Home
ಮೊಬೈಲ್

12,999 ಸಾಕು! 6500mAh ಬ್ಯಾಟರಿ.. 50MP ಕ್ಯಾಮೆರಾ.. ಭಾರತದಲ್ಲಿ Vivo T4x 5G ಬಿಡುಗಡೆ

ವಿವೋ ತನ್ನ ಅಭಿಮಾನಿಗಳಿಗಾಗಿ ಹೊಸ ಫೋನನ್ನು ಬಿಡುಗಡೆ ಮಾಡಿದೆ. ಇದರ ಬೆಲೆ 13,000 ರೂ.ಗಿಂತ ಕಡಿಮೆ ಇದೆ. ಹೌದು, ಕಂಪನಿಯು ತನ್ನ ಬಹುನಿತೀಕ್ಷಿತ ವಿವೋ T4x 5G (Vivo T4x 5G) ಅನ್ನು ಭಾರತದಲ್ಲಿ ಲಾಂಚ್ ಮಾಡಿದೆ. ಈ ಫೋನಿನ ಸ್ಟೈಲಿಶ್ ಡಿಸೈನ್, ಕಾರ್ಯಕ್ಷಮತೆ ಮತ್ತು ವಿಶೇಷತೆಗಳು ಗ್ರಾಹಕರ ಗಮನ ಸೆಳೆದಿವೆ. ಕಂಪನಿಯು ಮೊದಲ ದಿನವೇ ಈ ಮೊಬೈಲ್ ಖರೀದಿಸುವ ಗ್ರಾಹಕರಿಗೆ 1,000 ರೂ. ರಿಯಾಯಿತಿ ಘೋಷಿಸಿದೆ. ಬನ್ನಿ, ವಿವೋ T4x 5G ಫೋನಿನ ಬೆಲೆ, ಲಭ್ಯತೆ ಮತ್ತು ವಿಶೇಷತೆಗಳನ್ನು ತಿಳಿಯೋಣ.

ವಿವೋ T4x 5G ಮಾರುಕಟ್ಟೆಯಲ್ಲಿ ಲಭ್ಯವಿರುವ ಪ್ರಸಿದ್ಧ ಕಂಪನಿಗಳ ಫೋನ್‌ಗಳಿಗೆ ಭಾರೀ ಪೈಪೋಟಿ ನೀಡುತ್ತಿದೆ. ಈ ಫೋನಿನ ದೊಡ್ಡ ಶಕ್ತಿ ಎಂದರೆ ಇದರಲ್ಲಿರುವ 6,500mAh ಸಾಮರ್ಥ್ಯದ ಬ್ಯಾಟರಿ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಡ್ಯುಯಲ್ ಕ್ಯಾಮೆರಾ ಲಭ್ಯವಿದೆ. ಈ ಮೊಬೈಲ್ 6.72 ಇಂಚಿನ ಡಿಸ್ಪ್ಲೇ ಹೊಂದಿದೆ. ಜೊತೆಗೆ 8GB RAM + 256GB ಸ್ಟೋರೇಜ್, 44W ಚಾರ್ಜಿಂಗ್ ಸೇರಿದಂತೆ ಹಲವು ವಿಶೇಷತೆಗಳೊಂದಿಗೆ ದೇಶೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ.

ಭಾರತದಲ್ಲಿ Vivo T4x 5G ಲಾಂಚ್; 6500mAh ಬ್ಯಾಟರಿ, 50MP ಕ್ಯಾಮೆರಾ; ಬೆಲೆ ನೋಡಿ

ವಿವೋ T4x 5G ಬೆಲೆ ಮತ್ತು ಆಫರ್

  • 6GB RAM + 128GB ಸ್ಟೋರೇಜ್ ಬೆಲೆ = 13,999 ರೂ.
  • 8GB RAM + 128GB ಸ್ಟೋರೇಜ್ ಬೆಲೆ = 14,999 ರೂ.
  • 8GB RAM + 256GB ಸ್ಟೋರೇಜ್ ಬೆಲೆ = 16,999 ರೂ.

ವಿವೋ T4x 5G ಫೋನ್ ಭಾರತದಲ್ಲಿ ಮೂರು ಸ್ಟೋರೇಜ್ ರೂಪಾಂತರಗಳಲ್ಲಿ ಬಿಡುಗಡೆಯಾಗಿದೆ. ಈ ಫೋನಿನ 6GB RAM + 128GB ಸ್ಟೋರೇಜ್ ಹೊಂದಿರುವ ಮೊಬೈಲ್‌ ಅನ್ನು ಕೇವಲ 13,999 ರೂ.ಗೆ ಖರೀದಿಸಬಹುದು. 8GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆ 14,999 ರೂ. ಆಗಿದೆ. ಹಾಗೆಯೇ 8GB RAM + 256GB ಸ್ಟೋರೇಜ್ ಮಾದರಿಯು 16,999 ರೂ.ಗೆ ಪರಿಚಯಿಸಲಾಗಿದೆ.

ಕಂಪನಿಯು ಮೊದಲ ಮಾರಾಟದ ಪ್ರಯುಕ್ತ ಈ ಫೋನ್ ಖರೀದಿ ಮೇಲೆ 1,000 ರೂ. ರಿಯಾಯಿತಿ ಘೋಷಿಸಿದೆ. ನೀವು ಈ ವಿವೋ 5G ಫೋನನ್ನು 12,999 ರೂ.ಗಳ ಆರಂಭಿಕ ಬೆಲೆಗೆ ಖರೀದಿಸಬಹುದು. ಇದೇ ಮಾರ್ಚ್ 12 ರಿಂದ ಆನ್‌ಲೈನ್ ಶಾಪಿಂಗ್ ಸೈಟ್ ಫ್ಲಿಪ್‌ಕಾರ್ಟ್‌ ಮೂಲಕ ಈ ಮೊಬೈಲ್ ತನ್ನ ಮೊದಲ ಮಾರಾಟ ಪ್ರಾರಂಭಿಸಲಿದೆ. ನೀವು ಮೆರೈನ್ ಬ್ಲೂ ಮತ್ತು ಪ್ರೋಟಾನ್ ಪರ್ಪಲ್ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಸಬಹುದು.

ವಿವೋ T4x 5G ವೈಶಿಷ್ಟ್ಯಗಳು

ಡಿಸ್ಪ್ಲೇ ವಿವರ

ವಿವೋ T4x 5G ಫೋನ್ 6.72 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್ಪ್ಲೇಯನ್ನು ಹೊಂದಿದೆ. ಇದು ಪಂಚ್ ಹೋಲ್ ಶೈಲಿಯ ಎಲ್‌ಸಿಡಿ ಡಿಸ್ಪ್ಲೇ ಆಗಿದೆ. ಈ ಸ್ಕ್ರೀನ್ 2408 × 1080 ಪಿಕ್ಸೆಲ್‌ಗಳ ರೆಸಲ್ಯೂಶನ್ ಬೆಂಬಲದೊಂದಿಗೆ ಬರುತ್ತದೆ. ಇದರೊಂದಿಗೆ 120Hz ರಿಫ್ರೆಶ್ ದರ ಮತ್ತು 1050 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ

ವಿವೋ T4X 5G ಮೊಬೈಲ್ ಮೀಡಿಯಾ ಟೆಕ್‌ನ ಡೈಮೆನ್ಸಿಟಿ 7300 ಆಕ್ಟಾಕೋರ್ ಪ್ರೊಸೆಸರ್ ಹೊಂದಿದೆ. ಇದನ್ನು 4 ನ್ಯಾನೋಮೀಟರ್ ಆರ್ಕಿಟೆಕ್ಚರ್‌ನಲ್ಲಿ ತಯಾರಿಸಲಾಗಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 15 ಆಧಾರಿತ Funtouch ಓಎಸ್ 15 ನೊಂದಿಗೆ ಕೆಲಸ ನಿರ್ವಹಿಸುತ್ತದೆ.

ಕ್ಯಾಮೆರಾ ಸೆಟಪ್

ವಿವೋ T4x 5G ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ ಎಲ್ಇಡಿ ಫ್ಲ್ಯಾಷ್‌ನೊಂದಿಗೆ 50 ಮೆಗಾಪಿಕ್ಸೆಲ್ ಎಐ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದರೊಂದಿಗೆ 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ 5G ಸ್ಮಾರ್ಟ್‌ಫೋನ್ 8 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಸಹ ಹೊಂದಿದೆ.

ಬ್ಯಾಟರಿ ಮತ್ತು ಚಾರ್ಜಿಂಗ್

ಹೊಸ ವಿವೋ T4X 5G ಮೊಬೈಲ್ 6,500mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ದೊಡ್ಡ ಬ್ಯಾಟರಿಯನ್ನು ಚಾರ್ಜ್ ಮಾಡಲು, 44W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಇದು 67 ನಿಮಿಷಗಳಲ್ಲಿ ಶೇ.20 ರಿಂದ ಶೇ.100 ರಷ್ಟು ಸಂಪೂರ್ಣವಾಗಿ ಚಾರ್ಜ್ ಆಗುತ್ತದೆ.

ಇತರೆ ವೈಶಿಷ್ಟ್ಯಗಳು

ವಿವೋ T4x 5G ಫೋನ್ 8 5G ಬ್ಯಾಂಡ್‌ಗಳನ್ನು ಹೊಂದಿದೆ. ಈ ಮೊಬೈಲ್ ನೀರಿನಿಂದ ರಕ್ಷಣೆಗಾಗಿ IP64 ರೇಟಿಂಗ್ ಪಡೆದಿದೆ. ಇದು ಜಿಯೋ ಮತ್ತು ಏರ್‌ಟೆಲ್ ನೆಟ್‌ವರ್ಕ್‌ಗಳಲ್ಲಿ ಉತ್ತಮವಾಗಿ ಕೆಲಸ ನಿರ್ವಹಿಸುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ, ಇದು OTG ಜೊತೆಗೆ ಬ್ಲೂಟೂತ್ 5.4 ಮತ್ತು ವೈ-ಫೈ 6 ಬೆಂಬಲ ಹೊಂದಿದೆ. ಇದು ಐಆರ್ ಬ್ಲಾಸ್ಟರ್ ಸಹ ಹೊಂದಿದ್ದು, ಫೋನ್ ಟಿವಿ ರಿಮೋಟ್‌ನಂತೆ ಕೆಲಸ ನಿರ್ವಹಿಸಲು ಅನುವು ಮಾಡಿಕೊಡುತ್ತದೆ.

Best Mobiles in India

English summary
vivo T4x 5G with MediaTek Dimensity 7300 and 6500mAh battery launched in India: Check Price, Features, Specifications and More
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+