ನಾಳೆ Vivo T4 5G ಫಸ್ಟ್ ಸೇಲ್; 7300mAh ಬ್ಯಾಟರಿ, 50MP ಕ್ಯಾಮೆರಾ.. ಬೆಲೆ ಎಷ್ಟು? ಆಫರ್ ಏನಿದೆ?
ವಿವೋ ಇತ್ತೀಚೆಗೆ ಭಾರತದಲ್ಲಿ ಹೊಸ ಫೋನನ್ನು ಬಿಡುಗಡೆ ಮಾಡಿದೆ. ಇದನ್ನು ಬಜೆಟ್ ವಿಭಾಗದಲ್ಲಿ ಪರಿಚಯಿಸಲಾಗಿದೆ. ಹೌದು, ಬಹುನಿರೀಕ್ಷಿತ ವಿವೋ T4 5G (Vivo T4 5G) ಮೊಬೈಲ್ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಅಂದಹಾಗೆ, ಈ ಸ್ಮಾರ್ಟ್‌ಫೋನ್ ನಾಳೆಯಿಂದ (ಏಪ್ರಿಲ್ 29) ಆನ್‌ಲೈನ್ ಶಾಪಿಂಗ್ ಸೈಟ್ ಫ್ಲಿಪ್‌ಕಾರ್ಟ್ ಮೂಲಕ ತನ್ನ ಮೊದಲ ಮಾರಾಟವನ್ನು ಪ್ರಾರಂಭಿಸಲಿದೆ. ಆರಂಭಿಕ ಮಾರಾಟದ ಪ್ರಯುಕ್ತ ಕಂಪನಿಯು ಬೊಂಬಾಟ್ ಆಫರ್ ಘೋಷಿಸಿದೆ. ಈ ಹೊಸ ಫೋನಿನ ಬೆಲೆ ಮತ್ತು ವಿಶೇಷತೆಗಳ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ವಿವೋ T4 5G ಪ್ರೀಮಿಯಂ ವಿನ್ಯಾಸ, ಶಕ್ತಿಶಾಲಿ ಬ್ಯಾಟರಿ ಮತ್ತು ಸುಗಮ ಕಾರ್ಯಕ್ಷಮತೆಯೊಂದಿಗೆ ಬರುತ್ತದೆ. ಈ ಫೋನಿನ ವಿಶೇಷತೆಯೆಂದರೆ, ಇದರ 7300mAh ದೊಡ್ಡ ಬ್ಯಾಟರಿ ಆಗಿದೆ. ಈ ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7s ಜೆನ್ 3 ಪ್ರೊಸೆಸರ್ ಹೊಂದಿದೆ. ಇದು 6.77 ಇಂಚಿನ ಡಿಸ್ಪ್ಲೇಯೊಂದಿಗೆ ಬರುತ್ತದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಇದೆ. ಹಾಗೆಯೇ 12GB RAM + 256GB ಸ್ಟೋರೇಜ್, IP65 ರೇಟಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳೊಂದಿಗೆ ಮಾರಾಟಕ್ಕೆ ಸಜ್ಜಾಗಿದೆ. ಈ ಫೋನಿಗೆ ಯಾವೆಲ್ಲ ಆಫರ್ ಲಭ್ಯವಿದೆ ನೋಡೋಣ ಬನ್ನಿ.

ವಿವೋ T4 5G ಬೆಲೆ ಮತ್ತು ಆಫರ್
ವಿವೋ T4 5G ಫೋನಿನ 8GB RAM + 128GB ಸ್ಟೋರೇಜ್ ರೂಪಾಂತರವನ್ನು 21,999 ರೂ.ಗೆ ಬಿಡುಗಡೆ ಮಾಡಲಾಗಿದೆ. 12GB RAM + 256GB ಸ್ಟೋರೇಜ್ ಆಯ್ಕೆಯನ್ನು 25,999 ರೂ.ಗೆ ಮಾರಾಟ ಮಾಡಲಾಗುತ್ತದೆ. ಈ ಫೋನ್ ಎಮರಾಲ್ಡ್ ಬ್ಲೇಜ್ ಮತ್ತು ಫ್ಯಾಂಟಮ್ ಗ್ರೇ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ. ಅಂದಹಾಗೆ, ಈ ಫೋನ್ ನಾಳೆಯಿಂದ (ಏಪ್ರಿಲ್ 29) ಆನ್‌ಲೈನ್ ಶಾಪಿಂಗ್ ಸೈಟ್ ಫ್ಲಿಪ್‌ಕಾರ್ಟ್ ಮೂಲಕ ತನ್ನ ಮೊದಲ ಮಾರಾಟ ಪ್ರಾರಂಭಿಸಲಿದೆ. ಕಂಪನಿಯು ಆರಂಭಿಕ ಮಾರಾಟದ ಪ್ರಯುಕ್ತ, 2000 ರೂ.ಗಳ ಬ್ಯಾಂಕ್ ರಿಯಾಯಿತಿಯನ್ನು ನೀಡುತ್ತದೆ.
ವಿವೋ T4 5G ವೈಶಿಷ್ಟ್ಯಗಳು
ಡಿಸ್ಪ್ಲೇ ಹೇಗಿದೆ
ವಿವೋ T4 5G ಮೊಬೈಲ್ 6.77 ಇಂಚಿನ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 2,392 × 1,080 ಪಿಕ್ಸೆಲ್‌ಗಳ ಸ್ಕ್ರೀನ್ ರೆಸಲ್ಯೂಶನ್, 120Hz ರಿಫ್ರೆಶ್ ದರ, 1300 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲದೊಂದಿಗೆ ಬರುತ್ತದೆ. ಈ ಫೋನ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್ ಮತ್ತು ಇನ್ಫ್ರಾರೆಡ್ ಸೆನ್ಸರ್ ತಂತ್ರಜ್ಞಾನ ಹೊಂದಿದೆ.
ಪ್ರೊಸೆಸರ್ ಯಾವುದು?
ವಿವೋ T4 5G ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7s ಜೆನ್ 3 ಆಕ್ಟಾ-ಕೋರ್ ಪ್ರೊಸೆಸರ್ ಹೊಂದಿದೆ. ಇದನ್ನು 4 ನ್ಯಾನೊಮೀಟರ್ ಫ್ಯಾಬ್ರಿಕೇಶನ್‌ಗಳ ಮೇಲೆ ತಯಾರಿಸಲಾಗಿದೆ. ಇದು ಆಂಡ್ರಾಯ್ಡ್ 15 ಆಧಾರಿತ Funtouch OS 15 ಜೊತೆಗೆ ಕೆಲಸ ಮಾಡುತ್ತದೆ. ಈ ಫೋನ್ 8GB RAM ಮತ್ತು 12GB RAM ಹೊಂದಿದೆ. ಹಾಗೆಯೇ 128GB ಮತ್ತು 256GB ಸ್ಟೋರೇಜ್ ಆಯ್ಕೆ ಲಭ್ಯವಿದೆ.

ಡ್ಯುಯಲ್ ಕ್ಯಾಮೆರಾ
ವಿವೋ T4 5G ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಇದೆ. ಹಾಗೆಯೇ 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನಿನಲ್ಲಿ 8 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಅಳವಡಿಸಲಾಗಿದೆ.
ಸೂಪರ್ ಬ್ಯಾಟರಿ
ವಿವೋ T4 5G ಮೊಬೈಲ್ 7300mAh ಸಾಮರ್ಥ್ಯದ ದೊಡ್ಡ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ವೇಗವಾಗಿ ಚಾರ್ಜ್ ಮಾಡಲು, 90W ವೇಗದ ಚಾರ್ಜಿಂಗ್ ಸೌಲಭ್ಯವನ್ನು ಒದಗಿಸಲಾಗಿದೆ. ಈ ಫೋನ್ ಮಿಲಿಟರಿ ದರ್ಜೆಯ ಬಾಳಿಕೆ (MIL-STD-810H), ಧೂಳು ಮತ್ತು ನೀರಿನ ವಿರುದ್ಧ ರಕ್ಷಣೆಗೆ IP65 ರೇಟಿಂಗ್ ಪಡೆದಿದೆ. ಹಾಗೆಯೇ ಯುಎಸ್‌ಬಿ ಟೈಪ್ ಸಿ ಆಡಿಯೋ, ಬಾಟಮ್ ಪೋರ್ಟೆಡ್ ಸ್ಪೀಕರ್ ಸಹ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು 5G SA/NSA, ಡ್ಯುಯಲ್ 4G VoLTE, ವೈ-ಫೈ 6, ಬ್ಲೂಟೂತ್ 5.2, ಜಿಪಿಎಸ್, ಯುಎಸ್‌ಬಿ ಟೈಪ್ ಸಿ ಸೇರಿದಂತೆ ಹಲವು ಸೌಲಭ್ಯಗಳನ್ನು ಹೊಂದಿದೆ.


Click it and Unblock the Notifications








