Home
ಮೊಬೈಲ್

Vivo: ಯಾರೂ ನಿರೀಕ್ಷಿಸಿರಲಿಲ್ಲ..! 7300mAh ಬ್ಯಾಟರಿ.. 50MP ಸೋನಿ ಕ್ಯಾಮೆರಾ.. ಕೇವಲ 19,999 ರೂ.! ಯಾವ ಫೋನ್?

ವಿವೋ ಇಂದು ಭಾರತದಲ್ಲಿ ತನ್ನ ಹೊಸ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಇದು ವಿವೋ T4 5G (Vivo T4 5G) ಎಂಬ ಹೆಸರಿನೊಂದಿಗೆ ದೇಶೀಯ ಮಾರುಕಟ್ಟೆಗೆ ಅದ್ದೂರಿಯಾಗಿ ಎಂಟ್ರಿ ಕೊಟ್ಟಿದೆ. ಇದು ಪ್ರೀಮಿಯಂ ವಿನ್ಯಾಸ, ಶಕ್ತಿಶಾಲಿ ಬ್ಯಾಟರಿ ಮತ್ತು ಸುಗಮ ಕಾರ್ಯಕ್ಷಮತೆಯೊಂದಿಗೆ ಬರುತ್ತದೆ. ಈ ಫೋನಿನ ದೊಡ್ಡ ಶಕ್ತಿ ಎಂದರೆ ಇದರ 7,300mAh ಬ್ಯಾಟರಿ ಆಗಿದೆ. ಇದನ್ನು ಬಜೆಟ್ ಬೆಲೆಯಲ್ಲಿ ಪರಿಚಯಿಸಲಾಗಿದೆ. ಈ ಹೊಸ ವಿವೋ T4 5G ಫೋನಿನ ಬೆಲೆ, ಲಭ್ಯತೆ ಮತ್ತು ಇನ್ನಿತರ ವಿಶೇಷತೆಗಳ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ.

ಯುವಕರನ್ನು ಗಮನದಲ್ಲಿಟ್ಟುಕೊಂಡು ಕಂಪನಿಯು, ವಿವೋ T4 5G ಫೋನನ್ನು ಬಿಡುಗಡೆ ಮಾಡಿದೆ. ಇದು ಅತ್ಯಂತ ತೆಳುವಾದ 5G ಫೋನ್ ಆಗಿದೆ. ಈ ಫೋನಿನ ವಿಶೇಷತೆಗಳನ್ನು ನೋಡುವುದಾದರೆ, ಈ ಮೊಬೈಲ್ 6.77 ಇಂಚಿನ ಡಿಸ್ಪ್ಲೇಯೊಂದಿಗೆ ಬರುತ್ತದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7s ಜೆನ್ 3 ಪ್ರೊಸೆಸರ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದರೊಂದಿಗೆ ಆಂಡ್ರಾಯ್ಡ್ 15 ಆಧಾರಿತ ಫನ್‌ಟಚ್ ಓಎಸ್ 15, 12GB RAM + 256GB ಸ್ಟೋರೇಜ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಈ ಫೋನ್ ಖರೀದಿಸುವ ಗ್ರಾಹಕರಿಗೆ ಬಂಪರ್ ಆಫರ್ ಸಹ ಘೋಷಿಸಲಾಗಿದೆ.

ಬಂತು Vivo T4 5G ಫೋನ್; 7300mAh ಬ್ಯಾಟರಿ, 50MP ಕ್ಯಾಮೆರಾ.. 19,999 ರೂ.!

ಅತ್ಯಂತ ಶಕ್ತಿಶಾಲಿ ಬ್ಯಾಟರಿ

ವಿವೋ T4 5G ಫೋನ್ 7300mAh ಸಾಮರ್ಥ್ಯದ ಅತ್ಯಂತ ಶಕ್ತಿಶಾಲಿ ಬ್ಯಾಟರಿಯನ್ನು ಹೊಂದಿದೆ.ಇದು ಈ ವಿಭಾಗದ ಇತರೆ ಫೋನ್‌ಗಳಿಗಿಂತ ಭಿನ್ನವಾಗಿದೆ. ಇದು ನಿರಂತರ ಗೇಮಿಂಗ್, ವಿಡಿಯೋ ಸ್ಟ್ರೀಮಿಂಗ್ ಮತ್ತು ಸೋಶಿಯಲ್ ಮೀಡಿಯಾ ಬಳಕೆಗೆ ಪೂರಕವಾದ ದೊಡ್ಡ ಬ್ಯಾಟರಿ ಆಗಿದೆ. ಈ ಬ್ಯಾಟರಿಯನ್ನು ವೇಗವಾಗಿ ಚಾರ್ಜ್ ಮಾಡಲು, 90W ವೇಗದ ಚಾರ್ಜಿಂಗ್‌ ಸೌಲಭ್ಯವನ್ನು ಒದಗಿಸಲಾಗಿದೆ. ಇದರಿಂದಾಗಿ, ಕೆಲವೇ ನಿಮಿಷಗಳಲ್ಲಿ ಬ್ಯಾಟರಿ ಚಾರ್ಜ್ ಆಗುತ್ತದೆ.

ವಿವೋ T4 5G ವೈಶಿಷ್ಟ್ಯಗಳು

ಡಿಸ್ಪ್ಲೇ ವಿವರ

ವಿವೋ T4 5G ಸ್ಮಾರ್ಟ್‌ಫೋನ್ 6.77 ಇಂಚಿನ ಪೂರ್ಣ ಎಚ್‌ಡಿ ಪ್ಲಸ್ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 2,392 × 1,080 ಪಿಕ್ಸೆಲ್‌ಗಳ ಸ್ಕ್ರೀನ್ ರೆಸಲ್ಯೂಶನ್ ಬೆಂಬಲದೊಂದಿಗೆ ಬರುತ್ತದೆ. ಈ ಡಿಸ್ಪ್ಲೇಯು 120Hz ರಿಫ್ರೆಶ್ ದರ, 1300 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಈ ಫೋನ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್ ಮತ್ತು ಇನ್ಫ್ರಾರೆಡ್ ಸೆನ್ಸರ್ ತಂತ್ರಜ್ಞಾನ ಹೊಂದಿದೆ. ಈ ಡಿಸ್ಪ್ಲೇ ತುಂಬಾ ಮೃದು ಮತ್ತು ಪ್ರಕಾಶಮಾನವಾದ ಅನುಭವವನ್ನು ನೀಡುತ್ತದೆ.

ಪ್ರೊಸೆಸರ್ ಸಾಮರ್ಥ್ಯ

ವಿವೋ T4 5G ಫೋನ್ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 7s ಜೆನ್ 3 ಆಕ್ಟಾ-ಕೋರ್ ಪ್ರೊಸೆಸರ್‌ನೊಂದಿಗೆ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿದೆ. ಇದನ್ನು 4 ನ್ಯಾನೊಮೀಟರ್ ಫ್ಯಾಬ್ರಿಕೇಶನ್‌ಗಳ ಮೇಲೆ ತಯಾರಿಸಲಾಗಿದೆ. ಈ ಮೊಬೈಲ್ ಆಂಡ್ರಾಯ್ಡ್ 15 ಆಧಾರಿತ Funtouch OS 15 ನೊಂದಿಗೆ ಕೆಲಸ ಮಾಡುತ್ತದೆ. ಈ ಫೋನ್ ಎರಡು ರೂಪಾಂತರಗಳಲ್ಲಿ ಲಭ್ಯವಿದೆ. ಇದು 8GB RAM ಮತ್ತು 12GB RAM ಹೊಂದಿದೆ. ಈ ಮೊಬೈಲ್ 128GB ಮತ್ತು 256GB ಸ್ಟೋರೇಜ್ ಆಯ್ಕೆಯೊಂದಿಗೆ ಬರುತ್ತದೆ. 8GB ವರೆಗೆ ವರ್ಚುವಲ್ RAM ವಿಸ್ತರಣೆಯ ಬೆಂಬಲವೂ ಇದೆ.

ಕ್ಯಾಮೆರಾ ಸೆಟಪ್

ವಿವೋ T4 5G ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ OIS ಬೆಂಬಲದೊಂದಿಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದರೊಂದಿಗೆ 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಹೊಂದಿದೆ. ಈ ಫೋನಿನಲ್ಲಿ ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, 8 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಲಭ್ಯವಿದೆ.

ಇತರೆ ವೈಶಿಷ್ಟ್ಯಗಳು

ವಿವೋ T4 5G ಫೋನ್ ಮಿಲಿಟರಿ ದರ್ಜೆಯ ಬಾಳಿಕೆ (MIL-STD-810H), ಧೂಳು ಮತ್ತು ನೀರಿನ ವಿರುದ್ಧ ರಕ್ಷಣೆಗೆ IP65 ರೇಟಿಂಗ್‌ ಪಡೆದಿದೆ. ಇದು ಯುಎಸ್‌ಬಿ ಟೈಪ್ ಸಿ ಆಡಿಯೋ, ಬಾಟಮ್ ಪೋರ್ಟೆಡ್ ಸ್ಪೀಕರ್ ಸಹ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು 5G SA/NSA, ಡ್ಯುಯಲ್ 4G VoLTE, ವೈ-ಫೈ 6, ಬ್ಲೂಟೂತ್ 5.2, ಜಿಪಿಎಸ್, ಯುಎಸ್‌ಬಿ ಟೈಪ್ ಸಿ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.

ಬಂತು Vivo T4 5G ಫೋನ್; 7300mAh ಬ್ಯಾಟರಿ, 50MP ಕ್ಯಾಮೆರಾ.. 19,999 ರೂ.!

ವಿವೋ T4 5G ಬೆಲೆ ಮತ್ತು ಲಭ್ಯತೆ

8GB RAM + 128GB ಸ್ಟೋರೇಜ್ = 21,999 ರೂ.
12GB RAM + 256GB ಸ್ಟೋರೇಜ್ = 25,999 ರೂ.

ವಿವೋ T4 5G ಫೋನಿನ ಆರಂಭಿಕ ಬೆಲೆ 21,999 ರೂ. ಆಗಿದೆ. ಇದು 8GB RAM + 128GB ಸ್ಟೋರೇಜ್ ಆಯ್ಕೆಯೊಂದಿಗೆ ಬರುತ್ತದೆ. ಈ ಮೊಬೈಲ್ ಎಮರಾಲ್ಡ್ ಬ್ಲೇಜ್ ಮತ್ತು ಫ್ಯಾಂಟಮ್ ಗ್ರೇ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿರುತ್ತದೆ. ಈ ಫೋನ್ ಏಪ್ರಿಲ್ 29 ರಂದು ಆನ್‌ಲೈನ್ ಶಾಪಿಂಗ್ ಸೈಟ್ ಫ್ಲಿಪ್‌ಕಾರ್ಟ್‌ ಮೂಲಕ ತನ್ನ ಮೊದಲ ಮಾರಾಟ ಪ್ರಾರಂಭಿಸಲಿದೆ. ಕಂಪನಿಯು ಆರಂಭಿಕ ಮಾರಾಟದಲ್ಲಿ, 2000 ರೂ.ಗಳ ಬ್ಯಾಂಕ್ ರಿಯಾಯಿತಿಯನ್ನು ಘೋಷಿಸಿದೆ.

Best Mobiles in India

English summary
vivo T4 5G with Snapdragon 7s Gen 3 and 7300mAh battery launched in India: Price Starts at Rs 19,999
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+