ್ಟೋರೇಜ್ ವಿಸ್ತರಿಸಬಹುದು.

ಕೇವಲ 10999 ರೂ.! 6000mAh ಬ್ಯಾಟರಿ, 50MP ಕ್ಯಾಮೆರಾ; ಸಸ್ತಾ ಬೆಲೆಗೆ Vivo ಫೋನ್

ಬೊಂಬಾಟ್ ಕ್ಯಾಮೆರಾ ಸೆಟಪ್

ವಿವೋ T3x 5G ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ಸೆಕೆಂಡರಿ ಕ್ಯಾಮೆರಾ ಲಭ್ಯವಿದೆ. ಇದು ಎಲ್ಇಡಿ ಫ್ಲ್ಯಾಷ್ ಸಹ ಹೊಂದಿದೆ. ಈ ಮೊಬೈಲ್ ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ, 8 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.

ದೊಡ್ಡ ಬ್ಯಾಟರಿ

ವಿವೋ T3X 5G ಸ್ಮಾರ್ಟ್‌ಫೋನ್ 6000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 44W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಈ ಫೋನ್ ಧೂಳು ಮತ್ತು ನೀರಿನ ವಿರುದ್ಧ ರಕ್ಷಣೆಗಾಗಿ IP64 ರೇಟಿಂಗ್ ಪಡೆದಿದೆ. ಜೊತೆಗೆ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಮತ್ತು ಡ್ಯುಯಲ್ ಸ್ಟಿರಿಯೊ ಸ್ಪೀಕರ್‌ಗಳನ್ನು ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು 5G, Dual 4G VoLTE, ವೈ-ಫೈ 6, ಬ್ಲೂಟೂತ್ 5.1, ಜಿಪಿಎಸ್‌, ಯುಎಸ್‌ಬಿ ಟೈಪ್ ಸಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Best Mobiles in India

English summary
vivo T3x 5G available with offer price rs 10999 in flipkart ahead vivo T4X 5G india launch: know offers
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+