Vivo T4 5G: 7300mAh ಬ್ಯಾಟರಿಯೊಂದಿಗೆ ಬಿಡುಗಡೆ! 90W ಸ್ಪೀಡ್ ಚಾರ್ಜಿಂಗ್.. 50MP + 32MP ಕ್ಯಾಮೆರಾ.. ಬೆಲೆ ಎಷ್ಟು?
ಬಹುನಿರೀಕ್ಷಿತ ವಿವೋ T4 5G (Vivo T4 5G) ಸ್ಮಾರ್ಟ್‌ಫೋನ್ ಏಪ್ರಿಲ್ 22 ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ. ಕಂಪನಿಯು ಇತ್ತೀಚೆಗೆ ಈ ಫೋನಿನ ಬಿಡುಗಡೆ ದಿನಾಂಕವನ್ನು ಘೋಷಿಸಿತ್ತು. ಇದೀಗ ವಿವೋ T4 ಮೊಬೈಲ್ 7,300mAh ಬ್ಯಾಟರಿಯೊಂದಿಗೆ ಬರಲಿದೆ ಎಂದು ಕಂಪನಿಯು ಅಧಿಕೃತವಾಗಿ ಘೋಷಿಸಿದೆ. ಜೊತೆಗೆ, ಮುಂಬರುವ ಈ ಬಿಗ್ ಬ್ಯಾಟರಿ ಫೋನಿನ ಹಲವು ಪ್ರಮುಖ ವಿವರಗಳನ್ನು ಹಂಚಿಕೊಂಡಿದೆ. ಈ ಫೋನಿನ ವಿಶೇಷತೆಗಳು ಮತ್ತು ಬಿಡುಗಡೆ ವಿವರಗಳ ಬಗ್ಗೆ ಇಲ್ಲಿದೆ ಮಾಹಿತಿ.
ಕಂಪನಿಯು ಯುವಕರನ್ನು ಗಮನದಲ್ಲಿಟ್ಟುಕೊಂಡು ವಿವೋ T4 5G ಫೋನನ್ನು ತಯಾರಿಸಿದೆ. ಇದು ಎಐ ವೈಶಿಷ್ಟ್ಯದೊಂದಿಗೆ ಬರುತ್ತದೆ. ಈ ಮೊಬೈಲ್ 6.67 ಇಂಚಿನ ಡಿಸ್ಪ್ಲೇಯೊಂದಿಗೆ ಬರುತ್ತದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7s ಜೆನ್ 3 ಪ್ರೊಸೆಸರ್ ಹೊಂದಿದೆ. ಈ ಫೋನಿನಲ್ಲಿ 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಮತ್ತು 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಹಾಗೆಯೇ 12GB RAM + 256GB ಸ್ಟೋರೇಜ್ ಸೇರಿದಂತೆ ಹಲವು ವೈಶಿಷ್ಟ್ಯಗಳೊಂದಿಗೆ ಬಿಡುಗಡೆಯಾಗಲಿದೆ.

ಅತ್ಯಂತ ತೆಳುವಾದ ಫೋನ್
ವಿವೋ T4 5G ಸ್ಮಾರ್ಟ್‌ಫೋನ್ 7,300mAh ಬ್ಯಾಟರಿ ಹೊಂದಿದೆ ಎಂದು ವಿವೋ ಹೇಳಿದೆ. ಕಂಪನಿಯ ಪ್ರಕಾರ, ಈ ಫೋನ್ ಮೂರನೇ ತಲೆಮಾರಿನ ಸಿಲಿಕಾನ್ ಪದರದೊಂದಿಗೆ ಬ್ಲೂವೋಲ್ಟ್ ಬ್ಯಾಟರಿ ಆನೋಡ್ ವಸ್ತುವನ್ನು ಹೊಂದಿದೆ. ಈ ಬ್ಯಾಟರಿಯನ್ನು ವೇಗವಾಗಿ ಚಾರ್ಜ್ ಮಾಡಲು, ಈ ಫೋನಿನಲ್ಲಿ 90W ಫ್ಲ್ಯಾಶ್‌ಚಾರ್ಜ್ ತಂತ್ರಜ್ಞಾನ ಲಭ್ಯವಿದೆ. ಕಂಪನಿಯು ಈ ಫೋನನ್ನು 7,300mAh ಬ್ಯಾಟರಿಯನ್ನು ಹೊಂದಿರುವ ಅತ್ಯಂತ ತೆಳುವಾದ ಸ್ಮಾರ್ಟ್‌ಫೋನ್ ಎಂದು ಕರೆದಿದೆ. ಇದರ ದಪ್ಪ ಕೇವಲ 0.789cm ಆಗಿದೆ.
ಭಾರತದಲ್ಲಿ ವಿವೋ T4 5G ಬಿಡುಗಡೆ
ವಿವೋ ಇದೇ ಏಪ್ರಿಲ್ 22 ರಂದು ಭಾರತದಲ್ಲಿ ವರ್ಚುವಲ್ ಕಾರ್ಯಕ್ರಮ ಆಯೋಜಿಸಿದೆ. ಈ ವೇಳೆ ಹೊಸ ವಿವೋ T4 5G ಫೋನ್ ದೇಶೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ. ಈ ಲಾಂಚ್ ಈವೆಂಟ್ ಮಧ್ಯಾಹ್ನ 12 ಗಂಟೆಗೆ ಪ್ರಾರಂಭವಾಗಲಿದೆ. ಇದನ್ನು ಕಂಪನಿಯ ವೆಬ್‌ಸೈಟ್‌ನಲ್ಲಿ ಹಾಗೂ ಎಲ್ಲಾ ಸೋಶಿಯಲ್ ಮೀಡಿಯಾ ವೇದಿಕೆಗಳಲ್ಲಿ ನೇರಪ್ರಸಾರ ವೀಕ್ಷಿಸಬಹುದು. ಈ ಕಾರ್ಯಕ್ರಮದಲ್ಲಿ ವಿವೋ T4 ಫೋನಿನ ಬೆಲೆ ಮತ್ತು ಮಾರಾಟದ ವಿವರಗಳ ಬಗೆಗ ಮಾಹಿತಿ ನೀಡಲಾಗುತ್ತದೆ.
ವಿವೋ T4 5G ಫೋನಿನ ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ವಿವೋ T4 5G ಮೊಬೈಲ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್ಪ್ಲೇ ಹೊಂದಿದೆ. ಇದು ಕ್ವಾಡ್ ಕರ್ವ್ಡ್ ಅಮೋಲೆಡ್ ಡಿಸ್ಪ್ಲೇ ಆಗಿದೆ. ಈ ಸ್ಕ್ರೀನ್ 120Hz ರಿಫ್ರೆಶ್ ದರ, 5000 ನಿಟ್ಸ್ ಬ್ರೈಟ್‌ನೆಸ್ ಪಡೆದಿದೆ. ಈ ವಿವೋ 5G ಫೋನ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್ ತಂತ್ರಜ್ಞಾನ ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ
ವಿವೋ T4 5G ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7s ಜೆನ್ 3 ಆಕ್ಟಾ-ಕೋರ್ ಪ್ರೊಸೆಸರ್‌ನೊಂದಿಗೆ ಬಿಡುಗಡೆಯಾಗಲಿದೆ. ಇದನ್ನು 4 ನ್ಯಾನೊಮೀಟರ್ ಫ್ಯಾಬ್ರಿಕೇಶನ್‌ಗಳ ಮೇಲೆ ನಿರ್ಮಿಸಲಾಗಿದೆ. ಇದು 820K+ AnTuTu ಬೆಂಚ್‌ಮಾರ್ಕ್ ಸ್ಕೋರ್ ಪಡೆದಿದೆ. ಈ ಮೊಬೈಲ್ ಆಂಡ್ರಾಯ್ಡ್ 15 ಆಧಾರಿತ Funtouch OS 15 ನೊಂದಿಗೆ ಕೆಲಸ ಮಾಡುತ್ತದೆ.
RAM ಮತ್ತು ಸ್ಟೋರೇಜ್
ವಿವೋ T4 5G ಫೋನ್ 8GB RAM ಮತ್ತು 12GB RAM ಹೊಂದಿದೆ. ಈ ಸ್ಮಾರ್ಟ್‌ಫೋನ್ ಒಟ್ಟು ಮೂರು ಸ್ಟೋರೇಜ್ ರೂಪಾಂತರಗಳಲ್ಲಿ ಖರೀದಿಗೆ ಲಭ್ಯವಿರುತ್ತದೆ. ಇದು 8GB RAM + 128GB, 8GB RAM + 256GB ಮತ್ತು 12GB RAM + 256GB ಸ್ಟೋರೇಜ್ ಆಯ್ಕೆಯೊಂದಿಗೆ ಬರುತ್ತದೆ. ಹಾಗೆಯೇ ವರ್ಚುವಲ್ RAM ತಂತ್ರಜ್ಞಾನವೂ ಇದರಲ್ಲಿ ಲಭ್ಯವಿರುತ್ತದೆ.
ಕ್ಯಾಮೆರಾ ಸೆಟಪ್
ವಿವೋ T4 5G ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ OIS ಬೆಂಬಲದೊಂದಿಗೆ 50 ಮೆಗಾಪಿಕ್ಸೆಲ್ ಸೋನಿ ಮುಖ್ಯ ಕ್ಯಾಮೆರಾ ಲಭ್ಯವಿದೆ. ಜೊತೆಗೆ 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ವಿವೋ ಫೋನಿನಲ್ಲಿ 32 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಅಳವಡಿಸಲಾಗಿದೆ.
ಇತರೆ ವೈಶಿಷ್ಟ್ಯಗಳು
ವಿವೋ T4 5G ಮೊಬೈಲ್ ಐಆರ್ (IR) ಬ್ಲಾಸ್ಟರ್ ಬೆಂಬಲ ಹೊಂದಿದೆ. ಈ ಫೋನ್ ಹಲವು ಎಐ (AI) ವೈಶಿಷ್ಟ್ಯ ಹೊಂದಿರುತ್ತದೆ. ಫೋಟೋಗಳನ್ನು ಇನ್ನಷ್ಟು ಉತ್ತಮವಾಗಿ ಕಾಣುವಂತೆ ಮಾಡಲು ಕ್ಯಾಮೆರಾಕ್ಕಾಗಿ ದೃಶ್ಯ ಪತ್ತೆ,ನೈಟ್ ಮೋಡ್, ಪೋರ್ಟ್ರೇಟ್


Click it and Unblock the Notifications








